Education
10th ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 491 ಹುದ್ದೆಗಳ ಭರ್ತಿ

Anganawadi Jobs 2025 : 10ನೇ ತರಗತಿ ಹಾಗು ದ್ವಿತೀಯ ಪಿಯುಸಿ ಪಾಸಾದ ಮಹಿಳೆಯರು ಉದ್ಯೋಗ ಹುಡುಕುತ್ತಿದ್ದರೆ ಅಂತವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಡಿಯಲ್ಲಿ 491 ಹುದ್ದೆಗಳು ಖಾಲಿ ಇವೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ್ಕೆ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 04ರವರೆಗೆ ಅವಕಾಶವಿದೆ.
ನೇಮಕಾತಿ ಹುದ್ದೆಗಳ ಮಾಹಿತಿ :
ಈ ನೇಮಕಾತಿಯನ್ನು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಮಾಡಿಕೊಳ್ಳಲಾಗುತ್ತಿದ್ದು ಖಾಲಿ ಇರುವ ಹುದ್ದೆಗಳ ವಿಂಗಡಣೆ ಹೀಗಿದೆ.
• ಅಂಗನವಾಡಿ ಸಹಾಯಕಿಯರು – 376 ಹುದ್ದೆಗಳು
• ಅಂಗನವಾಡಿ ಕಾರ್ಯಕರ್ತೆಯರು – 491 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆಗಳು :
ಒಂದು ವೇಳೆ ನೀವು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಅದೇ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ನೀವು ಹತ್ತನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ – ಕನಿಷ್ಠ 19 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು.
ಈ ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು, ಈ ನೇಮಕಾತಿಯಲ್ಲಿ ನಿಗದಿಪಡಿಸಿರುವಂತಹ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹೇಗೆ ಸಲ್ಲಿಸಬೇಕು?
ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಲ್ಲಿ ಈ ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ವೆಬ್ಸೈಟ್ – https://karnemakaone.kar.nic.in/abcd/
Education
ಮಿಲಿಟರಿ ಶಾಲೆಯಲ್ಲಿ ಪ್ರವೇಶಾತಿಗೆ ಅರ್ಜಿ ಅಹ್ವಾನ : ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು!

Application for RIMC Admission 2025 – ಉತ್ತರಾಖಂಡ ರಾಜ್ಯದ ಡೆಹರಾಡುನಲ್ಲಿರುವಂತಹ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ 2026ರ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಮೊದಲು ಇದಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು, ಆದರೆ ಇದನ್ನು ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಇದಕ್ಕೆ ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ರಾಷ್ಟ್ರೀಯ ಮಿಲಿಟರಿ ಶಾಲೆಯ ವಿಶೇಷತೆ ಏನು?
ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಸೇನಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು ಈ ಶಾಲೆಗೆ ಆಯ್ಕೆಯಾಗುವಂತಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ನೌಕಾಪಡೆ ಅಕಾಡೆಮಿಗೆ ಸೇರಲು ವಿದ್ಯಾರ್ಥಿಗಳನ್ನು ಟ್ರೈನ್ ಮಾಡಲಾಗುವುದು.
ಇದೀಗ ಈ ಶಾಲೆಗೆ 8ನೇ ತರಗತಿ ಪ್ರವೇಶಾತಿಗೆ ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?
ರಾಷ್ಟ್ರೀಯ ಮಿಲಿಟರಿ ಶಾಲೆಗೆ ಎಂಟನೇ ತರಗತಿಗೆ ಪ್ರವೇಶಾತಿ ಪಡೆಯಲು ಮಾನ್ಯತೆ ಪಡೆದ ಶಾಲೆಯಿಂದ ಏಳನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ 11.5 ವರ್ಷದಿಂದ ಗರಿಷ್ಟ 13 ವರ್ಷದ ಒಳಗಿರಬೇಕು.
ಈ ಶಾಲಿಗೆ ವಿದ್ಯಾರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಮೊದಲನೇ ಹಂತದಲ್ಲಿ ಲಿಖಿತಪರೀಕ್ಷೆ ನಂತರದಲ್ಲಿ ಮೌಖಿಕ ಸಂದರ್ಶನ ಹಾಗೂ ಮೂರನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಏಪ್ರಿಲ್ 15, 2025 ಆಗಿರುತ್ತದೆ. ಅರ್ಹತೆಗಳನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಅಥವಾ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ವಿಳಾಸ : ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆಎಮ್ ಕರಿಯಪ್ಪ ರಸ್ತೆ ಬೆಂಗಳೂರು
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ – https://rimc.gov.in
Education
ಮಾ.21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಡಾ.ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಮಾಚ್೯21 ರಿಂದ ಏಪ್ರಿಲ್ 04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್ ಸಿ ಪರೀಕ್ಷೆಗಳ ಕೆಲಸಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿ, ಈ ಬಾರಿ ಒಟ್ಟು 20,469 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ 10,661 ಗಂಡು ಮಕ್ಕಳು ಹಾಗೂ 9,835 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
62 ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಅಧೀಕ್ಷಕರನ್ನು ಹಾಗೂ ಪೇಪರ್ ಕಸ್ಟೋಡಿಯನ್ ಗಳನ್ನು , ಪ್ರತಿ ಬ್ಲಾಕ್ ಗೆ ಒಬ್ಬರೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಪೂರ್ಣ ಪರೀಕ್ಷೆ ವೆಬ್ ಕ್ಯಾಸ್ಟಿಂಗ್
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಲಾಗುವುದು. ಪರೀಕ್ಷೆಯ ಚಲನ- ಕವನಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸಲಾಗುವುದು
ಎಂದರು.
ಮೂಲಭೂತ ವ್ಯವಸ್ಥೆಗಳು
ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಮಕ್ಕಳಿಗೆ ಕುಡಿಯುವ ನೀರು ಹಾಗೂ ಶೌಚಾಲಯಗಳ ವ್ಯವಸ್ಥೆ ಪರೀಕ್ಷಿಸಿಕೊಳ್ಳಿ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರು ಸಹ ಮೊಬೈಲ್ ನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗಬಾರದು.
ಪರೀಕ್ಷೆ ನಡೆಯುವ ದಿನದಂದು
ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್ ಗಳು ತೆರೆಯಲು ಅವಕಾಶವಿರುವುದಿಲ್ಲ ಎಂದರು.
ಆರೋಗ್ಯ ಇಲಾಖೆ ಅವರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ಅಗತ್ಯ ಔಷಧಿಗಳು ಹಾಗೂ ಒ.ಆರ್. ಎಸ್ ಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ
ವಿದ್ಯಾರ್ಥಿಗಳೊಂದಿಗೆ ಮುಖ್ಯ ಶಿಕ್ಷಕರು ಸಂಪರ್ಕದಲ್ಲಿದ್ದು, ಅವರಲ್ಲಿ ಪರೀಕ್ಷೆಯ ಬಗ್ಗೆ ಯಾವುದೇ ಭಯ ಬೇಡ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸಜ್ಜುಗೊಳಿಸಿ. ಯಾವುದಾದರೂ ಪರೀಕ್ಷಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಇದ್ದರೆ ಪರಿಹರಿಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Education
ಶಕ್ತಿ ಯೋಜನೆಗೆ ಮತ್ತಷ್ಟು ಬಲ ತುಂಬಿದ ಸರ್ಕಾರ : 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆದೇಶ

ಕರ್ನಾಟಕ ಶಕ್ತಿ ಯೋಜನೆ : ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಜಾರಿಯಲ್ಲಿರುವ ಶಕ್ತಿ ಯೋಜನೆ, ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ. ಇದು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವುದಷ್ಟೇ ಅಲ್ಲದೆ, ರಾಜ್ಯದಲ್ಲಿ ಹಲವು ಉದ್ಯೋಗ ಅವಕಾಶಗಳನ್ನು ಕೂಡ ಸೃಷ್ಟಿಸಲಿದೆ.
ಶಕ್ತಿ ಯೋಜನೆಯು ಜಾರಿಗೆಯಾದ ನಂತರ ಒಟ್ಟು 400 ಕೋಟಿ ಸಲ ಮಹಿಳೆಯರು ಉಚಿತ ಪ್ರಯಾಣದ ಅವಕಾಶವನ್ನು ಉಪಯೋಗಿಸಿಕೊಂಡಿದ್ದಾರೆ. ಶಿಕ್ಷಣ, ಉದ್ಯೋಗ, ಪ್ರವಾಸ ಸೇರಿದಂತೆ ಪ್ರತಿ ದಿನ ವಿವಿಧ ಉದ್ದೇಶಗಳಿಗಾಗಿ ಪ್ರಯಾಣ ಮಾಡುವ ಮಹಿಳೆಯರಿಗೆ ಈ ಯೋಜನೆ ವರದಾನವಾಗಿದೆ. ಆಶ್ಚರ್ಯಕರ ಸಂಗತಿ ಎಂದರೆ, ಇಲ್ಲಿಯವರೆಗೆ ಮಹಿಳೆಯರ ಉಚಿತ ಪ್ರಯಾಣದ ಒಟ್ಟು ಟಿಕೆಟ್ ಮೌಲ್ಯವು 9 ಸಾವಿರ ಕೋಟಿ ರೂಪಾಯಿ ದಾಟಿದೆ.
ಈ ಯೋಜನೆಯಿಂದ ಹೊಸದಾಗಿ 11,300 ಹುದ್ದೆಗಳ ಉದ್ಯೋಗ ಸೃಷ್ಟಿ!
ಹೌದು, ಶಕ್ತಿ ಯೋಜನೆಯಿಂದ ಲಾಭದಿಂದಾಗಿ ಹಾಗೂ ಅನುಕೂಲತೆಯಿಂದಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದೂ, ಉತ್ತಮ ಸೇವೆ ಒದಗಿಸಲು ಹೊಸದಾಗಿ 5,800 ಬಸ್ ಗಳನ್ನು ಸೇರ್ಪಡೆ ಮಾಡಿಕೊಳ್ಳಲು ಅನುಮೋದನೆ ದೊರೆತಿದ್ದು, ಈಗಾಗಲೇ 4,891 ಬಸ್‌ಗಳನ್ನು ಖರೀದಿಸಲಾಗಿದೆ.
ಇದರಿಂದ ರಾಜ್ಯದಲ್ಲಿ 11,300 ಹುದ್ದೆಗಳ ಉದ್ಯೋಗ ಸೃಷ್ಟಿಯಾಗಲಿದೆ. ಅಂದರೆ 9,000 ವಿವಿಧ ಹುದ್ದೆಗಳ ಜೊತೆಗೆ 2000 ಚಾಲಕ ಕಂ ನಿರ್ವಾಹಕ ಹುದ್ದೆಗಳು ಹಾಗೂ 300 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಆದೇಶ ನೀಡಲಾಗಿದೆ.
-
Mandya20 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu17 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar20 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar20 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu14 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar12 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur14 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Chikmagalur13 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.