Location
ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

ಮೈಸೂರು: ಸಫಾರಿ ವಾಹನಗಳ (Safari Vehicle) ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ (Nagarahole Forest ) ನಡೆದಿದೆ.
Mandya
ಜು.11 ‘ಸೆಪ್ಟೆಂಬರ್ 10’ ಕನ್ನಡ ಚಲನಚಿತ್ರ ಬಿಡುಗಡೆ : ಓಂ ಸಾಯಿಪ್ರಕಾಶ್

ಮಂಡ್ಯ: ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂಬ ಧ್ಯೇಯದೊಂದಿಗೆ `ಸೆಪ್ಟೆಂಬರ್ ೧೦’ ಶೀರ್ಷಿಕೆಯೊಂದಿಗೆ ಚಲನಚಿತ್ರ ನಿರ್ಮಿಸಲಾಗಿದ್ದು, ಜುಲೈ.11ರಂದು ಬಿಡುಗಡೆಯಾಗಲಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತವರಿಗೆ ಬಾ ತಂಗಿ, ಮುದ್ದಿನ ಮಾವ, ಅಣ್ಣ ತಂಗಿ, ಸೋಲಿಲ್ಲದ ಸರದಾರದಂತಹ ಯಶಸ್ವಿ ಚಲನಚಿತ್ರಗಳ ನಿರ್ದೇಶನ ಮಾಡಿದ್ದು, `ಸೆಪ್ಟೆಂಬರ್ 10೦’ ನನ್ನ 105ನೇ ಚಲನಚಿತ್ರವಾಗಿದೆ ಎಂದರು.
ಸೆಪ್ಟೆಂಬರ್.10 ರೈತ ಆತ್ಮಹತ್ಯೆ ತಡೆ ದಿನವಾಗಿದ್ದು, ಆತ್ಮಹತ್ಯೆಯನ್ನೇ ಮೂಲವನ್ನಾಗಿಸಿಕೊಂಡು ಚಲನಚಿತ್ರ ನಿರ್ಮಿಸಲಾಗಿದೆ. ದುರ್ಬಲ ಹಾಗೂ ಸಂಕುಚಿತ ಮನಸ್ಸನವರಿಗೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡುವ ಪ್ರಯತ್ನ ಚಿತ್ರದಲ್ಲಿದೆ. ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿದ ರೈತ, ಪ್ರೇಮಿಗಳು, ವ್ಯಾಪಾರಿಗಳು, ಪರೀಕ್ಷೆ ಎದುರಿಸಲಾಗದ, ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳ ಆತ್ಮಹತ್ಯೆಯ ಸತ್ಯ ದರ್ಶನವನ್ನು ಚಿತ್ರದ ಮೂಲಕ ತೋರ್ಪಡಿಸಲಾಗುತ್ತಿದೆ ಎಂದು ಹೇಳಿದರು.
ಚಿತ್ರದ ಚಿತ್ರೀಕರಣವನ್ನು ಬೆಂಗಳೂರಿನಲ್ಲೇ ಮಾಡಲಾಗಿದ್ದು, 60 ಲಕ್ಷ ರೂ.ಗಳನ್ನು ವ್ಯಯಿಸಲಾಗಿದೆ. ನಿಮಾನ್ಸ್‌ನ ವೈದ್ಯರೂ ಮಾನಸಿಕವಾಗಿ ಕುಗ್ಗಿದವರಿಗೆ ಮಾನಸಿಕ ಸ್ಥೈರ್ಯ ನೀಡಲಿದೆ ಎಂದು ಹೇಳಿರುವುದಾಗಿ ಅವರು ತಿಳಿಸಿದರು.
2020೨೦೨೦ರಲ್ಲೇ ಚಲನಚಿತ್ರ ಪ್ರಾರಂಭಿಸಿ ಮುಗಿಸುವಷ್ಟರಲ್ಲಿ ಕೊರೋನದಿಂದಾಗಿ ಬಿಡುಗಡೆ ಮಾಡಲಾಗಿರಲಿಲ್ಲ, ಚಿತ್ರಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಂಗೀತ, ಜೆ.ಜಿ.ಕೃಷ್ಣರ ಛಾಯಾಗ್ರಹಣ, ಬಿ.ಎ.ಮಧು ಅವರ ಸಂಭಾಷಣೆಯಿದೆ. ಚಲನಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಬಿಬಿಎಂಪಿ ಮಾಜಿ ಸದಸ್ಯ ಡಾ.ರಾಜು ಅವರ ಸಹಕಾರದಿಂದ ಚಲನಚಿತ್ರ ಬಿಡುಗಡೆಯಾಗುತ್ತಿದ್ದು, ಚಲನಚಿತ್ರ ಪ್ರಿಯರು ಚಿತ್ರ ವೀಕ್ಷಿಸಿ, ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಹ ನಿರ್ದೇಶಕ ಶಶಿಕಿರಣ್, ಹಿರಿಯ ನಟ ಮೀಸೆ ಆಂಜನಪ್ಪ (ಶಂಖನಾದ ಆಂಜಿನಪ್ಪ), ನಟರಾದ ತುಳಸಿ, ಜಯಸಿಂಹ, ಪತ್ರಕರ್ತ ಹಲ್ಲೆಗೆರೆ ಗುರುಸ್ವಾಮಿ, ಜಯರಾಮ್ ಇದ್ದರು.
Kodagu
ಕೊಡಗಿನಲ್ಲಿ ಎನ್‌ಡಿಆರ್‌ಎಫ್ ಅನುದಾನದಿಂದ ಅಭಿವೃದ್ಧಿ ಕಾರ್ಯ ಪ್ರಗತಿ : ಚೆಪ್ಪುಡಿರ ರಾಕೇಶ್ ದೇವಯ್ಯ ಸಮರ್ಥನೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2024-25ನೇ ಸಾಲಿನ ಕಾರ್ಯಾದೇಶದಂತೆ ಮಳೆಹಾನಿ ಕಾಮಗಾರಿಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಅನುದಾನದಿಂದ ನಡೆಯುತ್ತಿದೆ. ಆದರೆ ಜಿಲ್ಲೆಯ ಕಾಂಗ್ರೆಸಿಗರು ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಕೈಗೆತ್ತಿಕೊಳ್ಳಲಾಗಿದೆ ಎಂದು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರರು ಹಾಗೂ ಕೊಡಗು ಜಿಲ್ಲಾ ದಿಶಾ ಸಮಿತಿಯ ಸದಸ್ಯರಾದ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋಟ್ಯಾಂತರ ರೂ. ಎನ್‌ಡಿಆರ್‌ಎಫ್ ಅನುದಾನದಿಂದ ಜಿಲ್ಲಾ ವ್ಯಾಪಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಈ ಕಾಮಗಾರಿ ರಾಜ್ಯ ಸರ್ಕಾರದ ಅನುದಾನದಿಂದ ಕಾರ್ಯಗತಗೊಳ್ಳುತ್ತಿದೆ ಎಂದು ಕಾಂಗ್ರೆಸಿಗರು ಪ್ರತಿಬಿಂಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎನ್‌ಡಿಆರ್‌ಎಫ್ ಶೇ.75ರಷ್ಟು ಅನುದಾನ ನೀಡಿದರೆ ಉಳಿದ ಶೇ.25ನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆ. 2024-25ನೇ ಸಾಲಿನಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ರಸ್ತೆ ದುರಸ್ತಿಯ 495 ಕಾಮಗಾರಿಗಳಿಗೆ ಎನ್‌ಡಿಆರ್‌ಎಫ್ ಮೂಲಕ 1,483.69 ಲಕ್ಷ ರೂ. ಮೀಸಲಿಟ್ಟಿದ್ದು, ಶೇ.75ರ ಅನುಪಾತದಲ್ಲಿ 1,112.77 ಲಕ್ಷ ಹಣ ಬಿಡುಗಡೆಯಾಗಿದೆ. ಮಡಿಕೇರಿ ನಗರಸಭೆ ವ್ಯಾಪ್ತಿಯ ರಸ್ತೆ ದುರಸ್ತಿಯ 14 ಕಾಮಗಾರಿಗಳಿಗೆ 30 ಲಕ್ಷ ರೂ. ನಿಗಧಿಯಾಗಿದ್ದು, 22.50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.
ಕುಶಾಲನಗರ ಪುರಸಭೆ ವ್ಯಾಪ್ತಿಯ 18 ರಸ್ತೆ ದುರಸ್ತಿ ಕಾಮಗಾರಿಗೆ 10.20 ಲಕ್ಷ ರೂ. ಮೀಸಲಿಟ್ಟಿದ್ದು, 7.65 ಲಕ್ಷ ಬಿಡುಗಡೆಯಾಗಿದೆ. ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ದುರಸ್ತಿಯ 13 ಕಾಮಗಾರಿಗಳಿಗೆ 12.90 ಲಕ್ಷ ನಿಗಧಿಯಾಗಿದ್ದು, 9.68 ಲಕ್ಷ ಬಿಡುಗಡೆಯಾಗಿದೆ. ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 6 ರಸ್ತೆ ದುರಸ್ತಿ ಕಾಮಗಾರಿಗೆ 5.70 ಲಕ್ಷ ರೂ. ನಿಗಧಿಯಾಗಿದ್ದು, 4.28 ಲಕ್ಷ ರೂ. ಬಿಡುಗಡೆಯಾಗಿದೆ.
ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ರಸ್ತೆ ದುರಸ್ತಿಯ 74 ಕಾಮಗಾರಿಗಳಿಗೆ 211.54 ಲಕ್ಷ ರೂ. ಮೀಸಲಿಟ್ಟಿದ್ದು, 158.66 ಲಕ್ಷ ರೂ. ಬಿಡುಗಡೆಯಾಗಿದೆ. ಚೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ 3,137 ವಿದ್ಯುತ್ ಕಂಬಗಳ ಬದಲಾವಣೆ ಮತ್ತು 2.20 ಕಿ.ಮೀ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯಕ್ಕಾಗಿ 157.86 ಲಕ್ಷ ರೂ. ಮಂಜೂರಾಗಿದ್ದು, ಸಂಪೂರ್ಣ ಹಣ ಬಿಡುಗಡೆಯಾಗಿದೆ. ಹೀಗೆ ಒಟ್ಟು 620 ಕಾಮಗಾರಿಗಳಿಗೆ 1911.89ಲಕ್ಷ ರೂ. ಮಂಜೂರಾಗಿದ್ದು, 1473.38 ಲಕ್ಷ ರೂ. ಬಿಡುಗಡೆಯಾಗಿದೆ. ಅಲ್ಲದೆ ಅತಿ ಮಳೆಯಿಂದ ಅಕಾಲಿಕವಾಗಿ ಮೃತಪಟ್ಟ ವಿರಾಜಪೇಟೆಯ ವಿಷ್ಣು ಬೆಳ್ಯಪ್ಪ ಹಾಗೂ ಗೌರಿ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳನ್ನು ಪರಿಹಾರವಾಗಿ ಎನ್‌ಡಿಆರ್‌ಎಫ್ ಅನುದಾನದಿಂದ ನೀಡಲಾಗಿದೆ.
ಬಹುತೇಕ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಪರಿಹಾರಕ್ಕೆ ಎನ್‌ಡಿಆರ್‌ಎಫ್ ಅನುದಾನದ ಮೂಲಕವೇ ಹಣ ಹಂಚಿಕೆಯಾಗುತ್ತಿದೆ. ಆದರೆ ಇದನ್ನು ಬಹಿರಂಗಪಡಿಸದ ಕಾಂಗ್ರೆಸ್ಸಿಗರು ರಾಜ್ಯ ಸರ್ಕಾರದ ಅನುದಾನವೆಂದು ಪ್ರತಿಬಿಂಬಿಸಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ವಿವಿಧ ಭಾಗ್ಯಗಳ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕಾಗಿ ಬಹುತೇಕ ಹಣವನ್ನು ಖರ್ಚುಮಾಡುತ್ತಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣ ದೊರೆಯುತ್ತಿಲ್ಲ. ರಾಜ್ಯ ಸರ್ಕಾರ ಸಮರ್ಪಕವಾಗಿ ಅನುದಾನವನ್ನು ಬಿಡುಗಡೆ ಮಾಡದೆ ಇರುವುದರಿಂದ ಕೊಡಗಿನ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಎನ್‌ಡಿಆರ್‌ಎಫ್ ಅನುದಾನ ಸೇರಿದಂತೆ ಕೇಂದ್ರದ ಅನುದಾನದ ಮೂಲಕವೇ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಜನರ ಹಾದಿ ತಪ್ಪಿಸುವ ಕಾರ್ಯದಲ್ಲಿ ಕಾಂಗೆಸ್ ಕಾರ್ಯಕರ್ತರು ತೊಡಗಿದ್ದಾರೆ.
ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಜನಪ್ರತಿನಿಧಿಗಳು ಎನ್‌ಡಿಆರ್‌ಎಫ್ ಅನುದಾನವನ್ನು ತಮ್ಮ ಪಕ್ಷದ ಕಾರ್ಯಕರ್ತರುಗಳ ಮನೆಗಳಿಗೆ ತೆರಳುವ ರಸ್ತೆಗಳ ದುರಸ್ತಿಗೆ ಮಾತ್ರ ಬಳಕೆಯಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ, ಇತರ ರಸ್ತೆಗಳ ನಿರ್ಲಕ್ಷ್ಯವನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಅಧಿಕಾರಿಗಳು ಜನಪ್ರತಿನಿಧಿಗಳ ಯಾವುದೇ ಒತ್ತಡಕ್ಕೆ ಮಣಿಯದೆ ಎನ್‌ಡಿಆರ್‌ಎಫ್ ಅನುದಾನ ಅಗತ್ಯ ಕಾಮಗಾರಿಗಳಿಗೆ ನ್ಯಾಯಯುತವಾಗಿ ವಿನಿಯೋಗವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Hassan
ಹಾಸನವನ್ನು ಸ್ವಚ್ಛ ಮತ್ತು ಸುಂದರ ನಗರವಾಗಿಸಲು ಶ್ರಮ : ಶಾಸಕ ಸ್ವರೂಪ್ ಪ್ರಕಾಶ್

ಹಾಸನ: ಹಾಸನ ನಗರಸಭೆ ಇದೀಗ ಮಹಾನಗರ ಪಾಲಿಕೆಯಾಗಿ ಉನ್ನತೀಕರಣ ಗೊಂಡಿದ್ದು, ಹೆಚ್ಚಿನ ಅನುದಾನ ತಂದು ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹೆಚ್.ಪಿ. ಸ್ವರೂಪ್ ಭರವಸೆ ನೀಡಿದರು.
ನಗರದ 80 ಅಡಿ ರಸ್ತೆ ಬಳಿ ಇರುವ ವಿಶ್ವನಾಥ ನಗರದಲ್ಲಿ 50 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ಚರಂಡಿ ಮತ್ತು ಕವರಿಂಗ್ ಸ್ಲ್ಯಾಬ್ ಅಳವಡಿಸುವ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು, ಹಾಸನದ ಅಭಿವೃದ್ಧಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಸಚಿವರಾಗಿದ್ದಾಗ ಸಾಕಷ್ಟು ಅನುದಾನ ನೀಡಿ ಅಭಿವೃದ್ದಿಗೆ ಸಹಕಾರ ನೀಡಿದ್ದಾರೆ. ಅಲ್ಲದೆ ಇದೀಗ ಮಹಾನಗರ ಪಾಲಿಕೆ ಆಗಿರುವ ಹಿನ್ನೆಯಲ್ಲಿ ರಾಜ್ಯ ಸರಕಾರದಿಂದ ಮೂರು ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಸಹಕಾರದಲ್ಲಿ ಕೇಂದ್ರದಿಂದಲೂ ಸುಮಾರು ೩೦ ಕೋಟಿ ಅನುದಾನ ಸಿಗುವ ಭರವಸೆ ಇದೆ ಎಂದರು. ಈಗಾಗಲೇ ಮಹಾನಗರ ಪಾಲಿಕೆಗೆ ಸೇರಿರುವ ಹೆಚ್ಚುವರಿ ೩೫ ಹಳ್ಳಿಗಳಿಲ್ಲಿ ಅನೇಕ ಸಮಸ್ಯೆಗಳಿದ್ದು ತನ್ನ ಗಮನಕ್ಕೆ ಬಂದಿದೆ. ಅವುಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಸುಮಾರು ೧೦೦-೧೫೦ ಕೋಟಿ ವೆಚ್ಚದಲ್ಲಿ ಮಹಾನಗರ ಪಾಲಿಕೆಗೆ ಒಳಗೊಂಡ ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಎಂ. ಚಂದ್ರಗೌಡ ಮಾತನಾಡಿ, ಹಾಸನ ನಗರ ವಾಸಿಗಳ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನೂ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಶಾಸಕರ ಸಹಕಾರದಿಂದ ಹಾಸನಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ದಿ ಕೆಲಸಗಳನ್ನು ಮಾಡಲಾಗುವುದು ಎಂದರು.
ವಾರ್ಡ್ ಸದಸ್ಯ ಕ್ರಾಂತಿ ಪ್ರಸಾದ್ ತ್ಯಾಗಿ ಮಾತನಾಡಿ, ವಾರ್ಡ್ ನಂ.೩೦ಕ್ಕೆ ಸುಮಾರು ೧೦ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಹೆಚ್.ಡಿ. ರೇವಣ್ಣ ಅವರು ಉಸ್ತುವಾರಿ ಸಚಿವರಾಗಿದ್ದಾಗ ೮೦ ಅಡಿ ರಸ್ತೆ ನಿರ್ಮಿಸಿ ಈ ಭಾಗದ ಜನರಿಗೆ ಭಾರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅಲ್ಲದೆ ಸ್ವರೂಪ್ ಪ್ರಕಾಶ್ ಅವರು ಶಾಸಕರಾದ ಬಳಿಕ ನಮ್ಮ ಬಡಾವಣೆಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ದಿ ಪಡಿಸುವ ಕೆಲಸ ಮಾಡಿದ್ದಾರೆ ಎಂದರು. ಈ ಭಾಗಕ್ಕೆ ಮುಖ್ಯವಾಗಿ ಕುಡಿಯುವ ನೀರು ಹಾಗೂ ಒಳ ಚರಂಡಿ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ, ಅಬಿವೃದ್ಧಿ ಪಥದತ್ತ ಸಾಗುತ್ತಿರುವ ಬಡಾವಣೆಗೆ ಹೆಚ್ಚಿನ ಅನುದಾನ ನೀಡಿ ಇನ್ನಷ್ಟು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಹಾಸನ ಮಹಾನಗರ ಪಾಲಿಕೆಯ ಮೇಯರ್ ಕೆಲಸ ಮಾಡಬೇಕಿದೆ ಎಂದು ಮನವಿ ಮಾಡಿದರು.
ಭೂಮಿ ಪೂಜೆಯಲ್ಲಿ ಹಾಸನ ಮಹಾನಗರ ಪಾಲಿಕೆಯ ಉಪ ಮೇಯರ್ ಹೇಮಲತಾ, ಎಇಇ ಚೆನ್ನೇಗೌಡ, ಎ.ಇ ಆನಂದ್, ನಗರಸಭೆ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಹಾಜರಿದ್ದರು.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya24 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ