Connect with us

Chikmagalur

ರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್

Published

on

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ.

63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ. ಮನೆಯಿಂದ ಹೊರಬಂದ ವೇಳೆ ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು, ಟ್ರಾಕ್ಟರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದಾರೆ. ಇದೀಗ ಅವರು ತೀವ್ರ ಗಾಯಗೊಂಡಿದ್ದು ಮುಂದಿನ ದಿನಗಳಲ್ಲಿ ದುಡಿದು ತಿನ್ನುವುದಕ್ಕೆ ಕಷ್ಟವಾಗಿದೆ. ಆನೆ ದಾಳಿಯಿಂದ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ, ಮಧ್ಯರಾತ್ರಿ ಹೊತ್ತಿಗೆ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Continue Reading

Chikmagalur

ದರ್ಶನ್ ಫೋಟೋ ಹಿಡಿದು ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸುದೀಪ್…!

Published

on

ಚಿಕ್ಕಮಗಳೂರು: ಕಾಫಿನಾಡಿನ ದರ್ಶನ್‌ ಅಭಿಮಾನಿ ಸುದೀಪ್ ಎಂಬಾತ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಶೀಘ್ರವೇ ಜೈಲಿನಿಂದ ರಿಲೀಸ್ ಆಗಲಿ ಎಂದು ದರ್ಶನ್ ಫೋಟೋ ಹಿಡಿದು ಸುಮಾರು 100 ಕಿ.ಮೀ.  ಪಾದಯಾತ್ರೆ ಹೊರಟಿದ್ದಾರೆ.

ಫೆ.16ರಂದು ಹುಟ್ಟುಹಬ್ಬ ದರ್ಶನ್  ಇರಲಿದ್ದು,   ಶೀಘ್ರದಲ್ಲಿಯೇ ಜೈಲಿನಿಂದ ಹೊರಬರಲಿ ಎಂಬ ಆಶಯದೊಂದಿಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ.

ಸುದೀಪ್‌  ಚಿಕ್ಕಮಗಳೂರು ನಗರದ ಹಿರೇಮಗಳೂರಿನ ನಿವಾಸಿಯಾಗಿದ್ದು, ನಾಳೆ ಬೆಳಗ್ಗೆ ಧರ್ಮಸ್ಥಳ ತಲುಪಲಿದ್ದಾರೆ.

Continue Reading

Chikmagalur

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು

Published

on

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ.

ಅಭಿಷೇಕ್ (27) ಹಾಗೂ ಯೋಗೀಶ್ (17) ಮೃತ ದುರ್ದೈವಿಗಳು.

ಮೃತ ಯುವಕರಿಬ್ಬರು ಮೂಲತಃ ಕೊಡಗು ಜಿಲ್ಲೆಯವರು ಎಂದು ತಿಳಿದುಬಂದಿದೆ.

ಮೃತ ಅಭಿಷೇಕ್ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರ ಮನೆಗೆ ಬಂದಿದ್ದ. ಅಲ್ಲಿಂದ ಯೋಗೀಶ್ ಹಾಗೂ ಅಭಿಷೇಕ್ ಇಬ್ಬರು ಭದ್ರಾ ನದಿಯಲ್ಲಿ ಈಜಲು ಹೋದಾಗ ಭದ್ರಾ ನದಿಯ ಆಳದ ಅರಿವಿಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜು ತಜ್ಞರ ನೆರವಿನಿಂದ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಈವರೆಗೂ ಮೃತದೇಹ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಜೆಯಾದ ಕಾರಣ ಮೃತದೇಹದ ಶೋಧ ಕಾರ್ಯವನ್ನ ನಿಲ್ಲಿಸಲಿರುವ ಪೊಲೀಸರು ನಾಳೆ ಮತ್ತೆ ಹುಡುಕಾಟ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

Chikmagalur

ಎನ್‌ಡಿಪಿಎಸ್ ಪ್ರಕರಣದಲ್ಲಿ ಆರೋಪಿಯ ಬಂಧನ

Published

on

ಚಿಕ್ಕಮಗಳೂರು: ಎನ್‌ಡಿಪಿಎಸ್ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ 3 ಲಕ್ಷ ರೂ. ಮೌಲ್ಯದ 5 ಕೆ.ಜಿ. 850 ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ನರಸಿಂಹರಾಜಪುರ ತಾಲೂಕು ಕಟ್ಟಿನ ಮನೆಯ ಹಾಲಿ ಮಾಗಡಿ ತಾಲೂಕು ಸೋಲೂರು ವಾಸಿ ವಿಜಯಕುಮಾರನನ್ನು ಬಂಧಿಸಲಾಗಿದೆ.


ಆರೋಪಿಯಿಂದ ಚಿಕ್ಕಮಗಳೂರು ನಗರದ ರೈಲ್ವೆ ಸ್ಟೇಷನ್ ಸಮೀಪ 5 ಕೆಜಿ 850 ಗ್ರಾಂ ತೂಕವುಳ್ಳ ಅಂದಾಜು 3,00,000 ರೂ. ಮೌಲ್ಯದ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಗರ ಪೊಲೀಸ್ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್  ಪಿಎಸ್ಐ (ಕಾ&ಸು) ಶಂಭುಲಿಂಗನಗೌಡ, ಪಿಎಸ್ಐ (ತನಿಖೆ) ಧನರಾಜ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Continue Reading

Trending

error: Content is protected !!