Mandya
ತೆರೆಯಲ್ಲಿ`ಅನ್ನಂ ಪರಬ್ರಹ್ಮ ಸ್ವರೂಪಂ’ ಚಲನಚಿತ್ರ ಪ್ರದರ್ಶನ : ರಾಜೇಗೌಡ
ಮಂಡ್ಯ: ರಾಜವೀರ ನಿರ್ಮಾಣದ ಸೃಷ್ಟಿಕರ್ತ ಫಿಲಂಸ್‌ನ ರೈತರ ಸಾಧಕ-ಬಾಧಕಗಳ ಆಧಾರಿತ `ಅನ್ನಂ ಪರಬ್ರಹ್ಮ ಸ್ವರೂಪಂ’ ಚಲನಚಿತ್ರವು ಪ್ರದರ್ಶನಗೊಳ್ಳುತ್ತಿದ್ದು, ಜಿಲ್ಲೆಯ ರೈತ ಬಂಧುಗಳು, ಸಿನಿರಸಿಕರು ವೀಕ್ಷಿಸಿ ಬೆಂಬಲಿಸಬೇಕೆಂದು ಚಲನಚಿತ್ರದ ನಿರ್ದೇಶಕ ರಾಜೇಗೌಡ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನಚಿತ್ರವು ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ದಿನಕ್ಕೆ ೪ ಆಟಗಳು ಪ್ರದರ್ಶನಗೊಳ್ಳುತ್ತಿವೆ ಎಂದರು.
ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಕನಸಿನ ಚಿತ್ರ ಇದಾಗಿದೆ. ಅವರ ಸಹಕಾರದೊಂದಿಗೆ 8 ವರ್ಷಗಳ ಸುದೀರ್ಘ ಅವಧಿಯಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ತಮಿಳುನಾಡಿನ ಜತೆಗಿನ ನೀರಿನ ಹಂಚಿ ವಿವಾದ, ರೈತರ ಜೀವನದ ನೈಜತೆ, ಜೀವನ ಶೈಲಿ, ಕಷ್ಟಗಳನ್ನು ತಿಳಿಸುವುದು ಚಲನಚಿತ್ರದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದವನಾದ ನಾನು ಹಲವು ವರ್ಷಗಳಿಂದ ಚಲನಚಿತ್ರೋದ್ಯಮದಲ್ಲಿ ಭಾಗಿಯಾಗಿದ್ದೇನೆ.

ಕೋಲಾರದಲ್ಲೂ 10 ಎಕರೆ ಜಮೀನು ಭೋಗ್ಯಕ್ಕೆ ಪಡೆದು ವ್ಯವಸಾಯ ಮಾಡುತ್ತಿದ್ದೇನೆ. ರೈತನಾಗಿ ರೈತರ ಬಗ್ಗೆ ಜನರಿಗೆ ತಿಳಿಸುವ ಸುದ್ದೇಶದಿಂದ ಈ ಚಿತ್ರವನ್ನು ರಾಮನಗರ, ಮಂಡ್ಯ, ಮೈಸೂರಿನಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿಸಿದರು.ಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಗೌಡ, ತಾಲೂಕು ಅಧ್ಯಕ್ಷ ಬೂದನೂರು ಪುಟ್ಟಸ್ವಾಮಿ, ವಿಜಯ್, ಸೂರ್ಯಗೌಡ ಇದ್ದರು.
Mandya
ತರಬೇತಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಿ :ಡಾ. ಕುಮಾರ
ಮಂಡ್ಯ : ಘನ ತ್ಯಾಜ್ಯವನ್ನು ವೈಜ್ಞಾನಿಕ ವಾಗಿ ವಿಲೇವಾರಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನೆಗಳಲ್ಲಿ ಹಸಿ ಕಸ, ಒಣ ಕಸ ವಿಂಗಡಣೆ ಮಾಡಬೇಕು ಹಾಗೂ ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ರವರು ತಿಳಿಸಿದರು.
ಮಂಡ್ಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ನಾಗರಾಭಿವೃದ್ಧಿ ಕೋಶ, ಮಂಡ್ಯ ಮತ್ತು ನಗರಸಭೆ ವತಿಯಿಂದ ಘನ ತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು 2026 ಕುರಿತು ಮಂಡ್ಯ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರಯುಕ್ತರು, ಮುಖ್ಯಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರುಸರ್ವೋಚ್ಚ ನ್ಯಾಯಾಲಯದ 2026 ರ ಹೊಸ ನಿಯಮಗಳ ಅನ್ವಯ ಹಸಿ ಕಸ, ಒಣ ಕಸ, ವಿಶೇಷ ತ್ಯಾಜ್ಯ, ಡೈಪರ್ ತ್ಯಾಜ್ಯ ವಾಗಿ ನಾಲ್ಕು ರೀತಿಯ ವಿಲೇವಾರಿ ಭಾಗಗಳಾಗಿ ರೂಪಿಸಲಾಗಿದ್ದು ಸಾರ್ವಜನಿಕರಲ್ಲಿ 2026 ರ ನಿಯಮಗಳ ಕುರಿತು ಅರಿವು ಮೂಡಿಸುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಘನ ತ್ಯಾಜ್ಯಗಳನ್ನು ನಿರ್ಲಕ್ಷಿಸುವುದರಿಂದ ಆರ್ಥಿಕತೆ ಅಷ್ಟೇ ಅಲ್ಲದೇ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಮನುಷ್ಯ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯಗಳನ್ನು ನಾಲ್ಕು ವಿಧದ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ (ಬಲ್ಬ್ ಗಳು, ಬ್ಯಾಟರಿ, ಅವಧಿ ಮೀರಿದ ಔಷಧಗಳು,ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆಯನ್ನು ಮಾಡಿ ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ತಿಳಿಸಿದರು.
ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ 4 ವಿಧಗಳ ತ್ಯಾಜ್ಯ ವಿಂಗಡಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಇವುಗಳ ಸಂಗ್ರಹಣೆ, ಸಾಗಾಣಿಕೆ ಹಾಗೂ ಸಂಸ್ಕರಣೆ, ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಸೂಚಿಸಿದರು. ನೂತನ ನಿಯಮ ಉಲ್ಲಂಘನೆ ಮಾಡುವ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದರು.ಸ್ಥಳೀಯ ಸಂಸ್ಥೆಗಳು ಪ್ರತ್ಯೇಕವಾಗಿ ಸಂಗ್ರಹಿಸಿದ ಒಣ ತ್ಯಾಜ್ಯವನ್ನು ಎಂ.ಆರ್.ಎಫ್ ಘಟಕಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳು, ಮರುಬಳಕೆ ಮಾಡಲಾಗದ ವಸ್ತುಗಳು, ದಹನಕಾರಿ ತ್ಯಾಜ್ಯ ನಿಷ್ಕ್ರಿಯ ತ್ಯಾಜ್ಯಗಳು ಎಂದು ಮರು ವಿಂಗಡಣೆ ಮಾಡಿ, ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಹಸಿಕಸ ಮತ್ತು ಒಣ ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತರ ಕರ್ತವ್ಯ. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.ಜನರ ಮನಸ್ಥಿತಿಯನ್ನು ಬದಲಾಯಿಸಿ ಆರೋಗ್ಯಕರ ಸಮಾಜವನ್ನು ಸೃಷ್ಟಿಸಬೇಕು ಆದ್ದರಿಂದ ಸಾರ್ವಜನಿಕರು ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕು. ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಥೈಸಿಕೊಂಡು ಸದುಪಯೋಗ ಪಡೆದು ಪಾಲಿಕೆ ಆರೋಗ್ಯ ಅಧಿಕಾರಿಗಳು, ಪರಿಸರ ಇಂಜಿನಿಯರ್‌ಗಳು ಮತ್ತು ಪೌರಕಾರ್ಮಿಕರು ವಾರ್ಡ್‌ಗಳಿಗೆ ಭೇಟಿ ನೀಡಿ ಕಸ ವಿಂಗಡನೆಯ ಸರಿಯಾದ ಪದ್ಧತಿಯನ್ನು ಪ್ರಾತ್ಯಕ್ಷಿಕೆ (Demonstration) ಮೂಲಕ ಜನರಿಗೆ ತಿಳಿಸಬೇಕು.ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಥೈಸಿಕೊಂಡು ಸದುಪಯೋಗ ಪಡೆದು ಕೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ತುಂಬಾ ಅಗತ್ಯ ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಮಾತನಾಡಿ, ಘನತ್ಯಾಜ್ಯಗಳನ್ನು ನಾಲ್ಕು ವಿಧದ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ,ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ (ಬಲ್ಬ್ ಗಳು, ಬ್ಯಾಟರಿ, ಅವಧಿ ಮೀರಿದ ಔಷಧಗಳು,ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆ ಯನ್ನು ಸಾರ್ವಜನಿಕರಿಂದ ಮಾಡಿಸಿ, ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ತಿಳಿಸಿದರು.
ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಥೈಸಿಕೊಂಡು ಸದುಪಯೋಗ ಪಡೆದು ಕೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ತುಂಬಾ ಅಗತ್ಯ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಅಪರ ಪೊಲೀಸ್ ಅಧೀಕ್ಷಕರು ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ನಗರಸಭೆ ಪೌರಯುಕ್ತರಾದ ಪಂಪಶ್ರೀ, ನಗರಸಭೆಯ ಕಾರ್ಯಪಾಲಕ ಅಭಿಯಂತರರು ಪ್ರತಾಪ್, ಸುಂದರ್ ರಾಜ್, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ರವರು ಉಪಸ್ಥಿತರಿದ್ದರು.
Mandya
ಮೇ.27 ರಂದು ಕವಿ ಕೆ.ಪಿ.ಮೃತ್ಯುಂಜಯ ಅವರ ಜಾಯ್ ಪದ್ಯಗಳು ಪುಸ್ತಕ ಲೋಕಾರ್ಪಣೆ ಮತ್ತು ಗೌರವಾರ್ಪಣೆ : ಸಿ.ತ್ಯಾಗರಾಜು
ಮಂಡ್ಯ: ಸ್ನೇಹ ಬಳಗದಿಂದ ಕವಿ ಕೆ.ಪಿ.ಮೃತ್ಯುಂಜಯ ಅವರ ಜಾಯ್ ಪದ್ಯಗಳು ಪುಸ್ತಕ ಲೋಕಾರ್ಪಣೆ ಮತ್ತು ಗೌರವಾರ್ಪಣೆ ಕಾರ್‍ಯಕ್ರಮವನ್ನು ಮೇ ೨೭ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕೆವಿಎಸ್ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಂಡ್ಯ ತಾ.ಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಕವಿ ಕೆ.ಪಿ.ಮೃತ್ಯುಂಜಯ ಅವರು ಉಪನ್ಯಾಸಕರಾಗಿ ನಿವೃತ್ತಿಯ ಹೊಸ್ತಿಲಿನಲ್ಲಿದ್ದಾರೆ. ಹಲವು ಪುಸ್ತಕಗಳನ್ನು ಬರೆದ ಅವರು ನಿವೃತ್ತಿಯ ಹಿನ್ನಲೆ ಈ ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುಸ್ತಕ ಬಿಡುಗಡೆ ಮತ್ತು ಕವಿಗೆ ಗೌರವ ಸಲ್ಲಿಸುವರು. ಶಾಸಕ ಪಿ.ರವಿಕುಮಾರ್ ಗೌಡ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದು, ಇಂಗ್ಲೀಷ್ ಅಧ್ಯಾಪಕರು ಮತ್ತು ಬರಹಗಾರರಾದ ಪ್ರಸನ್ನಕುಮಾರ್ ಕೆರೆಗೋಡು ಪುಸ್ತಕದ ಕುರಿತು ಮಾತನಾಡುವರು. ಲೇಖಕ, ಕವಿ ಉಪನ್ಯಾಸಕ ಕೆ.ಪಿ.ಮೃತ್ಯುಂಜಯ ತಾ.ಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಗೌರವ ಉಪಸ್ಥಿತಿ ವಹಿಸುವರು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಬಳಗದ ಸಿ.ಎಂ.ದ್ಯಾವಪ್ಪ, ಮಂಗಲ ಎಂ.ಯೋಗೇಶ್, ಡಿ.ದೇವರಾಜು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಲಿಂಗಪ್ಪ ಇದ್ದರು.
Mandya
ತಹಶೀಲ್ದಾರ್‌ಗೆ ಚೀಮಾರಿ, ಭಾರಿ ಭೂ ಹಗರಣ ಪ್ರಕರಣಕ್ಕೆ ಹಿಡಿದ ಕೈಗನ್ನಡಿ : ಕೆ.ಅನ್ನದಾನಿ
ಮಂಡ್ಯ: ಉಪಲೋಕಾಯುಕ್ತ ನ್ಯಾಯಮೂರ್ತಿಗಳು ತಹಶೀಲ್ದಾರ್‌ಗೆ ಚೀಮಾರಿ ಹಾಕಿರುವುದು ಮಳವಳ್ಳಿ ತಾಲೂಕಿನಲ್ಲಿ ನಡೆದಿರುವ ಭಾರಿ ಭೂ ಹಗರಣ ಪ್ರಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮಾಜಿ ಶಾಸಕ ಕೆ.ಅನ್ನದಾನಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮಾಜಿ ಶಾಸಕನಾಗಿ ಈ ಸಂಬಂಧ ಸಾಕಷ್ಟು ಬಾರಿ ಕ್ರಮ ವಹಿಸಲು ಮನವಿ ಮಾಡಿದ್ದೆ. ಆದರೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಿದ್ದಾಚಾರ್ ಅವರ ಮೂಲಕ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದು, ಇದೀಗ ತಾಲೂಕು ಆಡಳಿತ ಭೂಗಳ್ಳರ ಪರವಾಗಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದರು.

ಮಳವಳ್ಳಿ ತಾಲೂಕಿನ ಅಭಿವೃದ್ಧಿಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದ್ದು, ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿತವಾಗಿದ್ದು, ಇಲ್ಲಿನ ಭೂ ಹಗರಣಗಳಿಗೆ ಕುಮ್ಮಕ್ಕು ನೀಡುವಲ್ಲಿ ಮಾತ್ರ ಕೆಲಸ ಮಾಡುತ್ತಿದೆ. ಹಾಲಿ ಶಾಸಕರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದರು.
ತಾಲೂಕಿನಲ್ಲಿ ೩೦೫ ಎಕರೆ ಅಕ್ರಮ ಆರ್‌ಟಿಸಿ ವಜಾ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಸಂಬಂಧ ವಿರೋಧ ಪಕ್ಷವಾಗಿ ದೂರಿದ್ದೇನೆ. ಇದೀಗ ಲೋಕಾಯುಕ್ತರು ಚೀಮಾರಿ ಹಾಕಿದ್ದಾರೆ. ಕೂಡಲೇ ಅಕ್ರಮ ಭೂಗಳ್ಳರ ಪರವಾಗಿ ಕೆಲಸ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.
ತಾಲೂಕು ಪಂಚಾಯಿತಿಯ ಆಡಳಿತ ನಿಷ್ಕೃಯಗೊಂಡಿದೆ. ಇಓ ಹಾಗೂ ತಾಲೂಕಿನ ಎಲ್ಲ ಆಡಳಿತಾಧಿಕಾರಿಗಳು ಸಾರ್ವಜನಿಕರ ಯಾವುದೇ ಕೆಲಸ ಮಾಡದೇ ಅಭಿವೃದ್ಧಿಯ ಕಡೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಹಲಗೂರು ಗ್ರಾ.ಪಂ.ನಲ್ಲಂತೂ ಲಕ್ಷಾಂತರ ರೂ ಹಣ ದುರುಪಯೋಗವಾಗಿದೆ. ಎಂದು ಆರೋಪಿಸಿದರು.
ಪುರಸಭೆಯ ಆವರಣದಲ್ಲಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಜಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿಲ್ಲ, ಕೇಂದ್ರ ಸಚಿವರು ನೀಡಿದ ೧೦ ಲಕ್ಷ ರೂ.ಗಳಲ್ಲಿ ಒಂದು ಕಾಪೌಂಡ್ ನಿರ್ಮಾಣವಾಗಿರುವುದು ಬಿಟ್ಟರೆ ಬೇರಾವ ಕೆಲಸಗಳನ್ನು ಮಾಡಲಾಗಿಲ್ಲ. ೪ ವರ್ಷದಿಂದ ಅಭಿವೃದ್ಧಿ ಕಾಣದಿರುವುದಕ್ಕೆ ಹಾಲಿ ಶಾಸಕರ ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದರು.
ಮಳವಳ್ಳಿ ತಾಲೂಕು ಕಾವೇರಿ ಜಲಾನಯನ ಪ್ರದೇಶದ ಕೊನೆಯ ಭಾಗವಾಗಿದೆ. ಇಲ್ಲಿಗೆ ನೀರು ಒದಗಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಈ ಭಾಗದ ಕಾಲುವೆಗಳ ಅವುಗಳ ದುರಸ್ಥಿ ಕಾರ್‍ಯ ಯಾವಾಗ ಆಗುತ್ತವೆ ಎಂಬ ಮಾಹಿತಿಯೂ ರೈತರಿಗೆ ನೀಡದೇ ನೀರನ್ನೂ ಒದಗಿಸದೇ ವಂಚನೆ ಮಾಡಲಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆಯು ತಾಲೂಕಿನ ಯಾವ ಗ್ರಾಮದಲ್ಲೂ ಜಾರಿಯಾಗಿಲ್ಲ. ಇದಕ್ಕಾಗಿ ರಸ್ತೆ ಅಗೆದಿರುವುದನ್ನು ಸರಿಪಡಿಸಲಾಗಿಲ್ಲ ಎಂದು ಆರೋಪಿಸಿದರು.
ತಾಲೂಕಿನ ಕನಕಭವನ ಮತ್ತು ಬಸವ ಭವನ ನಿರ್ಮಾಣ ಮಾಡುವಲ್ಲಿ ಶಾಸಕರು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಕಳೆದ ೩ ವರ್ಷಗಳಿಂದ ಕಾಮಗಾರಿ ಆರಂಭ ಮಾಡಲಿಲ್ಲ. ತಾಲೂಕಿನಲ್ಲಿ ಸಿಆರ್‌ಎಸ್ ನಿಧಿಯಿಂದ ೮ ಬಸ್ ನಿಲ್ದಾಣಗಳನ್ನು ಸಂಬಂಧ ಕಾಮಗಾರಿಗೆ ಅಗತ್ಯ ಸಾಮಗ್ರಿಗಳು ರಸ್ತೆಯಲ್ಲಿ ಬಿದ್ದಿವೆ. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಆಕ್ಷೇಪದಿಂದ ಸ್ಥಗಿತಗೊಂಡಿದೆ. ಆಶ್ರಯ ಬಡಾವಣೆಯ ನಾಮಫಲಕ ಒಡೆದು ಅದರ ಅಭಿವೃದ್ಧಿಗೂ ಅಡ್ಡಗಾಲಿಡುವ ಮೂಲಕ ಹೊಟ್ಟೆಕಿಚ್ಚಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಸಮಾಜಿಕ ಸಂಘಟನೆಗಳು, ಸಂಸ್ಥೆಗಳು ಸಾರ್ವಜನಿಕರ ಪರ ಕೆಲಸ ಮಾಡುವ ಸಂಬಂಧ ಪ್ರಶ್ನೆ ಮಾಡಿದರೆ ಸುಮೋಟೊ ಪ್ರಕರಣ ದಾಖಲಿಸುವಂತೆ ಶಾಸಕರು ಹೇಳಿಕೆ ನೀಡಿದ್ದಾರೆ. ತಾಲೂಕಿನಲ್ಲಿ ಸಾರ್ವಜನಿಕರ ಕೆಲಸ ಮಾಡಲು ಅಧಿಕಾರಿಗಳನ್ನು ಪ್ರಶ್ನೆ ಮಾಡುವುದೇ ಅಪರಾಧವಾಗಿದೆ. ಶಾಸಕರು ಈ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಜಿ.ಪಂ ಮಾಜಿ ಸದಸ್ಯ ಹನುಮಂತು, ಯುವ ಜೆಡಿಎಸ್ ತಾಲೂಕು ಅಧ್ಯಕ್ಷ ಚಂದಳ್ಳಿ ಶ್ರೀಧರ್, ಸಿದ್ದಾಚಾರ್, ಶಂಕರ್, ಚೇತನ್ ಇದ್ದರು.
-
State17 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Hassan20 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan55 minutes ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Kodagu22 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Chamarajanagar19 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Mysore6 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Kodagu20 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ
-
State24 hours agoದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಹೈಕಮಾಂಡ್ ಸಭೆಯಲ್ಲಿ ಮಹತ್ವದ ಚರ್ಚೆ ಸಾಧ್ಯ
