Connect with us

National - International

ಅಣ್ಣಾಮಲೈ ಒಬ್ಬ ಪುವರ್‌ ಮ್ಯಾನ್‌: ಡಿಕೆ ಶಿವಕುಮಾರ್‌ ಹೀಗೇಳಿದ್ದೇಕೆ?

Published

on

ತಮಿಳುನಾಡು: ಜನಸಂಖ್ಯಾ ಆಧಾರಿತ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಐಎನ್‌ಡಿಐಎ ಮೈತ್ತಿ ಪಕ್ಷಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.

ಈ ಸಭೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭಾಗವಹಿಸಿದ್ದರು.

ಈ ಸಭೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಯೋಜನೆಗೆ ಮುಂದಾಗಿ ತಮಿಳುನಾಡು ರಾಜ್ಯದ ಜನರಿಗೆ ಅನ್ಯಾಯ ಮಾಡಿ, ಕ್ಷೇತ್ರ ಮರುವಿಂಗಡಣೆ ಸಭೆಗೆ ಹಾಜರಾಗಿದ್ದಾರೆ ಎಂದು ವಿರೋಧಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.

ಇನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆದ, ನಮ್ಮ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ಶೋಷಿಸುತ್ತಿರುವ ಮತ್ತು ತಮಿಳುನಾಡು ಗಡಿ ಜಿಲ್ಲೆಗಳನ್ನು ಕೇರಳದ ವೈದ್ಯಕೀಯ ತ್ಯಾಜ್ಯವನ್ನು ಸುರಿಯುವ ಸ್ಥಳವನ್ನಾಗಿ ಪರಿವರ್ತಿಸುತ್ತಿರುವ ತಮ್ಮ INDIA ಮೈತ್ರಿಕೂಟದ ಪಾಲುದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಸಹೋದರ ಸಹೋದರಿಯರು ತಮ್ಮ ಮನೆಗಳ ಮುಂದೆ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡದ್ದರು.

ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ಅಣ್ಣಾಮಲೈ ಒಬ್ಬ ಪುವರ್‌ ಮ್ಯಾನ್‌, ಕರ್ನಾಟಕದಲ್ಲಿ ಕೆಲಸ ನಿರ್ವಹಿಸುವ ವೇಳೆ ನನ್ನ ಶಕ್ತಿ ಬಗ್ಗೆ ಆತನಿಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆತನಿಗೆ ಶುಭವಾಗಲಿ ಎಂದು ನಸುನಕ್ಕರು.

https://x.com/annamalai_k/status/1903348499267326152

ಡಿಕೆ ರಿಯಾಕ್ಷನ್‌ಗೆ ಮತ್ತೊಂದು ಪೋಸ್ಟ್‌ ಮಾಡಿರುವ ಅಣ್ಣಾಮಲೈ, ಹೌದು, ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಗಮನಾರ್ಹ ಉಲ್ಲೇಖಕ್ಕಾಗಿ ಧನ್ಯವಾದಗಳು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ.

ಅಲ್ಲದೆ, ಈ ಬಡವನಿಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳು ಮತ್ತು ಸಿದ್ದರಾಮಯ್ಯ ಅವರನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ನಿಮಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Continue Reading

National - International

ಅಂಬೇಡ್ಕರ್‌ ಅವರ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌:‌ ಪ್ರಧಾನಿ ಮೋದಿ

Published

on

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್‌ ಕಾನೂನನ್ನು ಕಾಂಗ್ರೆಸ್‌ ರೂಪಿಸಿತ್ತು.

ಕಳೆದ 2013ರಲ್ಲಿ ಕಾಂಗ್ರೆಸ್‌ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್‌ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.

ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್‌ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಾಬಾ ಸಾಹೇಸ್‌ ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್‌. ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಹರಿಹಾಯ್ದರು.

Continue Reading

National - International

ಅಮೆರಿಕಾದಿಂದ ಭಾರತಕ್ಕೆ ಬಂದಿಳಿದ 26/11 ರೂವಾರಿ ತಹವ್ವೂರ್ ರಾಣಾ

Published

on

ಮುಂಬೈ: ಅಮೆರಿಕದಿಂದ ಗಡಿಪಾರಾಗಿದ್ದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಗುರುವಾರ ಭಾರತಕ್ಕೆ ವಾಪಾಸ್‌ ಕರೆತರಲಾಗಿದೆ.

ಎನ್‌ಐಎ, ಆರ್‌ಎಡಬ್ಲ್ಯೂ, ಎಸ್‌ಡಬ್ಲ್ಯೂಎಟಿ ತಂಡಗಳು ಅಮೆರಿಕಕ್ಕೆ ತೆರಳಿ ಗುರುವಾರ ಮಧ್ಯಾಹ್ನ 2.39ರ ಸುಮಾರಿಗೆ ರಾಣಾ ಇದ್ದ ವಿಮಾನ ದೆಹಲಿಯಲ್ಲಿ ಇಳಿಯಿತು. ಇನ್ನು ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆಯಿದ್ದು, ಮುಂದಿನ ಬೆಳವಣಿಗೆ ಕಾದುನೋಡಬೇಕಿದೆ.

ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತುರ್ತು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ದೇಶದ ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಭಾರತದ ತನಿಖಾಧಿಕಾರಿಗಳ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಿತ್ತು.

ಅಧಿಕಾರಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿರುವ ಹೈ ಸೆಕ್ಯುರಿಟಿ ಸೆಲ್‌ಗಳು ಹೆಚ್ಚಿನ ಅಪಾಯದ ಬಂಧಿತ ವ್ಯಕ್ತಿಗಾಗಿ ಸಿದ್ಧವಾಗಿವೆ. ಎನ್‌ಐಎ ಇತ್ತೀಚೆಗೆ ಅವರ ಪ್ರಕರಣವನ್ನು ಮುಂಬೈನಿಂದ ದೆಹಲಿಗೆ ವರ್ಗಾಯಿಸುವ ಬಗ್ಗೆ ನ್ಯಾಯಾಲಯದ ಆದೇಶವನ್ನು ಪಡೆದುಕೊಂಡಿದೆ. ಅವರನ್ನು ಭಾರತಕ್ಕೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಏಜೆನ್ಸಿ ಅವರನ್ನು ಕಸ್ಟಡಿಗೆ ವಿಚಾರಣೆಗೆ ಒಳಪಡಿಸಬಹುದು. ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ರಾಣಾ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ.

ಮೂಲಗಳ ಪ್ರಕಾರ, ಎನ್‌ಐಎ ಡಿಐಜಿ ಜಯಾ ರಾಯ್ ಮಂಗಳವಾರ ತಹಾವೂರ್ ರಾಣಾ ಶರಣಾಗತಿ ವಾರಂಟ್‌ಗೆ ಸಹಿ ಹಾಕಿದರು. ಅದಾದ ನಂತರ ಅವರ ಹಸ್ತಾಂತರ ಪ್ರಕ್ರಿಯೆಯು ವೇಗವಾಗಿ ಮುಂದುವರಿಯಿತು. ಬುಧವಾರ ಬೆಳಿಗ್ಗೆ 6.30ರ ಸುಮಾರಿಗೆ ಭಾರತೀಯ ತನಿಖಾ ಸಂಸ್ಥೆ ರಾಣಾ ಅವರನ್ನು ಹೊತ್ತ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟು, ಗುರುವಾರ ಭಾರತಕ್ಕೆ ಮರಳಿದ್ದಾರೆ.

Continue Reading

National - International

ರೆಪೋ ದರ ಇಳಿಸಿದ ಆರ್‌ಬಿಐ: ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಿಷ್ಟು

Published

on

ನವದೆಹಲಿ: ಆರ್‌ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ತನ್ನ ಹಣಕಾಸು ನೀತಿ ಸಭೆಯಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿಮೆ ಮಾಡಿದೆ. ಆ ಮೂಲಕ 6.25%ರಿಂದ 6.00ಗೆ ತಂದಿದೆ.

ಈ ನಿರ್ಧಾರವನ್ನು ಹಣಕಾಸು ನೀತಿ ಸಮಿತಿ (ಎಂಪಿಸಿ) ಏಕಮತದಿಂದ ತೆಗೆದುಕೊಂಡಿದೆ. ಈ ಬಗ್ಗೆ ಮಾತನಾಡಿರುವ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, ಹಣದುಬ್ಬರವು ತಗ್ಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

2026ರ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆಯನ್ನು 6.7% ಎಂದು ಮೊದಲು ಅಂದಾಜಿಸಲಾಗಿತ್ತು, ಆದರೆ ಈಗ ಅದನ್ನು 6.5%ಗೆ ಕಡಿಮೆ ಮಾಡಲಾಗಿದೆ. ಹಣದುಬ್ಬರ ಯೋಜನೆಯನ್ನು 4.2% ರಿಂದ 4%ಗೆ ಇಳಿಸಲಾಗಿದೆ. ಜಾಗತಿಕ ಸುಂಕಗಳ ಪ್ರಭಾವದಿಂದ ಭಾರತದ ಆರ್ಥಿಕತೆಯ ಮೇಲೆ ಒತ್ತಡ ಉಂಟಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.

ಆದರೆ, ಆರ್‌ಬಿಐ ದೇಶೀಯ ಬೆಳವಣಿಗೆಯನ್ನು ಸಮತೋಲನಗೊಳಿಸಲು ಈ ಕ್ರಮ ತೆಗೆದುಕೊಂಡಿದೆ. ಈ ದರ ಕಡಿತವು ಸಾಲಗಾರರಿಗೆ ಪ್ರಯೋಜನವನ್ನು ಒದಗಿಸುತ್ತದೆ ಮತ್ತು ಆರ್ಥಿಕ ಚೇತರಿಕೆಯನ್ನು ಬೆಂಬಲಿಸುತ್ತದೆ. ಎಂಪಿಸಿ “ತಟಸ್ಥ” ನೀತಿಯನ್ನು ಮುಂದುವರಿಸಿದೆ, ಇದು ಭವಿಷ್ಯದಲ್ಲಿ ಮತ್ತಷ್ಟು ದರ ಕಡಿತಕ್ಕೆ ಸೂಚನೆ ನೀಡುತ್ತದೆ. ಒಟ್ಟಾರೆಯಾಗಿ, ಈ ನಿರ್ಧಾರವು ಭಾರತದ ಆರ್ಥಿಕ ಸ್ಥಿರತೆಯನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಹಲವು ಸಾಲಗಳ ಮೇಲಿನ ಬಡ್ಡಿ ದರ ಇಳಿಕೆಯಾಗಲಿದ್ದು, ಇದು ಇಎಂಐ ಕಟ್ಟುವ ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ.

Continue Reading

Trending

error: Content is protected !!