Connect with us

Manglore

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Published

on

ಉಜಿರೆ: ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಎಂ. ಭಾಸ್ಕರ ಚಕ್ರವರ್ತಿ ಹೇಳಿದರು.

ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಶುಕ್ರವಾರ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಉಜಿರೆಯಲ್ಲಿ ಆರಂಭಿಸಿದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ ಮಾದರಿಯಾಗಿದ್ದು ಕೇಂದ್ರಸರ್ಕಾರವೂ ಇದಕ್ಕೆ ಮಾನ್ಯತೆ ನೀಡಿದ್ದು, ದೇಶದೆಲ್ಲೆಡೆ ಇಂದು ೬೭೦ ಸಂಸ್ಥೆಗಳು ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ ನೀಡುತ್ತಿದ್ದು ದೇಶದ ಆರ್ಥಿಕ ಪ್ರಗತಿಯಲ್ಲಿ ಇವುಗಳ ತ್ಯಾಗ, ಸೇವೆ ಮತ್ತು ಸಾಧನೆ ಅಮೂಲ್ಯವಾಗಿದೆ ಎಂದು ಶ್ಲಾಘಿಸಿ ಅಭಿನಂದಿಸಿದರು.

ಕೌಶಲಾಭಿವೃದ್ಧಿ ಇಂದು ಅಗತ್ಯವಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಗೃಹನಿರ್ಮಾಣ ಕಾರ್ಮಿಕರು ಹಾಗೂ ಇತರ ಕುಶಲಕರ್ಮಿಗಳ ಬೇಡಿಕೆ ಹೆಚ್ಚಾಗುತ್ತಿದ್ದು ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಬೇಕು, ಎಲ್ಲಾ ನಿರ್ದೇಶಕರುಗಳು ಪ್ರತಿದಿನ ರುಡ್‌ಸೆಟ್ ಸಂಸ್ಥೆಗಳ ಸ್ವಚ್ಛತೆ ಮತ್ತು ನಿರ್ವಹಣೆ ಬಗ್ಯೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ರುಡ್‌ಸೆಟ್ ಸಂಸ್ಥೆಗಳ ರಾಷ್ಟೀಯ ನಿಯಂತ್ರಕ ಬೆಂಗಳೂರಿನ ಆರ್.ಆರ್. ಸಿಂಗ್ ಮಾತನಾಡಿ, ತರಬೇತಿ ನೀಡುವಾಗ ನಿರುದ್ಯೋಗಿಗಳಲ್ಲಿ ನಾಯಕತ್ವ ಗುಣವನ್ನೂ ಬೆಳೆಸಬೇಕು.

ರುಡ್‌ಸೆಟ್ ಸಂಸ್ಥೆಗಳ ಮಹಾನಿರ್ದೇಶಕ ರಾಜು ಎನ್. ಕೋರಿ ಮಾತನಾಡಿ ಗ್ರಾಮೀಣ ಪ್ರದೇಶದ ಬೇಡಿಕೆಗೆ ಅನುಗುಣವಾಗಿ ಹೊಸತನದ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು. ಉನ್ನತ ಸಾಧನೆ ಮಾಡಿದ ರುಡ್‌ಸೆಟ್ ಸಂಸ್ಥೆಗಳನ್ನು ಗೌರವಿಸಲಾಯಿತು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಉತ್ತಮ ಸೇವೆ, ಸಾಧನೆಗೆ ಎಲ್ಲಾ ನೌಕರರನ್ನು ಅಭಿನಂದಿಸಿದರು.
ಸಂಸ್ಥೆಗಳ ಪ್ರಗತಿ, ಸಾಧನೆ ಗುರುತಿಸಿ ಹೊಸ ಯೋಜನೆಗಳನ್ನು ರೂಪಿಸುವುದೇ ವಾರ್ಷಿಕ ಸಮ್ಮೇಳನದ ಉದ್ದೇಶವಾಗಿದೆ ಎಂದರು.

ಬ್ಯೂಟಿ ಪಾರ್ಲರ್, ಹೊಲಿಗೆ ಮೊದಲಾದ ವೃತ್ತಿಗಳನ್ನು ಮನೆಯಲ್ಲೇ ಮಾಡಬಹುದು .ನಿರ್ದೇಶಕರುಗಳು ಮತ್ತು ಸಿಬ್ಬಂದಿ ಉತ್ತಮ ಗುಣಮಟ್ಟದ ತರಬೇತಿಗೆ ವೈಯಕ್ತಿಕ ಗಮನ ಹರಿಸಬೇಕೆಂದು ಹೇಳಿ ಎಲ್ಲರಿಗೂ ಶುಭ ಹಾರೈಸಿದರು.

ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ಉಜಿರೆ ಸಂಸ್ಥೆಯ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.

Continue Reading

Manglore

ಅಂಬಿಕಾ ಸಿಬಿಎಸ್‌ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ ವಿಜ್ಞಾನ, ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್, ಮಂದಿರಾ ಕಜೆ ಪ್ರಥಮ

Published

on

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿ, ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿಗಳ ಪುತ್ರ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ, ಮಹೇಶ್ ಕಜೆ ಹಾಗೂ ದೀಪಿಕಾ ಕಜೆ ದಂಪತಿಯ ಪುತ್ರಿ
ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಇವರಿಬ್ಬರೂ ಮುಂದೆ ನಡೆಯುವ ಝೋನಲ್ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಅಂತೆಯೇ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ೧೦ನೇ
ತರಗತಿ ವಿದ್ಯಾರ್ಥಿಗಳಾದ, ಪ್ರವೀಣ್ ರಾವ್ ಮತ್ತು ಸುಗಂಧಿನಿ ದಂಪತಿ ಪುತ್ರ ಪ್ರಿಯಾಂಶು ರಾವ್, ಸುರೇಶ್ ಎಸ್ ಶೆಟ್ಟಿ ಮತ್ತು ನೈನಾ ದಂಪತಿ ಪುತ್ರ ಕನಿಷ್ಕ್ ಎನ್ ಶೆಟ್ಟಿ ಹಾಗೂ 9ನೇ ತರಗತಿ ವಿದ್ಯಾರ್ಥಿ, ಮಧುಸೂದನ್ ಸಾಲೆ ಮತ್ತು ವಿನುತಾ ಎಮ್ ಸಾಲೆ ದಂಪತಿ ಪುತ್ರ ಅನಿತೇಜ್ ಎಮ್ ಸಾಲೆ ಅವರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

Continue Reading

Manglore

ಜಿಲ್ಲಾಮಟ್ಟದ ಖೋ-ಖೋ ಪಂದ್ಯಾವಳಿ: ವಿವೇಕಾನಂದ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು  ರಾಜ್ಯಮಟ್ಟಕ್ಕೆ ಆಯ್ಕೆ

Published

on

ಪುತ್ತೂರು:  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು, ಕಟೀಲು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಭಾಗವಹಿಸಿ
ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ತಂಡದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಭವಿಷ್, ತೇಜಸ್ ಪಿ.ಕೆ., ಸೃಜನ್, ಗೌತಮ್, ತರುಣ್, ಮನ್ವಿತ್ ಬಿ.ಎಲ್, ವನೀಶ್,
ಮಿಥುನ್ ಶೆಟ್ಟಿ, ಪ್ರೇಕ್ಷಿತ್ ಹಾಗೂ ಪ್ರಥಮ ಪಿಯುಸಿಯ ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಘನಶ್ಯಾಮ, ಲಿಖಿತ್, ಕೀರ್ತನ್, ಸಾತ್ವಿಕ್, ಆಯುಷ್ ಭಾಗವಹಿಸಿದ್ದು , ದ್ವಿತೀಯ ವಿಜ್ಞಾನ ವಿಭಾಗದ ಭವಿಷ್ ಉತ್ತಮ ರಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳಾದ ಭವಿಷ್, ಗೌತಮ್ ಹಾಗೂ ವನೀಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ, ಪವನ್ ಕುಮಾರ್ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

Manglore

ಅಪ್ರಾಪ್ತೆ ಮೇಲೆ ಅತ್ಯಾ*ಚಾರಗೈದ ಕಾಮುಕನ ಅರೆಸ್ಟ್

Published

on

ಬಂಟ್ವಾಳ: ಆಟವಾಡುತ್ತಿದ್ದ ಬಾಲಕಿಯ ವಾಸ್ತವ್ಯವಿರದ ಮನೆಯೊಂದರ ಹಿಂದೆ ಕರೆದೊಯ್ದು ಬಲಾತ್ಕಾರವಾಗಿ ಅತ್ಯಾಚಾರಗೈದ ಆರೋಪಿತನನ್ನು
ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇರಾ ಗ್ರಾಮದ ಸೂತ್ರಬೈಲು ನಿವಾಸಿ ಅಬೂಬಕರ್ (50) ಬಂಧಿತ ಆರೋಪಿ.

ಬಾಲಕಿ ಆಟವಾಡುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ನೆರೆಮನೆಯ ನಿವಾಸಿ ಅಬೂಬಕರ್ ಅಲ್ಲಿಯೇ ಯಾರು ವಾಸ್ತವ್ಯವಿರದ ಮನೆಯ ಹಿಂಭಾಗಕ್ಕೆ ಆಕೆಯನ್ನು ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾನೆ.

ಈ ಬಗ್ಗೆ ಬಾಲಕಿಯ ಪೋಷಕರು ನೀಡಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣಾ ಅ ಕ್ರ 135/2025 ಕಲಂ: 64 (1), 351(2) BNS ಮತ್ತು 4 (2) PROTECTION OF CHILDREN FROM SEXUAL OFFENCES ACT 2012 ರಂತೆ ಪ್ರಕರಣ ದಾಖಲಾಗಿದೆ. ಆರೊಪಿಯನ್ನು ದಸ್ತಗಿರಿಮಾಡಿರುವ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಘಟನೆ ನಡೆದ ವೇಳೆ ಆರೋಪಿ ಅಬೂಬಕರ್ ಅನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಬಗ್ಗೆ ಪ್ರತಿ ದೂರು ದಾಖಲಾಗಿದ್ದು, ಈ ಬಗ್ಗೆ ಅ.ಕ್ರ 136/2025 ಕಲಂ126 (2) 115 (2) 351 (1) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Continue Reading

Trending

error: Content is protected !!