Connect with us

Chamarajanagar

ಮಾಜಿ ಸೈನಿಕರು, ಅವಲಂಬಿತರು ಕುಂದು ಕೊರತೆ ಸಲ್ಲಿಸಲು ಮನವಿ

Published

on

ಚಾಮರಾಜನಗರ: ಜಿಲ್ಲೆಯಲ್ಲಿ ವಾಸವಿರುವ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಕುಂದು ಕೊರತೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.

ಮೈಸೂರು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮುಂಬರುವ ದಿನಗಳಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ವಾಸವಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕುಂದು ಕೊರತೆಯನ್ನು ಆಲಿಸಲು ಸಭೆ ನಡೆಸಲು ಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ವಾಸವಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಕುಂದು ಕೊರತೆಗಳನ್ನು ಲಿಖಿತ ರೂಪದಲ್ಲಿ ಅಕ್ಟೋಬರ್ 10 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 0821-2425240 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Continue Reading

Chamarajanagar

ಮಾಸಾಶನ ಪಡೆಯುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ

Published

on

ಚಾಮರಾಜನಗರ: ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಸೆಪ್ಟೆಂಬರ್-2025ರ ಮಾಹೆಯ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 2025ರ ಮಾಹೆಗೆ ಮಾಸಾಶನ ಪಡೆಯುವ ಸಾಹಿತಿ, ಕಲಾವಿದರ ಜೀವಿತ ಪ್ರಮಾಣ ಪತ್ರವನ್ನು ಪಡೆದು ಕೇಂದ್ರ ಕಚೇರಿಗೆ ಸಲ್ಲಿಸಬೇಕಿರುವುದರಿಂದ ಜಿಲ್ಲೆಯಲ್ಲಿ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರವನ್ನು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದ ಎರಡನೇ ಮಹಡಿಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ವಿಜ್ಞಾನ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Published

on

ಚಾಮರಾಜನಗರ:  ತಾಲೂಕಿನ ಹರದನಹಳ್ಳಿಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ 2025-26ನೇ ಶೈಕ್ಷಣಿಕ ಸಾಲಿಗೆ ಅಥವಾ ಖಾಯಂ ಸಿಬ್ಬಂದಿ ನೇಮಕವಾಗುವವರೆಗೆ ತಾತ್ಕಾಲಿಕವಾಗಿ ವಿಜ್ಞಾನ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಹರದನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಅಕ್ಟೋಬರ್ 6ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ದಶಮಾನೋತ್ಸವ ಜಯಂತಿ ಆಚರಣೆ

Published

on

ಕೊಳ್ಳೇಗಾಲ: ಪಟ್ಟಣದ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ದಶಮಾನೋತ್ಸವ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಹಲವು ಕಲಾ ತಂಡಗಳು ಭಾಗಿಯಾಗಿ ಬೆಳ್ಳಿ ರಥ ದಲ್ಲಿ ಪರಮಾಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಭಾವ ಚಿತ್ರ ವಿಟ್ಟು ಪಟ್ಟಣದ ಪ್ರಮುಖ ಬೀದಿ ಗಳಲ್ಲಿ ಮೆರವಣಿಗೆ ಮಾಡಲಾಯಿತು.

ಈ ವೇಳೆ ಜೆಎಸ್ಎಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯರು ಕುಣಿದು ಮೆರವಣಿಗೆಗೆ ಮೆರಗು ತಂದರು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಆರ್. ಕೃಷ್ಣ ಮೂರ್ತಿ ಅವರು, ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರು ಬಹಳ ದೂರ ದೃಷ್ಟಿ ಯಲ್ಲಿ ಅನೇಕ ಶಿಕ್ಷಣ ಸಂಸ್ಥೆ ಯನ್ನು ಸ್ಥಾಪಿಸಿದರು. ಹಾಗಾಗಿ ರಾಜ್ಯ ಗುರು ತಿಲಕ ಎಂಬ ಬಿರುದು ಕೂಡ ನೀಡಲಾಗಿತ್ತು ಎಂದರು.

Continue Reading

Trending

error: Content is protected !!