Chamarajanagar
ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
ಚಾಮರಾಜನಗರ: ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು 2026ರ ಮಾರ್ಚ್ ತಿಂಗಳ ಜೀವಿತ ಪ್ರಮಾಣ ಪತ್ರವನ್ನು ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ.
2025-26ನೇ ಸಾಲಿನಲ್ಲಿ 2026ರ ಮಾರ್ಚ್ ತಿಂಗಳಿಗೆ ಮಾಸಾಶನ ಪಡೆಯುವ ಸಾಹಿತಿ ಕಲಾವಿದರ ಜೀವಿತ ಪ್ರಮಾಣ ಪತ್ರವನ್ನು ಪಡೆದು ಕೇಂದ್ರ ಕಚೇರಿಗೆ ಸಲ್ಲಿಸಬೇಕಿದೆ. ಹೀಗಾಗಿ ಜಿಲ್ಲೆಯಲ್ಲಿ ಮಾಸಾಶನ ಪಡೆಯುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ
Chamarajanagar
ಶಾಸಕರು, ಸಂಸದರ ನಿರ್ಲಕ್ಷ್ಯ ಖಂಡಿಸಿ ಬಿಎಸ್‌ಪಿ ಪ್ರತಿಭಟನೆಗೆ ಕರೆ
ವರದಿ : ಸುನೀಲ್ ಪ್ರಶಾಂತ್
ಕೊಳ್ಳೇಗಾಲ: ಪಟ್ಟಣದ ಐಬಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ಪಿ ನೂತನ ಪದಾಧಿಕಾರಿಗಳು, ಶಾಸಕರು ಹಾಗೂ ಸಂಸದರ ನಿರ್ಲಕ್ಷ್ಯ ಮತ್ತು ನಗರಸಭೆಯ ದುರಾಡಳಿತವನ್ನು ಖಂಡಿಸಿ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಈ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ನಗರಸಭೆಯ 31 ವಾರ್ಡ್‌ಗಳಲ್ಲಿನ ಎಲ್ಲಾ ಮೂಲಭೂತ ಸಮಸ್ಯೆಗಳನ್ನೊಳಗೊಂಡಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ವಾರ್ಡ್‌ಗಳ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
Chamarajanagar
ಚಾಮರಾಜನಗರನಲ್ಲಿ ಕಾಡಾನೆ ದಾಳಿ: ರೈತರ ಬೆಳೆ ನಾಶ
ಚಾಮರಾಜನಗರ : ತಾಲೂಕಿನ ವಡ್ಡರಹಳ್ಳಿ ಹಾಗೂ ಯಣಗುಂಬ ಗ್ರಾಮಗಳ ಜಮೀನುಗಳಿಗೆ ತಡರಾತ್ರಿ ಕಾಡಾನೆಗಳು ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ.
ಕಾಡಾನೆಗಳ ದಾಳಿಯಿಂದ ಆತಂಕಗೊಂಡ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಆನೆಗಳನ್ನು ಕಾಡಿನತ್ತ ಓಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಇದೇ ವೇಳೆ, ರೈತರಿಗೆ ಉಂಟಾದ ಬೆಳೆ ನಷ್ಟವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ, ಸರ್ಕಾರದ ನಿಯಮಾನುಸಾರ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Chamarajanagar
ಮರದ ಪಟ್ಟಿಯಿಂದ ಹಲ್ಲೆ: ಮಾನಸಿಕ ಅಸ್ವಸ್ಥ ಸಾ*ವು
ಗುಂಡ್ಲುಪೇಟೆ: ಮೇ 26: ಪಟ್ಟಣದ ಹಳೆ ಅಸ್ಟತ್ರೆ ರಸ್ತೆಯ ಹಾಡ್‌ವೇರ್ ಅಂಗಡಿ ಮುಂಭಾಗ ನಡೆದ ಹಲ್ಲೆ ಪ್ರಕರಣದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯು ಅಂಗಡಿ ಮುಂದೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನೆಂದು ಹೇಳಲಾಗುತ್ತಿದೆ. ಈ ವೇಳೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಎಂಬಾತ ಆಕ್ರೋಶಗೊಂಡು ಮರದ ಪಟ್ಟಿಯಿಂದ ತಲೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
State18 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Kodagu23 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan21 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan2 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Mysore7 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Hassan23 minutes ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Kodagu21 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ
-
Hassan2 hours agoಬಕ್ರಿದ್ ವೇಳೆ ಗೋವಂಶ ವಧೆ ಬೇಡ: ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ
