Connect with us

State

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಬಯಸುವವರಿಗೆ ಸರ್ಕಾರದಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Published

on

Scholarship to Study in Abroad by Government : 2025-26ನೇ ಸಾಲಿಗೆ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಬಯಸುವಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿ ವೇತನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಈ ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯು ಹಾಗೂ ಅರ್ಹತೆಗಳ ವಿವರವು ಈ ಕೆಳಗಿನ ಲೇಖನದಲ್ಲಿದೆ.

ಯಾರು ಈ ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು?

2025-26ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಮಾಡಬಯಸುವಂತಹ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿವೇತನದ ವಿವರ :

ಈ ಯೋಜನೆಯ ಅಡಿಯಲ್ಲಿ QS ಟಾಪ್ 500 ರ ಇರುವಂತ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶ ಪಡೆದಂತಹ ಅರ್ಹ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

• ವಾರ್ಷಿಕ ಕುಟುಂಬದ ಆದಾಯವು ₹8 ಲಕ್ಷ ರೂ. ಗಿಂತ ಒಳಗಿದ್ದರೆ ಎರಡು ವರ್ಷಗಳ ಅವಧಿಗೆ ಗರಿಷ್ಠ ₹30 ಲಕ್ಷ ರೂ. ನೀಡಲಾಗುತ್ತದೆ.
• ವಾರ್ಷಿಕ ಕುಟುಂಬದ ಆದಾಯವು ₹8 ಲಕ್ಷದಿಂದ ₹16 ಲಕ್ಷ ರೂ. ಒಳಗಿದ್ದರೆ 2 ವರ್ಷಗಳ ಅವಧಿಗೆ ₹15 ಲಕ್ಷ ರೂ. ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?
ಮೇಲೆ ತಿಳಿಸಿರುವ ಅರ್ಹತೆಗಳನ್ನು ಹೊಂದಿರುವಂತಹ ಅಭ್ಯರ್ಥಿಗಳು ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ https://dom.karnataka.gov.in/ ಭೇಟಿ ನೀಡಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 30ನೇ ಸೆಪ್ಟೆಂಬರ್ 2025

Continue Reading

Special

ಡಿಪ್ಲೋಮ ವಿದ್ಯಾರ್ಥಿಗಳಿಗೆ ₹36000 ವಿದ್ಯಾರ್ಥಿವೇತನ!

Published

on

ಬಾಂಬೆ ಗೊರಕ್ಷಕ್ ಮಂಡಳಿಯ ಅಂಗ ಸಂಸ್ಥೆಯಾದ ಬಿಜಿಎಂ ಫೌಂಡೇಶನ್ 2025–26ನೇ ಶೈಕ್ಷಣಿಕ ಸಾಲಿಗೆ ಪಶು-ಸೇವಾ ವಿದ್ಯಾರ್ಥಿವೇತನ ಯೋಜನೆಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹36,000 ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಈ ಸಹಾಯಧನದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಂದುವರೆಸಬಹುದು.

ಯಾರು ಅರ್ಹರು?
ಈ ವಿದ್ಯಾರ್ಥಿವೇತನವು ವಿಶೇಷವಾಗಿ ಪಶುವೈದ್ಯಕೀಯ, ಪಶುಸಂಗೋಪನೆ, ಕೃಷಿ, ಡೈರಿ ವಿಜ್ಞಾನ, ಜಾನುವಾರು ನಿರ್ವಹಣೆ, ಪ್ಯಾರಾ-ಪಶುವೈದ್ಯಕೀಯ, ಮೇವು ನಿರ್ವಹಣೆ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವವರಿಗೆ ಘೋಷಿಸಲಾಗಿದೆ.

ಅರ್ಜಿ ಸಲ್ಲಿಸಲು ಶರತ್ತುಗಳು:
* ಅಭ್ಯರ್ಥಿಯು ಭಾರತದಲ್ಲಿ ನಿವಾಸ ಹೊಂದಿರಬೇಕು ಮತ್ತು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ನೋಂದಾಯಿತನಾಗಿರಬೇಕು.
* ಈ ಹಿಂದೆ ಪಡೆದ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
* ಅಭ್ಯರ್ಥಿಯ ಪೋಷಕರ ವಾರ್ಷಿಕ ಒಟ್ಟು ಆದಾಯ ₹8 ಲಕ್ಷಕ್ಕಿಂತ ಹೆಚ್ಚು ಇರಬಾರದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಫೆಬ್ರವರಿ 2026

ಅರ್ಜಿಯನ್ನು Bgm scholaship ಎಂಬ ಲಿಂಕ್ ಮೂಲಕ ಒನ್ಲೈನ್ ನಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:
* ವಿದ್ಯಾರ್ಥಿಯ ಆಧಾರ್‌ ಕಾರ್ಡ್
* ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶದ ಸಾಕ್ಷ್ಯಪತ್ರ
* ಹಿಂದಿನ ತರಗತಿಯ ಅಂಕಪಟ್ಟಿ
* ಶುಲ್ಕ ರಸೀದಿ
* ಕುಟುಂಬದ ಆದಾಯ ಪ್ರಮಾಣ ಪತ್ರ
* ಬ್ಯಾಂಕ್ ಖಾತೆಯ ವಿವರಗಳು

ಆರ್ಥಿಕ ತೊಂದರೆಯಿಂದಾಗಿ ಓದನ್ನು ಅರ್ಧದಲ್ಲೇ ಕೈ ಬಿಡುವ ವಿದ್ಯಾರ್ಥಿಗಳಿಗೆ ಈ ಸಹಾಯಧಾನವು ವರವಾಗಿದ್ದು, ಇದನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಖರ್ಚು, ಪುಸ್ತಕ , ಪ್ರಯಾಣ ಹಾಗೂ ಇತರ ಅಗತ್ಯಗಳಿಗೆ ಬಳಸಿ ಸದುಪಯೋಗಪಡಿಸಿಕೊಳ್ಳಬಹುದು.

Continue Reading

Hassan

ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

Published

on

ಬೆಂಗಳೂರು/ಹಾಸನ: ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆಯಡಿ ಕೈಗೆತ್ತಿಕೊಳ್ಳಲಾಗಲಿದ್ದು, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

 

ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆಯ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿತ್ತು. ಹೀಗಾಗಿ ಹೊಸ ಪಂಪುಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ.  ವೆಚ್ಚದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದಂತಾಗಿದೆ.

ಹಾಸನ ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆ
ಸಲ್ಲಿಸಿದ್ದಾರೆ.

Continue Reading

Special

ನಮ್ಮ ಮೆಟ್ರೋ ದರ ಏರಿಕೆ: ಕೇಂದ್ರ ಸಚಿವ ಎಂ.ಎಲ್​​. ಖಟ್ಟರ್ ಭೇಟಿ ಮಾಡಿದ ತೇಜಸ್ವಿ ಸೂರ್ಯ

Published

on

ಬೆಂಗಳೂರು: ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆ. 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ.

ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​. ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆ. 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಯಾಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್.​​ ಖಟ್ಟರ್​​ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

 

ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಅನೇಕ ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದ್ದು, ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ.

ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್​​ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Continue Reading

Trending

error: Content is protected !!