Connect with us

Education

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ 3,588 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ರೂ.69,100 ಮಾಸಿಕ ಸಂಬಳ

Published

on

BSF Constable Recruitment 2025 : ಕೇಂದ್ರ ಸರ್ಕಾರದ ಉದ್ಯೋಗಗಳಿಗಾಗಿ ಕಾಯುತ್ತಿರುವಂತಹ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಲ್ಲಿ 3,000 ಕ್ಕಿಂತಲೂ ಅಧಿಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ನೇಮಕಾತಿಯಲ್ಲಿ ಮಹಿಳೆಯರಿಗೂ ಕೂಡ ಅವಕಾಶವಿದ್ದು, ಮಹಿಳೆಯರಿಗಾಗಿಯೇ 182 ಹುದ್ದೆಗಳನ್ನು ಮೀಸಲಿಡಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹಾಗೂ ಇತರೆ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ :

ಈ ನೇಮಕಾತಿಯಲ್ಲಿ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಒಟ್ಟು 3,588 ಹುದ್ದೆಗಳು ಖಾಲಿ ಇವೆ.
• ಪುರುಷ ಅಭ್ಯರ್ಥಿಗಳಿಗಾಗಿ – 3,406 ಹುದ್ದೆಗಳು
• ಮಹಿಳಾ ಅಭ್ಯರ್ಥಿಗಳಿಗಾಗಿ – 182 ಹುದ್ದೆಗಳು

ಅರ್ಜಿ ಸಲ್ಲಿಸಲು ಶುಲ್ಕಗಳ ವಿವರ :

• ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಎಲ್ಲಾ ಸಾಮಾನ್ಯ, OBC ವರ್ಗದ ಅಭ್ಯರ್ಥಿಗಳಿಗೆ 100ರೂ. ನಿಗದಿಪಡಿಸಲಾಗಿದೆ.
• ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಹತೆಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಹುದ್ದೆಗಳಿಗೆ ಅನುಗುಣವಾಗಿ ಸೇವಾ ಅನುಭವ ಹೊಂದಿರಬೇಕು.

ಅಭ್ಯರ್ಥಿಗಳ ವಯೋಮಿತಿಯು 18ರಿಂದ 25 ವರ್ಷದ ಒಳಗಿರಬೇಕು

ಮಾಸಿಕ ವೇತನ – ರೂ. 21,700 ರಿಂದ ರೂ. 69,100 ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 23ನೇ ಆಗಸ್ಟ್ 2025

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ – https://rectt.bsf.gov.in/

Continue Reading

Education

10 ಸಾವಿರಕ್ಕೂ ಹೆಚ್ಚು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಕನ್ನಡಿಗರಿಗೆ ಭರ್ಜರಿ ಮೀಸಲಾತಿ

Published

on

IBPS Banking Recruitment 2025 : ದೇಶಾದ್ಯಂತ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ 10,000ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಬ್ಯಾಂಕಿಂಗ್ ನೇಮಕಾತಿ ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿಯಲ್ಲಿ ಕರ್ನಾಟಕ ರಾಜ್ಯದ ಬ್ಯಾಂಕುಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹುದ್ದೆಗಳ ಉದ್ಯೋಗಾವಕಾಶವಿದೆ. ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ :

ಒಟ್ಟು 10,277 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ಒಟ್ಟು 11 ಪ್ರಮುಖ ಬ್ಯಾಂಕುಗಳಲ್ಲಿ 1,170 ಹುದ್ದೆಗಳು ಖಾಲಿ ಇವೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಪಂಜಾಬ್ ಅಂಡ್ ಸಿಂದ್ ಬ್ಯಾಂಕ್.

ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?

ಯಾವುದಾದರೂ ಒಂದು ಪದವಿ ಮುಗಿಸಿದ್ದು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕು. ವಯೋಮಿತಿ ಅರ್ಹತೆ ನೋಡುವುದಾದರೆ ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷದ ಒಳಗಿರಬೇಕು.

ವೇತನ – 24,050ರೂ. ಯಿಂದ 54,480ರೂ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

• ಪೂರ್ವಭಾವಿ ಪರೀಕ್ಷೆ
• ಮುಖ್ಯ ಪರೀಕ್ಷೆ


ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣ ibps.in ವೆಬ್‌ಸೈಟ್‌ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 175ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 850ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 21, 2025

Continue Reading

Education

ಏರ್‌ಟೆಲ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಸ್ಕಾಲರ್‌ಶಿಪ್‌ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Published

on

Bharti Airtel Scholarship Program 2025 – ಏರ್‌ಟೆಲ್‌ ಕಂಪನಿ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಭಾರತಿ ಏರ್‌ಟೆಲ್‌ ಫೌಂಡೇಶನ್ ನ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಉನ್ನತ ಗುಣಮಟ್ಟದ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುವಂತೆ ಹಾಗೂ ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಬಿಡಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿವೇತನ ನೀಡುತ್ತಿದ್ದಾರೆ.

ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಏನೆಲ್ಲಾ ಪ್ರಯೋಜನ ಸಿಗಲಿದೆ?

ವಿದ್ಯಾರ್ಥಿಗಳು ಕಾಲೇಜಿಗೆ ಭರಿಸುವ ಸಂಪೂರ್ಣ ಶುಲ್ಕವನ್ನು ಮರುಪಾವತಿ ಸಿಗಲಿದೆ. ಈ ಒಂದು ಪ್ರಯೋಜನವು ಸಂಪೂರ್ಣ ಕೋರ್ಸ್ ಗೆ ಅನ್ವಯಿಸಲಿದೆ. ಅದೇ ರೀತಿ ಅವರ ಹಾಸ್ಟಲ್ ಮತ್ತು ಮೆಸ್ಸಿನ ಫೀಸ್ ಅನ್ನು ಕೂಡ ಮರುಪಾವತಿ ಸಿಗಲಿದೆ. ಮೊದಲನೆಯ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೂಡ ಸಿಗಲಿದೆ.

ಇದರ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?

ಮೊದಲನೆಯ ವರ್ಷದ ಪದವಿಗೆ ಕಡ್ಡಾಯವಾಗಿ ದಾಖಲಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 8.5 ಲಕ್ಷದ ರೂ. ಒಳಗಿರಬೇಕು. ಈ ವಿದ್ಯಾರ್ಥಿ ವೇತನವನ್ನು ಪ್ರಮುಖವಾಗಿ ಹೆಣ್ಣುಮಕ್ಕಳಿಗೆ, ಅಂಗವಿಕಲರಿಗೆ ಹಾಗೂ ತಂದೆ ಅಥವಾ ತಾಯಿ ಕಳೆದುಕೊಂಡ ಮಕ್ಕಳಿಗೆ ಅಧ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು :

• ಆಧಾರ್ ಕಾರ್ಡ್
• ಪದವಿ ಕೋರ್ಸಿಗೆ ದಾಖಲಾದ ಪ್ರಮಾಣ ಪತ್ರ
• 12ನೇ ತರಗತಿಯ ಅಂಕಪಟ್ಟಿ
• ಬ್ಯಾಂಕ್ ಪಾಸ್ ಬುಕ್
• ಪಾಸ್ಪೋರ್ಟ್ ಸೈಜ್ ಫೋಟೋ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜುಲೈ 2025

ಅರ್ಜಿ ಸಲ್ಲಿಸುವ ಡೈರೆಕ್ಟ್‌ ಲಿಂಕ್ – https://www.buddy4study.com/page/bharti-airtel-scholarship

Continue Reading

Education

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ : 15 ಸಾವಿರಕ್ಕೂ ಹೆಚ್ಚು ಹುದ್ದೆಗಳ ಖಚಿತ ಭರವಸೆ | ನೋಂದಣಿ ಮಾಡುವ ಲಿಂಕ್ ಇಲ್ಲಿದೆ

Published

on

Alvas Pragati Job Fair 2025 – ಶಿಕ್ಷಣವನ್ನು ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವಂತಹ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು “ಆಳ್ವಾಸ್ ಪ್ರಗತಿ ಉದ್ಯೋಗ ಮೇಳ” ವನ್ನು ಆಯೋಜಿಸಿದ್ದು ಇದರ ಮಾಹಿತಿ ಇಲ್ಲಿದೆ.

ಉದ್ಯೋಗ ಮೇಳದ ವಿವರ :

ಒಟ್ಟು 15,900 ಹುದ್ದೆಗಳನ್ನು ವಿವಿಧ ಕಂಪನಿಗಳು ನೇಮಕ ಮಾಡಿಕೊಳ್ಳಲಿವೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನವು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 150ಕ್ಕೂ ಹೆಚ್ಚು MNC ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹೊರ ಜಿಲ್ಲೆಗಳಿಂದ ಹಾಗೂ ದೂರದ ಊರುಗಳಿಂದ ಬರುವಂತಹ ಅಭ್ಯರ್ಥಿಗಳಿಗೆ ವಸತಿ ಹಾಗೂ ಊಟದ ಸೌಲಭ್ಯಗಳನ್ನು ಕೂಡ ವ್ಯವಸ್ಥೆ ಮಾಡಲಾಗಿದೆ.

ಯಾರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು?

ಹತ್ತನೇ ತರಗತಿ ಓದಿದವರಿಂದ ಹಿಡಿದು ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಕೂಡ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.

Continue Reading

Trending

error: Content is protected !!