Chamarajanagar
ವಿಜ್ಞಾನ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ತಾಲೂಕಿನ ಹರದನಹಳ್ಳಿಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ 2025-26ನೇ ಶೈಕ್ಷಣಿಕ ಸಾಲಿಗೆ ಅಥವಾ ಖಾಯಂ ಸಿಬ್ಬಂದಿ ನೇಮಕವಾಗುವವರೆಗೆ ತಾತ್ಕಾಲಿಕವಾಗಿ ವಿಜ್ಞಾನ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಹರದನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಅಕ್ಟೋಬರ್ 6ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ದಶಮಾನೋತ್ಸವ ಜಯಂತಿ ಆಚರಣೆ

ಕೊಳ್ಳೇಗಾಲ: ಪಟ್ಟಣದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ದಶಮಾನೋತ್ಸವ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಹಲವು ಕಲಾ ತಂಡಗಳು ಭಾಗಿಯಾಗಿ ಬೆಳ್ಳಿ ರಥ ದಲ್ಲಿ ಪರಮಾಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಭಾವ ಚಿತ್ರ ವಿಟ್ಟು ಪಟ್ಟಣದ ಪ್ರಮುಖ ಬೀದಿ ಗಳಲ್ಲಿ ಮೆರವಣಿಗೆ ಮಾಡಲಾಯಿತು.
ಈ ವೇಳೆ ಜೆಎಸ್ಎಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯರು ಕುಣಿದು ಮೆರವಣಿಗೆಗೆ ಮೆರಗು ತಂದರು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಆರ್. ಕೃಷ್ಣ ಮೂರ್ತಿ ಅವರು, ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರು ಬಹಳ ದೂರ ದೃಷ್ಟಿ ಯಲ್ಲಿ ಅನೇಕ ಶಿಕ್ಷಣ ಸಂಸ್ಥೆ ಯನ್ನು ಸ್ಥಾಪಿಸಿದರು. ಹಾಗಾಗಿ ರಾಜ್ಯ ಗುರು ತಿಲಕ ಎಂಬ ಬಿರುದು ಕೂಡ ನೀಡಲಾಗಿತ್ತು ಎಂದರು.
Chamarajanagar
ಪೌರಕಾರ್ಮಿಕರಿರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು: ಶಾಸಕ ಎ.ಆರ್. ಕೃಷ್ಣಮೂರ್ತಿ

ಯಳಂದೂರು: ಪಟ್ಟಣ ಪಂಚಾಯಿತಿ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಎ.ಆರ್ .ಕೃಷ್ಣಮೂರ್ತಿ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಮಕ್ಕಳು ಓದಿ ನಲ್ಲಿ ಹೆಚ್ಚು ಗಮನ ನೀಡಬೇಕು ಎಂದು ಹೇಳಿದರು.
ಪೌರಕಾರ್ಮಿಕರಿಗೆ ದಿನಾಚರಣೆ ಅಂಗವಾಗಿ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷರು ಚಂದ್ರು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಮಲು, ಪ.ಪಂ. ಉಪಾಧ್ಯಕ್ಷರಾದ ಶಾಂತಮ್ಮ, ಪ.ಪಂ.ಸದಸ್ಯರು, ಪ.ಪಂ. ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
Chamarajanagar
ಹನೂರು: ಸಿರಿ ಧಾನ್ಯಗಳ ಪ್ರಸಾದ ವಿತರಣೆ

ಹನೂರು: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮಧುಮೇಹಿ ಭಕ್ತಾದಿಗಳಿಗೆ ಸಿರಿಧಾನ್ಯಗಳ ಪ್ರಸಾದ ವಿತರಣೆ ಮಾಡುತ್ತಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ, ಎಇ ರಘು ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಪ್ರತಿನಿತ್ಯ, ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಬರುವಂತಹ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಸಿಬೇಳೆ ಬಾತ್, ಉಪ್ಪಿಟ್ಟು, ತರಕಾರಿ ಪಲಾವ್, ಪುಳಿಯೋಗರೆ, ಪೊಂಗಲ್, ಹುಳಿ, ಮಜ್ಜಿಗೆ ಹುಳಿ ಮೊಸರನ್ನ, ಅನ್ನ, ಸಾಂಬಾರ್, ರಸಂ ,ಮಜ್ಜಿಗೆ, ಪಾಯಸ್ ಪ್ರಸಾದವನ್ನು ವಿತರಣೆ ಮಾಡುತ್ತಿದ್ದೇವೆ.
ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವದಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಶೇಷವಾಗಿ ಮಧುಮೇಹಿ ಭಕ್ತಾದಿಗಳಿಗೆ ಸಿರಿಧಾನ್ಯಗಳಾದ ನವಣೆ, ಸಾಮೆ ಗಳಿಂದ ಅವಲಕ್ಕಿ ಪಾಯಸ, ಬಿಸಿಬೇಳೆ ಬಾತ್ ಪ್ರಸಾದವನ್ನು ಹೊಸದಾಗಿ ಪರಿಚಯ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಇದು ಮುಂದಿನ ದಿನಗಳಲ್ಲಿ ನಿರಂತರವಾಗಿ ನಡೆಯಲಿದೆ .ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಭಕ್ತಾದಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು, ಭಕ್ತಾದಿಗಳ ಆರೋಗ್ಯ ಸುರಕ್ಷತೆ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು.
ಭಕ್ತರೊಂದಿಗೆ ಪ್ರಸಾದ ಸ್ವೀಕರಿಸಿದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನವರಾತ್ರಿ ಪೂಜೆಗಳು ಪ್ರಾರಂಭವಾಗಿರುವುದರಿಂದ ಹಾಗೂ ದಸರಾ ರಜೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಿರುವ ಹಿನ್ನೆಲೆ ದಾಸೋಹ ಭವನಕ್ಕೆ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇವೇಳೆ ಸಿಬ್ಬಂದಿಗಳ ಜೊತೆ ಮಾತನಾಡಿ ಭಕ್ತಾದಿಗಳಿಗೆ ಪ್ರಸಾದ ಸ್ವೀಕರಿಸುವ ಸಂದರ್ಭದಲ್ಲಿ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು. ಗುಣಮಟ್ಟದ ತರಕಾರಿ ಆಹಾರ ಪದಾರ್ಥಗಳನ್ನೇ ಬಳಕೆ ಮಾಡಿ ಪ್ರಸಾದ ಸ್ವೀಕರಿಸಬೇಕು. ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸುವ ಭಕ್ತಾದಿಗಳಿಂದ ಅಗತ್ಯ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬೇಕು. ಯಾವುದಾದರೂ ದೂರುಗಳಿದ್ದರೆ ತಿಳಿಸಲು ಅವರಿಗೆ ಒಂದು ಪುಸ್ತಕ ಇಡುವಂತೆ ಸೂಚನೆ ನೀಡಿದರು.
ನಂತರ ಭಕ್ತಾದಿಗಳ ಜೊತೆಯಲ್ಲಿಯೇ ಪ್ರಸಾದ ಸ್ವೀಕರಿಸಿ ಪ್ರಸಾದ ಗುಣಮಟ್ಟ ಪರಿಶೀಲಿಸಿದರು.
-
Mysore8 hours ago
ವಾಸುದೇವಾಚಾರ್ಯ ಸ್ಮರಣಾರ್ಥ ಸರ್ಕಾರಿ ಕಾರ್ಯಕ್ರಮ: ಶಾಸಕ ಶ್ರೀವತ್ಸ ಮನವಿಗೆ ಸಿಎಂ ಸ್ಪಂದನೆ
-
Chamarajanagar10 hours ago
ಚಾರ್ಮಾಡಿ ಘಾಟಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ
-
Hassan4 hours ago
ತಾಜಾ ಎಣ್ಣೆ, ಆರೋಗ್ಯಕರ ಕುಟುಂಬ
-
Chikmagalur7 hours ago
ಮತಾಂತರ ನಮ್ಮ ಹಕ್ಕು, ನಾವು ಮತ್ತೆ ನಮ್ಮ ಧರ್ಮಕ್ಕೆ ವಾಪಸ್ಸಾಗಬಹುದು : ಸಚಿವ ಸಂತೋಷ್ ಲಾಡ್
-
Hassan8 hours ago
ಹಾಸನದ ೧೫ ಕರ್ನಾಟಕ ಬೆಟಾಲಿಯನ್ ನಲ್ಲಿ ಎನ್ಸಿಸಿ ಕಾರ್ಯಗಾರ
-
Mysore23 hours ago
ವಸ್ತು ಪ್ರದರ್ಶನಕ್ಕೆ ಚಾಲನೆ: ಮೊದಲ ದಿನವೇ ವಸ್ತು ಪ್ರದರ್ಶನ ಭರ್ತಿ
-
Chikmagalur3 hours ago
ಶರನ್ನವರಾತ್ರಿ ಉತ್ಸವ: ನೋಡುಗರ ಕಣ್ಮನ ಸೆಳೆಯುತ್ತಿರುವ ದಸರಾ ಗೊಂಬೆ ಪ್ರದರ್ಶನ
-
Mysore7 hours ago
ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಬರೆಸಲು ಮನವಿ, ಡಿ ಎಸ್ ಎಸ್ ಜಿಲ್ಲಾ ಸಂಚಾಲಕ ಕಳ್ಳಿಮುದ್ದನಹಳ್ಳಿ ಚಂದ್ರು