Chamarajanagar
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ: ತಾಲೂಕಿನ ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್, ಆರ್ಟ್ ಮತ್ತು ಕ್ರಾಫ್ಟ್, ನೃತ್ಯ ಮತ್ತು ಸಂಗೀತ ಹಾಗೂ ಇಂಗ್ಲೀಷ್ ವಿಷಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಡಿ.7 ರಿಂದ ಡಿ.11ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ವಿದ್ಯಾರ್ಹತೆ ಉಳ್ಳವರು ತಮ್ಮ ಸ್ವ ವಿವರದೊಂದಿಗೆ ನೇರವಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8310434085, 9886824852, 9036375844 ಸಂಪರ್ಕಿಸಬಹುದೆಂದು ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
ಕೊಳ್ಳೇಗಾಲ: ತಾಲೂಕಿನ ಕುಂತೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕಚೇರಿ ಮುಂಭಾಗದಲ್ಲಿ ರೈತ ಮುಖಂಡ ಕುಂತೂರು ನಂಜುಂಡಸ್ವಾಮಿ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾಯಿತು.
ಕುಂತೂರು ಭಾಗದ ಜಮೀನುಗಳಿಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ಜಮೀನಿಗೆ ತೆರಳಲು ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಿನ ಸಮಯದಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸೆಸ್ಕ್ ಕಾರ್ಯಪಾಲಕ ಅಭಿಯಂತರ ತಬಸ್ಸುಮ್ ಆಗಮಿಸಿ ಮಾತನಾಡಿದ ಅವರು, ಬಳ್ಳಾರಿಯಿಂದ ಹೆಚ್ಚುವರಿ ವಿದ್ಯುತ್ ತರಲು ಹೆವಿ ಲೈನ್ ಕಾಮಗಾರಿ ನಡೆಯುತ್ತಿರುವ ಕಾರಣಕ್ಕೆ ರಾತ್ರಿ ವೇಳೆ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ಫೆ. 12ರ ನಂತರ ಬೆಳಗಿನ ಸಮಯದಲ್ಲಿ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದರು. ಈ ಭರವಸೆಯ ಮೇರೆಗೆ ರೈತರು ಪ್ರತಿಭಟನೆಯನ್ನು ಕೈಬಿಟ್ಟು ತೆರಳಿದರು. ಈ ವೇಳೆ ಎಇಇ ರಾಜು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಕುಂತೂರು ನಂಜುಂಡಸ್ವಾಮಿ, ಗಿರೀಶ್ ಆಲಹಳ್ಳಿ, ತೋಟದಾರ್ಯ ತೇರಂಬಳ್ಳಿ, ಲೋಕೇಶ್, ರೇಚಣ್ಣ, ಸತೀಶ್, ಗುರುಪಾದಸ್ವಾಮಿ ತೇರಂಬಳ್ಳಿ, ಮಹೇಶ್, ಕುಂತೂರು ಮಲ್ಲಿಕಾರ್ಜುನ, ನಿರಂಜನಮೂರ್ತಿ, ಬಾಬು, ನಾಗೇಶ್, ಅಂಗಡಿ ರವಿ ಸೇರಿದಂತೆ ಹಲವರು ಭಾಗವಹಿಸಿದ್ದರು.
Chamarajanagar
ಗಾಜನೂರಿನಲ್ಲಿ ರಾಜಕುಮಾರ್ ಸರ್ಕಲ್ ಸ್ಥಾಪನೆ
ಚಾಮರಾಜನಗರ: ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಗಾಜನೂರು ಗ್ರಾಮದಲ್ಲಿ ಗ್ರಾಮಸ್ಥರ ಮುಂದಾಳತ್ವದಲ್ಲಿ ಇಂದು ಕಣ್ಮನ ಸೆಳೆಯುವಂತೆ ವರನಟ ಡಾ. ರಾಜಕುಮಾರ್ ಅವರ ಹೆಸರಿನ ಸರ್ಕಲ್ ಸ್ಥಾಪಿಸಲಾಯಿತು.
ಗಾಜನೂರಿನ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಸರ್ಕಲ್ ಗೆ ಡಾ.ರಾಜಕುಮಾರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ಇದೇ ಸಂದರ್ಭದಲ್ಲಿ ಡಾ.ರಾಜಕುಮಾರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ವಿವಿಧ ಪ್ರದರ್ಶನಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿದವು.

ಈ ಸಂದರ್ಭದಲ್ಲಿ ಡಾ.ರಾಜಕುಮಾರ್ ಅವರ ಸಂಬಂಧಿಗಳಾದ ಗೋಪಾಲ್, ರಾಮಮೂರ್ತಿ, ಕದಿರಯ್ಯ ಮಾಸ್ಟರ್, ನಾಗರಾಜು, ಪ್ರೇಮಗೋಪಾಲ್, ಮಂಗಳಮ್ಮ ಸೇರಿದಂತೆ ದೊಡ್ಡ ಗಾಜನೂರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
Chamarajanagar
ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳ ಅಕಾಲಿಕ ಸಾವು: ಗ್ರಾಮಸ್ಥರಲ್ಲಿ ಆತಂಕ
ಹನೂರು: ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಮೇಯಲು ಹೋಗಿ ವಾಪಸ್ ಬರುತ್ತಿದ್ದ ಆರು ಹಸುಗಳು ಅಚಾನಕ್ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮೃತಪಟ್ಟ ಜಾನುವಾರುಗಳು ಗ್ರಾಮದ ಪರಶಿವ ಅವರಿಗೆ ಸೇರಿದವು ಎನ್ನಲಾಗಿದೆ. ವಿಷಯುಕ್ತ ಮೇವು ಸೇವನೆಯಿಂದಲೇ ಜಾನುವಾರುಗಳ ಸಾವು ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಜಾನುವಾರುಗಳು ಮೇಯಲು ಹೋಗಿ ಮರಳುವ ವೇಳೆ ಏಕಾಏಕಿ ಕುಸಿದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ರೈತರು ಹಾಗೂ ಗ್ರಾಮಸ್ಥರು, ಸ್ಥಳಕ್ಕೆ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಜಾನುವಾರುಗಳ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Politics16 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu21 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu21 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
National17 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Hassan18 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
Hassan14 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Chamarajanagar18 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore17 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
