Connect with us

Chamarajanagar

ಅತಿಥಿ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ:

Published

on

ಚಾಮರಾಜನಗರ: ತಾಲ್ಲೂಕಿನ ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026- 27 ನೇ ಶೈಕ್ಷಣಿಕ ವರ್ಷಕ್ಕಾಗಿ ಎರಡು ತಾತ್ಕಾಲಿಕ ಅತಿಥಿ ಶಿಕ್ಷಕರು ಹಾಗೂ ಒಂದು ಭದ್ರತಾ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ನೃತ್ಯ ಮತ್ತು ಸಂಗೀತ, ಕರಾಟೆ/ ಯೋಗ ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ತಮ್ಮ ಸ್ವ ವಿವರದೊಂದಿಗೆ ಜೂ.28 ರೊಳಗೆ ನೇರವಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8310434085, 9036375844, 9886824852 ಸಂಪರ್ಕಿಸಬಹುದೆಂದು ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ದಿ: ಡಾ.ಕೃಪಾಶಂಕರ್

Published

on

ಚಾಮರಾಜನಗರ: ಕ್ರೀಡೆಯು ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ವೃದ್ದಿ ಮಾಡುತ್ತದೆ ಎಂದು ದಂತ ವೈದ್ಯ ಡಾ. ಕೃಪಾ ಶಂಕರ್ ಹೇಳಿದರು.

ನಗರದ ಪಿಡಬ್ಲ್ಯೂಡಿ ಸರ್ಕಾರಿ ಶಾಲಾವರಣದಲ್ಲಿ ನಾಗ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ನಡೆದ ಕಲರ್ ಬೆಲ್ಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಬೆಲ್ಟ್ ವಿತರಿಸಿ ಮಾತನಾಡಿದರು. ಕಲುಷಿತ,ಕಲಬೆರಕೆ ಆಹಾರದಿಂದ ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳ ಆರೋಗ್ಯ ಹಾಳಾಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಇದರಿಂದ ಹೊರಬರಬೇಕಾದರೆ ಮಕ್ಕಳಿಗೆ ಕ್ರೀಡೆ ಅವಶ್ಯಕವಾಗಿದೆ ಎಂದರು.

ಕ್ರೀಡೆಯಿಂದ ಜೀವನದಲ್ಲಿ ಸದೃಢ ವ್ಯಕ್ತಿಗಳಾಗಿ ಬೆಳೆಯಬಹುದು. ಆಟೋಟಗಳಿಂದ ಉತ್ಸಾಹಿಯಾಗಿರಬಹುದು.ಜೀವನದಲ್ಲಿಯ ಉದ್ದೇಶ, ಗುರಿ ಈಡೇರಿಸಿಕೊಳ್ಳಲು ಆರೋಗ್ಯವಂತ ಮನಸ್ಸು ಮತ್ತು ಶರೀರದ ಅವಶ್ಯಕತೆ ಇದೆ. ಆರೋಗ್ಯ ವೃದ್ಧಿಸಿಕೊಳ್ಳಲು ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ.ಪ್ರತಿಯೊಬ್ಬರೂ ಒಳ್ಳೆಯ ಆರೋಗ್ಯ ಹೊಂದಬಹುದು ಎಂದು ಅಭಿಪ್ರಾಯಪಟ್ಟರು.


ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿಹಾನ್ ಸೋಸ್ಲೆ ಸಿದ್ದರಾಜು ಮಾತನಾಡಿ, ಆತ್ಮರಕ್ಷಣೆಗೆ ಕರಾಟೆ ಕಲೆಯು ಸಹಕಾರಿಯಾಗಿದೆ. ಕರಾಟೆಯು ಪ್ರಚಲಿತ ವಾಗುತ್ತಿದ್ದು, ಸರ್ಕಾರ ಕ್ರೀಡೆಗೆ ಸೇರಿಕೊಂಡಿದೆ. ಇದರಿಂದ ಉದ್ಯೋಗ ಸಿಗುವ ಭರವಸೆಯಿದೆ ಎಂದರು.

ಈ  ಪರೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ ಭಾಗಗಳಿಂದ   ನೂರಕ್ಕೂ ಹೆಚ್ಚು ಕರಾಟೆ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆಯು ಯಶಸ್ವಿಯಾಗಿ ನಡೆದಿರುತ್ತದೆ.
ಕಾರ್ಯಕ್ರಮದಲ್ಲಿ ಪಿಡಬ್ಲ್ಯೂ.ಡಿ. ಶಾಲೆಯ ಮುಖ್ಯೋಪಾಧ್ಯಾಯ ಮಹದೇವಯ್ಯ, ಯೋಗ ತರಬೇತುದಾರ ರಾಜಶೇಖರ ಮೂರ್ತಿ, ಅನ್ಸರ್ ಖಾನ್ ಸಂಸ್ಥೆಯ ಮುಖ್ಯ ತರಬೇತಿದಾರ ವಕೀಲರಾದ ಸೆನ್ಸಾಯ್ ಎಂ. ರಾಜೇಂದ್ರ, ತರಬೇತುದಾರ ಸೆನ್ಸಾಯ್ ಯೋಗೇಶ್, ಸೆನ್ಸಾಯ್ ರಮೇಶ್, ಸೆಂಪಾಯ್ ಅಬ್ದುಲ್ ಫೈಸಲ್, ಶೇಖರ್, ವಿಜಯ್, ಅವಿನಾಶ್ ,ಲೋಕೇಶ್, ಸಿದ್ದರಾಜು ಮಹಾಂತೇಶ್ ಇನ್ನಿತರ ಕರಾಟೆ ತರಬೇತಿದಾರರು ಹಾಜರಿದ್ದರು.

Continue Reading

Chamarajanagar

ಹನೂರು ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ: ರೈತ ಸಂಘದಿಂದ EO ಗೆ ಮನವಿ

Published

on

ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹನೂರು ತಾಲ್ಲೂಕಿನಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಸೋಮವಾರ ಮನವಿ ಸಲ್ಲಿಸಲಾಗಿದೆ.

ಈ ವರ್ಷ ಹನೂರು ತಾಲ್ಲೂಕಿನಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ರೈತರು ಮತ್ತು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ತಕ್ಷಣವೇ ಎಲ್ಲಾ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಇಲ್ಲದಿದ್ದಲ್ಲಿ ರೈತ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು

Continue Reading

Chamarajanagar

ಕಲ್ಲುಕಟ್ಟೆ ಕೆರೆಯಲ್ಲಿ ಯುವಕನ ಶವ ಪತ್ತೆ: ಆತ್ಮಹತ್ಯೆ ಶಂಕೆ, ತನಿಖೆ ಆರಂಭ

Published

on

ಗುಂಡ್ಲುಪೇಟೆ: ತಾಲೂಕಿನ ಶಿವಪುರ ಗ್ರಾಮದ ಸಮೀಪದ ಕಲ್ಲುಕಟ್ಟೆ ಕೆರೆಯಲ್ಲಿ 21 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತನನ್ನು ತಾಲೂಕಿನ ಕುಂದಕೆರೆ ಗ್ರಾಮದ ನಿವಾಸಿ ಸಂದೀಪ್ (21) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು.

ಯುವಕನ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆತ್ಮಹತ್ಯೆಯೋ ಅಥವಾ ಬೇರೆ ಯಾವುದೇ ಕಾರಣವೋ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.

Continue Reading

Trending

error: Content is protected !!