Connect with us

Mandya

ಕುಡಿಯುವ ನೀರಿನ ಸಮಸ್ಯೆ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಗಳ ನೇಮಕ – ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚನೆ

Published

on

ಮಂಡ್ಯ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಗ್ರಾಮಗಳಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸಂಬಂಧಿಸಿದ ಗ್ರಾಮಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಯ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ, ನೀರಿನ ಲಭ್ಯತೆ, ಸರಬರಾಜಿನ ಸ್ಥಿತಿ ಹಾಗೂ ಜನರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕುಡಿಯುವ ನೀರಿನ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬಳಸಿಕೊಳ್ಳಲಾಗುತ್ತಿರುವ ಖಾಸಗಿ ಬೋರ್‌ವೆಲ್‌ಗಳ ಬಾಡಿಗೆ ಮೊತ್ತವನ್ನು ಸಂಬಂಧಿಸಿದ ಮಾಲೀಕರಿಗೆ ನಿಯಮಾನುಸಾರ ತ್ವರಿತವಾಗಿ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರು ಮಾಹಿತಿ ನೀಡಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸಿಇಓ ಅವರು ಸೂಚಿಸಿದರು.

ಸಾರ್ವಜನಿಕರಿಗೆ ಪ್ರಕಟಿಸಿರುವ ಸಹಾಯವಾಣಿ ಸಂಖ್ಯೆಗೆ ಜಿಲ್ಲಾ ಪಂಚಾಯತ್‌ನಿಂದ ಕರೆ ಮಾಡಿ, ಸಹಾಯವಾಣಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲಾಗುವುದು. ಸಾರ್ವಜನಿಕರಿಂದ ಬಂದಿರುವ ದೂರುಗಳು ಹಾಗೂ ಮಾಹಿತಿಗಳಿಗೆ ತ್ವರಿತವಾಗಿ ಸ್ಪಂದಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ಎಫ್.ಟಿ.ಕೆ ಮೂಲಕ ಪರಿಶೀಲಿಸಿ, ನೀರು ಕುಡಿಯಲು ಯೋಗ್ಯವಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ನೀರಿನ ಗುಣಮಟ್ಟದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್ ಎನ್.ಜಿ., ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ, ರಾಮಲಿಂಗಯ್ಯ, ಶ್ರೀನೀವಾಸ್, ಲೋಕೇಶ್ ಮೂರ್ತಿ, ಸತೀಶ್, ವೀಣಾ, ಚಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಶ್ಮಿ, ಮಧುಸೂಧನ್, ಗಣೇಶ್ ಹೆಗಡೆ, ಗಿರಿಜೇಶ, ಮಮತಾ ಹಾಗೂ ಸೌಮ್ಯ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಅಡ್ಡಳ್ಳದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಬೆಳಗೊಳ ಗ್ರಾಮದ ಬಳಿಯ ಅಡ್ಡಳ್ಳದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷಗೊಂಡಿದ್ದು, ಅಕ್ಕ-ಪಕ್ಕದ ಜಮೀನುಗಳ ರೈತರು ಆತಂಕಗೊಂಡಿದ್ದಾರೆ. ಮೊಸಳೆಯು ಕೃಷಿ ಚಟುವಟಿಕೆಯ ಜಮೀನುಗಳ ನಡುವೆಯೇ ಕಾಣಿಸಿಕೊಂಡುದ್ದು, ಜಮೀನಿಗೆ ತೆರಳುವ ರೈತರು ಹಾಗೂ ಹಸು ಮೇಯಿಸುವವರು ಎಚ್ಚರಿಕೆಯಿಂದ ಇರುವಂತೆ ಗ್ರಾಮದ ಯಜಮಾನರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿ ಮೊಸಳೆ ಕಾರ್ಯಾಚರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Continue Reading

Mandya

ಯುವ ಸಂಭ್ರಮ, ದಸರಾ ಕಾರ್ಯಕ್ರಮಗಳ ಸಿದ್ಧತೆ ಪೂರ್ಣಗೊಳಿಸಲು ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೂಚನೆ

Published

on

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದಸರಾ ಸಿದ್ಧತೆಗಳ ಪರಿಶೀಲನೆ; ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆಗೆ ಆದ್ಯತೆ,  ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಯುವ ಸಂಭ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಯುವ ಸಂಭ್ರಮ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ, ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಸೇರಿದಂತೆ ವಿವಿಧ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಯುವಜನರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಮಾರ್ಗಗಳನ್ನು ರೂಪಿಸಿ, ವಾಹನಗಳ ಸಂಚಾರ ದಟ್ಟಣೆ ತಪ್ಪಿಸಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಆಹಾರ ಮಳಿಗೆಗಳ ವ್ಯವಸ್ಥೆ, ಶೌಚಾಲಯಗಳ ಸ್ವಚ್ಛತೆ ಹಾಗೂ ನಿರಂತರ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಯುವಕ-ಯುವತಿಯರಿಗೆ ವಸ್ತ್ರ ಬದಲಾಯಿಸಿಕೊಳ್ಳಲು ಪ್ರತ್ಯೇಕ ಕೊಠಡಿಗಳನ್ನು ಒದಗಿಸಬೇಕು. ಕಲಾವಿದರು ಹಾಗೂ ಯುವಜನರ ಅನುಕೂಲಕ್ಕಾಗಿ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮದ ಸ್ಥಳದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಸಮಯದೊಳಗೆ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಬನ್ನಿಮಂಟಪದ ಸಿದ್ಧತೆಗಳ ಪರಿಶೀಲನೆ

ಬಳಿಕ ಬನ್ನಿಮಂಟಪದ ಆವರಣಕ್ಕೆ ಭೇಟಿ ನೀಡಿದ ಶಾಸಕರು, ದಸರಾ ಉದ್ಘಾಟನೆ ಹಾಗೂ ಇತರ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಬನ್ನಿಮಂಟಪದ ಆವರಣ ಮತ್ತು ಕೊಳದ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಲಾವಿದರಿಗೆ ಊಟ, ಶಾಮಿಯಾನ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸಾರ್ವಜನಿಕರು, ಕಲಾವಿದರು ಹಾಗೂ ಗಣ್ಯರಿಗೆ ಯಾವುದೇ ಅನಾನುಕೂಲವಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಮುಂಚಿತವಾಗಿ ಪರಿಶೀಲಿಸಿ, ಬಾಕಿ ಇರುವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಸಾಂಸ್ಕೃತಿಕ ವೈಭವದೊಂದಿಗೆ ಯಶಸ್ವಿಯಾಗಿ ನಡೆಯಲು ಎಲ್ಲಾ ಇಲಾಖೆಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ನಿರ್ದೇಶನ ನೀಡಿದರು.

ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಜಿಲ್ಲಾಧಿಕಾರಿಯಿಂದ ಸಿದ್ಧತೆಗಳ ಪರಿಶೀಲನೆ

ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ನಡೆಯಲಿರುವ ಹಾಲು ಕರೆಯುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪರಿಶೀಲಿಸಿದರು. ಕಾರ್ಯಕ್ರಮಗಳು ನಡೆಯಲಿರುವ ಸ್ಥಳ, ವೇದಿಕೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ವೀಕ್ಷಿಸಿದ ಅವರು, ಸ್ವಚ್ಛತೆ ಕಾಪಾಡುವ ಜೊತೆಗೆ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಸ್ಥಳದಲ್ಲಿ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಸ್ಥಾಪಿಸಿರುವ ಆರ್.ಒ. ಕುಡಿಯುವ ನೀರಿನ ಘಟಕವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ನಿರಂತರವಾಗಿ ಲಭ್ಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಸ್ಥಳದಲ್ಲಿ ಧೂಳು ಉಂಟಾಗದಂತೆ ಅಗತ್ಯವಿರುವ ಕಡೆ ಗ್ರಾವೆಲ್ ಹಾಕಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ, ಮೂಲಸೌಕರ್ಯ ಮತ್ತು ಇತರ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ದಸರಾ ಕಾರ್ಯಕ್ರಮಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಅನುಕೂಲಕರ ವಾತಾವರಣ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

Continue Reading

Mandya

ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಬಗ್ಗೆ ಹರಿವು ಮೂಡಿಸಲು ಹಲವು ಕಾರ್ಯಕ್ರಮಗಳು: ತಹಸಿಲ್ದಾರ್ ಶಿವಕುಮಾರ್

Published

on

ಮದ್ದೂರು: ವಿದ್ಯಾಥರ್ಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಲು ಹಾಗೂ ರಾಜಕಾರಣದ ವಿವಿಧ ದೃಷ್ಟಿ ಕೋನಗಳ ಬಗ್ಗೆ ತಿಳಿಸುವ ಸಲುವಾಗಿ ಈ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಂಸತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಶಿವಕುಮಾರ್ ಬಿರಾದರ್ ತಿಳಿಸಿದರು.

ನಗರದ ಶಿವಪುರ ಸತ್ಯಾಗ್ರಹಸೌಧದಲ್ಲಿ ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಧಾನ ಸಭೆ, ವಿಧಾನ ಪರಿಷತ್, ಸಂಸತ್ ಸಭೆಯಲ್ಲಿ ಯಾವ ರೀತಿ ಕಲಾಪಗಳು ನಡೆಯುತ್ತವೆ ಹಾಗೂ ಅಲ್ಲಿ ಬಳಕೆಯಾಗುವ ಸಂವಿಧಾನಿಕ ಪದಗಳು ಹಾಗೂ ಮಾರ್ಗಸೂಚಿಗಳನ್ನು ತಿಳಿಸುವುದು ಕಾರ್ಯಕ್ರಮ ಉದ್ದೇಶವಾಗಿದೆ ಎಂದರು.

ತಾಪಂ ಇಒ ರಾಮಲಿಂಗಯ್ಯ ಮಾತನಾಡಿ, ವಿದ್ಯಾಥರ್ಿಗಳಲ್ಲಿ ಸಂಸದೀಯ ಪದ್ದತಿ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸ್ಥಳಿಯವಾಗಿ ಸಮಸ್ಯಾತ್ಮಕ ವಿಷಯಗಳ ಬಗ್ಗೆ ಅರಿವು ಮೂಡಿಸುವುದರಿಂದ ಮುಂದೆ ಅವರ ವಿದ್ಯಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲಾ, ಕಾಲೇಜುಗಳು ವಿದ್ಯಾಥರ್ಿಗಳು ನಡೆಸಿಕೊಟ್ಟ ವಿಧಾನ ಸಭಾ ಅಣಕು ಯುವ ಸಂಸತ್ ಕಾರ್ಯಕ್ರಮದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳುನಡೆಸುವ ಮಾದರಿಯಲ್ಲಿ ಪ್ರಚಲಿತ ಹಲವಾರು ಸ್ಥಳಿಯ ಸಮಸ್ಯೆಗಳ ಬಗ್ಗೆ ಚಚರ್ೆ ನಡೆಸಿದ್ದು ನೋಡುಗರ ಗಮನ ಸೆಳೆಯಿತು ಹಾಗೂ ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿದ್ಯಾಥರ್ಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು.

ತಾಲೂಕು ಕಾನೂನು ಸೇವೆಗಳ ಸಮಿತಿಯ ಉಚಿತ ಕಾನೂನು ಸಲಹೆಗಾರ ಎಚ್.ಬಿ.ನಾಗೇಶ್, ತಾಪಂ ಇಒ ರಾಮಲಿಂಗಯ್ಯ, ನಗರಸಭಾ ಪೌರಾಯುಕ್ತೆ ಎಸ್.ಎನ್.ರಾಧಿಕಾ, ಬಿಇಒ ಎಸ್.ಬಿ.ಧನಂಜಯ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ ಸೇರಿದಂತೆ ಇತರರು ಇದ್ದರು.

Continue Reading

Trending

error: Content is protected !!