Chikmagalur
ಎಮ್ಮೆದೊಡ್ಡಿ ಅರಣ್ಯಭೂಮಿ ಒತ್ತುವರಿ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ತೆರವು

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿಯ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕಡೂರು ತಾಲೂಕು ಎಮ್ಮೆದೊಡ್ಡಿ ಅರಣ್ಯಭೂಮಿ ಒತ್ತುವರಿಯನ್ನು ಶನಿವಾರ ಬೆಳಿಗ್ಗೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು.
ಕಡೂರು ಪುರಸಭೆ ಮುಖ್ಯಾಧಿಕಾರಿಯಾಗಿದ್ದ ಮಂಜುನಾಥ್ ಎಮ್ಮೆದೊಡ್ಡಿಯಲ್ಲಿ ೧೦ ಎಕರೆ ಅರಣ್ಯ ಭೂಮಿಯನ್ನು ಒತ್ತುವರಿಮಾಡಿಕೊಂಡಿದ್ದು, ಅಲ್ಲಿ ಕೆಲವು ಶೆಡ್‌ಗಳನ್ನು ನಿರ್ಮಿಸಿಕೊಳ್ಳಲಾಗಿತ್ತು. ಆ ಶೆಡ್‌ಗಳನ್ನು ಜೆಸಿಬಿ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ತೆರವು ಗೊಳಿಸಿದ್ದಾರೆ.
ಎಮ್ಮೆದೊಡ್ಡಿ ಸರ್ವೆ ನಂಬರ್ ೭೦ರಲ್ಲಿ ಒಟ್ಟು ೧೦ ಎಕರೆಯಲ್ಲಿ ನಿರ್ಮಿಸಿದ್ದ ಮನೆ, ಕುರಿಶೆಡ್, ಕೋಳಿ ಶೆಡ್ ಕೃಷಿ ಹೊಂಡ ಸೇರಿದಂತೆ ಹಲವನ್ನು ಜೆಸಿಬಿ ಮೂಲಕ ಬೆಳಿಗ್ಗೆ ೬ ಗಂಟೆಗೆ ಪೊಲೀಸರ ನೆರವಿನೊಂದಿಗೆ ಜಂಟಿಕಾರ್ಯಾಚರಣೆ ನೆಲಕ್ಕುರುಳಿಸಲಾಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಬಾಬು ಸೂಚನೆ ಮೇರೆಗೆ ಎಸಿಎಫ್ ಮೋಹನ್ ಕಡೂರು ಆರ್‌ಎಫ್‌ಓ ರಜಾಕ್ ರದಾಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಕಡೂರು ಪೊಲೀಸರು ಹಾಜರಿದ್ದರು. ಒತ್ತುವರಿಯಾಗಿದ್ದ ಅರಣ್ಯ ಪ್ರದೇಶವನ್ನು ತೆರವುಗೊಳಿಸಲಾಗಿತ್ತು.
ಎಮ್ಮೆದೊಡ್ಡಿಯಲ್ಲಿ ಅರಣ್ಯ ಪ್ರದೇಶ ಒತ್ತುವರಿಯಾಗಿರುವುದು ಕಂಡು ಬರುತ್ತಿದ್ದಂತೆ ಸ್ಥಳಕ್ಕೆ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೆ.ಎನ್.ರಮೇಶ್ ಅವರು ತೆರಳಿ ಪರಿಶೀಲಿಸಿದ್ದರು. ಶೆಡ್‌ಗಳಿಗೆ ಬೇರೆಯವರ ಹೆಸರಿನಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಅವರುಗಳಿಗೆ ನೋಟೀಸ್ ಜಾರಿಗೊಳಿಸಲಾಗಿತ್ತು.
ಜನವರಿ ೧೬ ರಂದು ಜಿಲ್ಲಾಪಂಚಾಯಿತಿ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಕೆಡಿಪಿ ಸಭೆಯಲ್ಲಿ ಎಮ್ಮೆದೊಡ್ಡಿ ಗ್ರಾಮದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ೩೦ ದಿನದೊಳಗೆ ತೆರವುಗೊಳಿಸಬೇಕೆಂದು ಜನಪ್ರತಿನಿಧಿಗಳು ಒತ್ತಾಯಿಸಿದ್ದರು ಅದಕ್ಕೆ ಉಪರಣ್ಯ ಸಂರಕ್ಷಣಾಧಿಕಾರಿಗಳು ಸಮ್ಮತಿಸಿದ್ದರು.
ಜಿಲ್ಲಾಪಂಚಾಯಿತಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಸಮ್ಮುಖದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಒತ್ತುವರಿ ವಿಷಯ ಪ್ರಸ್ತಾಪವಾಯಿತು. ಒತ್ತುವರಿ ವಿಷಯದಲ್ಲಿ ಬಡವರಿಗೊಂದು, ಬಲ್ಲಿದರಿಗೊಂಡು ಕಾನೂನೇ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಕೇಳಿದ್ದರು.
ಒಂದೇ ದಿನದಲ್ಲಿ ತೆರವುಗೊಳಿಸಲು ಮುಂದಾಗದಿದ್ದರೆ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಆಗ್ರಹಿಸಿದ್ದರು. ೪೮ ಗಂಟೆಯೊಳಗೆ ಒತ್ತುವರಿ ತೆರವುಗೊಳಿಸುವಂತೆ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಡಿಎಫ್‌ಓ ಅವರಿಗೆ ಸೂಚಿಸಿದ್ದರು.
ಇದರಿಂದ ಎಚ್ಚೆತ್ತುಕೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಎಮ್ಮೆದೊಡ್ಡಿಯಲ್ಲಿ ಒತ್ತುವರಿಯಾಗಿದ್ದ ಅರಣ್ಯ ಪ್ರದೇಶ ಮತ್ತು ಆಜಾಗದಲ್ಲಿ ನಿರ್ಮಾಣಗೊಂಡಿದ್ದ ಶೆಡ್‌ಗಳನ್ನು ಶನಿವಾರ ಬೆಳಿಗ್ಗೆಯೇ ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಲಾಯಿತು.
Chikmagalur
ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ ಕಲ್ಪಿಸುವರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದ್ದು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Chikmagalur
ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.
Chikmagalur
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ – ಬೈ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು. ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Mandya24 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya23 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State19 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ