Chamarajanagar
ಬಾಲ್ಯ ವಿವಾಹ ಮತ್ತು ಪಿಓಸಿಎಸ್ಒ ಕಾಯಿದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಯಳಂದೂರು ಆಗಸ್ಟ್ 2
ಯಳಂದೂರು ಸಮೀಪದ ಕುದೇರು ಶಾಲೆಯಲ್ಲಿ ಬಾಲ್ಯ ವಿವಾಹ ಮತ್ತು ಪಿಓಸಿಎಸ್ಒ ಕಾಯಿದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಮಾಡಲಾಯಿತು,
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶರಾದ ಆಕರ್ಷ ರವರು ಬಾಲ್ಯ ವಿವಾಹ ಕುರಿತು ನಮ್ಮ ಘಟಕದಲ್ಲಿ ನಮ್ಮ ಚಾಮರಾಜನಗರ ಜಿಲ್ಲೆಯ ಬಾಲ್ಯ ವಿವಾಹ ನಡೆಯುವ ಎರಡನೇ ಜೀಲ್ಲೆಯಾಗಿದೇ ಮತ್ತು 18 ವರ್ಷಕ್ಕಿಂತ ಮುಂಚೆ ಮದುವೆ ಮಾಡುವುದು ಮತ್ತು ಇದನ್ನು ಮಾಡಿದವರಿಗೆ 20 ವರ್ಷ ಕಠಿಣ ಶಿಕ್ಷೆ ಒಳಗಾಗುತ್ತಾರೆ ಎಂದು ತಿಳಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಮುದಾ ಅವರು pocso ಮತ್ತು ಅಪರಾಧ ಲೈಂಗಿಕ ಚಟುವಟಿಕೆಗಳ ಬಗ್ಗೆ ಕಾನೂನು ಅರಿವುನ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದರು,
ಈ ಸಂದರ್ಭದಲ್ಲಿ ಮಹೇಶ್ ಬಾಲ ಕಾರ್ಮಿಕ ಉಪ ನಿರ್ದೇಶಕರು,ಸಿಡಿಪಿಓ ಜಯಶೀಲ, ಪಿಡಿಒ ಮಮತಾ, ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಾಗಿದ್ದರು,
Chamarajanagar
ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಸವಾರಿಗೆ ಗಾಯ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಬೆಟ್ಟದಮಾದಹಳ್ಳಿ ಹಾಗೂ ಭೋಗಯ್ಯನಹುಂಡಿಯ ಮುಖ್ಯ ರಸ್ತೆಯಲ್ಲಿ ಎರಡು ಸ್ಕೋಟರ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು.
ಗಾಯಾಳುಗಳಾದ ಭೋಗಯ್ಯನಹುಂಡಿ ಗ್ರಾಮದ ಸುನಿ ಹಾಗೂ ಬೆಟ್ಟದಮಾದಹಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಬೈಕ್ ಗಳ ನಡುವಿನ ಡಿಕ್ಕಿಯಾಗಿ ಇಬ್ಬರಿಗೂ ತಲೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
Chamarajanagar
ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ

ಹನೂರು : ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ..
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಿವಾಸಿ ಪರಶುರಾಮ್( 32) ಮೃತಪಟ್ಟ ದುರ್ದೈವಿ.
ಕಳೆದ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಕಳೆದ 2 ವರ್ಷಗಳಿಂದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ಬೆಳಿಗ್ಗೆ ಕುಸಿದು ಬಿದಿದ್ದು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ, ಮೃತ ವ್ಯಕ್ತಿಯು ರಾಯಚೂರು ಜಿಲ್ಲೆಯವರಾಗಿದ್ದು ಕುಟುಂಸ್ಥರಿಗೆ ರಾಮಾಪುರ ಪೊಲೀಸರು ಮಾಹಿತಿ ನೀಡಿ ಮೃತ ವ್ಯಕ್ತಿಯ ಶವವನ್ನು ಚಾಮರಾಜನಗರದ ಸೀಮ್ಸ್ ಆಸ್ಪತ್ರೆ ಇರಿಸಲಾಗಿದ್ದು, ಕುಟುಂಬಸ್ಥರು ಬಂದಾಗ ಅವರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ..
ಸಂತಾಪ : ಮೃತ ಪರುಶುರಾಮ್ ಅವರಿಗೆ ಸಾವಿನ ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ರಾಮಾಪುರ ಠಾಣೆಯ ಸಿಬ್ಬಂದಿ ಮೃತ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ…
Chamarajanagar
ಏ.27 ರಂದು ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ

ಚಾಮರಾಜನಗರ, ಏಪ್ರಿಲ್ 26: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರ ಕುಂದು-ಕೊರತೆ ಸಭೆಯನ್ನು ಏ.27ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ (ಎಸ್.ಸಿ/ಎಸ್.ಟಿ ಜನಾಂಗದವರು) ಮುಖಂಡರು, ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸದುಪಯೋಗ ಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
State11 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Hassan4 hours ago
ಜಮೀನು ವಿಚಾಕ್ಕೆ ಕೊಲೆ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu7 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ