Connect with us

Chamarajanagar

ಕಡವೆಯ ಚರ್ಮವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Published

on

ಯಳಂದೂರು ಏಪ್ರಿಲ್ 29

ತಾಲೂಕಿನ ಬಿಳಿಗಿರಂಗನ ಬೆಟ್ಟದ ಅರಣ್ಯ ಪ್ರದೇಶದ ಮಲ್ಕಿ ಗಸ್ತಿನ ಪ್ರದೇಶದ ಕೂಳಿಗುಂಡಿ ಅರಣ್ಯ ಸಮೀಪದಲ್ಲಿ ಕಡವೆಯ ಚರ್ಮವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಲು ಸಮೇತ ಬಂದಿಸಿದ್ದಾರೆ.

ಬಿ ಆರ್ ಟಿ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಪ್ರಭಾಕರನ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಎಚ್ ಎನ್ ನಾಗೇಂದ್ರ ನಾಯಕ್ ಸೂಚನೆ ಮೇರೆಗೆ ಭಾನುವಾರ ಮಧ್ಯಾನ ದಾಳಿ ಮಾಡಿ ಕಡಿಮೆಯ ಚರ್ಮವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ದಾಳಿ ಮಾಡಿದ್ದಾರೆ.

ಬಿಳಿಗಿರಂಗನ ಬೆಟ್ಟ ಎರಕನ ಗದ್ದೆ ಪೋಡಿನ ನಿವಾಸಿಯಾದ ಬಸವಣ್ಣ (38) ಬಂಗಲೆ ಪೋಡಿನ ನಿವಾಸಿ ಕೆತೇಗೌಡ (45) ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತೆ ಇಬ್ಬರು ಆರೋಪಿಗಳಾದ ಬಂಗಲೆ ಪೋಡಿನ ನಿವಾಸಿಗಳಾದ ಬಂಗಿ ಜಡೇಗೌಡ (38) ಕೇತೇಗೌಡ(46) ತಪ್ಪಿಸಿಕೊಂಡಿದ್ದಾರೆ.

ಈ ಬಗ್ಗೆ ವನ್ಯಜೀವಿ ರಕ್ಷಣೆ ಕಾಯ್ದೆ ಸೆಕ್ಷನ್ನಲ್ಲಿ ಪ್ರಕರಣವನ್ನು ದಾಖಲಿಸಿ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ತನಿಖೆಯನ್ನು ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಆರ್ ಎಫ್ ಓ ನಾಗೇಂದ್ರ ನಾಯಕ್, ಉಪವಲಯ ಅರಣ್ಯ ಅಧಿಕಾರಿ ಯಶಸ್, ಸಿಬ್ಬಂದಿ ಮಲ್ಲಪ್ಪ ,ವರುಣ್ ಸೇರಿದಂತೆ ಇತರರು ಹಾಜರಿದ್ದರು

Continue Reading
Click to comment

Leave a Reply

Your email address will not be published. Required fields are marked *

Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ತ್ಯಜಿಸಲು ಜಿಲ್ಲಾಧಿಕಾರಿ ಶ್ರೀರೂಪ ಮನವಿ

Published

on

ಚಾಮರಾಜನಗರ:- ಚಾಮರಾಜನಗರ ಜಿಲ್ಲಾಡಳಿತದಿಂದ ಮಲೆ ಮಹದೇಶ್ವರ ಬೆಟ್ಟ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ವಲಯವಾಗಿ ಘೋಷಿಸಲಾಗಿದೆ.

ದೇವಾಲಯಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರು ಹಾಗೂ ಸ್ಥಳೀಯರು ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟವು ಅರಣ್ಯ ಪ್ರದೇಶದಲ್ಲಿ ಇರುವ ಪವಿತ್ರ ಕ್ಷೇತ್ರವಾಗಿರುವುದರಿಂದ, ಪ್ಲಾಸ್ಟಿಕ್‍ನ ಅನಿಯಂತ್ರಿತ ಬಳಕೆ ಪರಿಸರಕ್ಕೆ ಗಂಭೀರ ಹಾನಿಯನ್ನುಂಟು ಮಾಡಲಿದೆ. ಅರಣ್ಯ ಪ್ರಾಣಿ-ಪಕ್ಷಿಗಳ ಸುರಕ್ಷತೆ, ಪ್ರಕೃತಿ ಸಂರಕ್ಷಣೆ ಮತ್ತು ಕ್ಷೇತ್ರದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ನಿಷೇಧ ಅತ್ಯಂತ ಅಗತ್ಯವಾಗಿದೆ.

ಭಕ್ತರು ಮತ್ತು ಸಾರ್ವಜನಿಕರು ನೀರು, ಪ್ರಸಾದ ಮತ್ತು ಇತರೆ ವಸ್ತುಗಳನ್ನು ಪ್ಲಾಸ್ಟಿಕ್ ಬ್ಯಾಗ್‍ಗಳಲ್ಲಿ ತರಬಾರದು. ಇದರ ಬದಲಾಗಿ ಸೆಣಬಿನ ಚೀಲ (ಜ್ಯೂಟ್ ಬ್ಯಾಗ್), ಕಾಗದದ ಚೀಲ, ಸ್ಟೀಲ್, ತಾಮ್ರದಂತಹ ಪಾತ್ರೆಗಳು ಮುಂತಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಪ್ಲಾಸ್ಟಿಕ್ ವಸ್ತುಗಳನ್ನು ಕ್ಷೇತ್ರದೊಳಗೆ ತರುತ್ತಿರುವುದು ಕಂಡುಬಂದಲ್ಲಿ ಜಪ್ತಿ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಸ್ವಚ್ಛತೆಗೆ ಸಹಕರಿಸಿ, ಕಸಗಳನ್ನು ಕಸದ ತೊಟ್ಟಿಗಳಲ್ಲಿ ಮಾತ್ರ ಹಾಕಬೇಕು.

ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಜಂಟಿಯಾಗಿ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲಿವೆ.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಭಕ್ತಾಧಿಗಳು, ಸಾರ್ವಜನಿಕರು ಮತ್ತು ವ್ಯಾಪಾರಿಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದ್ದಾರೆ.

Continue Reading

Chamarajanagar

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ : 27 ದಿನಗಳ ಅವಧಿಯಲ್ಲಿ 2.14 ಕೋಟಿ ರೂಗಳ ಸಂಗ್ರಹ

Published

on

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 27 ದಿನಗಳ ಅವಧಿಯಲ್ಲಿ 2.14 ಕೋಟಿ ರೂಗಳ ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 27 ದಿನಗಳ ಅವಧಿಯಲ್ಲಿ 2,14,40,939 ರೂ ನಗದು ಹಣ, 45 ಗ್ರಾಂ ಚಿನ್ನ ಹಾಗೂ 2 ಕೆಜಿ 320 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.
ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು ಹಾಗೂ ವಿದೇಶಿಯ 9 ನೋಟುಗಳು ಕಂಡುಬಂದಿವೆ.

ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಮಹಾದೇವಪ್ಪ, ವಿಜಯ್, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಭಾರತಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

Continue Reading

Chamarajanagar

ನ್ಯೂನ್ಯತೆ ಹಿನ್ನೆಲೆಯಲ್ಲಿ ನಾಲ್ವರು ಸಿಬ್ಬಂದಿ ವಿರುದ್ದ ಶಿಸ್ತು ಕ್ರಮಕ್ಕೆ ಸೂಚನೆ : ಡಾ. ಎಚ್. ಕೃಷ್ಣ

Published

on

ಚಾಮರಾಜನಗರ:- ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭೇಟಿ ಹಮ್ಮಿಕೊಂಡು ವಿವಿಧೆಡೆ ಶಾಲೆ, ಅಂಗನವಾಡಿ, ನ್ಯಾಯಬೆಲೆ ಅಂಗಡಿ, ಆಸ್ಪತ್ರೆ, ಹಾಸ್ಟಲ್, ರೈತಸಂಪರ್ಕ ಕೇಂದ್ರಗಳ ಕಾರ್ಯವೈಖರಿಯನ್ನು ಪರಿಶೀಲಿಸಿದ್ದೇನೆ. ನ್ಯೂನ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾಲ್ವರು ಸಿಬ್ಬಂದಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ತಿಳಿಸಿದರು.

ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಆಹಾರ ದಾಸ್ತಾನು ವ್ಯತ್ಯಾಸ, ವಹಿಗಳನ್ನು ನಿರ್ವಹಿಸದಿರುವುದು ಸೇರಿದಂತೆ ಇನ್ನಿತರ ನ್ಯೂನ್ಯತೆಗಳ ಕಾರಣದಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಓರ್ವ ಹಾಸ್ಟೆಲ್ ವಾರ್ಡನ್, ಸಮಾಜ ಕಲ್ಯಾಣ ಇಲಾಖೆ ಓರ್ವ ಹಾಸ್ಟೆಲ್ ವಾರ್ಡನ್, ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟ ನಿರ್ವಹಣೆಗೆ ಸಂಬಂಧಿಸಿದಂತೆ ಓರ್ವರು, ಪೌಷ್ಠಿಕ ಆಹಾರವನ್ನು ಕೆಲ ಫಲಾನುಭವಿಗಳಿಗೆ ವಿತರಿಸದೇ ದಾಖಲು ಪುಸ್ತಕದಲ್ಲಿ ವಿತರಣೆ ಮಾಡಲಾಗಿದೆ ಎಂದು ನಮೂದಿಸಿರುವ ಓರ್ವ ಅಂಗನವಾಡಿ ಕಾರ್ಯಕರ್ತೆ ವಿರುದ್ದ ಶಿಸ್ತು ಕ್ರಮ ಜರುಗಿಸಲು ಸೂಚಿಸಲಾಗಿದೆ.

ಕಡ್ಡಾಯ ರಜೆಯಂತಹ ಕ್ರಮಗಳಿಗೆ ಅಧಿಕಾರಿಗಳು ಕ್ರಮವಹಿಸಿದ್ದಾರೆ. ಮಲ್ಲಯ್ಯನಪುರದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗಿರುವ ಪಡಿತರದಲ್ಲಿ ತೂಕ ವ್ಯತ್ಯಾಸ, ಬಯೋಮೆಟ್ರಿಕ್ ಪಡೆದು ಆಹಾರ ಪದಾರ್ಥ ವಿತರಣೆ ಮಾಡದೇ ತಡವಾಗಿ ಆಹಾರ ಧಾನ್ಯ ವಿತರಣೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸದರಿ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದರು.

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟಲ್‍ಗಳಲ್ಲಿ ಮುಖ್ಯವಾಗಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಬೇಕು. ದಾಸ್ತಾನು ದಾಖಲೆಗಳನ್ನು ಕ್ರಮಬದ್ಧವಾಗಿ ನಿರ್ವಹಿಸಬೇಕು. ಮೆನು ಪ್ರಕಾರವೇ ಆಹಾರ ನೀಡಬೇಕು. ತಾಲೂಕು ಕಚೇರಿ ಭೇಟಿ ವೇಳೆ ಆಧಾರ್ ಲಿಂಕ್ ಸಮಸ್ಯೆಯಿಂದ ಹಲವಾರು ಜನರಿಗೆ ಸೌಲಭ್ಯಗಳು ತಲುಪಲು ವಿಳಂಬವಾಗಿರುವುದು ಕಂಡುಬಂದಿದೆ. ಆಧಾರ್ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವಂತೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜು ಕೋಟೆ, ಸುಮಂತ್ ರಾವ್, ಕೆ.ಎಸ್. ವಿಜಯಲಕ್ಷ್ಮೀ, ಎ. ರೋಹಿಣಿಪ್ರಿಯ, ಮಾರುತಿ ದೊಡ್ಡಣ್ಣನವರ್, ಆಹಾರ ಇಲಾಖೆಯ ಉಪನಿರ್ದೇಶಕ ವಸುಂಧರಾ ಹೆಗಡೆ, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Continue Reading

Trending

error: Content is protected !!