Connect with us

Mysore

ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಆಗಮನ

Published

on

ಮೈಸೂರು:.ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡೇಶ್ವರಿ ತಾಯಿಗೆ ಉತ್ಸವ ಮೂರ್ತಿ ಅಲಂಕಾರ ಮಾಡಲಾಗಿತ್ತು. ದೇವರ ಗರ್ಭಗುಡಿ ಬಾಗಿಲಿನಲ್ಲಿ ಹಣ್ಣಿನಿಂದ ಅಲಂಕಾರ ಹಾಗೂ ಹೊರಾಂಗಣದಲ್ಲಿ ನಿಂಬೆಹಣ್ಣು, ಮಂಗಳೂರು ಸೌತೆಕಾಯಿ, ಬದನೆಕಾಯಿ ಸೇರಿದಂತೆ ನಾನಾ ತರಹದ ತರಕಾರಿಗಳಿಂದ ಅಲಂಕರಿಸಲಾಗಿತ್ತು.

ಮುಂಜಾನೆಯಿಂದಲೇ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷೀತ್ ಅವರ ನೇತೃತ್ವದಲ್ಲಿ ಚಾಮುಂಡೇಶ್ವರಿ ತಾಯಿಗೆ ವಿಶೇಷವಾಗಿ ಅಭಿಷೇಕ, ಅರ್ಚನೆ, ಮಹಾಮಂಗಳಾರತಿ ನೆರವೇರಿಸಲಾಯಿತು. ಕರ್ನಾಟಕ, ತಮಿಳುನಾಡು, ಕೇರಳ, ಆಂದ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ನಾಡಿನ‌ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.

ಭಕ್ತಾದಿಗಳಿಗೆ ಸರತಿ ಸಾಲಿನಲ್ಲಿ ತಾಯಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ. ಹರಕೆ ಹೊತ್ತ ಭಕ್ತರು ಊಟ ವ್ಯವಸ್ಥೆ ಮಾಡಿದ್ದರು. ನೂಕುನುಗ್ಗಲು ಉಂಟಾಗಬಾರದು ಎಂದು ಬ್ಯಾರಿಕೇಡ್ ವ್ಯವಸ್ಥೆ. ಸಿಸಿಟಿವಿ ಅಳವಡಿಕೆ, ಅಶ್ವದಳ ಪೋಲಿಸ್ ಸಿಬ್ಬಂದಿ, ದೇವಸ್ಥಾನ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಖಾಸಗೀ ವಾಹನಗಳಿಗೆ ನಿರ್ಬಂಧ ಏರಲಾಗಿದ್ದು, ಮೈಸೂರಿನ ಹೆಲಿಪ್ಯಾಡ್ ನಿಂದ ಭಕ್ತರಿಗಾಗಿ ಉಚಿತವಾಗಿ ಸಾರಿಗೆ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿತ್ತು.

Continue Reading

Mysore

ಮೈಸೂರಿನಲ್ಲಿ ಬೀಕರ ಅಪಘಾತ

Published

on

ಮೈಸೂರು: ಮೈಸೂರಿನ ಇನ್ಫೋಸಿಸ್ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನ ಹಾಗೂ ಗ್ಯಾಸ್ ಸಿಲಿಂಡರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬೀಕರ ಅಪಘಾತವಾಗಿದೆ.

ದ್ವಿಚಕ್ರವಾಹನದಲ್ಲಿದ್ದ ಕೂರ್ಗಳ್ಳಿಯ ನಿವಾಸಿಗಳಾದ ಚಂದ್ರ ಹಾಗೂ ಪ್ರೇಮ ಎಂಬ ದಂಪತಿಗಳ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ನಗರದ ಒಂಟಿಕೊಪ್ಪಲ್ ವೃತ್ತದ ಬಳಿ ಇರುವ ಡಿ.ಆರ್.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ಸ್ಥಳದಲ್ಲಿ ಸಿಕ್ಕ ಆಧಾರ್ ಕಾರ್ಡ್ ನಿಂದಾಗಿ ಕೂರ್ಗಳ್ಳಿಯ ನಿವಾಸಿಗಳು ಎಂಬ ಮಾಹಿತಿ ತಿಳಿದು ಬಂದಿದೆ.

 

Continue Reading

Mysore

ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತ

Published

on

ಮೈಸೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರೆದಿದ್ದು, ಕಪಿಲಾ ನದಿಯಲ್ಲಿ ಪ್ರವಾಹ ಹೆಚ್ಚಿರುವ ಹಿನ್ನೆಲೆ ನಂಜನಗೂಡು ಹೊರವಲಯದ ಮಲ್ಲನ ಮೂಲೆ ಮಠದ ಬಳಿ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.

ಹೆದ್ದಾರಿಯಲ್ಲಿ 4 ಅಡಿಗೂ ಹೆಚ್ಚು ನೀರು ಬಂದಿದ್ದು, ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಪರಿಣಾಮವಾಗಿ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 70ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮೈಸೂರಿನಿಂದ ನಂಜನಗೂಡಿಗೆ ತೆರಳುವ ವಾಹನಗಳನ್ನು ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬ್ಯಾರಿಕೇಡ್ ಅಳವಡಿಸಿ ತಡೆಯಲಾಗಿದೆ. ಅಡಕನಹಳ್ಳಿ ಮಾರ್ಗವಾಗಿ ನಂಜನಗೂಡಿಗೆ ಸಂಚರಿಸುವಂತೆ ತಿಳಿಸಿದ್ದು, ನಂಜನಗೂಡಿನಿಂದ ಮೈಸೂರಿಗೆ ತೆರಳುವ ವಾಹನಗಳು ತಾಂಡವಪುರ ಮೂಲಕ ಹೆಜ್ಜಿಗೆ ಸೇತುವೆ ಮೂಲಕ ಸಂಚರಿಸಲು ತಿಳಿಸಲಾಗುತ್ತಿದೆ.

Continue Reading

Mysore

ಕಬಿನಿ, ನುಗು ಪ್ರವಾಹ ಭೀತಿ: ಸಿಇಒ ಕೆ.ಎಂ ಗಾಯಿತ್ರಿ ಪರಿಶೀಲನೆ

Published

on

ಮೈಸೂರು: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯಿತ್ರಿ ಅವರು ಇಂದು ಸರಗೂರು ತಾಲ್ಲೂಕಿನ ನುಗು ಜಲಾಶಯ ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.

ಕೇರಳ ಹಾಗೂ ಹೆಚ್.ಡಿ.ಕೋಟೆ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು, ಮತ್ತಷ್ಟು ಹೊರ ಹರಿವಿನ ನೀರು ಪ್ರಮಾಣ ಹೆಚ್ಚಳವಾಗಬಹುದು ಹೀಗಾಗಿ ನದಿಪಾತ್ರದ ಗ್ರಾಮಗಳಲ್ಲಿ ವಾಸಿಸುವ ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಾಗೃತಿ ಮೂಡಿಸಬೇಕು, ಅಗತ್ಯವಿದ್ದರೆ ಸ್ಥಳಾಂತರ ಮಾಡಲು ಅಗತ್ಯ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಬಿನಿ ಜಲಾಶಯದಲ್ಲಿನ ನೀರು ಬಿಡುಗಡೆ ಗೇಟ್ ಕೊಠಡಿಯು ಸ್ವಲ್ಪ ಶಿಥಿಲಾವಸ್ಥೆಯಲ್ಲಿದ್ದು, ಕೂಡಲೇ ಕೊಠಡಿಯನ್ನು ದುರಸ್ಥಿ ಮಾಡಿಸಿಕೊಳ್ಳುವಂತೆ ಹಾಗೂ ಜಲಾಶಯದ ಬಳಿ ಸಾರ್ವಜನಿಕರು ಬಾರದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತುಂಬುಸೋಗೆ ಬಳಿಯ ಸೇತುವೆ ಬಳಿ ನೀರು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಹೆಚ್ಚುವರಿ ನೀರು ಬಿಟ್ಟರೆ ಸೇತುವೆ ಮುಳುಗುವ ಭೀತಿ ಇದ್ದು, ಸಾರ್ವಜನಿಕರು ಸೇತುವೆ ಬಳಿ ತೆರಳದಂತೆ ಕ್ರಮವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಡಾ. ಎಂ.ಕೃಷ್ಣರಾಜು, ಸರಗೂರು ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ ಕೆ., ಹೆಚ್.ಡಿ ಕೋಟೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ಧರಣೇಶ್ ಎಸ್.ಪಿ., ಕಾರ್ಯಪಾಲಕ ಅಭಿಯಂತರರಾದ ರಂಜಿತ್,‌ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗೋವಿಂದ ನಾಯಕ, ಸಹಾಯಕ ನಿರ್ದೇಶಕ ಮಹದೇವಸ್ವಾಮಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಭಾಕರ್, ಪರಮೇಶ್ ಹಾಗೂ ಇನ್ನಿತರ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಇದ್ದರು.

Continue Reading

Trending

error: Content is protected !!