Hassan
ಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್
ಅರಕಲಗೂಡು: ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿರುವ ಅರ್ಪಿತ ಎಂಬುವವರು ಸಹಾಯಕ್ಕಾಗಿ 112 ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ವಾಹನ ಬಾರದೇ ಇದ್ದರಿಂದ ಪೊಲೀಸ್ ಠಾಣೆಗೆ ಕರೆ ಮಾಡಿದ್ದರು. ಆಗ ಎಎಸ್ಐ ದೇವರಾಜ್ ಸ್ಥಳಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಏನಿದು ಘಟನೆ?
ಅಸಹಾಯಕ ಅರ್ಪಿತಾ ಅವರ ಅತ್ತೆ ಭಾಗ್ಯಮ್ಮ, ಅತ್ತಿಗೆ ಗೀತಾ, ನಾದಿನಿ ಜ್ಯೋತಿ, ಬಾವ ಲೋಕೇಶ್ ಎಲ್ಲಾ ಸೇರಿ ಗಂಡ ಇಲ್ಲದ ವೇಳೆ ಅವರ ಮೇಲೆ ದಾಳಿ ಮಾಡಿದ್ದರು. ಅಲ್ಲದೇ ಮನೆಯ ಮಹಡಿಯ ಮೇಲೆ ವಾಸವಿದ್ದ ಅವರ ಮನೆಗೆ ಬೀಗ ಹಾಕಿ ಅವರನ್ನು ಮನೆ ಇಂದ ಹೊರ ಹಾಕುವ ಪ್ರಯತ್ನ ಮಾಡಿದ್ದರು.
ಅರ್ಪಿತಾ ಅವರಿಗೆ ಪ್ರೀತಿಸಿ 5 ವರ್ಷದ ಹಿಂದೆ ಮದುವೆ ಆಗಿತ್ತು. ಆದರೆ ಒಂದು ವರ್ಷದಿಂದ ಚೆನ್ನಾಗಿ ನೋಡಿಕೊಳ್ಳದೆ ಹೆಂಡತಿ ಇದ್ದರಿಂದ ಗಂಡನಿಂದ ದೂರ ಉಳಿದ್ದರು. ಇದೀಗ ಅರ್ಪಿತಾ ಅವರನ್ನು ಮನೆ ಖಾಲಿ ಮಾಡಿಸೋದಕ್ಕೆ ಅವರ ಅತ್ತೆ ಬಂದಿದ್ದಾರೆ.

ಈ ವೇಳೆ ಪೊಲೀಸರು ಆಕೆಯ ಸಹಾಯಕ್ಕೆ ಬಾರದೇ ಹಲ್ಲೆ ಮಾಡಿದವರ ಜೊತೆ ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಈ ಹಲ್ಲೆಗೊಳಗಾದ ಅಸಹಾಯಕ ಮಹಿಳೆ ದೂರು ತೆಗೆದುಕೊಳ್ಳಲು ಎಎಸ್ಐ ದೇವರಾಜ್ ನಿರಾಕರಿಸಿದ್ದಾರೆ. ಆ ಅಸಹಾಯಕ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ, ನ್ಯಾಯ ಸಿಗದೇ ಕಣ್ಣೀರು ಹಾಕಿಕೊಂಡು ತನ್ನ ಅಳಲನ್ನು ತೋಡಿಕೊಂಡು ಬೀದಿಗೆ ಬಿದ್ದಿದ್ದಾರೆ.

ಈ ಸಂತ್ರಸ್ಥೆಯೂ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Hassan
ಮನೆಗಳ್ಳನ ಬಂಧನ : 140 ಗ್ರಾಂ.ಚಿನ್ನ ವಶ
ಅರೇಹಳ್ಳಿ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಆಭರಣ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಅರೇಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೇಲೂರು ತಾಲೂಕು ಸ್ಕೂಲ್‌ಗರ್ಜೆ ಗ್ರಾಮದ ಯೋಗೇಶ(24) ಬಂಧಿತ ಆರೋಪಿ. ಈತನಿಂದ ಅಂದಾಜು 20 ಲಕ್ಷ ರೂ. ಮೌಲ್ಯದ 140 ಗ್ರಾಂ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಘಟನೆ ಹಿನ್ನೆಲೆ ಏನು?
ಸಮೀಪದ ನಾಗೇನಹಳ್ಳಿ ಗ್ರಾಮದ ಹನುಮೇಗೌಡ ಎಂಬುವರ ಮನೆಯಲ್ಲಿ ಕಳೆದ ಜನವರಿ 23ರಂದು ಬರೋಬ್ಬರಿ 140 ಗ್ರಾಂ. ತೂಕದ ಚಿನ್ನದ ವಡನೆಗಳನ್ನು ಆರೋಪಿ ಕಳ್ಳತನ ಮಾಡಿದ್ದ.
ಪತ್ತೆಗಾಗಿ ಎಸ್‌ಪಿ ಶುಭಾನ್ವಿತಾ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಕೆ.ತಮ್ಮಯ್ಯ ಹಾಗೂ ಶ್ರೀನಿಧಿ ಅವರ ಮಾರ್ಗದರ್ಶನದಲ್ಲಿ ಅರಸೀಕೆರೆ ಉಪ ವಿಭಾಗದ ಡಿವೈಎಸ್‌ಪಿ ಬಿ.ಆರ್.ಗೋಪಿ, ಹಳೇಬೀಡು ವೃತ್ತಿ ನಿರೀಕ್ಷಿಕ ಜಗದೀಶ್ ಬಿ.ಆರ್. ಅವರ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿದ್ದರು.

ತಂಡದಲ್ಲಿ ಅರೇಹಳ್ಳಿ ಪಿಎಸ್‌ಐ ಶೋಭಾ, ಸಿಬ್ಬಂದಿಗಳಾದ ಪೃಥ್ವಿ , ಸುಪ್ರೀತ್, ಹೇಮಕಾಂತ್, ಫಕೃದ್ದೀನ್, ಸಮೀನಾ ತಾಜ್ ಇದ್ದರು.
ಈ ತಂಡವು ಕಳ್ಳತನ ನಡೆದ ಎರಡು ವಾರಗಳ ಅಂತರದಲ್ಲಿ ಆರೋಪಿ ಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ 140 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಕೆಲ ವರ್ಷ ಬೇಕರಿ ಕೆಲಸ ಮಾಡಿಕೊಂಡಿದ್ದ ಖದೀಮ, ಅದಾದ ಬಳಿಕ ಕಾರು ಚಾಲಕನಾಗಿದ್ದ. ಈಗ್ಗೆ ಆರು ತಿಂಗಳ ಹಿಂದೆ ಊರಿಗೆ ಬಂದವನೇ ಕಳ್ಳತನದ ಕಸುಬಿಗೆ ಇಳಿದಿದ್ದ. ಈ ಹಿಂದೆಯೂ ಒಂದು ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ.
ಅಚ್ಚರಿ ಎಂದರೆ ಈತ ಜ.23 ರಂದು ಕಳವು ಮಾಡಿದ್ದ ಚಿನ್ನಾಭರಣಗಳನ್ನು ಮನೆಯಲ್ಲೇ ಇಟ್ಟಿದ್ದ ಎನ್ನಲಾಗಿದೆ. ಇದೀಗ ಮನೆಗಳ್ಳ ಖಾಕಿ ಕೈಗೆ ಸಿಕ್ಕಿ ಬಿದ್ದಿದ್ದಾನೆ. ತನಿಖಾ ತಂಡದ ಯಶಸ್ವಿ ಕಾರ್ಯಕ್ಕೆ ಎಸ್ಪಿ ಅವರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
Hassan
ರಾಷ್ಟ್ರೀಯ ಚಿಂತನೆ ಮೈಗೂಡಿಸಿಕೊಳ್ಳಿ : ಶಾಸಕ ಸಿಮೆಂಟ್ ಮಂಜು
ಸಕಲೇಶಪುರ: ದೇಶದ ಭವಿಷ್ಯವನ್ನು ರೂಪಿಸುವ ಯುವಕ-ಯುವತಿಯರು ರಾಷ್ಟ್ರೀಯ ಚಿಂತನೆಗಳನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಮುನ್ನಡೆಯಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಹಾನುಬಾಳು ವಿನಾಯಕ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿದ್ಯಾನಿಧಿ ಶಾಲೆಯ ವಾರ್ಷಿಕೋತ್ಸವ ‘ವಿದ್ಯಾನಿಧಿಯೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನಮ್ಮ ಬದುಕಿನ ಮೂಲಮಂತ್ರವಾಗಬೇಕು. ಯಾವ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯುವತ್ತ ವಿದ್ಯಾರ್ಥಿಗಳು ದೃಢಸಂಕಲ್ಪ ಹೊಂದಬೇಕು ಎಂದರು.

ಯುವಕರು ದುಶ್ಚಟಗಳಿಗೆ ದಾಸರಾಗದೆ, ಬದುಕನ್ನು ರೂಪಿಸುವ ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಸಹನೆ, ಸೌಹಾರ್ದತೆ, ಸಹಬಾಳ್ವೆ ಹಾಗೂ ಸಾಮಾಜಿಕ ಕಳಕಳಿಯನ್ನು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ರಮಗಳ ಬೋಧನೆಗೆ ಸೀಮಿತವಾಗದೆ, ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾದ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ತುಂಬುವ ಮೂಲಕ ಅವರ ಆಲೋಚನಾ ಸಾಮರ್ಥ್ಯವನ್ನು ವೃದ್ಧಿಸಬೇಕಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ನಿರ್ಣಾಯಕವಾಗಿದೆ. ಶಿಕ್ಷಣ, ತಂತ್ರಜ್ಞಾನ ಜ್ಞಾನ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯ ಮೂಲಕ ಯುವಕರು ಬದಲಾವಣೆಯ ಹರಿಕಾರರಾಗಬಹುದು ಎಂದರು.
ಯುವಜನಾಂಗ ದೇಶದ ಅತಿ ದೊಡ್ಡ ಶಕ್ತಿಯಾಗಿದ್ದು, ದೃಢಸಂಕಲ್ಪ ಹಾಗೂ ಪ್ರಾಮಾಣಿಕತೆಯಿಂದ ಭ್ರಷ್ಟಾಚಾರ ಮುಕ್ತ ಭಾರತದ ಕನಸನ್ನು ನನಸಾಗಿಸಬಹುದು ಎಂದು ಹೇಳಿದರು.

ಭ್ರಷ್ಟಾಚಾರವನ್ನು ಕೇವಲ ಕಾನೂನಿನ ಮೂಲಕ ಸಂಪೂರ್ಣ ನಿರ್ಮೂಲನೆ ಮಾಡಲಾಗುವುದಿಲ್ಲ. ಆದರೆ ನಾಗರಿಕರ ಜಾಗೃತಿ ಮತ್ತು ಭ್ರಷ್ಟರನ್ನು ಸಮಾಜದಿಂದ ಬಹಿಷ್ಕರಿಸುವ ಮನೋಭಾವದ ಮೂಲಕ ಅದನ್ನು ನಿಯಂತ್ರಿಸಬಹುದು. ದುರಾಸೆಯೇ ಭ್ರಷ್ಟಾಚಾರದ ಮೂಲವೆಂದು ಅವರು ಅಭಿಪ್ರಾಯಪಟ್ಟರು.
ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಟಿ ಅಭಿನಯ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ಸಂದರ್ಭದಲ್ಲಿ ಹಾನುಬಾಳಿನಲ್ಲಿ ಕಳೆದ 28 ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ವಾಸು ಅವರನ್ನು ಶಾಲಾ ಆಡಳಿತ ಮಂಡಳಿಯಿಂದ ವಿಶೇಷವಾಗಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಪ್ಪ (ಹೂಡಿ ಚಿನ್ನಿ), ಸಾಮಾಜಿಕ ಹೋರಾಟಗಾರ ಯಡಹಳ್ಳಿ ಮಂಜುನಾಥ್, ಎಸ್‌ಡಿಎಂಸಿ ಸದಸ್ಯ ಗಣೇಶ್, ಉಪಾಧ್ಯಕ್ಷೆ ಅನ್ವಿತಾ, ವಿನಾಯಕ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಸವರಾಜು, ಕಾರ್ಯದರ್ಶಿ ಲಿಂಗದೇವರು, ಖಜಾಂಚಿ ಹರೀಶ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Hassan
ಚನ್ನರಾಯಪಟ್ಟಣದ ರಾಮೋತ್ಸವ ಮೆರವಣಿಗೆಯಲ್ಲಿ ಬಾಗಿಯಾದ ಗಿಲ್ಲಿ ನಟ
ವರದಿ: ದಯಾನಂದ ಶೆಟ್ಟಿಹಳ್ಳಿ
ಚನ್ನರಾಯಪಟ್ಟ: ನಗರದಲ್ಲಿ ಇಂದು ನಡೆದ ರಾಮೋತ್ಸವ ಮೆರವಣಿಗೆಯಲ್ಲಿ ಬಿಗ್‌ಬಾಸ್-12 ವಿನ್ನರ್ ಗಿಲ್ಲಿ ನಟ ಬಾಗಿಯಾಗಿದ್ದು, ಗಿಲ್ಲಿ ಕಂಡ ಅಭಿಮಾನಿಗಳ ಹರ್ಷೋದ್ಘಾರಗೊಂಡಿದ್ದಾರೆ.
ಚನ್ನರಾಯಪಟ್ಟಣದ ಬಾಗೂರು ರಸ್ತೆಯಿಂದ ಪ್ರಾರಂಭವಾಗಿ ನಗರದ ಆಂಜನೇಯ ದೇವಾಲಯದವರೆಗೆ ನಡೆಯಲಿರೋ ರಾಮೋತ್ಸವ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಸೇರಿ ಸಾವಿರಾರು ಜನ ಭಾಗಿಯಾಗಿದ್ದರು. ಈ ಮೆರವಣಿಗೆಗೆ ಆಗಮಿಸಿದ ಗಿಲ್ಲಿ ನಟನನ್ನು ನೋಡಲು ಜನಸಾಗರ ಹರಿದು ಬಂದಿತ್ತು.

ಈ ವೇಳೆ ಗಿಲ್ಲಿ ಕಾರಿನಿಂದ ಕೆಳಗೆ ಇಳಿಯಲಾಗದೆ ಕಾರಿನಲ್ಲೇ ಕುಳಿತಿದ್ದು, ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ ಮಾಡಿದ್ದಾರೆ. ಬಳಿಕ ಪೊಲೀಸರ ರಕ್ಷಣೆಯಿಂದ ಗಿಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.
ಮೆರವಣಿಗೆಯುದ್ಧಕ್ಕೂ ಅಭಿಮಾನಿಗಳು ಗಿಲ್ಲಿ ಗಿಲ್ಲಿ ಎಂದು ಕೂಗಿದ್ದಾರೆ. ಬಳಿಕ ಇದೇ ಸಂದರ್ಭದಲ್ಲಿ ಗಿಲ್ಲಿ ಅಭಿಮಾನಿಗಳತ್ತ ಕೈ ಬೀಸಿದ್ದಾರೆ.
-
Chikmagalur5 hours agoವೈದ್ಯಕೀಯ ವಿಭಾಗದ ಕ್ಯಾಪ್ಟನ್ ಡಾ.ಸಾತ್ವಿಕ್ ಅರುಣ್ಗೆ ಅದ್ದೂರಿ ಸ್ವಾಗತ ಕೋರಿದ ಗ್ರಾಮಸ್ಥರು
-
Special12 hours agoಪಿ ಎಂ ಆವಾಸ್ ಯೋಜನೆಯಿಂದ ಮನೆಕಟ್ಟಲು ಸಬ್ಸಿಡಿ!
-
Kodagu1 hour agoಕುಂದಚೇರಿ ಗ್ರಾ.ಪಂ. ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ
-
State5 hours agoಉಳಿತಾಯದ ಹೂಡಿಕೆಗಳು MSIL ಸಂಸ್ಥೆಯಲ್ಲಿ ಸುಭದ್ರ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
-
Chamarajanagar8 hours agoಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ: ಹನೂರಿನ ಶಾಲೆಗಳಲ್ಲಿ ಅರಿವು ಮೂಡಿಸಿದ ರೈತ ದಂಪತಿ
-
Hassan9 hours agoಸದನದಲ್ಲಿ ನಾನು ಆವೇಶಭರಿತನಾಗಿ ಮಾತನಾಡುವುದಕ್ಕೆ ಬಿಜೆಪಿಯವರ ಪ್ರಚೋದನೆಯೇ ಕಾರಣ : ಕೆ.ಎಂ. ಶಿವಲಿಂಗೇಗೌಡ
-
Hassan2 hours agoಮನೆಗಳ್ಳನ ಬಂಧನ : 140 ಗ್ರಾಂ.ಚಿನ್ನ ವಶ
-
Mandya2 hours agoಫೆ.28ಕ್ಕೆ ಮೈಸೂರು ಷುಗರ್ ಕಂಪನಿಯ ಸರ್ವ ಸದಸ್ಯರ ಸಾಮಾನ್ಯ ಸಭೆ : ಸಿ.ಡಿ.ಗಂಗಾಧರ್
