Connect with us

Kodagu

ಫೆ.5 ರಿಂದ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

Published

on

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಡೆಸುತ್ತಿರುವ 2026-27ನೇ ಸಾಲಿಗೆ ರಾಜ್ಯ ವಲಯದ ಕ್ರೀಡಾ ಶಾಲೆ, ಕ್ರೀಡಾ ವಸತಿ ನಿಲಯಗಳಿಗೆ (8ನೇ ತರಗತಿ ಹಾಗೂ ಪ್ರಥಮ ಪಿಯುಸಿ) ಮಡಿಕೇರಿ ತಾಲೂಕಿಗೆ ಫೆಬ್ರವರಿ, 05 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿಗೆ ಫೆಬ್ರವರಿ, 06 ರಂದು ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆ ಹಾಗೂ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿಗೆ ಫೆಬ್ರವರಿ, 07 ರಂದು ಪೊನ್ನಂಪೇಟೆ ತಾಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.


ವಿದ್ಯಾರ್ಥಿಗಳು ಫೆಬ್ರವರಿ, 05, 06 ಮತ್ತು 07 ರಂದು ಬೆಳಗ್ಗೆ 9 ಗಂಟೆ ಒಳಗೆ ಇಲಾಖಾ ತರಬೇತುದಾರರಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮಹಾಬಲ ಅಥ್ಲೆಟಿಕ್ಸ್ ತರಬೇತುದಾರರು ದೂ.ಸಂ.9980887499, ಮಂಜುನಾಥ್ 9342563014, ಬಿಂದ್ಯಾ ಹಾಕಿ ತರಬೇತುದಾರರು 9980887499, ವೆಂಕಟೇಶ್ 9844326007, ಸುಬ್ಬಯ್ಯ 8197792350, ಜಿಮ್ನಾಸ್ಟಿಕ್ಸ್ ಸುರೇಶ್ 9483629216 ನ್ನು ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Continue Reading

Kodagu

ಹೂಡಿಕೆ ಹೆಸರಲ್ಲಿ ಸೈಬರ್ ವಂಚನೆ : 1.14 ಕೋಟಿ ರೂ. ಕಳೆದುಕೊಂಡ ಸಿದ್ದಾಪುರದ ವ್ಯಕ್ತಿ

Published

on

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಪಾಲಿಬೆಟ್ಟದ ಖಾಸಗಿ ಸಂಸ್ಥೆಯ ಸಹಾಯಕ ವ್ಯವಸ್ಥಾಪಕರಾಗಿರುವ ನಾರಾಯಣ ಎಂಬವರು ಹೂಡಿಕೆ ಹೆಸರಲ್ಲಿ ಸೈಬರ್ ವಂಚಕರಿಂದ 1.14 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ.

ಯೂಟ್ಯೂಬ್‌ನಲ್ಲಿ ಹಣ ಹೂಡಿಕೆ ಸಂಬಂಧಿಸಿದ ಜಾಹೀರಾತನ್ನು ಕ್ಲಿಕ್ ಮಾಡಿದ ನಾರಾಯಣ ಅವರಿಗೆ ಬಳಿಕ ವಾಟ್ಸ್‌ಆಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಅಮೋಲ್ ರಮಕಾಂತ್ ಎಂದು ಪರಿಚಯಿಸಿಕೊಂಡು, ಆರ್‌ಬಿಕೆ ಪ್ರೋಕಿಂಗ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಸಿಗುತ್ತದೆ ಎಂದು ನಂಬಿಸಿದ್ದಾನೆ. ಬಳಿಕ ಎಂ5 ಆರ್‌ಬಿಕೆ ಗ್ರೂಪ್‌ಗೆ ಸೇರಿಸಿ ಲಾಭಾಂಶದ ನಕಲಿ ವಿವರಗಳನ್ನು ತೋರಿಸಿ ಮೊದಲಿಗೆ 50 ಸಾವಿರ ರೂ. ಹೂಡಿಕೆ ಮಾಡಲು ಪ್ರೇರೇಪಿಸಿದ್ದಾನೆ.


ವಂಚಕರ ಮಾತು ನಂಬಿದ ನಾರಾಯಣ ಅವರು ತಮ್ಮ ಹಾಗೂ ಪತ್ನಿಯ ಬ್ಯಾಂಕ್ ಖಾತೆಗಳಿಂದ ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ 2025ರ ಡಿ.9ರಿಂದ 2026ರ ಜ.23ರವರೆಗೆ ಹಂತ ಹಂತವಾಗಿ ಆರ್‌ಟಿಜಿಎಸ್ ಮತ್ತು ನೆಫ್ಟ್ ಮೂಲಕ ಒಟ್ಟು 1.14 ಕೋಟಿ ರೂ. ವರ್ಗಾಯಿಸಿದ್ದಾರೆ.

ನಂತರ ಹಣವನ್ನು ಹಿಂತಿರುಗಿಸಿಕೊಳ್ಳಲು ಯತ್ನಿಸಿದಾಗ ಸೇವಾ ಶುಲ್ಕದ ಹೆಸರಿನಲ್ಲಿ ಮತ್ತಷ್ಟು ಹಣ ಪಾವತಿಸುವಂತೆ ವಂಚಕರು ಒತ್ತಡ ಹಾಕಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿ ನಾರಾಯಣ ಅವರು ಸೈಬರ್ ಅಪರಾಧ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

Kodagu

ವಾಹನದ ಮೂಲ ಸ್ವರೂಪವನ್ನು ಬದಲು – ತನಿಖೆ

Published

on

ಮಡಿಕೇರಿ : ನಗರದಲ್ಲಿ ಜಿಪ್ಸಿಯ ಮೂಲ ಸ್ವರೂಪವನ್ನು ಪರಿವರ್ತಿಸಿಕೊಂಡು ಕರ್ಕಶ ಶಬ್ದ ಬರುವ ಸೈಲೆನ್ಸರನ್ನು ಅಳವಡಿಸಿಕೊಂಡು ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ವಶಕ್ಕೆ ಪಡೆದುಕೊಂಡು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ: 281 2.2.2.-2023, 8/2. 52, 53(1), 192, 184, 189 ತನಿಖೆ ಕೈಗೊಳ್ಳಲಾಗಿದೆ.

ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಾಯಿಸಿಕೊಂಡು ಕರ್ಕಶ ಶಬ್ದ ಬರುವ ಸೈಲೆನ್ಸರನ್ನು ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿಕೊಂಡು ವಾಹನಗಳು ಸಂಚರಿಸುತ್ತಿರುವುದಾಗಿ ಹಾಗೂ ಸಂಖ್ಯೆ ಕೆಎ01ಎನ್ಜಿ2730ರ ಜಿಪ್ಸಿ ವಾಹನವು ಮಡಿಕೇರಿ ನಗರದಲ್ಲಿ ಕರ್ಕಶ ಶಬ್ದ ಮಾಡಿಕೊಂಡು ರೇಸಿಂಗ್ ಸ್ಪೀಡ್‌ನಲ್ಲಿ ಅಪಾಯಕರ ರೀತಿಯಲ್ಲಿ ಸಂಚರಿಸುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದಿದ್ದು, ಅದರಂತೆ ಪಿ.ಎಸ್.ಐ. ಮಡಿಕೇರಿ ಸಂಚಾರಿ ಠಾಣೆಯವರು ಇಂದು ರಂದು ಬೆಳಿಗ್ಗೆ ಠಾಣಾ ಸಿಬ್ಬಂದಿಯವರಾದ ಬಾಬು ಎಲ್ ಹಾಗೂ ಸುನಿತ್ ಕುಮಾರ್ ರವರೊಂದಿಗೆ ಇಲಾಖಾ ಜೀಪಿನಲ್ಲಿ ಮಡಿಕೇರಿ ನಗರದಲ್ಲಿ ರೌಂಡ್ಸ್ ಮಾಡಿಕೊಂಡು ವಾಪಾಸ್ಸು ಠಾಣೆಯ ಕಡೆಗೆ ಬರುತ್ತಿರುವಾಗ್ಗೆ ಮೈತ್ರಿ ಜಂಕ್ಷನ್ ಬಳಿ ತಲುಪುವಾಗ್ಗೆ ಸಮಯ 9:00 ಗಂಟೆಗೆ ಎಫ್.ಎಂ.ಸಿ. ಕಾಲೇಜು ಕಡೆಯಿಂದ ನಗರದ ಕಡೆಗೆ ಕೆಎ01ಎನ್‌ಜಿ 2730 ರ ಜಿಪ್ಸಿ ವಾಹನವನ್ನು ಅದರ ಚಾಲಕ ಅತೀ ವೇಗವಾಗಿ ಸೈಲೆಸರ್‌ನಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಅಪಾಯಕರ ರೀತಿಯಲ್ಲಿ ಚಾಲನೆ ಮಾಡಿಕೊಂಡು ಬರುತ್ತಿದ್ದು, ಕೂಡಲೇ ನಾವುಗಳು ಜೀಪನ್ನು ಬದಿಗೆ ನಿಲ್ಲಿಸಿ ಸದರಿ ವಾಹನವನ್ನು ತಡೆದು ಪರಿಶೀಲಿಸಿದಾಗ ಸದರಿ ಜಿಪ್ಪಿಯ ಮೂಲ ಸ್ವರೂಪವನ್ನು ಪರಿವರ್ತಿಸಿಕೊಂಡು ಕರ್ಕಶ ಶಬ್ದ ಬರುವ ಸೈಲೆನ್ಸರನ್ನು ಅಳವಡಿಸಿಕೊಂಡು ಚಾಲನೆ ಮಾಡುತ್ತಿರುವುದು ಕಂಡು ಬಂದಿರುತ್ತದೆ.


ಸದರಿ ಜಿಪ್ಪಿ ಚಾಲಕ ಜಿಪ್ಪಿ ವಾಹನದ ಮೂಲ ಸ್ವರೂಪವನ್ನು ಬದಲಾಯಿಸಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅನುಮತಿಯನ್ನು ಪಡೆದುಕೊಂಡಿರುತ್ತೀರಾ ಎಂದು ಕೇಳಿದಾಗ ಯಾವುದೇ ಅನುಮತಿಯನ್ನು ಪಡೆದುಕೊಂಡಿರುವುದಿಲ್ಲ ಎಂದು ತಿಳಿಸಿದ ಮೇರೆಗೆ ಮುಂದಿನ ಕ್ರಮದ ಬಗ್ಗೆ ಸದರಿ ವಾಹನವನ್ನು ವಶಕ್ಕೆ ಪಡೆದುಕೊಂಡು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ: 281 2.2.2.-2023, 8/2. 52, 53(1), 192, 184, 189 . ತನಿಖೆ ಕೈಗೊಳ್ಳಲಾಗಿರುತ್ತದೆ.

ಯಾವುದೇ ವಾಹನಗಳ ಆರ್.ಸಿ. ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಲಾವಣೆ ಮಾಡುವುದು ಅಥವಾ ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್, ಹಾರ್ನ್ ಗಳನ್ನು ಅಳವಡಿಸಿಕೊಳ್ಳುವುದು, ವೀಲಿಂಗ್ ಮಾಡಿಕೊಂಡು ಚಾಲನೆ ಮಾಡುವವರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕೆಂದು ಪೊಲೀಸ್ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿರುತ್ತಾರೆ.

Continue Reading

Kodagu

ಗುಡುಗಳಲೆ ಜಾನುವಾರುಗಳ ಜಾತ್ರೆಗೆ ಚಾಲನೆ ನೀಡಿದ ಶ್ರೀ ಅಭಿನವ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ

Published

on

ಶನಿವಾರಸಂತೆ: ಜಾತ್ರೆಗಳು ಸಮೂದಾಯ, ಆಚರಣೆ, ಪರಂಪರೆಯನ್ನು ಸಮ್ಮೀಲನಗೊಳಿಸುವ ವೇದಿಕೆಯಾಗುತ್ತದೆ ಎಂದು ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಅವರು ಸಮಿಪದ ಹಂಡ್ಲಿ ಗ್ರಾ.ಪಂ.ವ್ಯಾಪ್ತಿಯ ಗುಡುಗಳಲೆಯ 82ನೇ ವರ್ಷದ ಶ್ರೀ ಜಯದೇವ ಜಾನುವಾರುಗಳ ಜಾತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಆಶೀವ್ರರ್ಚಿಸುತ್ತಿದ್ದರು.

ರೈತರು ಜಾನುವಾರುಗಳನ್ನು ಕೊಂಡುಕೊಳ್ಳಲು ಮತ್ತು ಮಾರಾಟ ಮಾಡುವ ಸಲುವಾಗಿ ಈ ಭಾಗದಲ್ಲಿ 82 ವರ್ಷಗಳ ಹಿಂದೆ ಹಿರಿಯರು ಜಾನುವಾರುಗಳ ಜಾತ್ರೆಯನ್ನು ಸ್ಥಾಪಿಸಿದರು. ಜೊತೆಗೆ ಜನರಿಗೆ ಮನೋರಂಜನೆಯನ್ನು ಒದಗಿಸಿಕೊಡುವ ಸಲುವಾಗಿ ಜಾತ್ರೆಯನ್ನು ವೈಭವದಿಂದ ನಡೆಸಲಾಗುತ್ತಿತ್ತು. ಆದರೆ ಈಗಿನ ವೈಜ್ಞಾನಿಕ ಮತ್ತು ಆಧುನಿಕ ಭರಾಟೆಯಲ್ಲಿ ರೈತರು ವ್ಯವಸಹಾಯಕ್ಕೆ ಯಂತ್ರೋಪಕರಣಗಳ ಮೊರೆ ಹೋಗುತ್ತಿರುವುದ್ದರಿಂದ ಜಾನುವಾರುಗಳ ಸಾಕಾಣಿಕೆ ಕಡಿಮೆಯಾಗುತ್ತಿದ್ದು ಈ ಜಾತ್ರೆಯ ಹಿಂದಿನ ವೈಭವ ಮರೆಯಾಗುತ್ತಿರುವುದು ಬೇಸರದ ವಿಷಯವಾಗಿದೆ ಎಂದರು.

ಬದಲಾಗುತ್ತಿರುವ ಕಾಲಘಟ್ಟದಲ್ಲಿ ಬಾಂಧವ್ಯಗಳನ್ನು ಬೆಸೆಯುವ ಸಮೂದಾಯದ ಸಮ್ಮೀಲನಗಳ ಕೊರತೆಯಿಂದಾಗಿ ಆಚರಣೆ, ಪರಂಪರೆ, ಜಾತ್ರೋತ್ಸವಗಳು ಕಮ್ಮಿಯಾಗುತ್ತಿರುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಯವರು ಆಚರಣೆ, ಪರಂಪರೆಯನ್ನು ರೂಢಿಸಿಕೊಂಡು ಜಾತ್ರೋತ್ಸವಗಳನ್ನು ಉಳಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಮಾತನಾಡಿ-ಜಾತ್ರೆಯು ಮನೋರಂಜನೆಗೆ ಸೀಮಿತವಾಗಿಲ್ಲ ರೈತರ ಉಪಯೋಗಕ್ಕಾಗಿ ಸ್ಥಾಪಿಸಿದ್ದ ಜಾನುವರುಗಳ ಜಾತ್ರೆಯನ್ನು ಉಳಿಸಿಕೊಳ್ಳಲು ರೈತರು ಜಾನುವಾರುಗಳ ಸಾಕಾಣಿಕೆಯನ್ನು ಮಾಡುವುದರ ಮೂಲಕ ಈ ಜಾತ್ರೆಯ ಹಿಂದಿನ ವೈಭವವನ್ನು ಮತ್ತೆ ಮರುಕಳುಹಿಸುವಂತೆ ಮಾಡಬೇಕು ಎಂದು ಹೇಳಿದರು. ಜಾತ್ರೋತ್ಸವಗಳು ಧಾರ್ಮಿಕ, ಆದ್ಯಾತ್ಮಿಕ ಚಿಂತನೆಗೂ ಮತ್ತು ಜನರು ಸುಖ-ದುಖ:ಗಳನ್ನು ವಿನಿಮಯ ಮಾಡಿಕೊಳ್ಳುವ ವೇದಿಕೆಯಾಗುತ್ತದೆ ಎಂದರು.


ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಚಂದ್ರು ಚಾತ್ರೆಯನ್ನು ಉದ್ಘಾಟಿಸಿ ಮಾತನಾಡಿ, ಜಾತ್ರೋತ್ಸವಗಳು ಸಾರ್ವಜನಿಕವಾಗಿ ನಡೆಯುವುದ್ದರಿಂದ ಇಂತಹ ಉತ್ಸವಗಳು ಸಾಂಗವಾಗಿ ನಡೆಯಬೇಕಾಗುತ್ತದೆ ಜಾತ್ರೆ ಯಶಸ್ವಿಗೊಳ್ಳಬೇಕಾದರೆ ಪೊಲೀಸ್ ರಕ್ಷಣೆಯೂ ಬೇಕಾಗುತ್ತದೆ ಸಾರ್ವಜನಿಕರು, ಪೊಲೀಸ್‌ರಿಗೆ ಸಹಕಾರ ನೀಡಿದರೆ ಜಾತ್ರೋತ್ಸವವು ಯಶಸ್ವಿಗೊಳ್ಳುತ್ತದೆ ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಹಿರಿಯ ಮುಖಂಡ ಎಸ್.ಕೆ.ವೀರಪ್ಪ ಹಿಂದಿನ ಜಾತ್ರೆಯ ವೈಭವದ ಬಗ್ಗೆ ಮಾತನಾಡಿದರು. ಜಾತ್ರಾ ಸಮೀತಿ ಅಧ್ಯಕ್ಷೆ ಚೈತ್ರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಸಮಾರಂಭದಲ್ಲಿ ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಸುಧಾ ಈರೇಶ್, ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಭವಾನಿ ಗುರು, ಪ್ರಮುಖರಾದ ಮಾಜಿ ತಾ.ಪಂ.ಸದಸ್ಯ ಕುಶಾಲಪ್ಪ, ಕೆ.ಬಿ.ಹಾಲಪ್ಪ, ಡಿ.ಬಿ.ಧರ್ಮಪ್ಪ, ಹಂಡ್ಲಿ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಚಿದಾನಂದ್, ಪ್ರಮುಖರಾದ ಎಸ್.ಎಂ.ಉಮಾಶಂಕರ್, ಜಾತ್ರಾ ಸಮೀತಿ ಕಾರ್ಯದರ್ಶಿ ಎಚ್.ಎಂ.ವಿನಯ್, ಎಚ್.ಎನ್.ಸಂದೀಪ್ ಜಾತ್ರಾ ಸಮೀತಿ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

ಗುಡುಗಳಲೆ ಜಂಕ್ಸನ್‌ನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಿಂದ ಹೊರಟ ಅಡ್ಡಪಲ್ಲಕ್ಕಿ ಮೆರವಣಿಯು ವಾದ್ಯಗೋಷ್ಠಿ, ವೀರಗಾಸೆ ಕುಣಿತದೊಂದಿಗೆ ಜಾತ್ರಾ ಮೈದಾನವನ್ನು ತಲುಪಿತು.

Continue Reading

Trending

error: Content is protected !!