Connect with us

Hassan

ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ನೀಡದಿದ್ರೆ ಬೆಂಗಳೂರಿನಲ್ಲಿ ಉಪವಾಸ ಸತ್ಯಗ್ರಹ ಸಿ.ಎಸ್. ನಾಗೇಶ್ ಎಚ್ಚರಿಕೆ

Published

on

ಹಾಸನ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ನೀಡದಿದ್ದರೇ ೨೦೨೪ ಮಾರ್ಚ್ ೬ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟವಧಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಸ್. ನಾಗೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಅಡಿಯಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ,ಶ್ರೀ ಮತಿ ಇಂದಿರಾ ಗಾಂಧಿ, ಆಟಲ್ ಬಿಹಾರಿ ವಾಜಪೇಯಿ, ಮಹಾತ್ಮ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ಇತರೆ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು, ಉಪನ್ಯಾಸಕರು, ಹಾಗೂ ಇತರೆ ಸಿಬ್ಬಂದಿಗಳಿಗೆ ತಮ್ಮ ಕೆಲಸಕ್ಕೆ ಯಾವುದೇ ಭದ್ರತೆ ಇರುವುದಿಲ್ಲ. ಈ ವಸತಿ ಶಾಲೆಗಳಲ್ಲಿ ಸರಿಸುಮಾರು ೨೧೦೦ ಕ್ಯೂಅಥಿಕ ಹುದ್ದೆಗಳು ಖಾಲಿ ಇದ್ದು, ಅಷ್ಟೂ ಸ್ಥಾನದಲ್ಲಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳು ಸಮಾಜ. ಕಲ್ಯಾಣ ಇಲಾಖೆ ಕೊಡುವ ಗೌರವ ಧನದಲ್ಲಿ ಕಾಯಂ ಶಿಕ್ಷಕರುಗಳಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು. ನಮ್ಮ ವೇತನವೆಷ್ಟು, ನಮ್ಮ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ಸುಮಾರು ಎರಡರಿಂದ ೧೪ ವರ್ಷಗಳವರೆಗೆ ಇದೇ ವಸತಿ ಶಾಲಾ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಸಮಸ್ಯೆಯನ್ನು ಕೇಳುವವರು ಯಾರು. ಸಮಾನ ಕೆಲಸಕ್ಕೆ ಸಮಾನ ವೇತನ ಎನ್ನುವ ನ್ಯಾಯಾಲಯ ದ ಆದೇಶವನ್ನು ಕೂಡ ಪಾಲಿಸದ ವಸತಿ ಶಿಕ್ಷಣ ಇಲಾಖೆ ವೇತನ ದಲೂ ಕೂಡ ತಾರತಮ್ಯ ಮಾಡುತ್ತಿದೆ, ಪ್ರತಿವರ್ಷವು ನಾವುಗಳು ಹತ್ತನೇ ತರಗತಿ ಪರೀಕ್ಷೆಯಲಿ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ನೀಡಿದರು ನಮ್ಮ ವೇತನ ಗಣನೆಗೆ ಬರುವುದಿಲ್ಲ. ಬೇಸತ್ತು ಸುಮಾರು ೪೫೦ ಜನ ಶಿಕ್ಷಕರು ಉಪನ್ಯಾಸಕರು ಹಾಗು ಇತರೆ ಸಿಬ್ಬಂದಿಗಳು ನ್ಯಾಯಾಲಯದ ಮೊರೆ ಹೋಗಿದ್ದು, ನಮಗೆ ಭದ್ರತೆ ನೀಡಲು ಕೋರಿದ್ದೇವೆ. ಘನ ನ್ಯಾಯಾಲಯವು ಕೂಡ ನಮ್ಮನ್ನು ಮುಂದಿನ ನೇಮಕಾತಿ ನಡೆಯುವವರೆಗೂ ಮುಂದುವರೆಸುವಂತೆ ಆದೇಶ ನೀಡಿರುತ್ತದೆ, ಆದರೂ ಕೂಡ ಕೆಲವೆಡೆ ಪ್ರಾಂಶುಪಾಲರು, ಅಧಿಕಾರಿಗಳು, ತಮ್ಮ ಪ್ರಭಾವವನ್ನು ಬಳಸಿಕೊಂಡು ಇರುವ ಅತಿಥಿ ಶಿಕ್ಷಕರನ್ನು ಕೆಲಸದಿಂದ ಬಿಡಿಸಿ ತಮಗೆ ಬೇಕಾದವರನ್ನು ಕೆಲಸಕ್ಕೆ ನೇಮಿಸಿಕೊಳ್ಳುತ್ತಿದ್ದು, ಇದು ಕಾನೂನು ಉಲಂಘನೆ ಮಾಡಿರುತ್ತಾರೆ ಎಂದು ದೂರಿದರು. ಪ್ರಮುಖ ಬೇಡಿಕೆಗಳೆಂದರೇ ರಾಜ್ಯದ ವಸತಿ ಶಾಲೆಗಳಲ್ಲಿ ಸಾಕಷ್ಟು ಖಾಲಿ ಹುದ್ದೆಗಳಿದ್ದು ಹೊಸ ನೇಮಕಾತಿಗೆ ಅವಕಾಶವನ್ನು ಮಾಡಿಕೊಡಬೇಕು. ನಾವುಗಳೂ ಕೂಡ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ಮತ್ತು ಇತರೆ ಸಿಬ್ಬಂದಿಗಳು ಸಾಕಷ್ಟು ವರ್ಷಗಳಿಂದ ಅಲ್ಲ ವೇತನಕ್ಕೆ ಕೆಲಸ ಮಾಡಿದ್ದೇವೆ. ಆದ ಕಾರಣ ನಮಗೆ ಪರೀಕ್ಷೆಯಲಿ ನಮಗೆ ಸೇವಾಧಾರದ ಮೇಲೆ ಕೃಪಾಂಕವನ್ನು ನೀಡಬೇಕು.

ನಮಗೆ ಈಗಿನ ಕಾಲದಲ್ಲಿ ಈ ವೇತನದಿಂದ ಕುಟುಂಬ ನಿರ್ವಹಣೆಗೆ ಕಷ್ಟವಾಗುತ್ತದೆ, ಆದುದರಿಂದ ನಮಗೆ ಕನಿಷ್ಠ ವೇತನ ಕಡ್ಡಾಯ ವಾಗಿ ಕೊಡಬೇಕು ಎಂದು ಒತ್ತಾಯಿಸಿದರು. ನಾವು ಕೂಡ ಕಾಯಂ ಶಿಕ್ಷಕರ ಬದಲಿಗೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಆ ಸ್ಥಾನದಲಿ ನಾವುಗಳಿರುತ್ತೆವೆ ನಮಗೂ ಕೂಡ ವಸತಿ ಶಾಲೆಯ ಶಿಕ್ಷಕರ ವಸತಿಗೃಹಗಳಲ್ಲಿ ಉಳಿದು ಕೊಳ್ಳಲು ಅವಕಾಶವನ್ನು ನೀಡಬೇಕು.

ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿರುವ ಅತಿಥಿ ಶಿಕ್ಷಕರು ಉಪನ್ಯಾಸಕರು ಮತ್ತು ಇತರೆ ಸಿಬ್ಬಂದಿಗಳ ಸ್ಥಳಗಳಿಗೆ ಕಾಯಂ ಸಿಬ್ಬಂದಿಗಳ ವರ್ಗಾವಣೆ ಕೊಡ ಬಾರದು. ಸಾಕಷ್ಟು ಸ್ಥಳಗಳು ಖಾಲಿ ಇರುವ ಕಾರಣ ಅಲ್ಲಿನ ಸ್ಥಳಗಳಿಗೆ ವರ್ಗಾವಣೆಯನ್ನು ಕೊಡಬೇಕು ಎಂದರು.

ಕಾಯಂ ಶಿಕ್ಷಕರಂತೆ ನಾವು ಕೂಡ ಶಾಲಾ ಕಾಲೇಜುಗಳಲ್ಲಿ ಎಲ್ಲಾ ಕೆಲಸಗಳನ್ನು ಸಮಾನವಾಗಿ ಮಾಡುತ್ತೇವೆ. ನಮ್ಮನ್ನು ಕೆಲಸದಿಂದ ತೆಗೆಯದಿರಲು ಆದೇಶ ವಿರುವ ಕಾರಣ ನಮಗೆ ೧೨ ತಿಂಗಳ ವೇತನ ನೀಡಬೇಕು. ಸಾಕಷ್ಟು ಬಾರಿ ಮೇಲಿನ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಮನವಿ ಮಾಡಿದರು ಸ್ಪಂದಿಸದ ಕಾರಣ ೨೦೨೪ ಮಾರ್ಚ್ ೬ ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಬೇಡಿಕೆಗಳು ಈಡೇರುವವರೆಗೂ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಯಾರು ಆತಂಕಪಡಬೇಕಾಗಿಲ್ಲ ಕಾಲವೇ ಉತ್ತರ ಕೊಡಲಿದೆ ಜೆಡಿಎಸ್ ಕಾರ್ಯಕರ್ತರಿಗೆ ದೈರ್ಯ ತುಂಬಿದ ಹೆಚ್.ಡಿ. ರೇವಣ್ಣ

Published

on

ಹಾಸನ : ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ನಮ್ಮ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ದೈರ್ಯ ತುಂಬಿದರು.

ನಗರದ ಕುವೆಂಪು ಬಡಾವಣೆಯಲ್ಲಿರುವ ಡಿ.ಟಿ. ಪರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡುವುದಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡ್ತಿವಿ, ೪೮ ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ಮಾಡಿದ ವಿಚಾರವಾಗಿ ಮಾತನಾಡಿ, ಕೋರ್ಟ್‌ನಲ್ಲಿ ಕೇಸ್ ಇದ್ದಾಗ ನಾನು ಮಾತನಾಡುವುದಿಲ್ಲ. ಹೇಸಿಗೆಯಂತಹ ವಿಚಾರವವು ರಾಜ್ಯಕ್ಕೆ, ನಮಗೆ ಗೌರವ ತಂದುಕೊಡುವುದಿಲ್ಲ. ಈ ವಿಚಾರವನ್ನು ರಾಜಕೀಯವಾಗಿ ತೆಗದುಕೊಂಡು ಹೋಗಲಾಗುತ್ತಿದೆ. ಈದಕ್ಕೆಲ್ಲಾ ಮೂಲ ಯಾರಿದ್ದಾರೆ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಲಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿದರು. ತಮ್ಮ ಮೇಲೆ ಎರಡು ಪ್ರಕರಣ ದಾಖಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರೇವಣ್ಣ ಅವರು, ಯಾರು ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕು ಅಷ್ಟೇ. ನಮ್ಮ ಜಿಲ್ಲೆಯ ಜನರನ್ನು ಅರವತ್ತು ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನೀದ್ದೀನಿ, ಎ.ಮಂಜು, ಸ್ವರೂಪ್ ಪ್ರಕಾಶ್ ಇದ್ದಾರೆ. ಕಾರ್ಯಕರ್ತರು ಯಾರು ಭಯಪಡುವ, ಆತಂಕಪಡುವ ಅಗತ್ಯವಿಲ್ಲ. ನನಗೂ ಜಿಲ್ಲೆಯ ಜನ ಇಪ್ಪತ್ತೈದು ವರ್ಷ ಆಶೀರ್ವಾದ ಮಾಡಿದ್ದಾರೆ ಎಂದು ಕಾರ್ಯಕರ್ತರಿಗೆ ದೈರ್ಯ ತುಂಬಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷ ಆಗಿದ್ದು, ಈ ಸರ್ಕಾರದ ವೇಳೆ ಯಾವುದಾದರೂ ರಸ್ತೆ ಗುಂಡಿ ಮುಚ್ಚಿಲ್ಲ. ಶಿಕ್ಷಕರ ಹುದ್ದೆ ಭರ್ತಿ ಮಾಡಿಲ್ಲ. ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದರು. ರಾಜ್ಯ ಸರ್ಕಾರದ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲಾ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಡಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು. ನಮ್ಮ ಆಡಳಿತದಲ್ಲಿ ನಾವು ಶಾಲಾ, ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟು ತೋರಿಸಿದ್ದೇವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈ ಬಾರಿ ಹದಿನೈದನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈ ರೀತಿಯಾಗಲೂ ಕಾರಣ ಯಾರು ಕಾರಣ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರೆ ಅದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾತ್ರ. ಕುಮಾರಸ್ವಾಮಿ ಆಡಳಿತದಲ್ಲಿ ರಾಜ್ಯದಲ್ಲಿ ೧೫೦೦ ಹೈಸ್ಕೂಲ್, ೨೪೦ ಪ್ರಥಮ ದರ್ಜೆ ಕಾಲೇಜು ತೆರೆದರು. ಖಾಲಿ ಇದ್ದ ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಎಚ್.ಡಿ.ಕುಮಾರಸ್ವಾಮಿ ಎಂದರು. ಐವತ್ತು ವರ್ಷ ಆಡಳಿತದ ಕಾಂಗ್ರೆಸ್ ಕೈಯಲ್ಲೂ ಆಗಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ಇಡೀ ಇಂಡಿಯಾ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು. ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆ ಮಾಡಿಲ್ಲ. ಆದರೇ ಶಿಕ್ಷಕರ ಮಕ್ಕಳಿಗೆ ಉದ್ಯೋಗದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಕೊಡಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಸನ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ಅರಕಲಗೂಡು ಶಾಸಕ ಎ. ಮಂಜು.ಸ್ವರೂಪ ಪ್ರಕಾಶ್. ಮಾಜಿ ಸಚಿವರಾದ ಎಚ್.ಕೆ. ಕುಮಾರಸ್ವಾಮಿ. ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಿವೇಕಾನಂದ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!