State
ಆತ್ಮಸಾಕ್ಷಿ ಅಡ್ಡಮತದ ಜನಕ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ನೀಲಂ ಸಂಜೀವ ರೆಡ್ಡಿ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಅನ್ನು ಕುಟುಕಿದ ಮಾಜಿ ಮುಖ್ಯಮಂತ್ರಿ
ನಮ್ಮ ಶಾಸಕರಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದ ಕಾಂಗ್ರೆಸ್ ನಾಯಕರು; ಹೆಚ್ಡಿಕೆ ಗಂಭೀರ ಆರೋಪ
*
ಬೆಂಗಳೂರು: ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಮಾಡಿಸಿದ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು; ಆತ್ಮಸಾಕ್ಷಿ ಮತದಿಂದ ಅಲ್ಲ, ಅಡ್ಡ ಮತದಾನದಿಂದ ಕಾಂಗ್ರೆಸ್ ಪಕ್ಷವು ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಇದು ಪ್ರಜಾಪ್ರಭುತ್ವ, ಸಂವಿಧಾನ ಎಂದೆಲ್ಲ ಭಜನೆ ಮಾಡುವ ಪಕ್ಷ ಮಾಡುವ ಕೆಲಸವೇ ಎಂದು ಕೇಳಿದರು.
ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ:
ಆತ್ಮಸಾಕ್ಷಿ ಮತ ಎನ್ನುವ ಪದವನ್ನು ದೇಶದಲ್ಲಿ ಮೊದಲು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ ಎಂದೇ ಅರ್ಥ. 1969ರಲ್ಲಿ ಅಂದಿನ ಪ್ರಧಾನಿಗಳಾದ ಇಂದಿರಾಗಾಂಧಿ ಅವರು ತಮ್ಮ ಕೈಗೊಂಬೆ ರಾಷ್ಟ್ರಪತಿ ಬೇಕೆಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದ ನೀಲಂ ಸಂಜೀವರೆಡ್ಡಿ ಅವರ ವಿರುದ್ಧ ವಿ.ವಿ.ಗಿರಿ ಅವರನ್ನು ಕಣಕ್ಕೆ ಇಳಿಸಿ ಆತ್ಮಸಾಕ್ಷಿ ಮತ ಹಾಕುವಂತೆ ಕರೆ ನೀಡಿದ್ದರು. ಅಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ನೀಲಂ ಸಂಜೀವರೆಡ್ಡಿ ಅವರು ಆತ್ಮಸಾಕ್ಷಿ ಅಲಿಯಾಸ್ ಅಡ್ಡಮತಗಳಿಂದ ಸೋತರು. ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ನಾವು ಮತ್ತಷ್ಟು ಗಟ್ಟಿಯಾಗಿದ್ದೇವೆ:
ರಾಜ್ಯಸಭೆ ಚುನಾವಣೆಯ ಮೂಲಕ ಜೆಡಿಎಸ್-ಬಿಜೆಪಿ ಮೈತ್ರಿ ಮತ್ತಷ್ಟು ಬಲವಾಗಿದೆ. ಪ್ರಜಾಪ್ರಭುತ್ವ ದ್ರೋಹಿಗಳು, ಸಂವಿಧಾನ ದ್ರೋಹಿಗಳು ಯಾರು? ಎಂಬುದು ಜಗಾಜ್ಜಾಹೀರಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿಗೆ ಹಾರಿ ಅಲ್ಲಿ ಅಧಿಕಾರ ಅನುಭವಿಸಿದವರು ಈಗ ಅದೇ ಬಿಜೆಪಿಗೆ ಟೋಪಿ ಹಾಕಿ ಅಡ್ಡ ಮತದಾನ ಮಾಡಿ ದ್ರೋಹ ಎಸಗಿದ್ದಾರೆ. ಅವರು ಏಳೆಂಟು ತಿಂಗಳಿಂದ ಏನೇನು ಮಾಡುತ್ತಿದ್ದರು ಎಂದು ಮಾಧ್ಯಮಗಳೇ ತೋರಿಸಿವೆ. ಇದರಿಂದ ಬಿಜೆಪಿಗೇನೂ ಶಾಕ್ ಆಗಿಲ್ಲ, ನನಗೂ ಆಗಿಲ್ಲ. ಈ ಚುನಾವಣೆ ಇರಲಿ, ಲೋಕಸಭೆ ಚುನಾವಣೆಯಲ್ಲಿ ಅಸಲಿ ಆಟವಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಜೆಡಿಎಸ್ ಪಕ್ಷದ 19 ಶಾಸಕರು ಒಟ್ಟಾಗಿದ್ದೇವೆ. ಎಲ್ಲರೂ ಬಂದು ಮೈತ್ರಿಕೂಟದ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ್ದಾರೆ. ನಮ್ಮ ಶಾಸಕರನ್ನು ಸೆಳೆಯುವ ಕಾಂಗ್ರೆಸ್ ತಂತ್ರ ಫಲಿಸಲಿಲ್ಲ ಎಂದು ಅವರು ಹೇಳಿದರು.
ಅಷ್ಟೇ ಅಲ್ಲದೆ, ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನಮ್ಮ ಅಭ್ಯರ್ಥಿಯನ್ನು ಹೆದರಿಸುವ, ಅವರ ವಿರುದ್ಧ FIR ಹಾಕಿಸುವ ರಣಹೇಡಿ ಕೆಲಸವನ್ನೂ ಮಾಡಿದ್ದಾರೆ. ಜತೆಗೆ, ಈ ಸರಕಾರ ಬಂದಾಗಿನಿಂದ ಜೆಡಿಎಸ್ ಪಕ್ಷದ 12 ಕ್ಕೂ ಹೆಚ್ಚು ಶಾಸಕರು ತಮ್ಮ ಕಡೆ ಬಂದು ಬಿಟ್ಟಿದ್ದಾರೆ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದರು. ನಮ್ಮ ಶಾಸಕರು ಕ್ಷೇತ್ರದ ಕೆಲಸಕ್ಕಾಗಿ ಪತ್ರ ತೆಗೆದುಕೊಂಡು ಹೋದರೆ, “ನೋಡಿ ನೀವು ಈಗ ಹದಿಮೂರನೇಯವರು. ನಮ್ಮ ಪಕ್ಷಕ್ಕೆ ಬಂದರೆ ನಿಮ್ಮ ಕೆಲಸಗಳೆಲ್ಲಾ ಆಗುತ್ತವೆ. ಆಲೋಚನೆ ಮಾಡಿ” ಎಂದು ಕಳೆದ ಏಳು ತಿಂಗಳಿಂದ ಆಮಿಷ ಒಡ್ದುತ್ತಲೇ ಇದ್ದಾರೆ ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಮೈತ್ರಿ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ ಎರಡೂ ಪಕ್ಷಗಳ ಶಾಸಕರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸಿದ ಮಾಜಿ ಮುಖ್ಯಮಂತ್ರಿಗಳು; ಕಾಂಗ್ರೆಸ್ ಪಕ್ಷದ ಧಮ್ಕಿ ರಾಜಕಾರಣವನ್ನು ನಮ್ಮ ಶಾಸಕರು ಸಡ್ಡು ಹೊಡೆದು ನಿಂತಿದ್ದಾರೆ. ಅವರು ಒಡ್ಡಿದ್ದ ಆಮಿಷಗಳನ್ನು ಕಾಲ ಕಸದಂತೆ ತಿರಸ್ಕರಿಸಿದ್ದಾರೆ ಎಂದು ಹೇಳಿದರು.
ಶಾಸಕ ಶರಣುಗೌಡ ಕಂದಕೂರ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಅವರು; ಕಂದಕೂರ ಕುಟುಂಬ ಕಳೆದ ನಲವತ್ತು ವರ್ಷಗಳಿಂದ ಪಕ್ಷಕ್ಕೆ ನಿಷ್ಠವಾಗಿದೆ. ನಾಗನಗೌಡ ಕಂದಕೂರ ಅವರು ದೇವೆಗೌಡರ ಒಡನಾಡಿ. ಅವರಿಬ್ಬರ ಸಂಬಂಧ ಎಂಥದ್ದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಶರಣುಗೌಡ ಕಂದಕೂರ ನನ್ನದು ತಂದೆ ಮಗನ ಬಾಂಧವ್ಯ. ಅವರ ಮನಸ್ಸು ನನಗೆ ಗೊತ್ತಿಲ್ಲವೇ? ಎಂದರು.
Special
Kisan Tractor Yojana : ಸರ್ಕಾರದಿಂದ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್
ರೈತರ ಕೃಷಿ ಕೆಲಸವನ್ನು ಸುಲಭಗೊಳಿಸುವ ಹಾಗೂ ಯಾಂತ್ರೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು Kisan Tractor Yojana ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಹೊಸ ಟ್ರಾಕ್ಟರ್ ಖರೀದಿಗೆ ಶೇಕಡಾ 50ರಷ್ಟು ಸಹಾಯಧನ (ಸಬ್ಸಿಡಿ) ನೀಡಲಾಗುತ್ತದೆ. ಇದರಿಂದ ಕಡಿಮೆ ಆದಾಯ ಹೊಂದಿರುವ ಸಣ್ಣ ಹಾಗೂ ಅಲ್ಪಭೂಧರ ರೈತರು ಕೂಡ ಆಧುನಿಕ ಟ್ರಾಕ್ಟರ್‌ಗಳನ್ನು ಖರೀದಿಸಲು ಸಾಧ್ಯವಾಗುತ್ತದೆ.
ಯೋಜನೆಯ ಉದ್ದೇಶ:
ಈ ಯೋಜನೆಯ ಮುಖ್ಯ ಉದ್ದೇಶ ಕೃಷಿಯಲ್ಲಿ ಮಾನವ ಶ್ರಮದ ಅವಲಂಬನೆಯನ್ನು ಕಡಿಮೆ ಮಾಡಿ, ಉತ್ಪಾದಕತೆಯನ್ನು ಹೆಚ್ಚಿಸುವುದಾಗಿದೆ. ಟ್ರಾಕ್ಟರ್ ಬಳಕೆಯಿಂದ ಬಿತ್ತನೆ, ಹೊಲ ಉಳುವುದು,ಸಾಗಣೆ ಮುಂತಾದ ಕೆಲಸಗಳು ವೇಗವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಮುಗಿಯುತ್ತವೆ. ಇದರಿಂದ ರೈತರ ಸಮಯವೂ ಉಳಿಯುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
1. ಅರ್ಜಿದಾರರು ಭಾರತೀಯ ನಾಗರಿಕರಾಗಿರಬೇಕು.
2. ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
3. ಒಂದು ಕುಟುಂಬಕ್ಕೆ ಒಂದೇ ಸಬ್ಸಿಡಿ.
4. ಈ ಹಿಂದೆ ಯಾವುದೇ ಟ್ರ್ಯಾಕ್ಟರ್‌ನ ಸಬ್ಸಿಡಿ ಪಡೆದಿರಬಾರದು.
5. ಅರ್ಜಿದಾರರು ಮೂಲ ಭೂ ದಾಖಲೆಗಳನ್ನು ಹೊಂದಿರಬೇಕು.

ಅಗತ್ಯ ದಾಖಲೆಗಳು:
1. ಆಧಾರ್ ಕಾರ್ಡ್
2. ಭೂಮಿ ದಾಖಲೆ (RTC / ಪಹಣಿ)
3. ಬ್ಯಾಂಕ್ ಪಾಸ್‌ಬುಕ್
ಪಾಸ್‌ಪೋರ್ಟ್ ಗಾತ್ರದ ಫೋಟೋ
ಅರ್ಜಿಸುವ ವಿಧಾನ:
ರೈತರು ಈ ಅರ್ಜಿಯನ್ನು ಆನ್‌ಲೈನ್ ಅಥವಾ ಆಫ್ ಲೈನ್ ಮೂಲಕ ಸಲ್ಲಿಸಬಹುದು. ಮೊದಲು,ಕೃಷಿ ಯಾಂತ್ರಿಕರಣ ಪೋರ್ಟಲ್ agrimachinery.nic.in ಗೆ ಭೇಟಿ ನೀಡಿ, ಅಗತ್ಯ ಮಾಹಿತಿಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಿ.
ಆಫ್ ಲೈನ್ ನಲ್ಲಿ, ಸಮೀಪದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Kisan Tractor Yojana ರೈತರ ಬದುಕಿಗೆ ಬದಲಾವಣೆ ತರುವಂತಹ ಮಹತ್ವದ ಯೋಜನೆಯಾಗಿದ್ದು, ಹೆಚ್ಚಿನ ವೆಚ್ಚದ ಟ್ರ್ಯಾಕ್ಟರ್ ಖರೀದಿಸಲು ಹಿಂಜರಿಯುತ್ತಿದ್ದ ರೈತರಿಗೆ ಇದೊಂದು ಸದವಕಾಶವಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕು.
National
ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ
ನವದೆಹಲಿ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

ಈ ವೇಳೆ ರಾಜ್ಯದ ಹಲವು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.
ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಹೇಳಿದ್ದಾರೆ.
ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.
ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದ್ದಾರೆ.
State
ಸಂಸತ್ತಿನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ಆತಂಕಕಾರಿ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂಸತ್ತಿನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆಯವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಪುಸ್ತಕದಲ್ಲಿನ ವಿಷಯಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಭದ್ರತೆಯ ಕುರಿತು ಕೆಲವು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು. ಈ ಪುಸ್ತಕವು 2024ರಲ್ಲೇ ಬಿಡುಗಡೆಯಾಗಬೇಕಿತ್ತು, ಆದರೆ ಕೇಂದ್ರ ಸರ್ಕಾರ ಇದರ ಬಿಡುಗಡೆಗೆ ತಡೆಯೊಡ್ಡಿರುವ ಕಾರಣಕ್ಕೆ ಇನ್ನೂ ಪ್ರಕಟವಾಗಿಲ್ಲ. ಇತ್ತೀಚಿನ ಕಾರವಾನ್ ಮ್ಯಾಗಜೀನ್‌ನ ಲೇಖನದಲ್ಲಿ ಈ ಪುಸ್ತಕದ ಕೆಲವು ಬರಹಗಳನ್ನು ಉಲ್ಲೇಖಿಸಲಾಗಿದೆ ಎಂದಿದ್ದಾರೆ.

ಜನರಲ್ ನರವಣೆಯವರು ಕಾರವಾನ್ ನ ಲೇಖನದಲ್ಲಿ ಪ್ರಕಟಗೊಂಡಿರುವ ವಿಚಾರಗಳು ತಮ್ಮದಲ್ಲ ಎಂದು ಅಲ್ಲಗಳೆದಿಲ್ಲ. ಬದಲಿಗೆ, ತಮ್ಮ ಪುಸ್ತಕ ಬಿಡುಗೆಯಾಗಲು ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇನೆ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ನರವಣೆಯವರ ಬರಹಗಳಲ್ಲಿ ತಪ್ಪುಗಳಿದ್ದರೆ ಅಥವಾ ಅಸತ್ಯದಿಂದ ಕೂಡಿದ್ದರೆ ಕೇಂದ್ರ ಸರ್ಕಾರವು ಪುಸ್ತಕದ ಪ್ರಕಟಣೆಗೆ ಅನುಮತಿ ನೀಡಬಾರದಿತ್ತು. ಆದರೆ ಕೇಂದ್ರ ಸರ್ಕಾರದ ಮೌನವು ನರವಣೆ ಅವರು ಹೇಳಲು ಹೊರಟಿರುವ ಸತ್ಯವನ್ನು ಅಡಗಿಸುವ ದುಷ್ಟ ಆಲೋಚನೆಯಿಂದ ಕೂಡಿದೆ ಎಂಬುದನ್ನು ತೋರುತ್ತದೆ ಎಂದು ಕೇಂದ್ರದ ನಡೆಯನ್ನು ವ್ಯಂಗ್ಯ ಮಾಡಿದ್ದಾರೆ.
2020ರಲ್ಲಿ ಚೀನಾ ಗಡಿಯಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ದಿಟ್ಟ ಹಾಗೂ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಲು ವಿಫಲವಾಯಿತು ಎನ್ನುವ ಮಾಹಿತಿ ಈ ಪುಸ್ತಕದಲ್ಲಿದೆ. ಸರ್ಕಾರದ ಈ ದ್ವಂದ್ವ ನಿಲುವಿನಿಂದ ಸೇನಾಪಡೆಗಳು ಎರಡು ರಾಷ್ಟ್ರಗಳ ನಡುವಿನ ರಾಜಕೀಯ ಸಂದಿಗ್ಧತೆಯನ್ನು ಕೂಡ ನಿಭಾಯಿಸಬೇಕಾಯಿತು. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿನ ರಾಜಕೀಯ ನಾಯಕತ್ವದ ವೈಫಲ್ಯ ಮತ್ತು ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರಗಳಲ್ಲಿ ಸ್ಪಷ್ಟ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಇರುವ ಅಸಾಮರ್ಥ್ಯವನ್ನು ತೋರಿಸುತ್ತದೆ. ಇಂತಹ ವಿಷಯಗಳು ಸಂಸತ್ತಿನಲ್ಲಿ ಚರ್ಚೆಗೆ ಒಳಪಡಬೇಕು ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಆರೋಪ ಮಾಡಿದ್ದಾರೆ.
ಜನರ ಪರವಾಗಿ ಪ್ರಶ್ನೆಗಳನ್ನು ಕೇಳುವುದು ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಯವರ ಕರ್ತವ್ಯವಾಗಿದೆ. ಅದನ್ನು ಅವರು ಮಾಡಿದ್ದಾರೆ. ರಾಹುಲ್ ಗಾಂಧಿಯವರು ಭಾರತದ ಅಥವಾ ನಮ್ಮ ಸೇನಾಪಡೆಗಳ ವಿರುದ್ಧ ಮಾತನಾಡಿಲ್ಲ. ಹೀಗಿದ್ದರೂ ಅವರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು, ಸತತ ಎರಡು ದಿನಗಳ ಕಾಲ ಸಂಸತ್ತನ್ನು ಸ್ಥಗಿತಗೊಳಿಸಿ, ಎಂಟು ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಿ ಮತ್ತು ರಾಷ್ಟ್ರಪತಿಯ ಭಾಷಣದ ಮೇಲೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವನ್ನೇ ನಿರಾಕರಿಸಿರುವುದು ಪ್ರಜಾಪ್ರಭುತ್ವದ ಕತ್ತು ಹಿಸುಕಿದ ಕ್ರಮವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ರಾಜಕೀಯ ಪರಿಣಾಮಗಳನ್ನು ಎದುರಿಸುವ ಬದ್ಧತೆಯನ್ನು ತೋರ್ಪಡಿಸುವಂತಿರಬೇಕು. ಆದರೆ ಮೋದಿ ಸರ್ಕಾರವು ಒತ್ತಡ ತಂತ್ರದ ಮೂಲಕ ಎದುರಾಳಿಗಳ ಧ್ವನಿಯನ್ನೇ ಹತ್ತಿಕ್ಕಲು ಹೊರಟಿದೆ. ಇಲ್ಲಿ ಜನರಿಂದ ಮುಚ್ಚಿಡುವಂತಹ ವಿಷಯಗಳು ಇಲ್ಲದಿದ್ದರೆ ಚರ್ಚೆಯನ್ನು ನಿರಾಕರಿಸುತ್ತಿರುವುದು ಯಾಕೆ? ರಾಷ್ಟ್ರೀಯ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದ್ದರೆ, ಸಂಸತ್ತಿನ ಪರಾಮರ್ಶೆಗೆ ಒಳಪಡಲು ಯಾಕೆ ಭಯ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ದೇಶ ಮೊದಲು, ಧರ್ಮ ಮೊದಲು ಇವೆಲ್ಲ ಬೊಗಳೆ ಭಾಷಣದ ಸರಕುಗಳಷ್ಟೆ. ಮೌನ, ಪಲಾಯನ ಮತ್ತು ಶರಣಾಗತಿಗಳನ್ನು ಸಂಘಪರಿವಾರ ಬಿಜೆಪಿ ನಾಯಕರಿಗೆ ಧಾರೆಯೆರೆದು ಕಳಿಸಿದೆ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಟೀಕಿಸಿದ್ದಾರೆ.
-
Politics10 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu16 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu16 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Hassan8 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Hassan13 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
National12 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Chamarajanagar12 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore12 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
