Kodagu
ಕುಶಾಲನಗರದಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ : ಪ್ರತಿಭಟನೆ
ಕುಶಾಲನಗರ : ಸುಂಟಿಕೊಪ್ಪ ಸಮೀಪದ ಹೇರೂರು ಗಿರಿಜನ ಹಾಡಿಯಲ್ಲಿ ಅಕ್ರಮ ಮತಾಂತರದ ಆರೋಪದಲ್ಲಿ ನಡೆದ ಪ್ರತಿಭಟನೆಯ ನೆನಪು ಹಸಿರಾಗಿರುವಾಗಲೇ ಕುಶಾಲನಗರದಲ್ಲೂ ಇಂಥದ್ದೇ ಘಟನೆ ನಡೆದಿದೆ.
ಪ್ರಾರ್ಥನೆ ಹೆಸರಿನಲ್ಲಿ ಹಿಂದೂಗಳನ್ನು ಅನಧಿಕೃತವಾಗಿ ಸೇರಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಆರೋಪದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿನ ಕೋಣ ಮಾರಿಯಮ್ಮ ದೇವಾಲಯದ ಬಳಿಯ ಖಾಸಗಿ ಸಭಾಂಗಣದಲ್ಲಿ ಸುಮಾರು 100-120 ಮಂದಿ ಸೇರಿಕೊಂಡು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ಮೂಲಕ ಅಕ್ರಮ ಮತಾಂತರಕ್ಕೆ ಪ್ರೇರೇಪಣೆ ನೀಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಬಗ್ಗೆ ತನಿಖೆ ನಡೆಸಬೇಕು. ಅಕ್ರಮ ಮತಾಂತರ ನಡೆದಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಘಟನೆಯ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಎರಡೂ ಕಡೆಯವರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.
ಕಳೆದ ಕೆಲವು ವರ್ಷಗಳಿಂದ ಪ್ರತಿ ಭಾನುವಾರ ಇಲ್ಲಿ ಪ್ರಾರ್ಥನೆ ನೆಪದಲ್ಲಿ ಹಿಂದೂಗಳನ್ನು ಸೇರಿಸಿ ಮತಾಂತರಕ್ಕೆ ಪ್ರೇರೇಪಿಸುವ ಕೆಲಸ ನಡೆಯುತ್ತಿದೆ. ಇಲ್ಲಿಗೆ ಸ್ಥಳೀಯರಿಗಿಂತ ಹೆಚ್ಚಾಗಿ ಪಕ್ಕದ ಜಿಲ್ಲೆಗಳಿಂದ ಜನರು ಬರುತ್ತಿದ್ದಾರೆ. ಈ ಭಾನುವಾರವೂ ಪಕ್ಕದ ಜಿಲ್ಲೆಗಳ ಸಾಕಷ್ಟು ಜನರು ಸೇರಿದ್ದರು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕಾರಿಣಿ ಸಮಿತಿ ಸದಸ್ಯ ಮಂಜು ಈ ಸಂದರ್ಭ ಹೇಳಿದರು.

ಅಕ್ರಮ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಡೆಯಿಂದ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಾಸ್ತವಾಂಶ ಪರಿಶೀಲಿಸಿ ಮುಂದಿ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹಿಂದೂ ಸಂಘಟನೆಗಳ ಮುಖಂಡರಾದ ಸುಮನ್, ಭರತ್ ಮಾಚಯ್ಯ, ಹರೀಶ್, ರಾಜೀವ್, ಪ್ರಜ್ವಲ್, ಎಂ.ಡಿ. ಕೃಷ್ಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Kodagu
ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
ಕುಶಾಲನಗರ: ಕುಶಾಲನಗರದ ಮೂಲದ ಹಿರಿಯ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕುಶಾಲನಗರದ ಪ್ರಮುಖ ಉದ್ಯಮಿ ಎಸ್.ಕೆ. ಸತೀಶ್ ಅವರ ಪುತ್ರರಾಗಿರುವ ನಕುಲ್ ಅವರು ಕೇಂದ್ರ ವಿತ್ತ ಸಚಿವರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅನುಭವ ಹೊಂದಿದ್ದಾರೆ. ಕೇಂದ್ರದಲ್ಲಿ ನೀತಿ ನಿರೂಪಣೆ ಮತ್ತು ಆರ್ಥಿಕ ವಿಚಾರಗಳಲ್ಲಿ ನಿಕಟವಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಇದಕ್ಕೂ ಮೊದಲು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಕುಲ್ ಅವರು ಪಾರದರ್ಶಕ ಆಡಳಿತ ಮತ್ತು ಜನಪರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ದಕ್ಷತೆಗೆ ಹೆಸರಾಗಿದ್ದರು. ಅವರ ಕಾರ್ಯವೈಖರಿ ಮತ್ತು ಆಡಳಿತ ಸಾಮರ್ಥ್ಯವನ್ನು ಗಮನಿಸಿಯೇ ಮುಖ್ಯಮಂತ್ರಿಗಳು ಈ ಪ್ರಮುಖ ಜವಾಬ್ದಾರಿಯನ್ನು ವಹಿಸಿದ್ದಾರೆ.
Kodagu
ಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 18.34 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 757.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1806.10 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 43.73 ಮಿ.ಮೀ. ಕಳೆದ ವರ್ಷ ಇದೇ ದಿನ 33.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1113.85 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2729.85 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 764.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1683.85 ಮಿ.ಮೀ. ಮಳೆಯಾಗಿತ್ತು.ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 781.06 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1732.46 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 799.73 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1960.22 ಮಿ.ಮೀ. ಮಳೆಯಾಗಿತ್ತು.ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 330.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 924.09 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ 27, ನಾಪೋಕ್ಲು 26.20, ಸಂಪಾಜೆ 63.50, ಭಾಗಮಂಡಲ 58.20, ವಿರಾಜಪೇಟೆ 18.80, ಅಮ್ಮತ್ತಿ 14, ಹುದಿಕೇರಿ 12.20, ಶ್ರೀಮಂಗಲ 11.20, ಪೊನ್ನಂಪೇಟೆ 15, ಬಾಳೆಲೆ 11, ಸೋಮವಾರಪೇಟೆ 21.20, ಶನಿವಾರಸಂತೆ 4, ಶಾಂತಳ್ಳಿ 30, ಕುಶಾಲನಗರ 0.80, ಸುಂಟಿಕೊಪ್ಪ 10 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.65 ಅಡಿಗಳು. ಕಳೆದ ವರ್ಷ ಇದೇ ದಿನ 2857.27 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 4.80 ಮಿ.ಮೀ., ಕಳೆದ ವರ್ಷ ಇದೇ ದಿನ 3.60 ಮಿ.ಮೀ., ಇಂದಿನ ನೀರಿನ ಒಳಹರಿವು 3898 ಕ್ಯುಸೆಕ್, ಕಳೆದ ವರ್ಷ ಇದೇ ದಿನ 5689 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 180 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 3833 ಕ್ಯುಸೆಕ್. ನಾಲೆಗೆ 500 ಕ್ಯುಸೆಕ್.
Kodagu
“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”
ಭಾಗಮಂಡಲ : ಕ್ಷಿಣ ಭಾರತದ ಜೀವನದಿ ಎಂದೇ ಖ್ಯಾತವಾಗಿರುವ ಕಾವೇರಿಯ ಸನ್ನಿಧಿ ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ 3 ಕೋಟಿ ರೂಗಳ ಬರಪೂರ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕೃಯೆ ಪೂರ್ಣಗೊಂಡು ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಹಿತಿ ಲಭ್ಯವಾಗಿದೆ.

ಮೇಲ್ಸೇತುವೆ ಆವರಣದ ಸುಧಾರಣೆಗಳು,ನೀರು ಹರಿಯುವ ಪೈಪ್ ಗಳ ಸುಧಾರಣೆ,ಮೇಲ್ಸೇತುವೆ ಕೆಳಗೆ ಕಾಂಕ್ರೀಟ್ ಕಾಮಗಾರಿ,ಕನ್ನಿಕೆ ನದಿಗೆ ಪಾದಚಾರಿ ಸೇತುವೆ,ಕಾವೇರಿ ನದಿಗೆ ಪಾದಚಾರಿ ಸೇತುವೆ ಕಾಮಗಾರಿಗಳು ಉಲ್ಲೇಖಿತ ಅನುದಾನದಲ್ಲಿ ನಡೆಯಲಿದ್ದು ಬೆಂಗಳೂರಿನ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ರೋಹಿತ್ ರವರು ಗುತ್ತಿಗೆ ಪಡೆದಿದ್ದು ,2026 ರ ಅಕ್ಟೋಬರ್ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡುವಂತೆ ನಿಗಮದ ಆದೇಶದಲ್ಲಿ ಸೂಚಿಸಲಾಗಿದೆ.
-
State5 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Hassan19 hours agoಚೆನ್ನಮ್ಮ ಅಂತ್ಯಕ್ರಿಯೆ: ಹಾಸನದಲ್ಲಿ 5 ತಾತ್ಕಾಲಿಕ ಹೆಲಿಪ್ಯಾಡ್ಗಳ ನಿರ್ಮಾಣ
-
National4 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Chikmagalur18 hours agoಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ: ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
-
Kodagu22 hours agoಭಾಗಮಂಡಲ ಮೇಲ್ಸೇತುವೆ ಮತ್ತು ಸುತ್ತಲಿನ ಅಭಿವೃದ್ಧಿಗೆ 3 ಕೋಟಿ ಅನುದಾನ
-
Kodagu17 hours ago“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”
-
Hassan2 hours agoನೀಟ್–ಜೆಇಇ ಫಲಿತಾಂಶದಲ್ಲಿ ಹೊಸ ಇತಿಹಾಸ ಬರೆದ ಪಾಠಶಾಲಾ ನೀಟ್ ಅಕಾಡೆಮಿ
-
Hassan5 hours agoಚೆನ್ನಮ್ಮ ಅಂತಿಮ ದರ್ಶನಕ್ಕೆ ಪ್ರಜ್ವಲ್ ಬರಲ್ಲ:
