Hassan
ಕರ್ತವ್ಯ ಆಪ್ ಮೂಲಕ ಹಾಜರಾತಿ ಕಡ್ಡಾಯ: ಕೆ.ಎಸ್.ಲತಾಕುಮಾರಿ
ಹಾಸನ : ಸರ್ಕಾರಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿದಿನ ಬೆಳಗ್ಗೆ ೧೦ ಗಂಟೆಗೆ ಕಚೇರಿಗೆ ಹಾಜರಾಗಿ ಕರ್ತವ್ಯ ಆಪ್ ಮೂಲಕ ಹಾಜರಾತಿ ಕಡ್ಡಾಯವಾಗಿ ಹಾಕಬೇಕು ಜೊತೆಗೆ ಕೇಂದ್ರ ಸ್ಥಾನದಲ್ಲಿ ವಾಸವಿರಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸೂಚಿಸಿದ್ದಾರೆ.
ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ನೀಡಿದ ನಿರ್ದೇಶನದಂತೆ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಯವರು ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಲಂಚ ಮುಕ್ತ ಕಚೇರಿ ಎಂದು ಫಲಕ ಅಳವಡಿಸುವುದರ ಜೊತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಮೊಬೈಲ್ ನಂಬರ್ ಹಾಕಬೇಕು ಎಂದರಲ್ಲದೆ, ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಮಾಹೆಯ ಮೊದಲ ಶನಿವಾರ ತಾಲ್ಲೂಕು ಮಟ್ಟದಲ್ಲಿ, ಮೂರನೇ ಶನಿವಾರ ಜಿಲ್ಲಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ ಇನ್ನೂ ಮುಂದೆ ಪ್ರತಿ ಮಾಹೆಯಲ್ಲಿ ಒಂದು ದಿನ ಗ್ರಾಮ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವ ಮೂಲಕ ಸಮಸ್ಯೆಗಳನ್ನು ಅವಲೋಕಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಲಂಚ ಮುಕ್ತ ಕಚೇರಿ ಎಂದು ಫಲಕ ಅಳವಡಿಸುವುದರ ಜೊತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಮೊಬೈಲ್ ನಂಬರ್ ಹಾಕಬೇಕು. ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಮದ್ಯಪಾನ, ಉಗುಳುವುದನ್ನು ನಿ?ಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿ?ಧಿಸಲಾಗಿದ್ದು, ಧೂಮಪಾನ ಮಾಡುವುದು ಕಂಡುಬಂದಲ್ಲಿ ದಂಡ ವಿಧಿಸುವಂತೆ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ ಮುಕ್ತ ಕಚೇರಿ ಎಂದು ಫಲಕ ಅಳವಡಿಸಲು ಸೂಚಿಸಿದರು.
ಜೂನ್ ೨೮ ರಂದು ಬೆಳಿಗ್ಗೆ ೮ ರಿಂದ ಸಂಜೆ ೫ ಗಂಟೆಯವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ವಲಸೆ ಕಾರ್ಮಿಕರು ಪತ್ತೆ ಹಚ್ಚಿ ಯಾವುದೇ ಮಗುವಿಗೂ ತಪ್ಪಿಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು, ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಸಿರು ಹಾಸನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಜೂನ್ ನಿಂದ ಆಗಸ್ಟ್ ವರೆಗೆ ಗಿಡ ನೆಟ್ಟು ಪೋಷಣೆ ಮಾಡಲು ಪ್ರತಿ ಇಲಾಖೆ ಅಧಿಕಾರಿಗಳು ಕ್ರಮವಹಿಸಲು ಸೂಚನೆ ನೀಡಿದರು.
ಸರ್ಕಾರಿ ಕಟ್ಟಡಗಳು ವಾಸಿಸಲು ಯೋಗ್ಯವಾಗಿಲ್ಲದಿರುವುದನ್ನು ಗುರುತಿಸಿ ತಾಂತ್ರಿಕವಾಗಿ ಇಂಜಿನಿಯರ್‌ಗಳು ಪರಿಶೀಲನೆ ಮಾಡಿ ಡೆಮಾಲಿಶ್ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೈಕ್ರೋ ಫೈನಾನ್ಸ್, ಚೈನ್ ಲಿಂಕ್ ಹಣಕಾಸು ವ್ಯವಹಾರ ನಡೆಸುವ ಕಂಪನಿಗಳನ್ನು ಗುರುತಿಸಿ ಅವರೊಂದಿಗೆ ಸಭೆ ನಡೆಸಿ ಜೊತೆಗೆ ಸಾರ್ವಜನಿಕರು ತೊಂದರೆಗೆ ಸಿಲುಕದಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಘನತ್ಯಾಜ್ಯವನ್ನು ಸಮರ್ಪಕ ವಿಲೇವಾರಿಗೆ. ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಬಯೋಮೇಡಿಕಲ್ ವೆಸ್ಟ್‌ಅನ್ನು ಎಲ್ಲೆಂದರಲ್ಲಿ ಹಾಕುತ್ತಿರುವುದು ಕಂಡುಬರುತ್ತಿದೆ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಮಂಟಪ, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಕಡೆಗಳಲ್ಲಿ ಬಲ್ಕ್ ಆಗಿ ಉತ್ಪಾದನೆ ಆಗುವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕಿದರೆ ವಿದ್ಯುತ್ ಕಡಿತಗೊಳಿಸುವುದರ ಜೊತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನೀವು ಪ್ರಯಾಣ ಮಾಡುವಾಗ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಬ್ಲಾಕ್ ಸ್ಪಾಟ್ ಗುರುತಿಸಿ ಅಗತ್ಯ ಕ್ರಮ ಕೈಗೊಂಡು ಅಪಘಾತ ತಡೆಯುವ ಮೂಲಕ ಸಾವಿನ ಪ್ರಮಾಣ ಕಡಿಮೆ ಮಾಡುವ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಸುರಕ್ಷತೆ ದೃಷ್ಟಿಯಿಂದ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮವಹಿಸಲು ತಿಳಿಸಿದರಲ್ಲದೆ, ಇಲಾಖೆ ವತಿಯಿಂದ ನಗರದ ಮುಖ್ಯ ವೃತ್ತಗಳಲ್ಲಿ ಎ.ಎನ್.ಪಿ.ಎಲ್ ಕ್ಯಾಮೆರಾ ಅಳವಡಿಕೆಗೆ ಕ್ರಮವಹಿಸಲು ಸೂಚನೆ ನೀಡಿದರು.
ಸೂಚನಾ ಮತ್ತು ಎಚ್ಚರಿಕೆ ಫಲಕ ಅಳವಡಿಸುವುದು, ರಿಪ್ಲೆಕ್ಟರ್ ಬಿಳಿ ಬಣ್ಣದ ಪಟ್ಟೆ ಹಾಕಿಸಲು ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಜವಾಬ್ದಾರಿಯುತವಾಗಿ ಬಸ್ ಚಾಲನೆ ಮಾಡುವಂತೆ ಬಸ್ ಚಾಲಕರಿಗೆ ತರಬೇತಿ ನೀಡಿ ನಗರ ಪ್ರದೇಶಗಳಲ್ಲಿ ವೇಗದ ಮಿತಿ ೪೦ಕ್ಕೆ ನಿಗದಿ ಪಡಿಸುವಂತೆ ಹಾಗೂ ವೃತ್ತಗಳಲ್ಲಿ ಎಚ್ಚರಿಕೆವಹಿಸಿ ಚಾಲನೆ ಮಾಡುವಂತೆ ಜೊತೆಗೆ ನಿಗದಿತ ಸ್ಥಳಗಳಲ್ಲಿ ಮಾತ್ರ ಬಸ್ ನಿಲುಗಡೆ ಮಾಡಲು ಚಾಲಕರಿಗೆ ಸೂಚಿಸುವಂತೆ ಕೆ.ಎಸ್.ಆರ್.ಟಿಸಿ ವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಪಘಾತಗಳನ್ನು ತಡೆಗಟ್ಟಿ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಟೋಗಳನ್ನು ನಿಗಧಿತ ಸ್ಥಳದಲ್ಲಿ ನಿಲುಗಡೆಗೆ ನಿಲ್ದಾಣಗಳನ್ನು ಗುರುತಿಸಿ ಎಂದರಲ್ಲದೆ, ಟ್ರಾಕ್ ನಿಲುಗಡೆಗೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಸ್ತೆ ಸುರಕ್ಷತೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಪೊಸ್ಟರ್ ಅಳವಡಿಸಿ ಎಂದು ತಿಳಿಸಿದರು.
ರಸ್ತೆ ಒತ್ತುವರಿ ತೆರವಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಡೆಸದಂತೆ ತೆರವುಗೊಳಿಸಲು ಸೂಚನೆ ನೀಡಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ಘನತ್ಯಾಜ್ಯ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳು ನಿಗಾ ವಹಿಸಿ ಅನು?ನಕ್ಕೆ ಕ್ರಮ ಕೈಗೊಳ್ಳಬೇಕು, ಅನಧಿಕೃತವಾಗಿ ರಸ್ತೆ ಬದಿಗಳಲ್ಲಿ ಕಸ ಹಾಕುವುದನ್ನು ತಡೆಯಬೇಕು ಕಸವಿದ್ದಲ್ಲಿ ತೆಗೆಸುವುದಕ್ಕೆ ಯಾವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ರಸ್ತೆಗಳು ಒಳಪಡುತ್ತದೆ ಅವರೆ ಜವಾಬ್ದಾರಿವಹಿಸಬೇಕು ಎಂದು ತಿಳಿಸಿದರು.
ಪ್ರತಿ ವಾರ್ಡ್‌ನಲ್ಲಿ ಸ್ವಚ್ಚತಾ ಸಮಿತಿಯನ್ನು ರಚಿಸಬೇಕು ಸಾರ್ವಜನಕರು ಮೂಲದಲ್ಲಿಯೇ ಕಸ ವಿಗಂಡಣೆ ಮಾಡಿ ನೀಡಲು ಕ್ರಮವಹಿಸಬೇಕು ಎಂದರು. ಸ್ವಚ್ಚತೆ ಕಾಪಾಡಲು ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿಯೂ ಬೋರ್ಡ್ ಅಳವಡಿಸಿ ಎಂದು ತಿಳಿಸಿದರು.
ಕೈಗಾರಿಕೆಗಳಿಂದ ಕೆರೆ, ಕಟ್ಟೆಗಳಿಗೆ ತ್ಯಾಜ್ಯ ನೀರು ಬಿಡುವುದರಿಂದ ನೀರು ಕಲುಷಿತಗೊಂಡು ಬಳಕೆಗೆ ಯೋಗ್ಯವಾಗಿರುವುದಿಲ್ಲ ಇಂತಹದ್ದು ಕಂಡುಬಂದರೆ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲ ಪ್ರಾರಂಭವಾಗಿದ್ದು ಬಿಳುವ ಹಂತದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವು ಗೊಳಿಸಲು ಹಾಗೂ ವಿದ್ಯುತ್ ತಂತಿಗಳನ್ನು ಸರಿಪಡಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯೋಗ ಮಹಿಳೆಯರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಪ್ರಸ್ತುತ ಲಭ್ಯವಿರುವ ಕಟ್ಟಡದಲ್ಲಿ ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿzರು
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿಧಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Hassan
ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ; ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ
ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಲೀನರಾದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಾವಿರಾರು ಜನರ ಕಂಬನಿಯ ನಡುವೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು.

ರಾಜಕೀಯದಿಂದ ಸದಾ ದೂರವಿದ್ದರೂ ದೇವೇಗೌಡ ಕುಟುಂಬದ ಬೆನ್ನೆಲುಬಾಗಿ ಗುರುತಿಸಿಕೊಂಡಿದ್ದ ಚೆನ್ನಮ್ಮ ಅವರ ಅಗಲಿಕೆ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕದ ಛಾಯೆ ಮೂಡಿಸಿತು. ಅಂತಿಮ ದರ್ಶನಕ್ಕಾಗಿ ವಿವಿಧ ಪಕ್ಷಗಳ ನಾಯಕರು, ಸ್ವಾಮೀಜಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಆಗಮಿಸಿ ಗೌರವ ನಮನ ಸಲ್ಲಿಸಿದರು.
ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ:
ಗಣ್ಯರು ಪುಷ್ಪನಮನ ಸಲ್ಲಿಸಿದ ಬಳಿಕ ಪೊಲೀಸ್ ಪಡೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ವಂದನೆ ಸಲ್ಲಿಸಿತು. ರಾಷ್ಟ್ರಗೀತೆ ಮೊಳಗಿದ ಬಳಿಕ ಎರಡು ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ದೇವೇಗೌಡರ ಕುಟುಂಬಕ್ಕೆ ಹಸ್ತಾಂತರಿಸಿದರು.
ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ದೃಶ್ಯ ಗಮನ ಸೆಳೆಯಿತು.

ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ:
ಸರ್ಕಾರಿ ಗೌರವಗಳ ಬಳಿಕ ಕುಟುಂಬ ಸದಸ್ಯರು ಹಾಗೂ ಅರ್ಚಕರ ಸಮ್ಮುಖದಲ್ಲಿ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಿದವು. ವೇದಘೋಷ, ಸ್ತೋತ್ರ ಪಠಣಗಳ ನಡುವೆ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಮೂರು ಸುತ್ತು ಮೆರವಣಿಗೆ ನಡೆಸಲಾಯಿತು.
ಬಳಿಕ ಹಿರಿಯ ಪುತ್ರ ಎಚ್.ಡಿ. ರಮೇಶ್ ಅವರು ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು. ಗಂಗಾಜಲ ಸಿಂಪಡಿಸಿ ಸ್ಥಳವನ್ನು ಶುದ್ಧೀಕರಿಸಿದ ನಂತರ ಪಾರ್ಥಿವ ಶರೀರವನ್ನು ಸಮಾಧಿಗೆ ಇಳಿಸಿ ಅಂತಿಮ ಸಂಸ್ಕಾರ ನಡೆಸಲಾಯಿತು.
ರಾಜಕೀಯ, ಧಾರ್ಮಿಕ ಗಣ್ಯರ ಉಪಸ್ಥಿತಿ:
ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಶಿ , ವಿ. ಸೋಮಣ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಶ್ರೇಯಸ್ ಎಂ. ಪಟೇಲ್, ಡಾ.ಕೆ.ಸುಧಾಕರ್, ಬಿ.ವೈ.ರಾಘವೇಂದ್ರ , ಡಾ.ಸಿ.ಎನ್.ಮಂಜುನಾಥ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಹಾಸನ ಜಿಲ್ಲಾಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎನ್.ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ಸುರೇಶ್ ಬಾಬು, , ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಐಜಿಪಿ ಡಾ. ಸಲೀಂ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸಾ.ರಾ.ಮಹೇಶ್, ಎಚ್.ಆಂಜನೇಯ, ಮಾಜಿ ಸಚಿವರಾದ, ಗೋಪಾಲಯ್ಯ, ರಾಮಣ್ಣ, ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಮಂಜು, ಟಿ.ಡಿ.ರಾಜೇಗೌಡ, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ಡಾ.ರಂಗನಾಥ್, ಸುರೇಶ್ ಗೌಡ, ಭೋಜೇಗೌಡ, ಜಿ.ಡಿ.ಹರೀಶ್ ಗೌಡ, ಸಿ.ಎನ್.ಕೃಷ್ಣೇಗೌಡ, ಕೆ.ಹರೀಶ್ ಗೌಡ, ಮುನಿರತ್ನ, ಗಣಿಗ ರವಿ, ಸ್ವರೂಪ್ ಪ್ರಕಾಶ್, ಶರವಣ, ಮಾಜಿ ಸಂಸದ ಪ್ರತಾಪ್ ಸಿಂಹ ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಸ್ವಾಮೀಜಿಗಳು ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಅದೇ ರೀತಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
Hassan
ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿ.ವೈ. ವಿಜಯೇಂದ್ರ ಕರೆ
Hassan
“ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಸಿದ್ದು ರಂಗನಾಥನ ಆಶೀರ್ವಾದ, ಶಕ್ತಿ ತುಂಬಿದ್ದು ಚೆನ್ನಮ್ಮ”: ಎಚ್‌ಡಿಡಿ
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯ ವೇಳೆ ಭಾವುಕರಾಗಿ ಕಣ್ಣೀರಿಟ್ಟರು. ಹರದನಹಳ್ಳಿಯ ಮಾವಿನಕೆರೆ ಸಮೀಪದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.
ಅಂತಿಮ ವಿಧಿವಿಧಾನಗಳ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, “ನನ್ನ ಪತ್ನಿ ಅನ್ನಪೂರ್ಣೆ. ಅವರನ್ನು ರಂಗನಾಥಸ್ವಾಮಿಯ ಪಾದಕ್ಕೆ ಕಳುಹಿಸುತ್ತಿದ್ದೇನೆ. ನನ್ನ ರಾಜಕೀಯ ಜೀವನದ ಪ್ರತಿಯೊಂದು ಹಂತದಲ್ಲೂ ಅವರು ನನಗೆ ಅಪಾರ ಬೆಂಬಲ ನೀಡಿದರು. ಅವರ ಸಹಕಾರ ಮತ್ತು ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,” ಎಂದು ಭಾವುಕರಾದರು.

ಕುಟುಂಬದವರ ನಿರ್ಧಾರದಂತೆ ಚೆನ್ನಮ್ಮ ಅವರ ಸಮಾಧಿಯನ್ನು ರಂಗನಾಥಸ್ವಾಮಿಯ ಸಾನಿಧ್ಯದಲ್ಲೇ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಬೇರೆ ಸ್ಥಳದಲ್ಲಿ ಸಮಾಧಿ ಮಾಡುವ ಆಲೋಚನೆ ಇದ್ದರೂ, ಮಕ್ಕಳು ಮತ್ತು ಕುಟುಂಬದವರ ಅಭಿಪ್ರಾಯದಂತೆ ಈ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂದರು.
“ನಾನು ದೇಶದ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಯಲು ರಂಗನಾಥಸ್ವಾಮಿಯ ಆಶೀರ್ವಾದ ಹಾಗೂ ನನ್ನ ಪತ್ನಿಯ ಬೆಂಬಲವೇ ಪ್ರಮುಖ ಕಾರಣ. ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಅವರು ನನಗೆ ಶಕ್ತಿ ತುಂಬಿದರು. ಇಂದು ಅವರನ್ನು ಅಗಲುತ್ತಿರುವುದು ತುಂಬಾ ನೋವುಂಟು ಮಾಡಿದೆ,” ಎಂದು ದೇವೇಗೌಡರು ಗದ್ಗದಿತರಾಗಿ ಹೇಳಿದರು.

ಮಳೆಯ ಆತಂಕ ವ್ಯಕ್ತವಾಗಿದ್ದರೂ ಯಾವುದೇ ಅಡಚಣೆ ಇಲ್ಲದೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಕುಟುಂಬಸ್ಥರು, ರಾಜಕೀಯ ಮುಖಂಡರು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
-
State18 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Kodagu13 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Hassan12 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
Politics10 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
National17 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Kodagu13 hours agoಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು
-
Chikmagalur10 hours agoಕಂಬಳದ ಕೆಸರುಗದ್ದೆಯಂತಾದ ಕೋಳೂರು ರಸ್ತೆ: ಶಾಲಾ ಮಕ್ಕಳ ಹರಸಾಹಸ, ಪಂಚಾಯತ್ ನಿರ್ಲಕ್ಷ್ಯಕ್ಕೆ ಆಕ್ರೋಶ
-
State19 hours agoರಾಷ್ಟ್ರಪತಿ ಭವನದತ್ತ ಶಿರಸಿಯ ಯುವ ವಿಜ್ಞಾನಿ!

