Connect with us

Mysore

ಅವರೆಗೆ ಬಂಪರ್ ಬೆಲೆ, ರೈತರ ಮೊಗದಲ್ಲಿ ಹರ್ಷ

Published

on

ಚಳಿಗಾಲದ ಸಮೃದ್ಧಿ ಬೆಳೆಯಾಗಿರುವ ಹಸಿ ಅವರೆಕಾಯಿ ಈಗ ಮಾರು ಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿ ಬಂಪರ್ ಬೆಲೆ ಬಂದಿದೆ.ಇದರಿಂದ ಅವರೆ ಬೆಳೆದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಕೆಲವು ದಿನಗಳಿಂದ ಪಟ್ಟಣದಲ್ಲಿ ರಸ್ತೆ ಬದಿಗಳಲ್ಲಿ ಅವರೆ ಮಾರಾಟ ಜೋರಾಗಿಯೇ ನಡೆಯುತ್ತಿದೆ. ಕಾರ್ತಿಕ ಮಾಸದಿಂದ ಮಾರುಕಟ್ಟೆಯಲ್ಲಿ ಅವರೆಕಾಯಿ ಗ್ರಾಹಕರಿಂದ ಹೆಚ್ಚಿನ ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ಸಿಗುತ್ತಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.


ಈ ಬಾರಿ ಮಾರುಕಟ್ಟೆಗೆ ನಿರೀಕ್ಷಿತ ಮಟ್ಟದಲ್ಲಿ ಅವರೆ ಬಂದಿಲ್ಲ, ಹಾಗಾಗಿ ಸಹಜವಾಗಿ ಬೆಲೆಯು ಏರಿಕೆಯಾಗಿದೆ. ಮಳೆ ಪ್ರಭಾವ ಕಡಿಮೆಯಾದ ಹಿನ್ನಲೆಯಲ್ಲಿ ಎಲ್ಲಿಯೂ ಹಸಿ ಅವರೆಕಾಯಿ ಸಂಪೂರ್ಣವಾಗಿ ಬೆಳೆದಿಲ್ಲ, ಹಾಗಾಗಿ ಮಾರುಕಟ್ಟೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕುಸಿತಗೊಂಡಿದೆ.
ಕಳೆದ ವಾರದಿಂದ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಚುಮು ಚುಮು ಚಳಿ ಹೆಚ್ಚಾಗಿದೆ. ತರಕಾರಿ, ಸೊಪ್ಪು ಖರೀದಿಸುತ್ತಿದ್ದ ಗ್ರಾಹಕರು ಅವರೆ ಕಾಯಿಗೆ ಮುಂದಾಗಿದ್ದಾರೆ, ಹಾಗಾಗಿ ಈ ಕಾಯಿಗೆ ಉತ್ತಮವಾದ ಬೆಲೆ ಇದೆ.
1 ಕೆ ಜಿ ಅವರೆಗೆ 50 ರೂ ಗಳಲ್ಲಿ ಮಾರಾಟ ನಡೆಯುತ್ತಿದೆ, ಗ್ರಾಹಕರು ದರದಲ್ಲಿ ಚೌಕಾಸಿ ಮಾಡಿದರೆ ವ್ಯಾಪಾರಸ್ಥರು ನೀಡುತ್ತಿಲ್ಲ,
ಕಾರ್ತಿಕ ಮಾಸ ಮುಗಿದರೂ ಕೊರೆವ ಚಳಿಗೆ, ಬಾಯಿ ರುಚಿಗಾಗಿ ಅವರೆಯಲ್ಲಿ ಸಾರು ಮಾಡಿ ಸವಿಯಲು ಆಸಕ್ತಿ ತೋರಿದ್ದಾರೆ.


ವರ್ಷದ ಈ ಸಮಯದಲ್ಲಿ ಸಿಗುವ ಅವರೆಕಾಯಿ ವಿಶೇಷವಾಗಿ ಅವರೆ ಕಾಳು ಉಪ್ಪಿಟ್ಟು, ಬಾತ್, ಮಾಂಸಾಹಾರಿಗೆ ಹಾಗು ಇತರೆ ಯಾಗಿ ಬಗೆ ಬಗೆಯಲ್ಲಿ ತಯಾರಿ ಮಾಡಿಕೊಂಡು ಸೇವಿಸುತ್ತಾರೆ. ಮುಖ್ಯವಾಗಿ ಕಾಳುಗಳನ್ನು ನೆನೆಸಿ, ಕಾಳಿನ ಸಿಪ್ಪೆಯನ್ನು ತೆಗೆದು ಚಿಲ್ ಕವರೆ ಮಾಡಿ, ನಾನಾ ರೀತಿಯ ಸಾಂಬಾರು ಮಾಡಿ ಸವಿಯುತ್ತಾರೆ. ಚಿಲ್ ಕವರೆ ಕಾಳಿನಿಂದ, ಕೊಬ್ಬರಿ, ಕಡ್ಲೆ ಬೀಜ, ಹುರುಗಡಲೆ ಇತ್ಯಾದಿ ಪದಾರ್ಥ ಗಳನ್ನು ಹಾಕಿ ಬೇಯಿಸಿ ಕೊಂಡು, ಶೇಖರಣೆ ಮಾಡಿಕೊಂಡು ತಿಂಗಳು ಗಟ್ಟಲೆ ಇದರ ರುಚಿ ನೋಡುತ್ತಾರೆ.ಜೊತೆಗೆ
ಕೆಲವು ದಿನಗಳಿಂದ ಮದುವೆ, ನಾಮಕರಣ ಇತರೆ ಶುಭಾ ಸಮಾರಂಭಗಳಿಗೆ ಬಳಕೆ ಮಾಡುವುದರಿಂದ ಅವರೆಕಾಯಿ ಹೆಚ್ಚು ಬೇಡಿಕೆ ಇದೆ. ಸಾಮಾನ್ಯ ವಾಗಿ ಮುಂಗಾರಿನಲ್ಲಿ ರೈತರು ವಿವಿಧ ಬೆಳೆಗಳ ಜೊತೆಗೆ ಸಾಲುಗಳ ಮುಖಾಂತರ ಬಿತ್ತನೆ ಮಾಡುತ್ತಾರೆ. ಚಳಿಗಾಲದ ಸಮಯದಲ್ಲಿ ಕೊಯ್ಲಿಗೆ ಬರುತ್ತದೆ, ಸಂಕ್ರಾಂತಿ ಯಿಂದ ಶಿವರಾತ್ರಿ ಯವರೆಗೂ ಕೊಯ್ಲು ನಡೆಯುತ್ತದೆ, ಆದರೆ ಈ ಬಾರಿ ಮಳೆ ಕೊರತೆಯಿಂದ ಅವರೆ ಹೆಚ್ಚು ಬಿತ್ತನೆಯಾಗಿಲ್ಲ, ಅಲ್ಲದೆ ಬಿತ್ತಿದ ಭಾಗಗಳಲ್ಲಿ ಮಳೆಯ ಅಭಾವದಿಂದ ಪಸಲು ಬರದೆ ನಾಶವಾಗಿದೆ.


ಈ ಭಾಗದಲ್ಲಿ ಮಳೆಯಾಶ್ರಿತವಾಗಿ ರೈತರು ರಾಗಿ ಬೆಳೆ ಜೊತೆಗೆ 6 ರಿಂದ 8 ಅಡಿ ಸಾಲಿನಲ್ಲಿ ಅವರೆ ಸೇರಿದಂತೆ ಹಲವು ದ್ವಿದಳ ದಾನ್ಯ ಗಳನ್ನು ಬೆಳೆಯುತ್ತಾರೆ. ಆದರೆ ಈ ಬಾರಿ ಮಳೆ ಕೊರತೆಯಿಂದ ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ನಾಶಗೊಂಡಿವೆ, ಜೊತೆಗೆ ದ್ವಿದಳ ಧಾನ್ಯಗಳು ನೆಲ ಕಚ್ಚಿವೆ.
ಈ ಭಾಗದ ಸುತ್ತ ಮುತ್ತಲಿನಿಂದ ರೈತರು ತಂದು ಪ್ರತಿ ವರ್ಷ ಅವರೆ ಬೆಳೆ ಹೆಚ್ಚು ಪ್ರಸಿದ್ದಿ ಪಡೆದು,ಮೂಟೆ ಗಟ್ಟಲೆ ವ್ಯಾಪಾರವಾಗುತ್ತಿತ್ತು, ಆದರೆ ಈ ಬಾರಿ ಮಳೆ ಕೊರತೆಯಿಂದ ಅವರೆ ಬೆಳೆ ನಾಶವಾಗಿದೆ. ಶೇಕಡ 40 ರಷ್ಟು ರೈತರು ಮಾತ್ರ, ಅದರಲ್ಲೂ ನೀರಾವರಿ ಹೊಂದಿರುವ ರೈತರು ಮಾತ್ರ ಬೆಳೆದು ಮಾರಾಟ ಮಾಡುತ್ತಿದ್ದಾರೆ.
ಸಂಪೂರ್ಣ ವಾಗಿ ಬೆಳೆ ಬಾರದೆ ಈ ಬಾರಿ ಹಸಿ ಅವರೆಗೆ ಹೆಚ್ಚು ಬೇಡಿಕೆ ಇದೆ,ಆದರೂ ಒಳ್ಳೆಯ ಬೆಲೆ ಇದೆ ಎನ್ನುತ್ತಾರೆ ರೈತ ರಾಜೇಗೌಡ

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ*

Published

on

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ

Published

on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೋರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮುಡಾ ಅಕ್ರಮ ನಿವೇಶನ ಹಂಚಿಕೆ: ಏಕ ಸದಸ್ಯ ವಿಚಾರಣಾ ಆಯೋಗ ರಚನೆ

Published

on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ. ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ. ಪ್ರಕರಣದ ಕೂಲಂಕಷವಾದ ವಿಚಾರಣೆ ನಡೆದು, ಸತ್ಯಾಸತ್ಯತೆ ಹೊರಬರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Continue Reading

Trending

error: Content is protected !!