Connect with us

Hassan

ಅಬ್ಬನ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

Published

on

ಆಲೂರು: ತಾಲೂಕಿನ ಅಬ್ಬನ ಗ್ರಾಮ ಪಂಚಾಯಿತಿಯ ಮೂರನೇ ಅವಧಿಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಅಣ್ಣಪ್ಪ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಪೂರ್ಣಿಮಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

8 ಜನ ಸದಸ್ಯ ಬಲ ಹೊಂದಿದ್ದು ಇಂದು ನಡೆದ ಅಬ್ಬನ ಗ್ರಾಮ ಪಂಚಾಯಿತಿಯ ಚುನಾವಣೆಯಲ್ಲಿ 8 ಜನ ಸದಸ್ಯರು ಭಾಗಿಯಾಗಿದ್ದರು ಎಲ್ಲರ ಒಮ್ಮತದಿಂದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಚುಣಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಪ್ರಭಾರ ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ತಿಳಿಸಿದರು.

ಆಯ್ಕೆಯಾದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶಾಸಕ ಸಿಮೆಂಟ್ ಮಂಜುನಾಥ್ ಮತ್ತು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ ಸೇರಿದಂತೆ ಗ್ರಾಮಸ್ಥರು, ಸರ್ವ ಸದಸ್ಯರು, ಬೆಂಬಲಿಗರು, ಹಿರಿಯರು, ಗ್ರಾ.ಪಂ ಸಿಬ್ಬಂದಿಗಳು ಗೌರವಿಸಿ ಸನ್ಮಾನ ಮಾಡಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಣ್ಣಪ್ಪ ಪೂಜಾರಿ ಸರ್ವ ಸದಸ್ಯರು ಹಾಗೂ ಗ್ರಾಮದ ಹಿರಿಯರನ್ನು ಒಗ್ಗೂಡಿಸಿಕೊಂಡು ಗ್ರಾಮ ಪಂಚಾಯಿತಿ ಅಭಿವೃದ್ದಿಗಾಗಿ ಹಗಲಿರುಳು ಶ್ರಮಿಸಿ ಜಾತಿ-ಭೇಧ ಮರೆತು ಪ್ರಾಮಾಣಿಕವಾಗಿ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಪ್ರಭಾರ ಇಓ ಗಿರೀಶ್ . ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿತಾ, ಹಾಗೂ ಗ್ರಾ.ಪಂ. ಸರ್ವ ಸದ್ಯಸರು, ಸಿಬ್ಬಂದಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ವರದಿ ಸತೀಶ್ ಚಿಕ್ಕಕಣಗಾಲು

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನಾಂಬ ದೇವಾಲಯದಲ್ಲಿ 108ಕ್ಕೂ ಅಧಿಕ ಉಪಾಸಕರಿಂದ ಸಾಮೂಹಿಕ ಶ್ರೀ ದೇವಿ ಪುರಾಣ ಪಠಣ ಹೋಮ

Published

on

ಹಾಸನ: ನಗರದ ಪ್ರಸಿದ್ಧ ಶಕ್ತಿಪೀಠವಾಗಿರುವ ಶ್ರೀ ಹಾಸನಾಂಬ ದೇವಾಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ, ಮಳೆ–ಬೆಳೆ ಸಮೃದ್ಧಿ, ಸುಖ–ಶಾಂತಿ ಹಾಗೂ ನೆಮ್ಮದಿಗಾಗಿ 108ಕ್ಕೂ ಅಧಿಕ ಶ್ರೀ ದೇವಿ ಉಪಾಸಕರಿಂದ ಸಾಮೂಹಿಕ ಶ್ರೀ ದೇವಿ ಪುರಾಣ ಪಠಣ ಹೋಮ ಹಾಗೂ ಧರ್ಮಸಭೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಟ್ಟಾಯ ಶಿವಕುಮಾರ್ ಅವರು ತಿಳಿಸಿದರು.

ದಿನಾಂಕ 06-02-2026 (ಶುಕ್ರವಾರ) ರಂದು ಬೆಳಿಗ್ಗೆ 7.30 ಗಂಟೆಗೆ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು, ಶ್ರೀ ಹಾಸನಾಂಬ ದೇವಾಲಯ ಅನಾವರಣದ ಐದನೇ ವರ್ಷದ ಅಂಗವಾಗಿ ಈ ವಿಶೇಷ ಪೂಜಾ ವಿಧಿಗಳು ನೆರವೇರಲಿವೆ. ಜಗನ್ಮಾತೆಯಾದ ಶ್ರೀ ಶಾಂಭವಿಯನ್ನು ಭಕ್ತಿಯಿಂದ ಭಜಿಸುವ ಮೂಲಕ ನಾಡಿನ ಜನತೆಗೆ ಸಮೃದ್ಧಿ, ಆರೋಗ್ಯ ಹಾಗೂ ನೆಮ್ಮದಿ ದೊರಕಲಿ ಎಂಬ ಸಂಕಲ್ಪವನ್ನು ಕೈಗೊಳ್ಳಲಾಗಿದೆ ಎಂದರು.


ಶ್ರೀ ಹಾಸನಾಂಬ ದೇವಾಲಯವು ವರ್ಷದಲ್ಲಿ ಕೇವಲ 10 ರಿಂದ 12 ದಿನಗಳವರೆಗೆ ಮಾತ್ರ ಗರ್ಭಗುಡಿ ತೆರೆದುಕೊಳ್ಳುವ ಅಪರೂಪದ ವೈಶಿಷ್ಟ್ಯ ಹೊಂದಿದ ಶಕ್ತಿಶಾಲಿ ಕ್ಷೇತ್ರವಾಗಿದೆ. ಗರ್ಭಗುಡಿ ಮುಚ್ಚಿದ ಬಳಿಕವೂ ನಂದಾದೀಪ ಆರದೇ ಇರುವುದೂ, ಅರ್ಪಿಸಿದ ನೈವೇದ್ಯ ಬಿಸಿಯಾಗಿಯೇ ಇರುವುದೂ ದೇವಿಯ ಮಹಿಮೆಯ ಪವಾಡವೆಂದು ಭಕ್ತರು ನಂಬುತ್ತಾರೆ. ದೇವಿಯ ಮುಂಭಾಗದಲ್ಲಿರುವ ನೆಲ್ಲು ಕಾಳಿನ ಗಾತ್ರದ ಕಲ್ಲು ವರ್ಷದಿಂದ ವರ್ಷಕ್ಕೆ ವೃದ್ಧಿಯಾಗುತ್ತ ಬರುತ್ತಿರುವುದು ಈ ಕ್ಷೇತ್ರದ ಮತ್ತೊಂದು ವಿಶೇಷತೆ ಎಂದರು.

ಪ್ರತಿ ವರ್ಷ ಆಶ್ವಿಜ ಹುಣ್ಣಿಮೆಯ ನಂತರ ಬರುವ ಮೊದಲ ಗುರುವಾರ ಗರ್ಭಗುಡಿ ತೆರೆದು ಲಕ್ಷಾಂತರ ಭಕ್ತರು ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆಯುತ್ತಾರೆ. ಭಕ್ತಿಯಿಂದ ದೇವಿಯನ್ನು ಆರಾಧಿಸಿದರೆ ಕಷ್ಟಕಾರ್ಪಣ್ಯಗಳು ದೂರವಾಗುತ್ತವೆ ಎಂಬ ಗಾಢ ನಂಬಿಕೆ ಭಕ್ತರಲ್ಲಿ ಇದೆ. ಇಂತಹ ಪವಿತ್ರ ಕ್ಷೇತ್ರದಲ್ಲಿ ಜಗದ್ರಕ್ಷಕಳಾದ ಶ್ರೀ ದೇವಿಯ ಪುರಾಣ ಪಠಣ ಹೋಮವನ್ನು 108ಕ್ಕೂ ಅಧಿಕ ಉಪಾಸಕರಿಂದ ನಡೆಸಲಾಗುತ್ತಿದೆ ಎಂದರು.


ಮಧ್ಯಾಹ್ನ 12.30 ಗಂಟೆಗೆ ನಾಡಿನ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪುರಾಣ ಮಹಾಮಂಗಲ ಧರ್ಮಸಭೆ ನಡೆಯಲಿದ್ದು, ನಂತರ ಮಹಾಪ್ರಸಾದ ವಿತರಣೆ ಕಾರ್ಯಕ್ರಮ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು–ಮನ–ಧನಗಳಿಂದ ಸೇವೆ ಸಲ್ಲಿಸಿ ಜಗನ್ಮಾತೆಯ ಕೃಪೆಗೆ ಪಾತ್ರರಾಗಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಹಾಸನಕ್ಕೆ ಆಗಮಿಸುವ ಭಕ್ತರಿಗೆ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದಿಂದ ಆಟೋ ರಿಕ್ಷ ವ್ಯವಸ್ಥೆ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ, ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು:
9980868058, 9449261302, 9945858274.

Continue Reading

Hassan

ವಿಕಸಿತ ಭಾರತ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕ – ಶಾಸಕ ಸಿಮೆಂಟ್ ಮಂಜು.

Published

on

 ಸಕಲೇಶಪುರ : ವಿಕಸಿತ ಭಾರತ ಮೋದಿಜಿಯವರ ಕನಸು. 2047ಕ್ಕೆ ವಿಕಸಿತ ಭಾರತ ಆಗಬೇಕು ಅನ್ನೊ ಸಂಕಲ್ಪಕ್ಕೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಈ ಭಾರಿಯ ಬಜೆಟ್ ಮಂಡಿಸಿದ್ದಾರೆ.  ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ಬಜೆಟ್ ಮೂರು ಪ್ರಮುಖ ಕರ್ತವ್ಯಗಳ ಆಧಾರದ ಮೇಲೆ ಅಭಿವೃದ್ಧಿ ಪೂರಕ ಆಡಳಿತದತ್ತ ಸ್ಪಷ್ಟ ದಿಕ್ಸೂಚಿಯನ್ನು ನೀಡಿದೆ. ಮೊದಲನೆಯದಾಗಿ, ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕ ಪ್ರಗತಿಗೆ ವೇಗ ನೀಡುವುದು ಮತ್ತು ಆರ್ಥಿಕತೆ ಚೇತರಿಸಿಕೊಳ್ಳುವ ಶಕ್ತಿಯನ್ನು ವೃದ್ಧಿಸುವುದು; ಎರಡನೆಯದಾಗಿ, ಯುವಜನತೆಯ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಅವರಲ್ಲಿ ಹೊಸ ಸಾಮರ್ಥ್ಯ ಬೆಳೆಸುವುದು ಹಾಗೂ ಮೂರನೆಯದಾಗಿ, ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ಪ್ರದೇಶಗಳಿಗೆ ಅಗತ್ಯ ಸಂಪನ್ಮೂಲ ಹಾಗೂ ಸಮಾನ ಅವಕಾಶಗಳನ್ನು ಒದಗಿಸಿ, ಎಲ್ಲರೂ ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಜೆಟ್‌ನ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


◦ ಈ ಬಜೆಟ್ ’ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ನಂತಹ ವೇದಿಕೆಗಳ ಮೂಲಕ ಯುವಜನರ ಆಲೋಚನೆಗಳನ್ನು ನೀತಿ ನಿರೂಪಣೆಯಲ್ಲಿ ಅಳವಡಿಸಿಕೊಂಡಿರುವುದು ಶ್ಲಾಘನೀಯ. ಇದು ಯುವಜನರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ರಾಷ್ಟ್ರದ ನಿರ್ಧಾರಗಳಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಿದೆ. ಆ ಮೂಲಕ ಭಾರತದ ಮುಂದಿನ ಪ್ರಗತಿಯನ್ನು ಯುವಜನರು ಮುನ್ನಡೆಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಒತ್ತಿ ಹೇಳಿದ್ದು, ಅದರತ್ತ ಈ ಬಜೆಟ್ ಕೂಡ ಗಮನಹರಿಸಿರುವುದು ಸಮಯೋಚಿತವೆನಿಸಿದೆ ಎಂದು ಹೇಳಿದರು.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಜೆಟ್ ಮಂಡಿಸಿದ್ದಾರೆ.

ಕರ್ತವ್ಯ ಭವನದಲ್ಲಿ ಈ ಬಜೆಟ್ ತಯಾರಾಗಿದ್ದು.ನಿರ್ಮಲಾ ಸೀತಾರಾಮನ್ ನಮ್ಮವರು. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಅವರು 9ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ.ಕ್ರೀಡಾ ಕ್ಷೇತ್ರ, ನಾರಿ ಶಕ್ತಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಯಾವುದೇ ಹೊಸ ತೆರಿಗೆಯನ್ನ ಹೇರಿಲ್ಲ. ಸರ್ವಸ್ಪರ್ಷಿ, ಸರ್ವವ್ಯಾಪಿ ಬಜೆಟ್ ಇದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಆರ್ಥಿಕ ಸದೃಢತೆ, ವಿಶ್ವಗುರುವಾಗಲು ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದರು.

Continue Reading

Hassan

ಅರೇಹಳ್ಳಿಯಲ್ಲಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ

Published

on

ಅರೇಹಳ್ಳಿ: ಸಮಾಜದಲ್ಲಿ ಶಾಂತಿ ಕಾಪಾಡುತ್ತ ಸಾರ್ವಜನಿಕರ ರಕ್ಷಣೆಗಾಗಿ ಪಣತೊಟ್ಟು, ಕಾನೂನು ಸುವ್ಯವಸ್ಥೆ ಪಾಲನೆಯ ಜೊತೆಗೆ ಅಪರಾದ ತಡೆಯಲು ಶ್ರಮಿಸುವ ಆರಕ್ಷಕರು ಇದೀಗ ಇನ್ನೊಬ್ಬರ ಜೀವರಕ್ಷಣೆಗಾಗಿ ರಕ್ತದಾನ ಮಾಡುತ್ತಿರುವುದು ಪ್ರಶಂಸನೀಯ ಎಂದು ಸ್ಥಳೀಯರು ಸ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜೀವದಾನಕ್ಕೆ ಸಮಾನ ಪವಿತ್ರ ಕಾರ್ಯವಾದ ರಕ್ತದಾನವು ಕೇವಲ ಜೀವಗಳನ್ನು ಉಳಿಸುವುದಲ್ಲದೆ, ದಾನಿಯ ಆರೋಗ್ಯಕ್ಕೂ ಒಳ್ಳೆಯದು ಹಾಗೂ ಒಬ್ಬರ ರಕ್ತದಾನದಿಂದ ಮತ್ತೊಬ್ಬರ ಜೀವಕ್ಕೆ ಸಂಜೀವಿನಿಯಾಗಬಹುದು ಆದ್ದರಿಂದ ಎಲ್ಲರೂ ಅದಕ್ಕಾಗಿ ಮುಂದಾಗಬೇಕು ಎಂಬ ಚಿಂತನೆಯಿಂದ ಸ್ಥಳೀಯ ಪೊಲೀಸ್ ಸಿಬ್ಬಂದಿಗಳು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಇತರರಿಗೂ ಪ್ರೇರಣೆಯಾಗಿದ್ದಾರೆ.

ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರದಂದು ಲಯನ್ಸ್ ಸಂಸ್ಥೆ, ಯೋಗ ಚೇತನ ಕೇಂದ್ರ ಹಾಗೂ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದದವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ವೈದ್ಯಾಧಿಕಾರಿ ಡಾ. ಅನುಪಮಾ, ಪಿ.ಎಸ್.ಐ ಶೋಭಾ ಬರಮಣ್ಣನವರ್, ವೀರಶೈವ ಘಟಕದ ಹೋಬಳಿ ಅಧ್ಯಕ್ಷ ತೇಜಪಾಲ್, ಲಯನ್ ಸಂಸ್ಥೆಯ ಅಧ್ಯಕ್ಷ ಚಾಮರಾಜ, ಸ್ಥಳೀಯು ಮುಖಂಡರು ಸೇರಿದಂತೆ ವಿವಿದ ಆಸ್ಪತ್ರೆಯ ವೈದ್ಯರು ಸಿಬ್ಬಂದಿವರ್ಗದವರು ಹಾಗೂ ಇತರರು ಹಾಜರಿದ್ದರು.

Continue Reading

Trending

error: Content is protected !!