Mandya
ತಾಯಿ ಅಣ್ಣನ ಸಹಕಾರವಿಲ್ಲದೆ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ B.S.ಚಂದನ್
ಹಲಗೂರು: ನಾನು ಪ್ರಾಥಮಿಕ ಹಂತದಿಂದ ಯು.ಪಿ.ಎಸ್.ಸಿ.ಪರೀಕ್ಷೆ ಬರೆಯುವವರೆಗೂ ನನಗೆ ಪೂರ್ಣ ಸಹಕಾರ ನೀಡಿ ಬೆನ್ನೆಲುಬಾಗಿ ನನ್ನ ತಾಯಿ ಹಾಗೂ ನಮ್ಮ ಸಹೋದರ ನನ್ನ ವ್ಯಾಸಂಗಕ್ಕೆ ಪೂರ್ಣ ಸಹಕಾರ ನೀಡಿದ್ದು, ಅವರ ಸಹಕಾರವಿಲ್ಲದೆ ನಾನು ಯು.ಪಿ.ಎಸ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಸಾಧನೆ ಮಾಡಲು ಆಗುತ್ತಿರಲಿಲ್ಲ ಎಂದು ಬಿ.ಎಸ್ ಚಂದನ್ ತಿಳಿಸಿದರು.
ಸಮೀಪದ ಮಾಸ್ಟರ್ ದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ B .S.ಚಂದನ್ ಅವರಿಗೆ ಗ್ರಾಮಸ್ಥರಿಂದ ಏರ್ಪಡಿಸಲಾಗಿದ್ದ
ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಇದೇ ಗ್ರಾಮದಲ್ಲಿ ವ್ಯಾಸಂಗ ಮಾಡಿ ಈಗ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿರುವುದರಿಂದ ನನಗೆ ಈ ಅಭಿನಂದನೆಯನ್ನಿ ಹಮ್ಮಿಕೊಂಡಿರುವುದು ತುಂಬಾ ಸಂತೋಷವಾಗಿದೆ. ಇದೇ ರೀತಿ ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರಿಂದ ಉತ್ತಮ ಶಿಕ್ಷಣ ಪಡೆದುಕೊಂಡು ಯಾವುದಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ವ್ಯಾಸಂಗ ಮಾಡಿ ಎಂದು ವಿದ್ಯಾರ್ಥಿಗಳಿಗೆ ಅವರು ಸಲಹೆ ನೀಡಿದರು.
ನಾನು ವ್ಯಾಸಂಗ ಮಾಡುವಾಗ ಪಾಠ ಪ್ರವಚನದ ಜೊತೆ ನಮ್ಮ ಶಿಕ್ಷಕರು ಜೀವನದ ಮೌಲ್ಯವನ್ನು ಹೇಗೆ ಬೆಳೆಸಿಕೊಂಡು ಹೋಗಬೇಕು ಎಂಬುದನ್ನು ಕಲಿಸಿಕೊಟ್ಟಿದ್ದಾರೆ. ಅದರಿಂದ ನಾನು ಈ ಸಾಧನೆ ಮಾಡಲು ಸಾಧ್ಯವಾಯಿತು, ಅದಕ್ಕಾಗಿ ನಾನು ನಮ್ಮ ಶಿಕ್ಷಕರಿಗೆ ಆಭಾರಿಯಾಗಿದ್ದೇನೆ ಎಂದು ಧನ್ಯತಾಭಾವ ಸಮರ್ಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಜು ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಹಲಗೂರು ಸಬ್ ಇನ್ಸ್ಪೆಕ್ಟರ್ ಬಿ ಮಹೇಂದ್ರ ಮಾತನಾಡಿ, ಚಂದನ್ ಅವರ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯಾವುದಾದರೂ ಸಾಧನೆ ಮಾಡಬೇಕಾದರೆ ವಿದ್ಯಾರ್ಥಿಗಳು ಮೋಜು- ಮಸ್ತಿ ಗಳನ್ನು ಬಿಟ್ಟರೆ ಮಾತ್ರ ಯಾವುದಾದರೂ ಸಾಧನೆ ಮಾಡಲು ಸಾಧ್ಯ. ಇಂದಿನ ಕಾಲದಲ್ಲಿ ಋಷಿ-ಮುನಿಗಳು ತಪಸ್ಸು ಮಾಡಿ ದೇವರಿಂದ ವರ ಪಡೆದು ಅವರು ಸಾಧನೆ ಮಾಡಿ ಶಕ್ತಿಯನ್ನು ಪಡೆಯುತ್ತಿದ್ದರು, ಈಗ ಮಾನವರು ನಾವು ಹೆಚ್ಚು ವರ್ಷಗಳ ಕಾಲ ಉತ್ತಮವಾಗಿ ವ್ಯಾಸಂಗ ಮಾಡಿದರೆ ಮಾತ್ರ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಚಂದನ್ ಅವರ ತಾಯಿ ಸವಿತಾ ಹಾಗೂ ಸಹೋದರ
B.S. ಚೇತನ್. ದಾವಣಗೆರೆ ಶಿಕ್ಷಕರಾದ ಪ್ರಭಾಕರ್.ಎಂ, ಬಸವರಾಜು, ಎ, ಅರಣ್ಯ ಇಲಾಖೆಯ ಅಧಿಕಾರಿಗಳಾದ ರವಿ ಬುರ್ಜಿ, ಪ್ರವೀಣ್ ಕುಮಾರ್, ಶಿಕ್ಷಕ ವೃಂದ ಸೇರಿದಂತೆ ಮಾಸ್ಟರ್ ದೊಡ್ಡಿ ಬೀರೋಟ ಮರಿ ಜೋಗಿ ದೊಡ್ಡಿ, ಕೊನ್ನಾಪುರ ದೊಡ್ಡಿ, ಗ್ರಾಮದವರು ಉಪಸ್ಥಿತರಿದ್ದರು.
Mandya
ವಿಚ್ಚೇದನ ಪಡೆದಿದ್ದ ಪತ್ನಿಯನ್ನು ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ
ಮಂಡ್ಯ : ಗಂಡನಿಂದ ವಿಚ್ಚೇದನ ಪಡೆದು ಪತ್ಯೇಕವಾಗಿ ಜೀವಿಸುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಡ್ಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಬಿನ್ ಕುಳ್ಳ ವೆಂಕಟಯ್ಯ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು, ಸಾಂಸಾರಿಕ ಗದ್ದಲದಿಂದ ಬೇಸತ್ತು ವಿಚ್ಚೇಧನ ಪಡೆದಿದ್ದ ತನ್ನ ಪತ್ನಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದರು.
ಏನಿದು ಘಟನೆ ?
ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಎಂಬುವವರು ಕಳಡದ 18 ವರ್ಷಗಳ ಹಿಂದೆ ಶಾಲಿನಿ ಎಂಬ ಮಹಿಳೆಯನ್ನು ವಿವಾಹವಾಗಿದ್ದನು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಆನಂತರ ಸುರೇಶನ ದುವರ್ತನೆಯಿಂದಾಗಿ ಶಾಲಿನಿಯು ಸಾಂಸಾರಿಕವಾಗಿ ಆತನಿಂದ ದೂರವಾಗಿದ್ಸಳು. ಜೊತೆಗೆ ವಿಚ್ಛೇದನವನ್ನು ಸಹ ಪಡೆದುಕೊಂಡು ಪ್ರತ್ಯೇಕವಾಗಿ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಳು.

ಈ ಮಧ್ಯೆ ಆರೋಪಿಯ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಮೇಲೆ ಅತ್ಯಾಚಾರ ನಡೆಸಿದ್ದ ಬಗ್ಗೆ ಪೋಕ್ಸೋ ಪ್ರಕರಣವು ಸಹ ದಾಖಲಾಗಿದ್ದು, ನಂತರದ ದಿನಗಳಲ್ಲಿ ಆರೋಪಿ ಸುರೇಶ್ ಶಾಲಿನಿಯ ಬಳಿ ಒಂದಾಗಿ ಬಾಳೋಣವೆಂದು ಕೇಳಿಕೊಂಡಿದ್ದ ಎನ್ನಲಾಗಿದೆ.
ಅದಕ್ಕೆ ಶಾಲಿನಿ ಒಪ್ಪದೆ ಇದ್ದಾಗ ಆರೋಪಿಯು ಕೋಪಗೊಂಡು ನಿನ್ನನ್ನು ಮತ್ತು ನಿನ್ನ ಮನೆಯವರನ್ನು ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದನು ಎಂದು ತಿಳಿದು ಬಂದಿದೆ. ಅಲ್ಲದೇ ತನ್ನ ಹೆಣ್ಣು ಮಕ್ಕಳನ್ನು ಆತನ ಜೊತೆ ಮಾತನಾಡಲೂ ಬಿಡದ ಕಾರಣ ಆಕೆಯನ್ನು ಕೊಲೆ ಮಾಡಲೇ ಬೇಕೆಂದು ನಿರ್ಧರಿಸಿ ಶಾಲಿನಿ ಮೇಲೆ ದ್ವೇಷ ಇಟ್ಟುಕೊಂಡಿದ್ಸನು ಎನ್ನಲಾಗಿದೆ.
ಹಾಗಾಗಿ 2022 ರ ಜ.20 ರಂದು ಸಂಜೆ 6.45ರ ಸಮಯದಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಸರಹದ್ದಿನ ರಾಗಿಮುದ್ದನಹಳ್ಳಿ ಗ್ರಾಮದ ಸರ್ವೆ ನಂ 97/4ರ ಜಮೀನಿನಲ್ಲಿ ಶಾಲಿನಿಯು ಪ್ಯಾಕ್ಟರಿಯು ಕೆಲಸ ಮುಗಿಸಿಕೊಂಡು ಊರಿಗೆ ಹೋಗಲು ವಾಪಸ್ ನಡೆದುಕೊಂಡು ಬರುತ್ತಿದ್ದಾಗ ಆರೋಪಿಯು ಹೊಂಚು ಹಾಕಿ, ಆಕೆಯನ್ನು ಮುಂದೆ ಹೋಗದಂತೆ ತಡೆದು ಹಳೆ ದ್ವೇಷದಿಂದ ಆಕೆಯ ಮೇಲೆ ಗಲಾಟೆ ಮಾಡಿದ್ದಲ್ಲದೆ ತನ್ನ ಬಳಿ ಇಟ್ಟುಕೊಂಡಿದ್ದ ಕೊಡಲಿಯನ್ನು ತೆಗೆದು ಬಲವಾಗಿ ಶಾಲಿನಿಯ ತಲೆಯ ಮೇಲೆ ಹೊಡೆದಿದ್ದಾನೆ. ಆಕೆ ರಕ್ತಶ್ರವಾವದಿಂದ ಕಳಗೆ ಬಿದ್ದಾಗ ಆಕೆಯು ಇನ್ನು ಸ್ವಲ್ಪ ಉಸಿರಾಡುತ್ತಿದ್ದಾಳೆ ಎಂಬುದನ್ನು ಗಮನಿಸಿ ಆಕೆಯ ಮೇಲೆ ಕುಳಿತುಕೊಂಡು ಪುನ: ಕೊಡಲಿಯಿಂದ ಕುತ್ತಿಗೆ ಮೇಲೆ ಬಲವಾಗಿ 2 ಬಾರಿ ಕೊಡಲಿಯಿಂದ ಹಲ್ಲೆ ಮಾಡಿ ಅಮಾನುಷವಾಗಿ ಕತ್ತನ್ನು ಕತ್ತರಿಸಿ ಶಿರಚ್ಛೇಧನ ಮಾಡಿದ್ದನು. ನಂತರ ಕೃತ್ಯಕ್ಕೆ ಬಳಸಿದ್ದ ಕೊಡಲಿಯ ಸಾಕ್ಷ್ಯ ನಾಶಪಡಿಸಲು ಬಸಪ್ಪನ ಕಟ್ಟೆ ಬಳಿ ಇರುವ ಮೆಳೆಯ ಒಳಗಡೆ ಎಸೆದು ಸಾಕ್ಷ ವಾಶಪಡಿಸಿರುವುದು ತನಿಖೆಯಿಂದ ಹಾಗೂ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿತ್ತು.
ಈ ಬಗ್ಗೆ ಮಂಡ್ಯ ಗ್ರಾಮಾಂತರ ಶಾಣಾ ಪೋಲಿಸರು ಆರೋಪಿ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಪ್ರಕರಣವು ಮಂಡ್ಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿಯು ಕೊಲೆ ಎಸಗಿರುವುದು ದೃಡಪಟ್ಟಿದ್ದರಿಂದ ನ್ಯಾಯಾಧೀಶರಾದ ಸೈಯಿದ್ ಉನ್ನಿಸಾ ಅವರು, ಆರೋಪಿ ಸುರೇಶನಿಗೆ ಭಾದಂಸಂ ಕಲಂ 302 ರ ಅಡಿಯಲ್ಲಿನ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ತಲಾ 50,000/-ರೂಪಾಯಿ ದಂಡ, ಕಲಂ, 201 ಭಾ.ದಂ.ಸಂ. ಅಪರಾಧಕ್ಕೆ 5 ವರ್ಷಗಳ ಸೆರೆಮನೆ ವಾಸ ಮತ್ತು ತಲಾ 25,000/- ರೂಪಾಯಿ ದಂಡ ಮತ್ತು ಕಲಂ, 341 ಭಾ.ದಂ.ಸಂ ಅಪರಾಧಕ್ಕೆ 1 ತಿಂಗಳ ಸರೆಮನೆ ವಾಸ ಮತ್ತು ತಲಾ 500/- ರೂಪಾಯಿ ದಂಡ ವಿಧಿಸಿ ಕಳೆದ ಡಿ.8 ರಂದು ತೀರ್ಪು ನೀಡಿದ್ದಾರೆ. ಮೃತಳ ಇಬ್ಬರು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ಪ್ರಾಧಿಕಾರಕ್ಕೆ ನಿರ್ದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಎನ್.ಬಿ. ವಿಜಯಲಕ್ಷ್ಮಿ ಮತ್ತು ನಾಗರಾಜ ಕೆ ಅವರು ಅಭಿಯೋಜನೆ ಪರವಾಗಿ ವಾದ ಮಂಡಿಸಿದ್ದರು.
Mandya
ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇ ಜಯಂತಿ ಮಹೋತ್ಸವದ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಮಳವಳ್ಳಿ : ಡಿ.16ರಂದು ಮಳವಳ್ಳಿ ತಾಲ್ಲೂಕಿನಲ್ಲಿ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಭಾರತದ ಸನ್ಮಾನ್ಯ ರಾಷ್ಟ್ರಪತಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಮಳವಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾರೆಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹೆಲಿಪ್ಯಾಡ್ ಪ್ರದೇಶವನ್ನು ಪರಿಶೀಲಿಸಿ ಮೂರು ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಸ್ಥಳಗಳನ್ನು ಸಿದ್ಧಪಡಿಸಲಾಗಿದ್ದು, ಕೂಡಲೇ ಲ್ಯಾಂಡಿಂಗ್ ಸ್ಥಳವನ್ನು ಗುರುತಿಸಲು ಸೂಚನೆ ನೀಡಿದರು.

ಡಿಸೆಂಬರ್ 14, 2025 ರ ಭಾನುವಾರದಂದು ಕೇಂದ್ರಿಂದ ಪರಿಶೀಲನಾ ತಂಡವು ಆಗಮಿಸಲಿರುವುದರಿಂದ ಗುರುತಿಸಿರುವ ಹೆಲಿಪ್ಯಾಡ್ ಅನ್ನು ಸಮತಟ್ಟಾಗಿಸಿ, ನಿಯಮಾನುಸಾರ ಅಂತರ ಕಾಯ್ದುಕೊಳ್ಳುವುದು ಮತ್ತು ಧೂಳು ರಹಿತ ವ್ಯವಸ್ಥೆ ಕಲ್ಪಿಸಿ, ಗ್ರೀನ್ ರೂಂ ನಿರ್ಮಾಣದ ಕುರಿತು ಪರಿಶೀಲನಾ ತಂಡದ ಅಭಿಪ್ರಾಯದ ಮೇರೆಗೆ ಅಂತಿಮವಾಗಿ ನಿರ್ಧಾರ ಕೈಗೊಳ್ಳಿ ಎಂದು ಹೇಳಿದರು.
ಮಾರ್ಗಸೂಚಿಯ ನಿಯಮಾವಳಿಗಳಂತೆ ಹೈಸ್ಪೀಡ್ ಇಂಟರ್ನೆಟ್ ಮತ್ತು ದೂರವಾಣಿ ಸಂಪರ್ಕ ಕಲ್ಪಿಸಿ, ರಾಷ್ಟ್ರಪತಿ ಪ್ರೋಟೋಕಾಲ್ ಅನುಸಾರ ವೇದಿಕೆ, ಕುಳಿತುಕೊಳ್ಳುವ ಆಸನ ಹಾಗೂ ಜಾಗದ ವ್ಯವಸ್ಥೆಯನ್ನು ಮಾಡಿ, ವೇದಿಕೆಯ ಬಳಿಯೇ ತುರ್ತು ವೈದ್ಯಕೀಯ ತಂಡ ಇರುವಂತೆ ಸಮರ್ಪಕವಾಗಿ ಸಿದ್ಧಗೊಳಿಸಿ, ರಾಷ್ಟ್ರಪತಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ವಾಹನ ನಿಲುಗಡೆ ಪ್ರದೇಶವನ್ನು ಪರಿಶೀಲಿಸಿ, ಯಾವುದೇ ಸರ್ಕಾರಿ,ಖಾಸಗಿ ವಾಹನಗಳು ಸದರಿ ಪ್ರದೇಶದಲ್ಲಿ ನಿಲ್ಲದಂತೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ರಾಷ್ಟ್ರಪತಿಗಳು ಆಗಮಿಸುವ ಮಾರ್ಗ ಮತ್ತು ವಾಹನ ನಿಲುಗಡೆ ಜಾಗಗಳನ್ನು ಪರಿಶೀಲಿಸಿ, ಯಾವುದೇ ನಿಯಮಗಳು ಉಲ್ಲಂಘನೆಯಾಗದಂತೆ ಕ್ರಮ ವಹಿಸಿ, ಗಣ್ಯರಿಗೆ, ದೃಶ್ಯ ಹಾಗೂ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಮತ್ತು ಸಾರ್ವಜನಿಕರಿಗೆ ಸಿದ್ಧಪಡಿಸಿರುವ ಯೋಜನೆಯ ಪ್ರಕಾರ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಕಲ್ಪಿಸಿ. ವಸ್ತು ಪ್ರದರ್ಶನ ಮತ್ತು ಊಟ ವಿತರಣಾ ಸ್ಥಳಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸುಸಜ್ಜಿತವಾಗಿ ಸಾರ್ವಜನಿಕರು ಕುಳಿತುಕೊಳ್ಳುವ ಸ್ಥಳ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಸಿದ್ಧಪಡಿಸಿ, ರಾಷ್ಟ್ರಪತಿಗಳ ಭೇಟಿ ನೀಡಿದ ಸಂದರ್ಭದಲ್ಲಿ ಗೌರವ, ಭದ್ರತೆಯಿಂದ ಕೂಡಿರಬೇಕು ಮತ್ತು ಪ್ರೋಟೋಕಾಲ್ ಕಾಪಾಡುವ ದೃಷ್ಟಿಯಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಸಮಯ ಪಾಲನೆ ಮಾಡಿ ದೋಷರಹಿತವಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಹೇಳಿದರು.
ಸದರಿ ಸ್ಥಳಕ್ಕೆ ಆಗಮಿಸಿದ ಧಾರ್ಮಿಕ ನಾಯಕರಿಗೆ ಜಿಲ್ಲಾಧಿಕಾರಿಗಳು ಕಾರ್ಯಕ್ರಮದ ರೂಪರೇಷೆ ಮತ್ತು ಕೈಗೊಂಡಿರುವ ವ್ಯವಸ್ಥೆ ಸಿದ್ದತೆಗಳ ಕುರಿತು ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ ಕೆ.ಅನ್ನದಾನಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,ಉಪ ವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್ಪಿ ಯಶವಂತ್ ಕುಮಾರ್,ಪುರಸಭೆ ಮುಖ್ಯಾಧಿಕಾರಿ ನಾಗರತ್ನ,ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೋಮಶೇಖರ್, ವೃತ್ತ ನಿರೀಕ್ಷಕರಾದ ಶ್ರೀದರ್, ಬಸವರಾಜು, ಜಯಂತಿ ಮಹೋತ್ಸವದ ವಿವಿದ ಸಮಿತಿಗಳ ಪದಾಧಿಕಾರಿಗಳು, ಜೆ.ಎಸ್.ಎಸ್.ವಿದ್ಯಾಪೀಠದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಗಾಂಧಿ ಹಾಗೂ ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಿ: ಪ್ರೊ.ಜಯಪ್ರಕಾಶಗೌಡ
ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಗಾಂಧಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಗಾಂಧಿ ವಿಚಾರಧಾರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಗಾಂಧೀಜಿಯವರ ಆಶಯದಂತೆ ಇಂದು ಹೆಣ್ಣು ಮಕ್ಕಳು ಸ್ವತಂತ್ರ ಮತ್ತು ಸಮಾನತೆಯಿಂದ ಬದುಕುತ್ತಿದ್ದಾರೆ.
ಮಹಾತ್ಮ ಗಾಂಧೀಜಿಯವರು ದೇಶದ ಸ್ವತಂತ್ರಕ್ಕಾಗಿ ಹೋರಾಡಿದರೆ ಡಾ. ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಮಾನತೆಗಾಗಿ ಹೋರಾಡಿದ್ದಾರೆ.
ಗಂಡು ಮಕ್ಕಳನ್ನು ಮೀರಿ ಎಲ್ಲಾ ಕ್ಷೇತ್ರದಲ್ಲೂ ಮುಂದುವರೆಯುತ್ತಿದ್ದಾರೆ. ಪ್ರಸ್ತುತ ಮಹಿಳೆಯರು ಪ್ರವೇಶ ಮಾಡದೇಯಿರುವ ಕ್ಷೇತ್ರವಿಲ್ಲ, ಭಾರತದ ಯಶಸ್ಸಿಗೆ ಹಾಗೂ ಬದಲಾವಣೆಗಳಿಗೆ ಹೆಣ್ಣುಮಕ್ಕಳ ಸಮಾನತೆ ಕಾರಣವಾಗಿದೆ ಎಂದರೆ ತಪ್ಪಾಗುವುದಿಲ್ಲ ಎಂದರು.
ಅವರ ಚಿಂತನೆ ನಿಲುವು, ಆದರ್ಶವನ್ನು ಇಂದಿನ ಯುವ ಪೀಳಿಗೆಗಳು ಪಾಲಿಸಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ.ಜಯಪ್ರಕಾಶಗೌಡ ಅವರು ಹೇಳಿದರು.
ಗಾಂಧಿಯವರು ತಿಳಿಸದ ವಿಷಯವಿಲ್ಲ ಸ್ವಚ್ಛತೆ, ಶ್ರಮ, ಕೃಷಿ, ಆಹಾರ, ಆರೋಗ್ಯ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಗಾಂಧೀಜಿಯವರು ಸರಳತೆಯ ಜೀವನಕ್ಕೆ ಪ್ರಮುಖವಾದ ಉದಾಹರಣೆಯಾಗಿದ್ದಾರೆ. ಸರಳತೆಯೇ ಜಗತ್ತಿನ ಸಾರ ಎಂದ ಅವರು ಶಸಸ್ತ್ರ ಹಿಡಿಯದೆ, ರಕ್ತ ಪಾತವಿಲ್ಲದೆ, ದೇಶಕ್ಕೆ ಸ್ವತಂತ್ರ ತಂದು ಕೊಟ್ಟಿದ್ದಾರೆ. ವಿಶ್ವದಲ್ಲಿಯೇ ಶಾಂತಿ, ಸೌಹಾರ್ದತೆಯಿಂದ ದೇಶಕ್ಕೆ ಸ್ವತಂತ್ರ ತಂದ ನಿದರ್ಶನ ಗಾಂಧಿಯವರದ್ದು ಮಾತ್ರ ಎಂದು ಬಣ್ಣಿಸಿದರು.
ಶಿಕ್ಷಣವೆಂಬುದು ಕೇವಲ ಉದ್ಯೋಗಕ್ಕಾಗಿ ಸೀಮಿತವಾಗಿರುವುದಲ್ಲ ಶಿಕ್ಷಣದಿಂದ ಅರಿವು, ಜ್ಞಾನ, ಜೀವನದ ಮೌಲ್ಯ ಎಲ್ಲವೂ ತಿಳಿಯಲು ಸಾಧ್ಯ. ವಿದ್ಯಾರ್ಥಿಗಳಾದ ನೀವು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು, ಪ್ರಶ್ನಿಸುವುದರ ಜತೆಗೆ ಕೇಳಿಸಿಕೊಳ್ಳುವ ಆಸಕ್ತಿಯನ್ನು ಸಹ ಮೈಗೂಡಿಸಿಕೊಳ್ಳಬೇಕು.
ವಿಷಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಂಡಾಗ ಮಾತ್ರ ವಿಷಯದ ಆಳವಾಗಿ ಮಾಹಿತಿ ಅರ್ಥೈಸಿಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಮಂಡ್ಯ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಕೆ.ಶಿವಚಿತ್ತಪ್ಪ ಅವರು ಮಾತನಾಡಿ ಗಾಂಧೀಜಿಯವರು ಅಂದಿಗೂ ಇಂದಿಗೂ ಎಂದೆದಿಗೂ ಎಲ್ಲರಿಗೂ ಅನ್ವಯವಾಗುವಂತವರು ಆಗಾಗಿ ಗಾಂಧಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು.
ಆರ್ಥಿಕತೆಯ ಚಿಂತಕನಾಗಿ ದೇಶದಲ್ಲಿ ಬಡತನ ನಿವಾರಣೆಯಾಗಬೇಕು ಹಾಗೂ ದೇಶ ಸುಸ್ತಿರತೆ ಕಾಣಬೇಕು ಎಂಬುದು ಅವರ ಆಶಯವಾಗಿತ್ತು ಎಂದರು.
ಮಹಿಳೆಯರು ಭೌತಿಕ, ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಸಬಲೀಕರ ಹೊಂದಬೇಕು ಎಂದು ಗಾಂಧಿಯವರು ಮೊದಲಿಗೆ ಹೇಳಿದ್ದರು.
ಈ ನಿಟ್ಟಿನಲ್ಲಿ ಮಹಿಳೆಯರು ಪುರುಷರಿಗಿಂತಲೂ ಹೆಚ್ಚಾಗಿ ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಅಲ್ಲದೆ ತಂತ್ರಜ್ಞಾನದಲ್ಲೂ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ಗಾಂಧೀಜಿ ಚಿಂತನೆಗಳ ಪ್ರಸ್ತುತತೆ ಕುರಿತು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನಿರ್ದೇಶಕರಾದ ಜಿ.ಬಿ.ಶಿವರಾಜು ಹಾಗೂ ರಾಜ್ಯ ಸಂಪನ್ಮೂಲ ಕೇಂದ್ರ ನಿವೃತ್ತ ನಿರ್ದೇಶಕರಾದ ಎಸ್.ತುಕಾರಾಂ ಅವರು ಉಪನ್ಯಾಸ ಮಾಡಿದರು.
ಈ ಸಂದರ್ಭದಲ್ಲಿ ಗಾಂಧಿ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಸುಮಾರಾಣಿ ಶಂಭು, ಉಪ ಕುಲ ಸಚಿವರಾದ ಡಾ. ಎಂ. ವೈ ಶಿವರಾಮು, ಮೌಲ್ಯಮಾಪನ ಕುಲಸಚಿವರಾದ ಜಿ. ವಿ ವೆಂಕಟರಮಣ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಜಿ. ವಿ ಪ್ರೇಮ್ ಸಿಂಗ್ ಹಾಜರಿದ್ದರು.
-
Kodagu24 hours agoಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಎಸ್ಟಿ ಮೋರ್ಚಾ ಅಸಮಾಧಾನ
-
Kodagu16 hours agoಜಿಲ್ಲೆಯಾದ್ಯಂತ ಡಿ.21 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
-
Mysore14 hours agoಬಿಸಿಯೂಟ ಅನುದಾನ ದುರುಪಯೋಗ
-
Chamarajanagar16 hours agoಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
-
Mysore17 hours agoನಂಜನಗೂಡು ಪತ್ರ ಬರಹಗಾರ ಸಂಘದಿಂದ ಡಿ. 15 ಮತ್ತು 16 ರಂದು ಪ್ರತಿಭಟನೆ
-
Kodagu24 hours agoಅಕ್ರಮವಾಗಿ ಮಾರಾಟ ನಾಟ ಸಾಗಾಟ – ಮೂವರ ವಿರುದ್ಧ ಪ್ರಕರಣ ದಾಖಲು
-
Mysore17 hours agoವರುಣ ಹೋಬಳಿಯ ಮೇಗಳಾಪುರ ಗ್ರಾಮದಲ್ಲಿ ಇ-ಪೌತಿ ಆಂದೋಲನ: ಹೆಚ್ಚುವರಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
-
Mysore17 hours agoಮನುಷ್ಯನ ಸಾಧನೆಗೆ ಆರೋಗ್ಯ ಮುಖ್ಯ : ಯೋಜನಾಧಿಕಾರಿ ಉಮೇಶ್ ಪೂಜಾರಿ
