Mandya
ಕಾಂಗ್ರಸ್ ಅಭ್ಯರ್ಥಿ ಬೆಂಬಲಿಸುವಂತೆ ಬದರಿ ನಾರಾಯಣ್
ಮಂಡ್ಯ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣಗೌಡರನ್ನು ಬೆಂಬಲಿಸುವುದಾಗಿ ಜಿಲ್ಲಾ ಜನತಾದಳ ಹಿಂದುಳಿದ ವರ್ಗಗಳ ಘಟಕದ ಮಾಜಿ ಅಧ್ಯಕ್ಷ ಹೆಚ್.ಬಿ ಬದರಿ ನಾರಾಯಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 30 ವರ್ಷಗಳಿಂದ ಜನತಾದಳದ ಸಂಘಟನೆಯಲ್ಲಿ ತೊಡಗಿದ್ದು , ಪ್ರಸ್ತುತ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗದ ಕಾರಣ, ಜಿಲ್ಲೆಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಮಾಜಿ ಶಾಸಕ ಎಚ್. ಬಿ.ರಾಮು ಅವರ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು.

ಪ್ರಸ್ತುತ ಲೋಕಸಭಾ ಚುನಾವಣೆ ನಡೆಯುತ್ತಿದ್ದು , ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟರಮಣ ಗೌಡ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು.
Mandya
ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡಬೇಕು : ಸಾಹಿತಿ ಟಿ. ಸತೀಶ್ ಜವರೇಗೌಡ
ನಾಗಮಂಗಲ : ಮಕ್ಕಳು ಶಾಲಾ ಕಲಿಕಾ ಅವಧಿ ಮುಗಿಸಿ ಮನೆಗೆ ಬಂದಾಗ, ಪೋಷಕರು ಅದೆಷ್ಟೇ ದಿನನಿತ್ಯದ ಒತ್ತಡಗಳ ನಡುವೆ ಇದ್ದರೂ ಕೂಡ, ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡಬೇಕು. ಆ ಮೂಲಕ ಅವರ ಭವಿಷ್ಯವನ್ನು ರೂಪಿಸಲು ಶ್ರಮಿಸಬೇಕು ಎಂದು ಯುವ ಬರಹಗಾರರ ಬಳಗದ ಅಧ್ಯಕ್ಷ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಕರೆ ನೀಡಿದರು.
ತಾಲೂಕಿನ ಗದ್ದೆಭುವನಹಳ್ಳಿಯ ಸಮೀಪವಿರುವ ಋಷಿ ಶ್ರೀ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಶಾಲಾ ವಾರ್ಷಿಕೋತ್ಸವ ಮತ್ತು ಋಷಿ ಕಲಾ ಸಂಭ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಮನುಷ್ಯನಿಗೆ ನಿಜವಾದ ಸಂಪತ್ತು. ಒಬ್ಬ ವ್ಯಕ್ತಿ ಶಿಕ್ಷಣ ಪಡೆದರೆ ಆತ ಎಂದಿಗೂ ಕೂಡ ಅದನ್ನು ಕಳೆದುಕೊಳ್ಳುವುದಿಲ್ಲ. ಅದು ಸದಾ ಅಕ್ಷಯವಾಗುವ ಸಂಪತ್ತು ಎಂದು ತಿಳಿಸಿದರು.

ಮಕ್ಕಳು ಓದುವ ಸಮಯದಲ್ಲಿ ಪೋಷಕರು ಟಿವಿ ಮತ್ತು ಮೊಬೈಲಿನಿಂದ ದೂರವಿರಬೇಕು. ಅವರು ಕೂಡ ಮಕ್ಕಳ ಜೊತೆಗೆ ದಿನಪತ್ರಿಕೆಗಳನ್ನೋ ಅಥವಾ ಪುಸ್ತಕಗಳನ್ನೋ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಆಗ ಮಕ್ಕಳು ಪಠ್ಯಪುಸ್ತಕಗಳನ್ನು ಕೇಂದ್ರೀಕರಿಸಿ ಅಭ್ಯಾಸ ಮೂಲಕ ಕಲಿಕಾ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಾರೆ. ಅವರು ಪುಸ್ತಕದ ಒಡನಾಟಕ್ಕೆ ಹೋದಾಗ ಟಿವಿ, ಮೊಬೈಲಿನಿಂದ ಸಹಜವಾಗಿ ದೂರ ಉಳಿಯುತ್ತಾರೆ ಎಂದರು.
ಪ್ರಕೃತಿಯ ಸಂಪತ್ತನ್ನು ವೃದ್ಧಿಸಲು ಶ್ರಮಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಾಡಿಗೆ ದೊಡ್ಡ ಕೊಡುಗೆ ಕೊಟ್ಟು ಹೋಗಿದ್ದಾರೆ. ಯಾವ ಮನುಷ್ಯ ಪ್ರಕೃತಿಯ ಆಸರೆಯಲ್ಲಿ ಬದುಕುತ್ತಾನೋ ಆ ವ್ಯಕ್ತಿ ಸಮಾಜದಲ್ಲಿ ಉತ್ತಮ ನಾಗರಿಕನಾಗುತ್ತಾನೆ. ಆದ್ದರಿಂದ ಮಕ್ಕಳಿಗೆ ಪ್ರಕೃತಿಯ ಜೊತೆಗೆ ಒಡನಾಟದ ಅಗತ್ಯವಿದೆ. ಇಂತಹ ವಾತಾವರಣ ಕಲ್ಪಿಸಿ ಮಕ್ಕಳ ಭವಿಷ್ಯ ರೂಪಿಸುವ ಜೊತೆಗೆ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಋಷಿಶ್ರೀ ಶಿಕ್ಷಣ ಸಂಸ್ಥೆ ಮಾಡುತ್ತಿದೆ. ಮಕ್ಕಳ ಸುರಕ್ಷತೆಗೆ ಪೂರಕವಾಗಿ ಯಾವೆಲ್ಲಾ ಸೌಕರ್ಯಗಳನ್ನು ಕಲ್ಪಿಸಬೇಕೋ ಅವೆಲ್ಲವನ್ನು ಈ ಶಿಕ್ಷಣ ಸಂಸ್ಥೆ ಒದಗಿಸಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಮೈಸೂರಿನ ಜೆಎಸ್ಎಸ್ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹೊನ್ನಶೆಟ್ಟಿ ಮಾತನಾಡಿ, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹುಮುಖ್ಯ. ಮಕ್ಕಳಿಗೆ ವಿದ್ಯೆ, ವಿನಯ, ವಿವೇಕದ ಜೊತೆಗೆ ಒಳ್ಳೆಯ ಮಾತುಗಳನ್ನಾಡುವುದನ್ನು ಕಲಿಸಿದರೆ, ಅಂತಹ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಲೋಕೇಶ್ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿಯುತ್ತಿರುವ ಸನ್ನಿವೇಶದಲ್ಲಿ ಮಕ್ಕಳನ್ನು ಸ್ಪರ್ಧಾತ್ಮಕ ಯುಗಕ್ಕೆ ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ಕಲಿಸುವುದು ಅಗತ್ಯ ಎಂದು ತಿಳಿಸಿದರು.
ಹೊಸಕೊಪ್ಪಲು ಗ್ರಾಮದ ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್ ಮಾತನಾಡಿದರು. ಋಷಿಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಮ್ಮ ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಕೆ. ರವೀಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಿರೂಪಾಕ್ಷ, ಕರಡಳ್ಳಿ ವಲಯ ಸಂಪನ್ಮೂಲ ವ್ಯಕ್ತಿ ಎನ್.ಎಸ್. ಸುರೇಶ್, ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನಟರಾಜು, ಖಜಾಂಚಿ ಎಸ್.ವಿ. ಮಂಜುನಾಥ್, ಶಾಲೆಯ ಮುಖ್ಯ ಶಿಕ್ಷಕ ಎನ್. ಗುರುಪ್ರಸಾದ್, ವಿಸ್ಡ್ಂ ಪಬ್ಲಿಕ್ ಶಾಲೆಯ ಬೋರೇಗೌಡ ಸೇರಿದಂತೆ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಭವ್ಯ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರಿಗೂ ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು. ಶಾಲಾ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ತಾಲೂಕಿನ ಗದ್ದೆಭುವನಹಳ್ಳಿಯ ಋಷಿಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಸಾಹಿತಿ ಟಿ. ಸತೀಶ್ ಜವರೇಗೌಡ ಅವರನ್ನು ಕನ್ನಡ ಪ್ರಾಧ್ಯಾಪಕ ಪ್ರೊ. ಹೊನ್ನಶೆಟ್ಟಿ ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಮ್ಮ, ಕಾರ್ಯದರ್ಶಿ ನಟರಾಜು, ಖಜಾಂಚಿ ಎಸ್.ವಿ. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಲೋಕೇಶ್, ಬಿ.ಆರ್.ಸಿ. ಕೆ. ರವೀಶ್ ಉಪಸ್ಥಿತರಿದ್ದರು.
Mandya
ಧರ್ಮಸ್ಥಳ ಸಂಘದಿಂದ ಬಡ ಕುಟುಂಬಕ್ಕೆ ವಾತ್ಸಲ್ಯ ಕಿಟ್ ವಿತರಣೆ
ಶ್ರೀರಂಗಪಟ್ಟಣ: ತಾಲೂಕಿನಲ್ಲಿ ಇರುವ ಸುಮಾರು 31 ಬಡ ಕುಟುಂಬಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ
ಪ್ರಾದೇಶಿಕ ನಿರ್ದೆಶಕ ಜಯಂತ್ ಪೂಜಾರಿರವರು ವಾತ್ಸಲ್ಯ ಕಿಟ್ ವಿತರಿಸಿದರು.
ಶ್ರೀ ಕ್ಷೇತ್ರದಿಂದ ವಿತರಿಸಲಾಗುತ್ತಿರುವ ಈ ವಾತ್ಸಲ್ಯ ಕಿಟ್ ಗಳು ಅವರ ಬಡತನವನ್ನು ತಾತ್ಕಲಿಕವಾಗಿ ನೀಗಿಸಿ, ಜೀವನದಲ್ಳಿ ಮುಂದೆ ಬರಲು ಉತ್ಸಾಹ ತುಂಬಲಿದೆ ಎಂದರು.

ಈ ವೇಳೆ ಪುರಸಭಾ ಸದಸ್ಯ ರಾಜು, ಜನ ಜಾಗೃತಿ ವೇದಿಕೆ ಅಧ್ಯಕ್ಷೆ ನಳಿನಿ, ಮಾಜಿ ಪುರಸಭೆ ಸದಸ್ಯ ಸುಬ್ರಮಣ್ಯ, ಕ್ಷೇತ್ರ ಯೋಜನಾಧಿಕಾರಿ ಗಣಪತಿ ಭಟ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Mandya
ಫೆ. 06 ರಂದು ಜಿಲ್ಲಾ”ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ
ಮಂಡ್ಯ: ಜಿಲ್ಲಾ “ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ” :ಅಭಿಯಾನದ ಅಂಗವಾಗಿ ನಾಳೆ(ಫೆ.06) ಮಕ್ಕಳ ಸಂರಕ್ಷಣೆ ಮತ್ತು ಕಾನೂನು ಕುರಿತು ಬೃಹತ್ ತರಬೇತಿ ಕಾರ್ಯಾಗಾರ ಹಮ್ನಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಬಾಲ ನ್ಯಾಯ ಸಮಿತಿ ಕರ್ನಾಟಕ ಉಚ್ಚ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಡ್ಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ (ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ,ಇವರ ಸಂಯುಕ್ತ ಆಶ್ರಯದಲಲ್ಲಿ ಜಿಲ್ಲೆಯನ್ನು “ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ” ಅಭಿಯಾನದ ಅಂಗವಾಗಿ ಮಕ್ಕಳ ಸಂರಕ್ಷಣೆ ಮತ್ತು ಕಾನೂನು ಕುರಿತು ಬೃಹತ್ ತರಬೇತಿ ಕಾರ್ಯಾಗಾರವನ್ನು ಫೆ. 06 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ.

ಜಿಲ್ಲಾ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಹೆಚ್. ಶಶಿಧರ ಶೆಟ್ಟಿ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಕಾರ್ಯಕ್ರಮದ ಅಧ್ಯಕತೆಯನ್ನು ವಹಿಸಲಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ.ಎಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಶಿವಪ್ರಸಾದ್ ಕೆ.ಬಿ,ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ವೆಂಕಟೇಶ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಆರ್. ನಂದಿನಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯಜಂಟಿ ನಿರ್ದೇಶಕರಾದ ನಿಶ್ಚಲ್ ಬಿ.ಹೆಚ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ನಿರ್ದೇಶಕರಾದ ಡಾ.ಸ್ನೇಹ ಸಿ.ವಿ ಕೆ.ಎ.ಎಸ್,ವಕೀಲರ ಸಂಘ,ಅಧ್ಯಕ್ಷರು ಸತ್ಯಾನಂದ.ಟಿ.ಎಸ್.,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೋಭಾರಾಣಿ ವಿ.ಜೆ,ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

-
Special11 hours agoಕೊನೆಗೂ ಬಂತು ಯುಪಿಎಸ್ಸಿ ನೇಮಕಾತಿ: 933 ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸುವಿಕೆ ಆರಂಭ!
-
Special21 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Sports8 hours agoWPL Champions| ಸತತ 2ನೇ ಆರ್ಸಿಬಿಗೆ ಚಾಂಪಿಯನ್ ಕಿರೀಟ: RCB ಹ್ಯಾಟ್ರಿಕ್ ಸಾಧನೆ!
-
Mysore12 hours agoಮನರೇಗಾ ಹೆಸರು ಬದಲಾವಣೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
-
Kodagu16 hours agoಫೆ. 7ಕ್ಕೆ ಕೆಎಸ್ಆರ್ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ
-
National19 hours agoಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
-
National15 hours agoಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಎಚ್ಡಿಕೆ ಮನವಿ: ಅಶ್ವಿನಿ ವೈಷ್ಣವ್ರಿಂದ ಸಕರಾತ್ಮಕ ಪ್ರತಿಕ್ರಿಯೆ
-
Mysore17 hours agoಪಾರಂಪರಿಕ ತಾಣದಲ್ಲಿ ಧೂಮಪಾನ: ಬಿಗ್ಬಾಸ್ ಸ್ಪರ್ಧಿ ರಜತ್ ವಿರುದ್ಧ ದೂರು
