Cinema
ಬಾಹುಬಲಿ ಮೇಣದ ಪ್ರತಿಮೆ ತೆರವು
ಮೈಸೂರು: ನಗರದ ಮ್ಯೂಸಿಯಂನಲ್ಲಿ ನಟ ಪ್ರಭಾಸ್ ಹೋಲುವ ಮೇಣದ ಪ್ರತಿಮೆಯನ್ನು ಇರಿಸಲಾಗಿತ್ತು. ಇದೀಗ ‘ಬಾಹುಬಲಿ’ ಸಿನಿಮಾ ನಿರ್ಮಾಪಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮ್ಯೂಸಿಯಂನಲ್ಲಿ ಇಡಲಾಗಿದ್ದ ಪ್ರಭಾಸ್ ಹೋಲುವ ಆ ಮೇಣದ ಪ್ರತಿಮೆಯನ್ನು ಸೋಮವಾರ ತೆರವುಗೊಳಿಸಲಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟದ ಕೆಳಭಾಗದಲ್ಲಿರುವ ಮ್ಯೂಸಿಯಂನಲ್ಲಿ ನಟ ಪ್ರಭಾಸ್ ಅವರನ್ನು ಹೋಲುವ ಮೇಣದ ಪ್ರತಿಮೆಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಇತ್ತೀಚೆಗೆ ಈ ಮ್ಯೂಸಿಯಂಗೆ ಅನೇಕರು ಭೇಟಿ ನೀಡಿದ್ದಾರೆ. ಅವರಲ್ಲಿ ಪ್ರವಾಸಿಗರೊಬ್ಬರು ಈ ಮೇಣದ ಪ್ರತಿಮೆಯ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದನ್ನು ಗಮನಿಸಿದ ‘ಬಾಹುಬಲಿ’ ನಿರ್ಮಾಪಕ ಶೋಬು ಯಾರ್ಲಗಡ್ಡ, ಈ ಪ್ರತಿಮೆ ನುರಿತ ಕಲಾವಿದರು ಮಾಡಿದಂತಿಲ್ಲ. ಜೊತೆಗೆ ಇದನ್ನು ಪ್ರದರ್ಶಿಸಲು ಅನುಮತಿ ಪಡೆದಿಲ್ಲ ಎಂದು ಮ್ಯೂಸಿಯಂಗೆ ಕರೆಮಾಡಿ ಪ್ರಭಾಸ್ ಹೋಲುವ ಮೇಣದ ಪ್ರತಿಮೆಯನ್ನು ತೆರವುಗೊಳಿಸುವಂತೆ ಕೇಳಿಕೊಂಡಿದ್ದರು. ಅದರಂತೆ, ಸೋಮವಾರ ಆ ಪ್ರತಿಮೆ ತೆರವುಗೊಳಿಸಿದ್ದೇವೆ ಎಂದು ಮ್ಯೂಸಿಯಂನ ಸಿಬ್ಬಂದಿ ತಿಳಿಸಿದ್ದಾರೆ.
Cinema
ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲಿನ ಮಾರಣಾಂತಿಕ ದಾಳಿ ಬಗ್ಗೆ ಮೊದಲ ಬಾರಿಗೆ ಬಾಲಿವುಡ್ ನಟಿ, ಸೈಫ್ ಅಲಿ ಖಾನ್ ಪತ್ನಿ ಕರೀನಾ ಕಪೂರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಕರೀನಾ ಕಪೂರ್, ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ, ತನ್ನ ಚಾಕುವಿನಿಂದ ದಾಳಿ ನಡೆಸಿದ, ಆದರೆ ಅಲ್ಲಿ ಬಹಿರಂಗವಾಗಿ ಇರಿಸಿದ್ದ ಯಾವುದೇ ನಗದು, ಚಿನ್ನಾಭರಣವನ್ನು ಆತ ಕದಿಯಲು ಯತ್ನಿಸಲಿಲ್ಲ.
ಹೊಡೆದಾಟದ ವೇಳೆ ದುಷ್ಕರ್ಮಿ ತುಂಬಾ ಆಕ್ರಮಣಕಾರಿಯಾಗಿ ದಾಳಿ ನಡೆಸಿದ ಈ ವೇಳೆ ಸೈಫ್ ಮೇಲೆ ನಿರಂತರವಾಗಿ ಆರು ಬಾರಿ ಚಾಕುವಿನಿಂದ ದಾಳಿ ಮಾಡಿದ. ಆದರೆ ಕಣ್ಣಮುಂದೆ ತೆರದಿಟ್ಟಿದ್ದ ಯಾವುದೇ ನಗದು, ಚಿನ್ನಾಭರಣವನ್ನು ಅವನು ಮುಟ್ಟಲಿಲ್ಲ ಎಂದು ಕರೀನಾ ಕಪೂರ್ ಹೇಳಿಕೆ ನೀಡಿದ್ದಾರೆ.
ಮೊದ ಮೊದಲಿಗೆ ಈ ದಾಳಿ ಕೇವಲ ಕಳ್ಳತನಕ್ಕಾಗಿ ಎಂದು ಭಾವಿಸಲಾಗಿತ್ತು. ಆದರೆ ಕರೀನಾ ಅವರು ನೀಡಿದ ಹೇಳಿಕೆ ಆಧರಿಸಿದ ಬಳಿಕ ಈ ದಾಳಿಯ ಹಿಂದೆ ಹಲವಾರು ಊಹಾಪೋಹಗಳು ಹುಟ್ಟುಕೊಂಡಿವೆ.
ಸೈಫ್ ಅಲಿ ಖಾನ್ ಅವರ ಮೇಲಿನ ದಾಳಿ ನಡೆದು ೪೮ ಗಂಟೆ ಕಳೆದಿದ್ದರೂ ಸಹಾ 30 ತಂಡಗಳನ್ನು ರಚಿಸಿರುವ ಮುಂಬೈ ಪೊಲೀಸರಿಂದ ಅಪರಾಧಿಯನ್ನು ಪತ್ತೆ ಹಚ್ಚಲಾಗಿಲ್ಲ.
Cinema
ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: ವೈದ್ಯರು ಹೇಳಿದ್ದೇನು?
ಮುಂಬೈ: ಬಾಲಿವುಡ್ ಖ್ಯಾತನಟ ಸೈಫ್ ಅಲಿ ಖಾನ್ ಅವರಿಗೆ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಒಟ್ಟು ಆರು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಈ ಸಂಬಂಧ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಗುರುವಾರ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸುಮಾರು ಆರು ಬಾರಿ ಇರಿದ ಕಾರಣದಿಂದ ಬೆನ್ನು ಮೂಳೆ, ದೇಹದ ಎರಡು ಭಾಗಗಳಲ್ಲಿ ಆಳವಾಗಿ ಗಾಯಗಳಾಗಿವೆ. ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಪ್ರಣಾಪಾಯವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ತಾವು ಬೆನ್ನು ಮೂಳೆ ಬಳಿ ಉಳಿದ ಚಾಕನ್ನು ಹೊರತೆಗೆಯುವ ಉದ್ದೇಶದಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ನಾಳೆ ಅವರ ವಿಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Cinema
ಜ.17ರಂದು “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ತೆರೆಗೆ
ಮಂಗಳೂರು: ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ ನೋಡಿ ಎಂದರು.
ನಾಯಕನಟ ಅಥರ್ವ ಪ್ರಕಾಶ್ ಮಾತನಾಡಿ, ”ನನ್ನ ಮೊದಲ ಸಿನಿಮಾ ತುಳುವಿನ ಚಾಲಿಪೋಲಿಲು, ನಂತರ ನಾನು ಎಂಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈ ಸಿನಿಮಾದಲ್ಲಿ ಬಹುತೇಕ ಎಲ್ಲರೂ ತುಳು ಕಲಾವಿದರೇ ಇದ್ದಾರೆ. ಸಿನಿಮಾದ ಕುರಿತು ನನಗೆ ಹೆಚ್ಚಿನ ನಿರೀಕ್ಷೆಯಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ“ ಎಂದರು.
ನಾಯಕಿ ಪ್ರಾರ್ಥನಾ ಮಾತಾಡಿ, ”ನಾನು ಮಂಗಳೂರ ಹುಡುಗಿ. ಸಿನಿಮಾದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತುಳು ರಂಗಭೂಮಿಯ ಬಹುತೇಕ ಕಲಾವಿದರು ಸಿನಿಮಾದಲ್ಲಿದ್ದಾರೆ. ಎಲ್ಲರೂ ಚಿತ್ರತಂಡವನ್ನು ಪ್ರೋತ್ಸಾಹಿಸಿ“ ಎಂದರು.
ನಟ ಜ್ಯೋತಿಷ್ ಶೆಟ್ಟಿ ಮಾತಾಡಿ, ”ಸಿನಿಮಾದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಮಂಗಳೂರಿನ ಮಣ್ಣಿನ ಸೊಗಡು ಈ ಸಿನಿಮಾದಲ್ಲಿದೆ. ಎಲ್ಲರೂ ಸಿನಿಮಾ ನೋಡಿ“ ಎಂದರು.
ನಟರಾಜ್ ಸಿನಿಮಾ ನಿರ್ದೇಶನ ಮಾಡಿದ್ದು ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಕಲಾ ರಾವ್, ನಮಿತಾ ಇತರರು ಸಿನಿಮಾದ ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಅನಿತಾ, ರವಿ ರಾಮಕುಂಜ, ರಾಜೇಶ್ ಸ್ಕೈ ಲಾರ್ಕ್ , ನಿರ್ಮಾಪಕಿ ಅನಿತಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.
-
Kodagu21 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu20 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech18 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports22 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
National - International24 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Mysore21 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore20 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು
-
Hassan23 hours ago
ನ್ಯಾಯಾಲಯದ ತಡೆ ಆಜ್ಞೆ ಇದ್ರೂ ವಿಮಾನ ನಿಲ್ದಾಣದ ಸುತ್ತ ಕಾಂಪೌಂಡ್ ನಿರ್ಮಾಣ