Mysore
ಗಿಡ ನೆಟ್ಟು ಬಕ್ರೀದ್ ಹಬ್ಬ ಆಚರಣೆ
ಮೈಸೂರು: ನರಸಿಂಹರಾಜ ಕ್ಷೇತ್ರದ ವಾರ್ಡ್ ನಂ. 35 ರ ತ್ರಿವೇಣಿ ವೃತ್ತದಲ್ಲಿ ತ್ರಿವೇಣಿ ಗೆಳೆಯರ ಬಳಗದ ವತಿಯಿಂದ ಬಕ್ರೀದ್ ಹಬ್ಬ ಅಂಗವಾಗಿ ಹಿಂದೂ ಮುಸ್ಲಿಂ ಸಮುದಾಯಗಳ ಮುಖಂಡರು ಜೊತೆಗೂಡಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಾರುವ ಮೂಲಕ ಬಕ್ರಿದ್ ಹಬ್ಬಕ್ಕೆ ಶುಭಾಶಯ ಕೋರಿದರು.

ಯುವ ಮುಖಂಡ ಅಫ್ತಾಬ್ ಅಹಮದ್ ಮಾತನಾಡಿ, ತ್ಯಾಗ ಮತ್ತು ಬಲಿದಾನದ ಹಬ್ಬವೆಂದೇ ಕರೆಯಲಾಗುವ ಮುಸಲ್ಮಾನರ ಪವಿತ್ರಹಬ್ಬ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂದವರು ಉತ್ಸಾಹ ಮತ್ತು ಕುಟುಂಬದ ಸದಸ್ಯರೊಂದಿಗೆ ಭಾಂದವ್ಯ ಬೆರೆತು ಆಚರಿಸುತ್ತಾರೆ ಎಂದರು.

ಬಿಜೆಪಿ ಮುಖಂಡ ಬಿ.ಆನಂದ್ ಮಾತನಾಡಿ, ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡವ ಯತ್ನಗಳು ನಡೆಯುತ್ತಿದ್ದು, ಆದ್ದರಿಂದ ಎರಡು ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು. ಈ ದಿನ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಿರುವುದು ಬಹಳ ಸಂತಸದ ವಿಚಾರ. ಇದೇ ರೀತಿಯ ಹಬ್ಬಗಳು ಸೌಹಾರ್ದತೆಯಿಂದ ಪ್ರತಿ ಜಿಲ್ಲೆಯಲ್ಲಿ ಆದರೆ ಬಹಳ ಉತ್ತಮ ಬೆಳವಣಿಗೆ ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದರು.

ಇದೇ ವೇಳೆ ವಾರ್ಡಿನ ಅದ್ಯಕ್ಷ ಬಸವರಾಜು, ಮಸಳ್ಳಿ ಪ್ರಭು, ಮಣಿರತ್ನಂ ಕಿರಣ್, ಇರ್ಫಾನ್, ಸಮಿಉಲ್ಲಾ ಖಾನ್, ಗೋವಿಂದ ಮಹೇಶ್, ಆಪ್ತಾಬ್ ಸಲಿಮ್ ಅಕ್ಬರ್, ನಯಾಜ್, ಸುಮ ಹಾಗೂ ಇನ್ನಿತರ ಹಿಂದೂ ಹಾಗೂ ಮುಸಲ್ಮಾನ್ ಮುಖಂಡರು ಉಪಸ್ಥಿತರಿದ್ದರು.
Mysore
ಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
ಮೈಸೂರು: ನಗರದ ಸರಸ್ವತಿಪುರಂನಲ್ಲಿರುವ ಸಾನಿಧ್ಯ ವೃದ್ಧಾಶ್ರಮದ ಹಿರಿಯ ನಾಗರಿಕ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು ಹಂಪಲು ವಿತರಿಸುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾಪರಿನಿಬ್ಬಾಣ ದಿನವನ್ನು ಸೇವಾ ಕಾರ್ಯದೊಂದಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಕ್ರೀಡಾಪಟು ಮಹದೇವ್, ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ 69ನೇ ಮಹಾಪರಿ ನಿಬ್ಬಣ ದಿನವನ್ನು ಇಂದಿನ ಯುವಪೀಳಿಗೆ ಅವರ ಆದರ್ಶ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಅವರು ನೀಡಿರುವ ಸಂವಿಧಾನ ಅಡಿಯಲ್ಲಿ ಎಲ್ಲರೂ ಶಾಂತಿಯುತವಾಗಿ ಸಹ ಬಾಳ್ವೆಯೊಂದಿಗೆ ಬಾಳಬೇಕು. ಸ್ನೇಹ ಬಳಗವು ಸೇವಾ ಕಾರ್ಯದೊಂದಿಗೆ ಗೌರವ ನಮನ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷಕರ ಸಂಗತಿ ಎಂದರು.

ನಂತರ ಮಾತನಾಡಿದ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಡಾ. ಬಿ. ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಅಳವಡಿಸಿಕೊಂಡು ಬದುಕುತ್ತಿದ್ದೇವೆ.ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಮತದಾನದ ಹಕ್ಕನ್ನು ನೀಡಿರುವ ಈ ಆದರ್ಶ ಪುರುಷ ಭೌತಿಕವಾಗಿ ನಮ್ಮ ಜೊತೆ ಇಲ್ಲದೆ ಇರಬಹುದು. ಆದರೆ ಅವರ ನಡೆದು ಬಂದ ಹಾದಿ ಅವರ ಆದರ್ಶ ವ್ಯಕ್ತಿತ್ವ ನಮಗೆಲ್ಲರಿಗೂ ಸದಾ ಪ್ರೇರಣೆಯಾಗಿದೆ ಎಂದು ತಿಳಿಸಿದರು.
ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್, ಸಿಂಚನಗೌಡ (ಮಂಗಳಮುಖಿ), ವಿದ್ಯಾ, ಛಾಯಾ,ಗಾಯಕ ಯಶವಂತ್ ಕುಮಾರ್, ರಾಜೇಶ್ ಕುಮಾರ್ ಮಹೇಶ, ನಿರೀಕ್ಷಿತ್, ದತ್ತ ಇನ್ನಿತರರು ಇದ್ದರು.
Mysore
ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬಾಲಕಿ ಸ್ಥಳದಲ್ಲೇ ಸಾ*ವು, ಮೂವರ ಸ್ಥಿತಿ ಗಂಭೀರ
ಚಿಕ್ಕಮಗಳೂರು: ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಲಹರಿ (6) ಸ್ಥಳದಲ್ಲೇ ಮೃತಪಟ್ಟ ಬಾಲಕಿ. ಅವರ ಸಹೋದರಿ, ತಂದೆ ತಾಯಿ ಸ್ಥಿತಿ ಗಂಭೀರವಾಗಿದೆ.
ಪುನೀತ್ (37) ಚೈತ್ರ (34)ದಂಪತಿ ಮಗು ಸಿರಿ(8) ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಮಕ್ಕಳ ಜೊತೆ ಬೈಕಿನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ.

ಬೈರಂಬುದಿ ಗ್ರಾಮದಿಂದ ಅಂಬಳೆ ಗ್ರಾಮಕ್ಕೆ ಬರುತ್ತಿದ್ದ ಪುನೀತ್ ಕುಟುಂಬದೊಂದಿಗೆ ಬೈಕಿನಲ್ಲಿ ಬರುತ್ತಿದ್ದ ಪುನೀತ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಇನ್ನೂ ಗಾಯಾಳುಗಳಿಗೆ ಚಿಕ್ಕಮಗಳೂರು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲಹರಿ ಮೃತ ದೇಹ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Mysore
ಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
ಮೈಸೂರು: ಲೇವಾದೇವಿ, ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ನಿವಾಸಿ ಲೋಕೇಶ್ ಅಪಹರಣಕ್ಕೆ ಒಳಗಾಗಿದ್ದ ಉದ್ಯಮಿ. ಸುಲಭವಾಗಿ ಹಣ ಮಾಡುವ ಸಂಚು ರೂಪಿಸಿದ್ದ ಸಂತೋಷ್ ಹೆಚ್. ಎಂ., ಅಭಿಷೇಕ್ ಹೆಚ್. ಎಸ್., ಪ್ರಜ್ವಲ್ ಆರ್. ಹಾಗೂ ದರ್ಶನ್ ಬಿ.ಎನ್. ಬಂಧಿತ ಆರೋಪಿಗಳು.
ಆಗಿದ್ದೇನು?
ಶನಿವಾರ ರಾತ್ರಿ 8.15ರ ಸಮಯದಲ್ಲಿ ವಿಜಯನಗರ 3ನೇ ಹಂತ ಹೆರಿಟೇಜ್ ಕ್ಲಬ್‌ನಿಂದ ಲೋಕೇಶ್ ಹೊರಗೆ ಬಂದಿದ್ದಾರೆ. ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಅಡ್ಡಗಟ್ಟಿದ ನಾಲ್ವರ ಗುಂಪು ಕಣ್ಣಿಗೆ ಖಾರದ ಪುಡಿ ಎರಚಿ ಬಲವಂತವಾಗಿ ಟಾಟಾ ಸುಮೋ ವಾಹನದಲ್ಲಿ ಎತ್ತಿ ಹಾಕಿಕೊಂಡು ಅಪಹರಣ ಮಾಡಿದ್ದರು. ಲೋಕೇಶ್ ಒತ್ತೆಯಾಳಗಿರಿಸಿಕೊಂಡು ಒಂದು ಕೋಟಿ ರೂ. ಗಳಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕಿಡ್ನಾಪ್ ಆದ ಲೋಕೇಶ್ ಅವರ ಪತ್ನಿ ನಯನಾ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೂಡಲೇ ಕಾರ್ಯ ಪ್ರವೃತ್ತರಾದ ವಿಜಯನಗರ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಕೆ.ಆರ್. ನಗರದ ಹಂಪಾಪುರ ಬಳಿ ವಶಕ್ಕೆ ಪಡೆದು ಲೋಕೇಶ್ ಅವರನ್ನು ರಕ್ಷಣೆ ಮಾಡಿದ್ದಾರೆ. ಲೋಕೇಶ್ ಕುಟುಂಬದಿಂದ ಹಣ ಪಡೆಯಲು ಹೋಗಿದ್ದ ಮತ್ತೊಬ್ಬ ಆರೋಪಿ ಪ್ರೀತಮ್ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.
ಆರೋಪಿ ಸಂತೋಷ್ ಮೂಲತಃ ಮಂಡ್ಯ ಜಿಲ್ಲೆ ಕೆ ಆರ್ ಎಸ್ ರಸ್ತೆಯ ಹೊಸಳ್ಳಿ ಗ್ರಾಮದವನು. ಈತನಿಗೆ ಲೋಕೇಶ್ ಅವರ ಪರಿಚಯವಿತ್ತು. ಲೋಕೇಶ್ ಫೈನಾನ್ಸ್, ರಿಯಲ್ ಎಸ್ಟೇಟ್ ನಲ್ಲಿ ಹಣ ಮಾಡಿಕೊಂಡಿರುವ ವಿಚಾರ ಗೊತ್ತಿದ್ದು, ಈತ ತನ್ನದೇ ಗ್ರಾಮದ ಪ್ರಜ್ವಲ್, ಪ್ರೀತಮ್, ದರ್ಶನ್ ಹಾಗೂ ಮೇಟಗಳ್ಳಿ ನಿವಾಸಿ ಅಭಿಷೇಕ್ ಜತೆ ಸಂಚು ರೂಪಿಸಿ ಲೋಕೇಶ್ ಅವರನ್ನು ಅಪಹರಣಕ್ಕೆ ಯೋಜನೆ ರೂಪಿಸಿದ್ದರು.

ಒತ್ತೆಯಾಳಾಗಿ ಇರಿಸಿಕೊಂಡು ಹಣ ಮಾಡಿಕೊಳ್ಳಬಹುದು ಎಂಬ ದುರುದ್ದೇಶದಿಂದ ಸುಮಾರು 15 ದಿನ ಹಿಂಬಾಲಿಸಿ ಹೊಂಚು ಹಾಕಿದ್ದರು. ನಿನ್ನೆ ಹೆರಿಟೇಜ್ ಕ್ಲಬ್ ನಿಂದ ಹೊರಬಂದ ಲೋಕೇಶ್ ನನ್ನ ಅಪಹರಿಸಿ ಪತ್ನಿ ಗೆ ಒಂದು ಕೋಟಿ ರೂ. ಹಣ ಕಳುಹಿಸುವಂತೆ ಬೇಡಿಕೆ ಇಟ್ಟಿದ್ದರು. ಇಲ್ಲದಿದ್ದರೆ ಗಂಡನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಪತ್ನಿ ನಯನಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎರಡು ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಯಿತು. ಕೆ ಆರ್ ನಗರ ಹಂಪಾಪುರ ಬಳಿ ಲೋಕೇಶ್ ರಕ್ಷಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದರು. ಘಟನೆ ನಡೆದ ಕೆಲವೇ ಗಂಟೆ ಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಯಶಸ್ವಿಯಾಗಿದ್ದಾರೆ.
ಪತ್ತೆ ಕಾರ್ಯಾಚರಣೆಯಲ್ಲಿ ವಿಜಯನಗರ ಎಸಿಪಿ ರವಿ ಪ್ರಸಾದ್, ಪೊಲೀಸ್ ಇನ್ಸ್ಪೆಕ್ಟರ್ ಎಸ್ ಡಿ ಸುರೇಶ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಗಳಾದ ಜೈಕೀರ್ತಿ ಎಂ, ಆನಂದ್, ಸಿಬ್ಬಂದಿಯಾದ ಶಂಕರ್, ವೆಂಕಟೇಶ್, ಸುನೀಲ್, ಗಂಗಾಧರ್, ಲಿಖಿತ್, ಮಂಜುನಾಥ್, ಲೋಕೇಶ್, ಚಾಲಕ ಗಿರೀಶ್ ಭಾಗವಹಿಸಿದ್ದರು.
-
Mysore15 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore18 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Special13 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Chikmagalur18 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur18 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Hassan17 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
State19 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Mysore23 hours agoಕೊಲ್ಕತ್ತಾದ ಮೈಸೂರು ಉದ್ಯಾನಕ್ಕೆ 10ನೇ ಚಾಮರಾಜ ಒಡೆಯರ್ ನಾಮಫಲಕ ಅಳವಡಿಸಲು ಪತ್ರ
