Mandya
ಬಲಮುರಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಕ್ರಮ ವಹಿಸಬೇಕು : ಡಾ.ಕುಮಾರ
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ಪ್ರವಾಸಿ ತಾಣಗಳಲ್ಲಿ ಕಾವೇರಿ ನದಿಗೆ ಇಳಿದು ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಲಮುರಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ಪ್ರವಾಸಿ ತಾಣಗಳಲ್ಲಿ ಕಾವೇರಿ ನದಿಗೆ ಇಳಿದು ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಸಂಬಂಧ ಸಭೆ ನಡೆಸಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಹಾಗೂ ಹೆಚ್ಚು ಆದ್ಯತೆಗೆ ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.

ಬಲಮುರಿ ಮತ್ತು ಸುತ್ತಮುತ್ತಲಿನ ಅಪಾಯಕಾರಿ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗೆ ಇಳಿಯುವುದನ್ನು ಮತ್ತು ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಹಾಗೂ ಸುರಕ್ಷತೆ ಇಲ್ಲದ ತೆಪ್ಪ ಬಳಸುವುದು ನಿಷೇಧಿಸಿದೆ ಎಂದು ಅವರು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮ, ತಾಲ್ಲೂಕು ತಹಶೀಲ್ದಾರ್ ಹಾಗೂ ಪೊಲೀಸ್ ಇನ್ ಸ್ಪೆಕ್ಟರ್ ಸೇರಿದಂತೆ ಸಮಿತಿ ರಚಿಸಲಾಗಿದೆ. ಎಚ್ಚರಿಕೆ ಫಲಕಗಳ ಅಳವಡಿಕೆ ನದಿಯ ನೀರಿನ ತೀವ್ರತೆ ಹಾಗೂ ನೀರಿನ ಆಳದ ಅರಿವಿಲ್ಲದೆ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿರುವುದರಿಂದ, ನದಿ ಪಾತ್ರದ ಅಪಾಯಕಾರಿ ವಲಯಗಳಲ್ಲಿ ದೊಡ್ಡದಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಪ್ರವಾಸಿಗರಲ್ಲಿ ಸ್ಧಳ ಬಗ್ಗೆ ಮಾರ್ಗದರ್ಶನ ನೀಡಲು ಹೋಂ ಗಾರ್ಡ್ ನೇಮಕ ಮಾಡಬೇಕು. ಸಿಸಿ ಕ್ಯಾಮೆರಾ ಅಳವಡಿಸಬೇಕು ಹಾಗೂ ಧ್ವನಿ ವರ್ಧಕ ಮೂಲಕ ಪ್ರವಾಸಿಗರಿಗೆ ಮಾಹಿತಿ ನೀಡಬೇಕು. ನದಿಯ ಆಳ ಹಾಗೂ ಸುಳಿಗಳಿರುವ ಅಪಾಯಕಾರಿ ಜಾಗಗಳ ಬಳಿ ಯಾರಾದರೂ ಪ್ರವಾಸಿಗರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸ್ಥಳೀಯ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾರಾಣಿ ಮಾತನಾಡಿ, ನದಿಯ ತಟದಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಲು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಬೇಕು ಹಾಗೂ ಬಲಮುರಿಯಿಂದ ಪೊಲೀಸರು ನಿರಂತರ ನಿಗಾವಹಿಸುತ್ತಾರೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ರಾಘವೇಂದ್ರ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರಾದ ವೆಂಕಟರಮಣಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಧಿತರಿದ್ದರು.
Mandya
ತರಬೇತಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಿ :ಡಾ. ಕುಮಾರ
ಮಂಡ್ಯ : ಘನ ತ್ಯಾಜ್ಯವನ್ನು ವೈಜ್ಞಾನಿಕ ವಾಗಿ ವಿಲೇವಾರಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನೆಗಳಲ್ಲಿ ಹಸಿ ಕಸ, ಒಣ ಕಸ ವಿಂಗಡಣೆ ಮಾಡಬೇಕು ಹಾಗೂ ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ರವರು ತಿಳಿಸಿದರು.
ಮಂಡ್ಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ನಾಗರಾಭಿವೃದ್ಧಿ ಕೋಶ, ಮಂಡ್ಯ ಮತ್ತು ನಗರಸಭೆ ವತಿಯಿಂದ ಘನ ತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು 2026 ಕುರಿತು ಮಂಡ್ಯ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರಯುಕ್ತರು, ಮುಖ್ಯಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರುಸರ್ವೋಚ್ಚ ನ್ಯಾಯಾಲಯದ 2026 ರ ಹೊಸ ನಿಯಮಗಳ ಅನ್ವಯ ಹಸಿ ಕಸ, ಒಣ ಕಸ, ವಿಶೇಷ ತ್ಯಾಜ್ಯ, ಡೈಪರ್ ತ್ಯಾಜ್ಯ ವಾಗಿ ನಾಲ್ಕು ರೀತಿಯ ವಿಲೇವಾರಿ ಭಾಗಗಳಾಗಿ ರೂಪಿಸಲಾಗಿದ್ದು ಸಾರ್ವಜನಿಕರಲ್ಲಿ 2026 ರ ನಿಯಮಗಳ ಕುರಿತು ಅರಿವು ಮೂಡಿಸುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಘನ ತ್ಯಾಜ್ಯಗಳನ್ನು ನಿರ್ಲಕ್ಷಿಸುವುದರಿಂದ ಆರ್ಥಿಕತೆ ಅಷ್ಟೇ ಅಲ್ಲದೇ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಮನುಷ್ಯ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯಗಳನ್ನು ನಾಲ್ಕು ವಿಧದ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ (ಬಲ್ಬ್ ಗಳು, ಬ್ಯಾಟರಿ, ಅವಧಿ ಮೀರಿದ ಔಷಧಗಳು,ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆಯನ್ನು ಮಾಡಿ ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ತಿಳಿಸಿದರು.
ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ 4 ವಿಧಗಳ ತ್ಯಾಜ್ಯ ವಿಂಗಡಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಇವುಗಳ ಸಂಗ್ರಹಣೆ, ಸಾಗಾಣಿಕೆ ಹಾಗೂ ಸಂಸ್ಕರಣೆ, ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಸೂಚಿಸಿದರು. ನೂತನ ನಿಯಮ ಉಲ್ಲಂಘನೆ ಮಾಡುವ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದರು.ಸ್ಥಳೀಯ ಸಂಸ್ಥೆಗಳು ಪ್ರತ್ಯೇಕವಾಗಿ ಸಂಗ್ರಹಿಸಿದ ಒಣ ತ್ಯಾಜ್ಯವನ್ನು ಎಂ.ಆರ್.ಎಫ್ ಘಟಕಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳು, ಮರುಬಳಕೆ ಮಾಡಲಾಗದ ವಸ್ತುಗಳು, ದಹನಕಾರಿ ತ್ಯಾಜ್ಯ ನಿಷ್ಕ್ರಿಯ ತ್ಯಾಜ್ಯಗಳು ಎಂದು ಮರು ವಿಂಗಡಣೆ ಮಾಡಿ, ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಹಸಿಕಸ ಮತ್ತು ಒಣ ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತರ ಕರ್ತವ್ಯ. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.ಜನರ ಮನಸ್ಥಿತಿಯನ್ನು ಬದಲಾಯಿಸಿ ಆರೋಗ್ಯಕರ ಸಮಾಜವನ್ನು ಸೃಷ್ಟಿಸಬೇಕು ಆದ್ದರಿಂದ ಸಾರ್ವಜನಿಕರು ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕು. ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಥೈಸಿಕೊಂಡು ಸದುಪಯೋಗ ಪಡೆದು ಪಾಲಿಕೆ ಆರೋಗ್ಯ ಅಧಿಕಾರಿಗಳು, ಪರಿಸರ ಇಂಜಿನಿಯರ್‌ಗಳು ಮತ್ತು ಪೌರಕಾರ್ಮಿಕರು ವಾರ್ಡ್‌ಗಳಿಗೆ ಭೇಟಿ ನೀಡಿ ಕಸ ವಿಂಗಡನೆಯ ಸರಿಯಾದ ಪದ್ಧತಿಯನ್ನು ಪ್ರಾತ್ಯಕ್ಷಿಕೆ (Demonstration) ಮೂಲಕ ಜನರಿಗೆ ತಿಳಿಸಬೇಕು.ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಥೈಸಿಕೊಂಡು ಸದುಪಯೋಗ ಪಡೆದು ಕೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ತುಂಬಾ ಅಗತ್ಯ ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಮಾತನಾಡಿ, ಘನತ್ಯಾಜ್ಯಗಳನ್ನು ನಾಲ್ಕು ವಿಧದ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ,ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ (ಬಲ್ಬ್ ಗಳು, ಬ್ಯಾಟರಿ, ಅವಧಿ ಮೀರಿದ ಔಷಧಗಳು,ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆ ಯನ್ನು ಸಾರ್ವಜನಿಕರಿಂದ ಮಾಡಿಸಿ, ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ತಿಳಿಸಿದರು.
ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಥೈಸಿಕೊಂಡು ಸದುಪಯೋಗ ಪಡೆದು ಕೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ತುಂಬಾ ಅಗತ್ಯ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಅಪರ ಪೊಲೀಸ್ ಅಧೀಕ್ಷಕರು ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ನಗರಸಭೆ ಪೌರಯುಕ್ತರಾದ ಪಂಪಶ್ರೀ, ನಗರಸಭೆಯ ಕಾರ್ಯಪಾಲಕ ಅಭಿಯಂತರರು ಪ್ರತಾಪ್, ಸುಂದರ್ ರಾಜ್, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ರವರು ಉಪಸ್ಥಿತರಿದ್ದರು.
Mandya
ತೆರೆಯಲ್ಲಿ`ಅನ್ನಂ ಪರಬ್ರಹ್ಮ ಸ್ವರೂಪಂ’ ಚಲನಚಿತ್ರ ಪ್ರದರ್ಶನ : ರಾಜೇಗೌಡ
ಮಂಡ್ಯ: ರಾಜವೀರ ನಿರ್ಮಾಣದ ಸೃಷ್ಟಿಕರ್ತ ಫಿಲಂಸ್‌ನ ರೈತರ ಸಾಧಕ-ಬಾಧಕಗಳ ಆಧಾರಿತ `ಅನ್ನಂ ಪರಬ್ರಹ್ಮ ಸ್ವರೂಪಂ’ ಚಲನಚಿತ್ರವು ಪ್ರದರ್ಶನಗೊಳ್ಳುತ್ತಿದ್ದು, ಜಿಲ್ಲೆಯ ರೈತ ಬಂಧುಗಳು, ಸಿನಿರಸಿಕರು ವೀಕ್ಷಿಸಿ ಬೆಂಬಲಿಸಬೇಕೆಂದು ಚಲನಚಿತ್ರದ ನಿರ್ದೇಶಕ ರಾಜೇಗೌಡ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನಚಿತ್ರವು ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ದಿನಕ್ಕೆ ೪ ಆಟಗಳು ಪ್ರದರ್ಶನಗೊಳ್ಳುತ್ತಿವೆ ಎಂದರು.
ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಕನಸಿನ ಚಿತ್ರ ಇದಾಗಿದೆ. ಅವರ ಸಹಕಾರದೊಂದಿಗೆ 8 ವರ್ಷಗಳ ಸುದೀರ್ಘ ಅವಧಿಯಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ತಮಿಳುನಾಡಿನ ಜತೆಗಿನ ನೀರಿನ ಹಂಚಿ ವಿವಾದ, ರೈತರ ಜೀವನದ ನೈಜತೆ, ಜೀವನ ಶೈಲಿ, ಕಷ್ಟಗಳನ್ನು ತಿಳಿಸುವುದು ಚಲನಚಿತ್ರದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದವನಾದ ನಾನು ಹಲವು ವರ್ಷಗಳಿಂದ ಚಲನಚಿತ್ರೋದ್ಯಮದಲ್ಲಿ ಭಾಗಿಯಾಗಿದ್ದೇನೆ.

ಕೋಲಾರದಲ್ಲೂ 10 ಎಕರೆ ಜಮೀನು ಭೋಗ್ಯಕ್ಕೆ ಪಡೆದು ವ್ಯವಸಾಯ ಮಾಡುತ್ತಿದ್ದೇನೆ. ರೈತನಾಗಿ ರೈತರ ಬಗ್ಗೆ ಜನರಿಗೆ ತಿಳಿಸುವ ಸುದ್ದೇಶದಿಂದ ಈ ಚಿತ್ರವನ್ನು ರಾಮನಗರ, ಮಂಡ್ಯ, ಮೈಸೂರಿನಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿಸಿದರು.ಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಗೌಡ, ತಾಲೂಕು ಅಧ್ಯಕ್ಷ ಬೂದನೂರು ಪುಟ್ಟಸ್ವಾಮಿ, ವಿಜಯ್, ಸೂರ್ಯಗೌಡ ಇದ್ದರು.
Mandya
ಮೇ.27 ರಂದು ಕವಿ ಕೆ.ಪಿ.ಮೃತ್ಯುಂಜಯ ಅವರ ಜಾಯ್ ಪದ್ಯಗಳು ಪುಸ್ತಕ ಲೋಕಾರ್ಪಣೆ ಮತ್ತು ಗೌರವಾರ್ಪಣೆ : ಸಿ.ತ್ಯಾಗರಾಜು
ಮಂಡ್ಯ: ಸ್ನೇಹ ಬಳಗದಿಂದ ಕವಿ ಕೆ.ಪಿ.ಮೃತ್ಯುಂಜಯ ಅವರ ಜಾಯ್ ಪದ್ಯಗಳು ಪುಸ್ತಕ ಲೋಕಾರ್ಪಣೆ ಮತ್ತು ಗೌರವಾರ್ಪಣೆ ಕಾರ್‍ಯಕ್ರಮವನ್ನು ಮೇ ೨೭ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕೆವಿಎಸ್ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಂಡ್ಯ ತಾ.ಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಕವಿ ಕೆ.ಪಿ.ಮೃತ್ಯುಂಜಯ ಅವರು ಉಪನ್ಯಾಸಕರಾಗಿ ನಿವೃತ್ತಿಯ ಹೊಸ್ತಿಲಿನಲ್ಲಿದ್ದಾರೆ. ಹಲವು ಪುಸ್ತಕಗಳನ್ನು ಬರೆದ ಅವರು ನಿವೃತ್ತಿಯ ಹಿನ್ನಲೆ ಈ ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುಸ್ತಕ ಬಿಡುಗಡೆ ಮತ್ತು ಕವಿಗೆ ಗೌರವ ಸಲ್ಲಿಸುವರು. ಶಾಸಕ ಪಿ.ರವಿಕುಮಾರ್ ಗೌಡ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದು, ಇಂಗ್ಲೀಷ್ ಅಧ್ಯಾಪಕರು ಮತ್ತು ಬರಹಗಾರರಾದ ಪ್ರಸನ್ನಕುಮಾರ್ ಕೆರೆಗೋಡು ಪುಸ್ತಕದ ಕುರಿತು ಮಾತನಾಡುವರು. ಲೇಖಕ, ಕವಿ ಉಪನ್ಯಾಸಕ ಕೆ.ಪಿ.ಮೃತ್ಯುಂಜಯ ತಾ.ಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಗೌರವ ಉಪಸ್ಥಿತಿ ವಹಿಸುವರು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಬಳಗದ ಸಿ.ಎಂ.ದ್ಯಾವಪ್ಪ, ಮಂಗಲ ಎಂ.ಯೋಗೇಶ್, ಡಿ.ದೇವರಾಜು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಲಿಂಗಪ್ಪ ಇದ್ದರು.
-
State18 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Hassan1 hour ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Kodagu22 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan20 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Mysore7 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Chamarajanagar19 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Hassan2 hours agoಬಕ್ರಿದ್ ವೇಳೆ ಗೋವಂಶ ವಧೆ ಬೇಡ: ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ
-
Kodagu21 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ
