Connect with us

Chikmagalur

ಸಂಪರ್ಕ ಕಡಿತದ ಭೀತಿಯಲ್ಲಿ ಬಣಕಲ್ ದೇವರಮನೆ ರಸ್ತೆ

Published

on

ಚಿಕ್ಕಮಗಳೂರು: ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮುಖಂಡ ಬಿಎಸ್ ವಿಕ್ರಂ ಮಾತನಾಡಿ ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಗ ಕಡಿತದ ಭೀತಿ ಎದುರಾಗಿದೆ ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ, ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ.

ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಹಾಗೂ ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಜಿಲ್ಲಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಟಿ.ರವಿ

Published

on

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್‌ಸಿ ಡಾ.ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ. ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು ಜಿಲ್ಲಾ ಸರ್ಜನ್ ಹಾಗೂ ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು.


ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಡವರ ಬದುಕು ದುಸ್ತರ

“ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.


ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.

ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.


ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.

Continue Reading

Chikmagalur

ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ

Published

on

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ.

ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ.

ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಘಟನೆ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

Continue Reading

Chikmagalur

ಬದುಕಿದ್ದಾಗಲೇ ಅಧಿಕಾರಿಗಳಿಗೆ ತನ್ನ ತಿಥಿಗೆ ಆಹ್ವಾನ ನೀಡಿದ ಗಂಧದ ಬೆಳೆಗಾರ

Published

on

ಚಿಕ್ಕಮಗಳೂರು :  ತರೀಕೆರೆ ತಾಲೂಕಿನ ಗಂಧದ ಬೆಳೆಗಾರ ವಿಶುಕುಮಾರ್ ರಿಂದ ಅಧಿಕಾರಿಗಳಿಗೆ ಆಹ್ವಾನ ಮಾಡಿದರು.ವಾರದ ಹಿಂದೆ ದಯಾಮರಣಕ್ಕೆ ಮನವಿ ಮಾಡಿದ್ದ ಬೆಳೆಗಾರ  ಬದುಕಿದ್ದಾಗಲೇ ಅಧಿಕಾರಿಗಳಿಗೆ ತನ್ನ ತಿಥಿಗೆ ಆಹ್ವಾನ ನೀಡಿದ ಗಂಧದ ಬೆಳೆಗಾರ.

ನಾಳೆ ಬೆಳಗ್ಗೆ 10ಕ್ಕೆ ಸಂತಾಪ ಸಭೆ, ಮಧ್ಯಾಹ್ನ 1 ಗಂಟೆಗೆ ಊಟಕ್ಕೆ ಕರೆದ ಬೆಳೆಗಾರ,ಸಿಸಿಎಫ್ ರನ್ನ ಭೇಟಿ ಮಾಡಿಸಿ, ಇಲ್ಲ ಶಿವಮೊಗ್ಗ ಸಿಸಿಎಫ್ ಕಚೇರಿ ಬಳಿ ಕಾರಿನಲ್ಲೇ ಆತ್ಮಹತ್ಯೆ ಬೆದರಿಕೆ.

ಸಂತಾಪ ಸಭೆಯಲ್ಲಿ ಭಾಗವಹಿಸುವವರು ಎನ್.ಎಚ್.ಎ.ಐ.ನ ಅಧಿಕಾರಿಗಳು, ಅರಣ್ಯ ಇಲಾಖೆಯ ಭಷ್ಟ ಅಧಿಕಾರಿಗಳು, ಪೊಲೀಸ್ ಇಲಾಖೆಯ ಒಳ್ಳೆಯ ಅಧಿಕಾರಿಗಳು, ವಿಶೇಷ ಭೂಸ್ವಾದೀನ ಅಧಿಕಾರಿಗಳು, ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತು ವಿಭಿನ್ನ ರೀತಿ ಆಕ್ರೋಶ.

ಗಂಧದ ಬೆಳೆಗೆ ಸೂಕ್ತ ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಬೆಳೆಗಾರನ ಆಕ್ರೋಶ. ರಾಷ್ಟ್ರೀಯ ಹೆದ್ದಾರಿಗೆ ಇವರ ಜಮೀನು, ಗಂಧದ ಮರಗಳು ಹೋಗುತ್ತಿವೆ. ಸೂಕ್ತ ಪರಿಹಾರ ನೀಡದಿದ್ದಕ್ಕೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ.

ಒಂದು ಗಂಧದ ಮರಕ್ಕೆ 420 ರೂ ನಿಗದಿ ಮಾಡಿರುವ ಅರಣ್ಯಾಧಿಕಾರಿಗಳು, 1 ಮಾವಿನ ಮರಕ್ಕೆ 63 ಸಾವಿರ, ತೆಂಗಿಗೆ 37 ಸಾವಿರ, ಬೇವಿಗೆ 2200, ನಿಂಬೆ ಗಿಡಕ್ಕೆ 3400 ರೂ , ಒಂದು ಶ್ರೀಗಂಧದ ಮರಕ್ಕೆ ಕೇವಲ 420 ರೂ ನಿಗದಿ ಮಾಡಿರುವ ಅಧಿಕಾರಿಗಳು ಕೋರ್ಟ್ 25 ಸಾವಿರ ನಿಗಧಿ ಮಾಡಿ ವೈಜ್ಞಾನಿಕ ದರ ನೀಡುವಂತೆ ಸೂಚಿಸಿದ್ದರು ಮಾಡದ ಆರೋಪ , ಬೆಳೆಗಾರ ಅಧಿಕಾರಿಗಳ ನಡೆಗೆ ಬೇಸತ್ತು ವಿಭಿನ್ನ ಶೈಲಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

Continue Reading

Trending

error: Content is protected !!