Hassan
ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ: ಸಿ.ಎನ್.ಬಾಲಕೃಷ್ಣ
ವರದಿ: ದಯಾನಂದ ಶೆಟ್ಟಿಹಳ್ಳಿ
ಚನ್ನರಾಯಪಟ್ಟಣ: ಪ್ರಪಂಚದ ಅತ್ಯುನ್ನತ ನಗರಗಳಲ್ಲಿ ಬೆಂಗಳೂರು ಕೂಡ ಒಂದಾಗಿದ್ದು ಇದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಬಣ್ಣಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚನ್ನರಾಯಪಟ್ಟಣ ಘಟಕದಲ್ಲಿ ಶನಿವಾರದಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸುವಲ್ಲಿ ಕೆಂಪೇಗೌಡರು ಪ್ರಮುಖ ಪಾತ್ರ ವಹಿಸಿದ್ದರು. ಅಂದು ಅವರು ನಿರ್ಮಿಸಿದ ಬೆಂಗಳೂರು ನಗರ ಇಂದು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ಬೆಂಗಳೂರು ನಗರ ನಿರ್ಮಿಸಿದ ಕೆಂಪೇಗೌಡರ ಹೆಸರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗಿದ್ದು, ಕೆಂಪೇಗೌಡರ 108 ಅಡಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂದರು.

ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿ ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ. ಕೆಂಪೇಗೌಡರ ಶೌರ್ಯ, ಸಾಹಸ, ದೂರದೃಷ್ಠಿಗೆ ಹೆಸರಾಗಿದ್ದು ಬೆಂಗಳೂರು ನಗರವನ್ನು ಜಾತಿ ಆಧಾರಿತವನ್ನಾಗಿ ಮಾಡದೇ ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿ ನೂರಾರು ವರ್ಷಗಳ ಹಿಂದೆಯೇ ರಸ್ತೆ ಬದಿಯ ಸಾಲುಮರಗಳು, ದನಕರು, ಪ್ರಾಣಿಪಕ್ಷಿಗಳು ನೀರು ಕುಡಿಯಲು ನೀರಿನ ತೊಟ್ಟಿಗಳು ಹಾಗೂ ರೈತರ ಅನುಕೂಲಕ್ಕಾಗಿ ಕೆರೆಕಟ್ಟೆಗಳ ನಿರ್ಮಾಣ ಮಾಡಿದ ಗೌಡರು ತಮ್ಮ ಅಧಿಕಾರದಲ್ಲಿ ಜಾತ್ಯಾತೀತ ಮನೋಭಾವನೆಯೊಂದಿಗೆ ಆಳ್ವಿಕೆ ಮಾಡಿದ ಹೆಗ್ಗಳಿಕೆ ಅವರದು ದೂರದೃಷ್ಟಿಯ ಚಿಂತನೆ ಹೊತ್ತಿದ್ದ ಕೆಂಪೇಗೌಡರು ಅಂದಿನ ಬೆಂದಕಾಳೂರನ್ನು ಬೆಂಗಳೂರು ಮಾಡಿದ್ದು, ಅವರ ದೂರದೃಷ್ಟಿಯ ಚಿಂತನೆ ಅಗಾಧವಾಗಿತ್ತು. ಚನ್ನರಾಯಪಟ್ಟಣದಲ್ಲಿ ಗುರುಭವನದ ಬಳಿ ಇರುವ ಕೆಂಪೇಗೌಡ ವೃತ್ತದಲ್ಲಿ ಮುಂಬರುವ ಕೆಂಪೇಗೌಡ ಜಯಂತಿ ಒಳಗೆ ಅಶ್ವರೂಡ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು ಜುಲೈ 5ರಂದು ನವೋದಯ ವಿದ್ಯಾಸಂಸ್ಥೆಯಲ್ಲಿ ಸಭೆ ನಿಗದಿಪಡಿಸಿದ್ದು ಎಲ್ಲಾ ಸಂಘಟನೆಗಳ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ಸಲಹೆ ಸಹಕಾರ ನೀಡಬೇಕು ಎಂದು ಹೇಳಿದರು.

ಚನ್ನರಾಯಪಟ್ಟಣ ಘಟಕದಿಂದ ನಿತ್ಯ 107 ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದೇ ರೀತಿ ಬೇರೆ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಬಸ್ಸುಗಳು ಚನ್ನರಾಯಪಟ್ಟಣ ಬಸ್ ನಿಲ್ದಾಣಕ್ಕೆ ಬಂದು ಹೋಗುತ್ತದೆ . ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣದಲ್ಲಿ ಈಗಾಗಲೇ ಕುಡಿಯುವ ನೀರು ಸೌಕರ್ಯ, ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರವೇಶ ದ್ವಾರದ ಬಲ ಭಾಗದಲ್ಲಿ ಹೈಮಾಸ್ಟ್ ದೀಪ ಅಳವಳಡಿಸಲಾಗಿದೆ. ಮುಂದಿನ ದಿನಗಳಲ್ಲಿ ಎಡಭಾಗದಲ್ಲೂ ಹೈಮಾಸ್ಟ್ ದೀಪ ಅಳವಡಿಸಲಾಗುವುದು. ಡಿಪೋ ಅಭಿವೃದ್ಧಿಗೆ ಒಂದು ಕೋಟಿ ರೂ ಅನುದಾನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವ ಮನವಿ ಸಲ್ಲಿಸಿದ್ದು, ಅನುದಾನ ಲಭ್ಯತೆ ಆಧಾರದ ಮೇಲೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವು. ಬಸ್ ನಿಲ್ದಾಣದಲ್ಲಿ ಹಾಸನದ ಮತ್ತು ಗ್ರಾಮಾಂತರ ಪ್ರಯಾಣಿಕರ ಬಸ್ ನಿಲುಗಡೆ ಜಾಗದಲ್ಲಿ ಪ್ರಯಾಣಿಕರು ಬಿಸಿಲಿನಲ್ಲಿ ಬಸ್‌ಗೆ ಕಾಯುವಂತಾಗಿದೆ. ಹಾಗಾಗಿ 17 ಲಕ್ಷ ವೆಚ್ಚದಲ್ಲಿ ಸ್ಥಳೀಯ ಶಾಸಕರ ಅನುದಾನದಲ್ಲಿ ಶೆಲ್ಟರ್ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿದ್ದು ಶೀಘ್ರವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಯಂತೋತ್ಸವ ಕಾರ್ಯಕ್ರಮದಲ್ಲಿ ನವೋದಯ ವಿದ್ಯಾ ಶಾಲೆಯ ಉಪನ್ಯಾಸಕರಾದ ಮಂಜಪ್ಪ ಕೆಂಪೇಗೌಡರ ಜೀವನ ಚರಿತ್ರೆ ಕುರಿತು ಸವಿವರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸಾರಿಗೆ ಸಂಸ್ಥೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಸಿಬ್ಬಂದಿಗಳಾದ ಸುರೇಶ್ ಮೇಟಿಕೆರೆ, ಬಸವರಾಜು, ಹೊನ್ನೇಗೌಡ, ಹುಚ್ಚೇಗೌಡ, ಸಿ.ಎಸ್. ಮಧುಸೂಧನ, ಚಿದಾನಂದ್ ದ್ಯಾವನೂರು, ನಿವೃತ್ತಿ ಹೊಂದುತ್ತಿರುವ ಕುಶಲಕರ್ಮಿ ಎನ್. ರಾಮಚಂದ್ರ ಅವರುಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ವ್ಯವಸ್ಥಾಪಕ ಜ್ಞಾನೇಶ್, ವಹಿಸಿದ್ದರು, ಬಿಜೆಪಿ ಮುಖಂಡ ಸಿ.ಆರ್.ಚಿದಾನಂದ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಧರಣಿಶ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಆನಂದ್ ಕಾಳೆನಹಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೇರಹಳ್ಳಿ ಮಂಜುನಾಥ್, ಸಾರಿಗೆ ಸಂಸ್ಥೆಯ ಎಇಇ ಯಾದವ್ ಸೇರಿದಂತೆ ಘಟಕದ ಎಲ್ಲಾ ಸಾರಿಗೆ ಸಿಬ್ಬಂದಿಗಳು ಭಾಗವಹಿಸಿದ್ದರು.
Hassan
ಗೃಹಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ: ಅರ್ಹರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ವಿದ್ಯುತ್ ಇಲಾಖೆ ಕಾರ್ಯಾಚರಣೆ
ಅರಸೀಕೆರೆ: ರಾಜ್ಯ ಸರ್ಕಾರದ ನಿರ್ದೇಶನದಂತೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಅರ್ಹತೆ ಪರಿಶೀಲನೆ ಕಾರ್ಯಕ್ಕೆ ಅರಸೀಕೆರೆಯಲ್ಲಿ ವೇಗ ದೊರೆತಿದೆ. ಕರ್ನಾಟಕ ವಿದ್ಯುತ್ ಸರಬರಾಜು ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಪರಿಶೀಲನಾ ಅರ್ಜಿಗಳನ್ನು ಭರ್ತಿ ಮಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಗೃಹಜ್ಯೋತಿ ಯೋಜನೆಯ ಸೌಲಭ್ಯವು ನಿಜವಾದ ಅರ್ಹ ಕುಟುಂಬಗಳಿಗೆ ಮಾತ್ರ ತಲುಪಬೇಕು ಹಾಗೂ ಯೋಜನೆಯ ದುರುಪಯೋಗವನ್ನು ತಡೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ವಿಶೇಷ ಪರಿಶೀಲನಾ ಅಭಿಯಾನಕ್ಕೆ ಚಾಲನೆ ನೀಡಿದೆ. ಇದಕ್ಕಾಗಿ ಫಲಾನುಭವಿಗಳ ವಿಳಾಸ, ವಿದ್ಯುತ್ ಸಂಪರ್ಕದ ವಿವರ, ಕುಟುಂಬದ ಮಾಹಿತಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ದಾಖಲಿಸಲಾಗುತ್ತಿದೆ.

ಪರಿಶೀಲನೆ ವೇಳೆ ಫಲಾನುಭವಿಗಳು ತಮ್ಮ ವಿದ್ಯುತ್ ಬಿಲ್, ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿಬ್ಬಂದಿಗೆ ಒದಗಿಸುವಂತೆ ಸೂಚಿಸಲಾಗಿದೆ. ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅದನ್ನು ತಕ್ಷಣವೇ ಸರಿಪಡಿಸಿ, ಅರ್ಹರಿಗೆ ಯೋಜನೆಯ ಲಾಭ ನಿರಂತರವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ವಿದ್ಯುತ್ ಇಲಾಖೆಯ ಸಿಬ್ಬಂದಿ ಅಧಿಕೃತ ಗುರುತಿನ ಚೀಟಿಯೊಂದಿಗೆ ಮನೆಗಳಿಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರು ಯಾವುದೇ ಅನುಮಾನ ಅಥವಾ ಗೊಂದಲಕ್ಕೆ ಒಳಗಾಗದೆ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

ನಗರದ ವಿವಿಧ ವಾರ್ಡ್‌ಗಳಲ್ಲಿ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಹೆಚ್ಚಿನ ನಿವಾಸಿಗಳು ಇಲಾಖೆಯ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆ ಪಾರದರ್ಶಕವಾಗಿ ಜಾರಿಯಾಗಲು ಈ ಪರಿಶೀಲನಾ ಪ್ರಕ್ರಿಯೆ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯ ಅರ್ಹ ಫಲಾನುಭವಿಗಳ ಮಾಹಿತಿ ನವೀಕರಣದೊಂದಿಗೆ ಅನರ್ಹರು ಸೌಲಭ್ಯ ಪಡೆಯುವುದನ್ನು ತಡೆಯುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಪರಿಶೀಲನಾ ಕಾರ್ಯ ಪೂರ್ಣಗೊಂಡ ಬಳಿಕ ಸರ್ಕಾರದ ಮಾರ್ಗಸೂಚಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
Hassan
ತಾಯಿ ಅಂತ್ಯಕ್ರಿಯೆ ವೇಳೆ ಡಿಕೆಶಿ ಹೆಸರೇಳದ ಬಗ್ಗೆ ಎಚ್‌ಡಿಕೆ ಸ್ಪಷ್ಟನೆ
ಹಾಸನ : ತಮ್ಮ ತಾಯಿ ಚೆನ್ನಮ್ಮರ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ಸಲ್ಲಿಸಿದ್ದಕ್ಕೆ ನಿನ್ನೆಯೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ. ಆದರೆ, ಮಾತನಾಡುವಾಗ ಕೇಂದ್ರ ಸಚಿವರ ಹೆಸರುಗಳನ್ನು ಉಲ್ಲೇಖಿಸಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಹೆಸರು ಮಾತ್ರ ಹೇಳದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಬೇರೆ ಬೇರೆ ರೀತಿಯ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಕುಮಾರಸ್ವಾಮಿಯೇ ತಾಯಿ ಸಮಾಧಿ ಬಳಿ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಎಂದು ಹೇಳಿದ್ದು ಡಿ.ಕೆ.ಶಿವಕುಮಾರ್ ಅವರ ಕುರಿತೇ ಹೇಳಿದ್ದು ಎಂದಿದ್ದಾರೆ. ಈ ಮೂಲಕ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.
ಅಂತಿಮ ದರ್ಶನದ ವೇಳೆ ನಾನು ಮೈಕ್ ಹಿಡಿದು ಮಾತನಾಡಿದೆ. ನಾನು ಮಾತಾಡಬೇಕು ಅನ್ನೊ ಉದ್ದೇಶ ಇರಲಿಲ್ಲ. ಮೈಕ್ ಹಿಡಿದ ವೇಳೆ ನನ್ನ ತಾಯಿಯೇ ನನ್ನನ್ನು ಮಾತನಾಡಿಸಿದಂತಾಗಿದೆ. ಆ ವೇಳೆ ನಾನು ಕೇಂದ್ರ ಸರ್ಕಾರದ ಮಂತ್ರಿಯ ಹೆಸರನ್ನ ಹೇಳಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹೆಸರನ್ನ ಹೇಳಲಿಲ್ಲ ಅನ್ನೋ ಮಾತು ಕೇಳಿ ಬಂದಿದೆ. ಡಿಕೆಶಿ ಹೆಸರು ಹೇಳದೆ ಇರೋದು ಉದ್ದೇಶಪೂರ್ವಕವಾಗಿ ಅಲ್ಲ. ಮುಖ್ಯಮಂತ್ರಿ ಎಂದು ಹೇಳಿದ್ದು ಡಿ.ಕೆ.ಶಿವಕುಮಾರ್ ಅವರ ಕುರಿತೇ ಹೇಳಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.

ಅಂತಹ ಮಟ್ಟಕ್ಕೆ ನಾನು ಹೋಗೋದಿಲ್ಲ
ಸಿಎಂ ಡಿ.ಕೆ. ಶಿವಕುಮಾರ್ ಹೆಸರು ಹೇಳಲಿಲ್ಲ ಎಂದು ಒಂದೆರಡು ಜನ ಹೇಳಿದರು. ಆದರೆ ನಾನು ನನ್ನ ಇಚ್ಛೆಯಂತೆ ಬಂದ ಪದ ಅಲ್ಲ. ನಾನು ಸಣ್ಣತನ ತೋರಿದೆ ಎಂದು ಯಾರೂ ಕೂಡ ಭಾವಿಸಬೇಡಿ. ಡಿ.ಕೆ. ಶಿವಕುಮಾರ್ ಹೆಸರು ಹೇಳದೆ ಇರೋದು ಉದ್ದೇಶಪೂರ್ವಕವಾಗಿ ಅಲ್ಲ. ಮುಖ್ಯಮಂತ್ರಿ ಎಂದು ಹೇಳಿದ್ದು ಡಿಕೆಶಿ ಅವರ ಕುರಿತೇ ಹೇಳಿದ್ದು. ಅಂತಹ ಮಟ್ಟಕ್ಕೆ ನಾನು ಹೋಗೋದೂ ಇಲ್ಲ. ನಮ್ಮ ಕುಟುಂಬದಲ್ಲೂ ಕೂಡ ಭಿನ್ನಾಭಿಪ್ರಾಯ ಬರುತ್ತವೆ. ಆದರೆ ಎಲ್ಲವನ್ನೂ ಮರೆತು ಒಂದು ಧ್ವನಿಯಾಗಿ ಬದುಕುತ್ತಿದ್ದೇವೆ. ಜೇನಿನಗೂಡು ನಾವೆಲ್ಲ ಎನ್ನುವಂತೆ ನಾವು ಬದುಕುತ್ತಿದ್ದೇವೆ. ಪ್ರತಿ ಕುಟುಂಬವೂ ಹೀಗೆ ಬದುಕಲಿ ಅನ್ನೋದು ನನ್ನ ಸಂದೇಶ ಎಂದಿದ್ದಾರೆ.
Hassan
ಚೆನ್ನಮ್ಮ ಸಮಾಧಿಗೆ ದೇವೇಗೌಡ, ಕುಮಾರಸ್ವಾಮಿ ಭೇಟಿ: ಭಾವುಕರಾದ ಮಾಜಿ ಪ್ರಧಾನಿ, ನಿತ್ಯ ಪೂಜೆಗೆ ನಿರ್ಧಾರ
ಹೊಳೆನರಸೀಪುರ : ಜು.21: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ಸಮಾಧಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಟುಂಬ ಸದಸ್ಯರು ಹಾಗೂ ಬಂಧುಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಸಮಾಧಿ ಸ್ಥಳದಲ್ಲಿ ನಿತ್ಯ ಪೂಜೆ, ಸಹಸ್ರನಾಮ ಪಠಣ ಹಾಗೂ ನಂದಾದೀಪ ಬೆಳಗುವ ವ್ಯವಸ್ಥೆ ಮಾಡುವ ನಿರ್ಧಾರ ಕೈಗೊಳ್ಳಲಾಯಿತು. ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಸಮೀಪದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಚನ್ನಮ್ಮ ಅವರ ಸಮಾಧಿಗೆ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪುತ್ರಿ ಅನಸೂಯಾ ಸೇರಿದಂತೆ ಕುಟುಂಬ ಸದಸ್ಯರು ಆಗಮಿಸಿ ನಮನ ಸಲ್ಲಿಸಿದರು.

ಚನ್ನಮ್ಮ ಅವರು ಬದುಕಿದ್ದಾಗ ಪ್ರತಿದಿನ ಪಠಿಸುತ್ತಿದ್ದ ಲಲಿತ ಸಹಸ್ರನಾಮ, ವಿಷ್ಣು ಸಹಸ್ರನಾಮ ಹಾಗೂ ಶಿವನಿಗೆ ಪ್ರಿಯವಾದ ರುದ್ರ ಚಮಕ ಶ್ಲೋಕಗಳನ್ನು ಸಮಾಧಿ ಎದುರು ಅರ್ಚಕರು ಪಠಿಸಿದರು. ಮೂವರು ಅರ್ಚಕರು ಶ್ಲೋಕಗಳ ಉದ್ಘೋಷಣೆ ಮೂಲಕ ಪೂಜೆ ನೆರವೇರಿಸಿದರೆ, ಪುತ್ರಿ ಅನಸೂಯಾ ಸಮಾಧಿ ಎದುರು ನೆಲದ ಮೇಲೆ ಕುಳಿತು ಶ್ಲೋಕ ಪಠಣದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಪುತ್ರಿ ಅನಸೂಯಾ ನಂದಾದೀಪ ಹಚ್ಚಿದರು.

ಜುಲೈ 30ರಂದು ನಡೆಯಲಿರುವ ಆರಾಧನಾ ಮಹೋತ್ಸವದವರೆಗೆ ದೀಪ ಆರದಂತೆ ವ್ಯವಸ್ಥೆ ಮಾಡುವಂತೆ ಕುಟುಂಬ ಸದಸ್ಯರು ಸೂಚನೆ ನೀಡಿದರು. ಮುಂದೆಯೂ ಪ್ರತಿನಿತ್ಯ ಸಮಾಧಿ ಸ್ಥಳದಲ್ಲಿ ಲಲಿತ ಸಹಸ್ರನಾಮ, ವಿಷ್ಣು ಸಹಸ್ರನಾಮ ಪಠಿಸಿ ಪೂಜೆ ನಡೆಸಲು ತೀರ್ಮಾನಿಸಲಾಯಿತು. ಪತ್ನಿಯನ್ನು ಕಳೆದುಕೊಂಡ ಬಳಿಕ ಮೊದಲ ಬಾರಿಗೆ ಸಮಾಧಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭಾವುಕರಾಗಿ ಕಣ್ಣೀರಿಟ್ಟರು. ಭೂಮಿ ತಾಯಿಯ ಮಡಿಲಿನಲ್ಲಿ ಚಿರನಿದ್ರೆಗೆ ಜಾರಿರುವ ತಮ್ಮ ಬಾಳ ಸಂಗಾತಿಯನ್ನು ನೆನೆದು ಕೆಲಕಾಲ ಮೌನವಾಗಿ ನಿಂತ ಅವರು, ಸಮಾಧಿಗೆ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಜುಲೈ 30ರಂದು ನಡೆಯಲಿರುವ ಚನ್ನಮ್ಮ ಅವರ ಆರಾಧನಾ ಮಹೋತ್ಸವದ ಅಂಗವಾಗಿ ಸಮಾಧಿ ಸ್ಥಳದಲ್ಲಿ ಪ್ರತಿದಿನ ವಿಶೇಷ ಪೂಜೆ, ಸಹಸ್ರನಾಮ ಪಠಣ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
-
Mysore9 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore15 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu12 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics4 hours agoಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
-
Politics5 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Kodagu5 hours agoಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
-
Kodagu7 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
-
Manglore3 hours agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್
