Connect with us

Hassan

ಬಸವಣ್ಣನ ರಥೋತ್ಸವ

Published

on

ಹಾಸನ: ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಶೈವ ಲಿಂಗಾಯಿತಿ ಸಂಘದಿಂದ ಶುಕ್ರವಾರದಂದು ಬೆಳಿಗ್ಗೆ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ. ಬಸವಣ್ಣನ ರಥೋತ್ಸವ ವಿವಿಧ ರಾಜ ಬೀದಿಗಳಲ್ಲಿ ಸಾಗಿತು.

ಇದೆ ವೇಳೆ ಶ್ರೀ ವೀರಶೈವ ಲಿಂಗಾಯಿತ ಸಂಘದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ ಅವರು ಮಾತನಾಡಿ, ಜಿಲ್ಲಾ ವೀರಶೈವ ಲಿಂಗಾಯಿತ ಸಂಘದವತಿಯಿಂದ ೧೨ ಶತಮಾನದ ಮಹಾನ್ ಕ್ರಾಂತಿಕಾರಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಆಚರಿಸುತ್ತಿದ್ದೇವೆ. ಬೆಳಗಿನಿಂದಲೇ ವಿವಿಧ ಪೂಜೆ ಕಾರ್ಯಗಳನ್ನು ನೆರವೇರಿಸಲಾಗಿದೆ ಎಂದರು. ಪ್ರಸ್ತುತದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಿದ್ದೇವೆ ೧೨ನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪನೆ ಮಾಡಿ ತಳಹದಿಯನ್ನು ಹಾಕಿಕೊಟ್ಟಂತಹ ಮಹಾನ್ ಕ್ರಾಂತಿಕಾರಿ. ವಚನ ಸಾಹಿತ್ಯದ ಮೂಲಕ ಸರಳವಾಗಿ ಸಮಾಜವನ್ನು ತಿದ್ದುವ ಕಾಯಕ ಮಾಡಿದವರು. ಉತ್ತಮ ವಚನವನ್ನು ನೀಡಿ ಸಮಾಜದ ಅಂಕು-ಡೊಂಕನ್ನು ತಿದ್ದಿ ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೂಯ್ಯುವ ದೆಸೆಯಲ್ಲಿ ಜಗಜ್ಯೋತಿ ಬಸವೇಶ್ವರರು ನಮಗೆಲ್ಲಾ ತಳಪಾಯವನ್ನ ಹಾಕಿಕೊಟ್ಟಿದ್ದಾರೆ ಎಂದು ಕಿವಿಮಾತು ಹೇಳಿದರು. ಪ್ರತಿ ವರ್ಷವೂ ಕೂಡ ಸಂಘದವತಿಯಿಂದ ಈ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅವರ ಆದರ್ಶ ಮತ್ತು ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಸಮಾಜ ಹಾಗೂ ಸಂಘಟನೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲಾ ಪಣತೊಡಬೇಕೆಂದು ಕರೆ ನೀಡಿದರು.

….

ಇದೆ ವೇಳೆ ಶ್ರೀ ವೀರಶೈವ ಲಿಂಗಾಯಿತ ಸಂಘದ ಭುವನಾಕ್ಷ, ರುದ್ರಕುಮಾರ್, ಮಲ್ಲಿಕಾರ್ಜುನ್, ಶೋಬಾನ್ ಬಾಬು, ಮಯೂರಿ ಲೋಕೇಶ್, ಲೋಕೇಶ್, ಯು.ಎಸ್. ಬಸವರಾಜು, ಮಿಥುನ್, ನಾಗೇಶ್, ಡಾ. ಜಯರಾಜ್, ಕಾಂತರಾಜು, ಅನ್ನಪೂರ್ಣ, ಷಡಕ್ಷರಿ, ಕೀರ್ತಿಕುಮಾರ್ ಇತರರು ಉಪಸ್ಥಿತರಿದ್ದರು.

….

Continue Reading
Click to comment

Leave a Reply

Your email address will not be published. Required fields are marked *

Hassan

ರಾಷ್ಟ್ರೀಯ ಚಿಂತನೆ ಮೈಗೂಡಿಸಿಕೊಳ್ಳಿ : ಶಾಸಕ ಸಿಮೆಂಟ್ ಮಂಜು

Published

on

ಸಕಲೇಶಪುರ: ದೇಶದ ಭವಿಷ್ಯವನ್ನು ರೂಪಿಸುವ ಯುವಕ-ಯುವತಿಯರು ರಾಷ್ಟ್ರೀಯ ಚಿಂತನೆಗಳನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಮುನ್ನಡೆಯಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಹಾನುಬಾಳು ವಿನಾಯಕ ಎಜುಕೇಶನ್ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ವಿದ್ಯಾನಿಧಿ ಶಾಲೆಯ ವಾರ್ಷಿಕೋತ್ಸವ ‘ವಿದ್ಯಾನಿಧಿಯೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನಮ್ಮ ಬದುಕಿನ ಮೂಲಮಂತ್ರವಾಗಬೇಕು. ಯಾವ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯುವತ್ತ ವಿದ್ಯಾರ್ಥಿಗಳು ದೃಢಸಂಕಲ್ಪ ಹೊಂದಬೇಕು ಎಂದರು.

ಯುವಕರು ದುಶ್ಚಟಗಳಿಗೆ ದಾಸರಾಗದೆ, ಬದುಕನ್ನು ರೂಪಿಸುವ ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಸಹನೆ, ಸೌಹಾರ್ದತೆ, ಸಹಬಾಳ್ವೆ ಹಾಗೂ ಸಾಮಾಜಿಕ ಕಳಕಳಿಯನ್ನು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ರಮಗಳ ಬೋಧನೆಗೆ ಸೀಮಿತವಾಗದೆ, ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾದ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ತುಂಬುವ ಮೂಲಕ ಅವರ ಆಲೋಚನಾ ಸಾಮರ್ಥ್ಯವನ್ನು ವೃದ್ಧಿಸಬೇಕಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ನಿರ್ಣಾಯಕವಾಗಿದೆ. ಶಿಕ್ಷಣ, ತಂತ್ರಜ್ಞಾನ ಜ್ಞಾನ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯ ಮೂಲಕ ಯುವಕರು ಬದಲಾವಣೆಯ ಹರಿಕಾರರಾಗಬಹುದು ಎಂದರು.

ಯುವಜನಾಂಗ ದೇಶದ ಅತಿ ದೊಡ್ಡ ಶಕ್ತಿಯಾಗಿದ್ದು, ದೃಢಸಂಕಲ್ಪ ಹಾಗೂ ಪ್ರಾಮಾಣಿಕತೆಯಿಂದ ಭ್ರಷ್ಟಾಚಾರ ಮುಕ್ತ ಭಾರತದ ಕನಸನ್ನು ನನಸಾಗಿಸಬಹುದು ಎಂದು ಹೇಳಿದರು.


ಭ್ರಷ್ಟಾಚಾರವನ್ನು ಕೇವಲ ಕಾನೂನಿನ ಮೂಲಕ ಸಂಪೂರ್ಣ ನಿರ್ಮೂಲನೆ ಮಾಡಲಾಗುವುದಿಲ್ಲ. ಆದರೆ ನಾಗರಿಕರ ಜಾಗೃತಿ ಮತ್ತು ಭ್ರಷ್ಟರನ್ನು ಸಮಾಜದಿಂದ ಬಹಿಷ್ಕರಿಸುವ ಮನೋಭಾವದ ಮೂಲಕ ಅದನ್ನು ನಿಯಂತ್ರಿಸಬಹುದು. ದುರಾಸೆಯೇ ಭ್ರಷ್ಟಾಚಾರದ ಮೂಲವೆಂದು ಅವರು ಅಭಿಪ್ರಾಯಪಟ್ಟರು.

ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಟಿ ಅಭಿನಯ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ಸಂದರ್ಭದಲ್ಲಿ ಹಾನುಬಾಳಿನಲ್ಲಿ ಕಳೆದ 28 ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ವಾಸು ಅವರನ್ನು ಶಾಲಾ ಆಡಳಿತ ಮಂಡಳಿಯಿಂದ ವಿಶೇಷವಾಗಿ ಗೌರವಿಸಲಾಯಿತು.


ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಪ್ಪ (ಹೂಡಿ ಚಿನ್ನಿ), ಸಾಮಾಜಿಕ ಹೋರಾಟಗಾರ ಯಡಹಳ್ಳಿ ಮಂಜುನಾಥ್, ಎಸ್‌ಡಿಎಂಸಿ ಸದಸ್ಯ ಗಣೇಶ್, ಉಪಾಧ್ಯಕ್ಷೆ ಅನ್ವಿತಾ, ವಿನಾಯಕ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಸವರಾಜು, ಕಾರ್ಯದರ್ಶಿ ಲಿಂಗದೇವರು, ಖಜಾಂಚಿ ಹರೀಶ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Hassan

ಚನ್ನರಾಯಪಟ್ಟಣದ ರಾಮೋತ್ಸವ ಮೆರವಣಿಗೆಯಲ್ಲಿ ಬಾಗಿಯಾದ ಗಿಲ್ಲಿ ನಟ

Published

on

ವರದಿ: ದಯಾನಂದ ಶೆಟ್ಟಿಹಳ್ಳಿ

ಚನ್ನರಾಯಪಟ್ಟ:  ನಗರದಲ್ಲಿ ಇಂದು ನಡೆದ ರಾಮೋತ್ಸವ ಮೆರವಣಿಗೆಯಲ್ಲಿ ಬಿಗ್‌ಬಾಸ್‌-12 ವಿನ್ನರ್‌ ಗಿಲ್ಲಿ ನಟ ಬಾಗಿಯಾಗಿದ್ದು, ಗಿಲ್ಲಿ ಕಂಡ ಅಭಿಮಾನಿಗಳ ಹರ್ಷೋದ್ಘಾರಗೊಂಡಿದ್ದಾರೆ.

ಚನ್ನರಾಯಪಟ್ಟಣದ ಬಾಗೂರು ರಸ್ತೆಯಿಂದ ಪ್ರಾರಂಭವಾಗಿ ನಗರದ ಆಂಜನೇಯ ದೇವಾಲಯದವರೆಗೆ ನಡೆಯಲಿರೋ ರಾಮೋತ್ಸವ  ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಸೇರಿ ಸಾವಿರಾರು ಜನ ಭಾಗಿಯಾಗಿದ್ದರು. ಈ ಮೆರವಣಿಗೆಗೆ ಆಗಮಿಸಿದ ಗಿಲ್ಲಿ ನಟನನ್ನು ನೋಡಲು ಜನಸಾಗರ ಹರಿದು ಬಂದಿತ್ತು.

ಈ ವೇಳೆ ಗಿಲ್ಲಿ ಕಾರಿನಿಂದ ಕೆಳಗೆ ಇಳಿಯಲಾಗದೆ ಕಾರಿನಲ್ಲೇ‌ ಕುಳಿತಿದ್ದು, ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ ಮಾಡಿದ್ದಾರೆ. ಬಳಿಕ ಪೊಲೀಸರ ರಕ್ಷಣೆಯಿಂದ ಗಿಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.

 

ಮೆರವಣಿಗೆಯುದ್ಧಕ್ಕೂ ಅಭಿಮಾನಿಗಳು ಗಿಲ್ಲಿ ಗಿಲ್ಲಿ ಎಂದು ಕೂಗಿದ್ದಾರೆ. ಬಳಿಕ ಇದೇ ಸಂದರ್ಭದಲ್ಲಿ ಗಿಲ್ಲಿ ಅಭಿಮಾನಿಗಳತ್ತ ಕೈ ಬೀಸಿದ್ದಾರೆ.

 

 

 

Continue Reading

Hassan

ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

Published

on

ಹಾಸನ: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾದ ಘಟನೆ ಹಾಸನ ಹೊರವಲಯದ ಉದ್ದೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು (ಫೆ.7) ಮಧ್ಯಾಹ್ನ ನಾಲ್ವರು ಸ್ನೇಹಿತರ ಜೊತೆ ಉದ್ದೂರು ಕೆರೆಗೆ ಈಜಲು ತೆರಳಿದ್ದ. ಐವರಲ್ಲಿ ಇಬ್ಬರು ಸ್ನೇಹಿತರು ಈಜಲು ನೀರಿಗೆ ಇಳಿದಿದ್ದರು. ಕೆರೆಯ ಆಳವಾದ ಪ್ರದೇಶಕ್ಕೆ ಈಜುತ್ತಾ ಹೋಗಿದ್ದ ಪ್ರಜ್ವಲ್ ವಾಪಾಸ್ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಅಗ್ನಿಶಾಮಕದಳದ ಸಿಬ್ಬಂದಿ ಕೆರೆಯಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

Trending

error: Content is protected !!