Connect with us

Politics

ಸರ್ಕಾರದ ವೈಫಲ್ಯ ಮರೆ ಮಾಚಲು ಹಿಜಾಬ್ ಪ್ರಸ್ತಾಪ: ಬಸವರಾಜ ಬೊಮ್ಮಾಯಿ

Published

on

ರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಸ್ತಾಪ ಖಂಡನೀಯ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹಿಜಾಬ್ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಪ್ರಶ್ನಿಸಿದರು.
1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅನ್ವಯ ಶಾಲಾ ಸಮವಸ್ತ್ರ ಜಾರಿಗೆ ತರಲಾಗಿತ್ತು, ಅದನ್ನು ನಮ್ಮ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು ಹಿಂದೆ ಪಡೆಯುವ ಮಾನಾಡಿದ್ದಾರೆ. ಹಿಜಾಬ್ ಪ್ರಕರಣ ಈಗಾಗಲೇ ಕೊರ್ಟ್ ನಲ್ಲಿ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದರು.


ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಗಳು ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು. ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ.‌ ಪತ್ರ ಕೂಡ ಬರೆದಿದ್ದಾರೆ.
ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಈ ಸರ್ಕಾರ ದಿವಾಳಿಯಾಗಿದೆ. ಎಲ್ಲ ಸಮಸ್ಯೆಗಳ ಮರೆತು ರಾಜ್ಯದ ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಹೇಳಿದರು.
ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ರೂ ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ.
ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿ ಇದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೆವೆ ಎಂದು ವಿಷ ಬೀಜ ಬಿತ್ತುವ ಪ್ರಯತ್ನ ನಡೆತುತ್ತಿದೆ. ರಾಜಕೀಯ ಉದ್ದೇಶಕ್ಕೆ ಮಾಡುತ್ತಿರುವ ಈ ಪ್ರಯತ್ನಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ ಎಂದರು.
ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್, ಇರಾನ್ ನಲ್ಲಿ ಮಹಿಳೆಯರು ಹಿಜಾಬ್ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಸುಪ್ರಿಂ ಕೋರ್ಟ್ ನಲ್ಲಿ ಪ್ರಕರಣ ಇದ್ದಾಗ ಮುಖ್ಯಮಂತ್ರಿಗಳು ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ಇದೇ ವೇಳೆ ಬರಗಾಲದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಐಷಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಹಾಗೂ ಸಚಿವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.


ರಾಜ್ಯ ಸರ್ಕಾರ ಮಾಡಿಸಿದ್ದು ಅಧಿಕೃತ ಜಾತಿಗಣತಿಯಲ್ಲ

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಅಧಿಕೃತ ಜಾತಿಗಣತಿ ಮಾಡಿಸಿಲ್ಲ. ಹೀಗಾಗಿ ಈಗ ಬಿಡುಗಡೆ ಮಾಡುವುದು ಜಾತಿಗಣತಿಯಲ್ಲ. ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭೆ ಪ್ರತಿ ವರ್ಷ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಸಮ್ಮೇಳನ ನಡೆಯುತ್ತದೆ. ಈ ವರ್ಷ ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ ಎಂದರು.
ಈ ಸಮಾವೇಶದಲ್ಲಿ ಜಾತಿಗಣತಿ ವಿರೋಧಿಸುವ ನಿರ್ಧಾರ‌ಕೈಗೊಳ್ಳಲಾಗುತ್ತದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ನಡೆಯುತ್ತಿದೆ.
ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ‌ ಸಿದ್ದವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ. ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅವರಿಗೆ ಎಲ್ಲರಿಗೂ ನ್ಯಾಯ ಕೊಡಿಸಬೇಕೆಂದು ಇದ್ದರೆ ಅಧಿಕೃತ ಜಾತಿ ಗಣತಿ‌ ಮಾಡಲಿ. ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಅನೇಕ ಸಮುದಾಯಗಳಿಗೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದ್ದೇವೆ. ಈ ವರದಿ ವೈಜ್ಞಾನಿಕ ವಾಗಿಲ್ಲ ಎನ್ನುವ ಮಾತಿದೆ. ಈ ವರದಿ ಬರಲಿ ಏನು ಲೋಪ ಇದೆ ನೊಡೋಣ ಎಂದು ಪ್ರತಿಕ್ರಿಯಿಸಿದರು.

Politics

ಡಿಕೆ ಬ್ರದರ್ಸ್‌ಗೆ ನೋಟಿಸ್‌ ಜಾರಿ ಮಾಡಿದ ದೆಹಲಿ ಪೊಲೀಸರು

Published

on

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಅವರ  ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

Continue Reading

Politics

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Published

on

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್ ಕಾಂಗ್ರೆಸ್ ಹೈಕಮಾಂಡ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು  ಸಿಎಂ ಮತ್ತು ವೇಣುಗೋಪಾಲ್ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದಿನ ರಾಜ್ಯದ ಗೊಂದಲಕ್ಕೆ ಎಐಸಿಸಿ ಅಧ್ಯಕ್ಷರು ಎಲ್ಲರನ್ನು ಕರೆದು ಮಾತುಕತೆ ಮಾಡಿ ನನ್ನಿಂದ ಏನು ಆಗಲ್ಲವೆಂದು ದೆಹಲಿ ಹೋಗಿದ್ದರು. ನನ್ಮ ಕೈಯಲ್ಲಿ ಏನು ಇಲ್ಲ, ಹೈಕಮಾಂಡ್ ಗಮನಕ್ಕೆ ತರುತ್ತೇನೆಂದು ಹೋದರು. ಯಾಕೆ ಮಲ್ಲಿಕಾರ್ಜುನ ಖರ್ಗೆ ಹೀಗೆ ಮಾತಾಡಿದರೆಂದು ರಾಜ್ಯದ ಜನರಿಗೆ ಗೊಂದಲ ಆಗಿತ್ತು. ಈಗ ಆ ಗೊಂದಲ ಏನೆಂದು ಕ್ಲಿಯರ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಯಾರು ಅಂದರೆ ವೇಣುಗೋಪಾಲ್ ಎಂದು ಗೊತ್ತಾಯಿತು. ಎಐಸಿಸಿ ಅಧ್ಯಕ್ಷರಿಗಿಂತ ವೇಣುಗೋಪಾಲ್ ದೊಡ್ಡವರೆಂದು ಗೊತ್ತಾಯಿತ್ತೆಂದು ಎಂದು ವ್ಯಂಗ್ಯ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಗೂ ವೇಣುಗೋಪಾಲ್ ಹೈಕಮಾಂಡ್ ಆಗಿದ್ದಾರೆ. ಇದು ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಗೊತ್ತಾಯ್ತು. ಯಾವುದೋ ಒಬ್ಬ ವ್ಯಕ್ತಿ ಕೈಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೆ ಎಂದು ವಾಗ್ದಾಳಿ ನಡೆಸಿದರು.

ಈ ದೇಶ ನಡೆಸೋ ಕಾಂಗ್ರೆಸ್ ಕೈಯಲ್ಲಿ ಇವತ್ತು ಬಂಡವಾಳ ಇಲ್ಲ. ಬಂಡವಾಳಕ್ಕೆ ಇರೋ ಒಂದೇ ಒಂದು ರಾಜ್ಯ ಕರ್ನಾಟಕ. ವೇಣುಗೋಪಾಲ್ ಅಲ್ಲಿ ಕುಳಿತು ಕಾಂಗ್ರೆಸ್‌ನಲ್ಲಿ ಇರೋ 2-3 ಗುಂಪುಗಳನ್ನು ಕರೆಯುತ್ತಿದ್ದಾರೆ. ಯಾವ ಗುಂಪು ಎಷ್ಟು ಬಾಳಿಕೆ ಬರುತ್ತದೆಂದು ವೇಣುಗೋಪಾಲ್ ನೋಡುತ್ತಿದ್ದಾರೆ. ಕಾಂಗ್ರೆಸ್‌ಗೆ ಮೊದಲು ಎಟಿಎಂ ಲೀಡರ್ ಬೇರೆ ಇದ್ದರು. ಆ ಜನರಲ್ ಸೆಕ್ರೆಟರಿ ಬೇರೆ. ಹೈಕಮಾಂಡ್ ಜನರಲ್ ಸೆಕ್ರೆಟರಿ ವೇಣುಗೋಪಾಲ್. ಇವರು ಯರ‍್ಯಾರು ಎಷ್ಟಕ್ಕೆ ಬಾಳುತ್ತೀರಾ. ನೀವು ಎಷ್ಟಕ್ಕೆ ಬಾಳುತ್ತೀರಾ ಅಂತ ಇಬ್ಬರನ್ನು ತೂಕ ಮಾಡೋ ಸ್ಥಿತಿಗೆ ಬಂದಿದೆ. ರಾಜ್ಯದ ಹಿತ ಮರೆತು ಅಧಿಕಾರ ಉಳಿಯೋಕೆ,  ಕುರ್ಚಿ ಉಳಿಸಿಕೊಳ್ಳಬೇಕೆಂದು ಸಿಎಂ-ಡಿಸಿಎಂ ಪೈಪೋಟಿಗೆ ಬಿದ್ದು ರಾಜ್ಯದ ಸ್ಥಿತಿ ಗಂಭೀರ ಮಾಡಿದ್ದಾರೆ ಎಂದು ಸಿಎಂ, ಡಿಸಿಎಂ ಮತ್ತು ಕಾಂಗ್ರೆಸ್‌ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅನೇಕ ಸಮಸ್ಯೆ ಇದೆ, ರೈತರ ಬಗ್ಗೆ ದಲಿತರ ಬಗ್ಗೆ ಕೇಳೋರು ಇಲ್ಲ. ದಲಿತರ ಯೋಗ ಕ್ಷೇಮ ಈ ಸರ್ಕಾರ ನೋಡಿಲ್ಲ. ಕಾಂಗ್ರೆಸ್‌ನಲ್ಲಿರೋ ದಲಿತ ಲೀಡರ್‌ಗಳಿಗೂ ಕಾಂಗ್ರೆಸ್ ಉಳಿಯೋದು ಮುಖ್ಯ. ದಲಿತ ಸಮುದಾಯ ಉಳಿಯೋದು ಮುಖ್ಯ ಅಲ್ಲ. ಅಧಿವೇಶನ 8 ರಿಂದ ಪ್ರಾರಂಭ ಆಗುತ್ತಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡೋಕೆ ಅಧಿವೇಶನ ಮಾಡುತ್ತೇವೆ. ಆದರೆ ಈಗಾಗಲೇ 31 ಬಿಲ್‌ಗಳು ಇವೆ. ಈಗ ಮತ್ತೆ 22 ಹೊಸ ಬಿಲ್‌ಗಳು ಇವೆಂದು ಹೇಳುತ್ತಿದ್ದಾರೆ. ಇದು ಬಿಲ್ ಪಾಸ್ ಅಧಿವೇಶನಾ ಎಂದು ಪ್ರಶ್ನೆ ಮಾಡಿದ್ದಾರೆ.

ಸದನ ನಡೆಯೋದೆ 8-9 ದಿನ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಇಲ್ಲ. ರಾಜು ಕಾಗೆ ಪ್ರತ್ಯೇಕ ರಾಜ್ಯ ಬೇಕು ಅಂತ ಕೇಳುತ್ತಿದ್ದಾರೆ. ನಿಮ್ಮದೇ ಶಾಸಕರು. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು. ಕಾಂಗ್ರೆಸ್ ದೇಶ, ರಾಜ್ಯ ಒಡೆಯೋದ್ರಲ್ಲಿ ನಿಪುಣರು. ಯುಪಿ, ಛತ್ತೀಸ್‌ಗಢ, ಆಂಧ್ರ ಪ್ರದೇಶ ಒಡೆದರು. ಈಗ ಕರ್ನಾಟಕ ಒಡೆಯೋಕೆ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಈ ಬಿಲ್ ಪಾಸ್ ಮಾಡೋಕೆ ವಿಶೇಷ ಅಧಿವೇಶನ ಕರೆಯಿರಿ. ಆದರೆ ಬೆಂಗಳೂರಿಗೆ ಸಂಬಂಧಿಸಿದ ಬಿಲ್ ಬೆಳಗಾವಿಯಲ್ಲಿ ಮಾಡೋದು ಸರಿಯಲ್ಲ ಎಂದರು.

ಸಚಿವ ಹೆಚ್‌.ಕೆ. ಪಾಟೀಲ್‌ರನ್ನು ಏನೋ ಅಂದುಕೊಂಡಿದ್ದೆ. ಉತ್ತರ ಕರ್ನಾಟಕ ಭಾಗದ ನಾಯಕರಾಗಿ ಅವರು ಆ ಭಾಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಹೀಗೆ ತಾರತಮ್ಯ ಆಗೋಕೆ ಉತ್ತರ ಕರ್ನಾಟಕದ ನಾಯಕರೇ ಕಾರಣ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಯಾಕೆ ಹಿಂದುಳಿದಿದೆ? ಅಲ್ಲಿಯವರೇ ಸಿಎಂ ಆಗಿದ್ದರು ಯಾಕೆ ಅಭಿವೃದ್ಧಿ ಆಗಿಲ್ಲ? ತಾರತಮ್ಯ ಮಾಡೋರಿಗೆ ತಕ್ಕ ಪಾಠ ಕಲಿಸೋ ಕೆಲಸ ಮಾಡಬೇಕು ಎಂದು ಹೇಳಿದರು.

Continue Reading

Politics

ನವೆಂಬರ್‌ ಕ್ರಾಂತಿ ಹೈಕಮಾಂಡ್‌ ಬಿಡಲ್ಲ: ಸತೀಶ್‌ ಜಾರಕಿಹೊಳಿ

Published

on

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ, ಹಾಗೇ ಮಾಡಲು  ಹೈಕಮಾಂಡ್ ಬಿಡಲ್ಲ ಎಂದು  ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನವೆಂಬರ್ ಕ್ರಾಂತಿ ಆಗಲ್ಲ  ಕ್ರಾಂತಿ ಆಗಲು 20 ರಿಂದ 30 ದಿನ ಇದೆ. ಏನಾಗುತ್ತದೆ ಎಂದು ನೋಡೋಣ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ಲ ಹೈಕಮಾಂಡ್‌ ಹಾಗೇ ಮಾಡಲು ಬಿಡಲ್ಲ ಎಂದು ಹೇಳಿದರು.

ಏಕನಾಥ್ ಶಿಂಧೆ ಒಬ್ಬರೇ,  ಪವಾರ್ ಒಬ್ಬರೇ ಇನ್ನೊಬ್ಬ ಶಿಂಧೆ,  ಪವರ್ ಹುಟ್ಟಿಕೊಳ್ಳಲು ಆಗಲ್ಲ ಎಂದರು.

ದಲಿತ ಸಿಎಂ  ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಅವಕಾಶ ಬರುವವರೆಗೆ ಕಾಯಬೇಕು. ಈಗಂತೂ ಅವಕಾಶ ಇಲ್ಲ ಸಮಯಕ್ಕಾಗಿ ಕಾಯಬೇಕು. ಅವಕಾಶ  ಸೃಷ್ಠಿಯಾಗಬೇಕು. ಅಲ್ಲಿವರೆಗೆ ಕಾಯಬೇಕು ಎಂದರು.

Continue Reading

Trending

error: Content is protected !!