Connect with us

Mandya

ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆಗೆ‌ ಕಲ್ಲು ಗಣಿಗಾರಿಕೆಯಿಂದ ಅಪಾಯವಿದೆಯಾ ಎಂದು ಟ್ರಯಲ್ ಬ್ಲಾಸ್ಟ್ ನಡೆಸುವುದೇ ದೊಡ್ಡ ಅಪಾಯ – ರೈತ ಹೋರಾಟಗಾರ ನಂಜುಂಡೇಗೌಡ*

Published

on

 

ಶ್ರೀರಂಗಪಟ್ಟಣ : ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆಗೆ‌ ಕಲ್ಲು ಗಣಿಗಾರಿಕೆಯಿಂದ ಅಪಾಯವಿದೆಯಾ ಎಂದು ಪರೀಕ್ಷಿಸಲು ಟ್ರಯಲ್ ಬ್ಲಾಸ್ಟ್ ನಡೆಸುವುದೇ ದೊಡ್ಡ ಅಪಾಯ – ರೈತ ಹೋರಾಟಗಾರ ನಂಜುಂಡೇಗೌಡ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿನ ಚಲುವರಾಯಸ್ವಾಮಿ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು,‌ ಸರ್ಕಾರ ಕಲ್ಲು ಗಣಿಗಾರಿಕೆ ಮಾಲೀಕತಿಗೆ ಅನುಕೂಲ ಮಾಡಿಕೊಡುವ ನಿಟ್ಡಿನಲ್ಲಿ ಟ್ರಯಲ್ ಬ್ಲಾಸ್ಟ್ ಎಂಬ ನಾಟಕ ಆಡುತ್ತಿದೆ. ಈ ನಾಟಕವನ್ನು ಕೈ ಬಿಟ್ಟು ಅಣೆಕಟ್ಟೆ ಸುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಶಾಸ್ವತವಾಗಿ ಕಲ್ಲು ಗಣಿಗಾರಿಕೆಗೆ ಶಾಸ್ವತ ನಿರ್ಭಂಧ ವಿಧಿಸಬೇಕೆಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ, ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ಎಂ.ಉದಯ್‌

Published

on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ ಹಾಗೂ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮ ನಿಯಮಿತದ ಕೆರಗೋಡು ಶಾಖಾ ನಾಲೆಯಡಿಯಲ್ಲಿ ಬರುವ ಬೆಸಗರಹಳ್ಳಿ ಕೆರೆಯ ಹೆಚ್‌ಎಲ್‌ಸಿ ಕಾಲುವೆ ಅಭಿವೃದ್ಧಿ ಮತ್ತು 21ನೇ ನಾಲೆಗೆ ಹೋಗುವ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 499.50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿ  ತಿಳಿಸಿದರು.

ಸದರಿ ನಾಳೆ ಮತ್ತು ರಸ್ತೆ ಅಭಿವೃದ್ಧಿಯಿಂದ ಈ ಭಾಗದ ರೈತರಿಗೆ ನೀರಿನ ಸುಗಮ ಲಭ್ಯತೆ, ಜಲಾನಯನ ವ್ಯವಸ್ಥೆಯ ಸುಧಾರಣೆ, ರೈತೋದ್ಯಮಕ್ಕೆ ನೆರವು, ಸ್ಥಳೀಯರ ಸಂಚಾರಕ್ಕೆ ಉತ್ತಮ ರಸ್ತೆ ವ್ಯವಸ್ಥೆ ದೊರಕುವುದಾಗಿ  ಎಂದರು.

ನಮ್ಮ ಗ್ರಾಮ ನಮ್ಮ ಅಭಿವೃದ್ಧಿ ಎಂಬ ಧ್ಯೇಯದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು ಗ್ರಾಮದ ಎಲ್ಲಾ ಮುಖ್ಯಸ್ಥರು ಹಾಗೂ ರೈತರುಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಕಿವಿಮಾತು ಹೇಳಿದರು.

ಈ ವೇಳೆ ಮನಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ. ಗ್ರಾ.ಪಂ.ಸದಸ್ಯ ಬಾಬು ಸೇರಿದಂತೆ ಮುಖಂಡರುಗಳು ಹಾಜರಿದ್ದರು.

Continue Reading

Mandya

ಅಕ್ರಮವಾಗಿ ಮಧ್ಯ ಮಾರಾಟ, ಗ್ರಾಮಸ್ಥರಿಂದ ಪ್ರತಿಭಟನೆ.

Published

on

ಕೆ.ಆರ್.ಪೇಟೆ : ತಾಲ್ಲೂಕಿನ ಚೌಡಸಮುದ್ರ ಗ್ರಾಮದಲ್ಲಿ ಎಗ್ಗಿಲ್ಲದೆ, ಅಕ್ರಮವಾಗಿ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ನಡೆಯುತ್ತಿದ್ದು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು.

ಗ್ರಾಮದಲ್ಲಿ ಅಕ್ತಮವಾಗಿ ಮದ್ಯ ಮಾರಾಟವಾಗುತ್ತಿರುವುದರಿಂದ ಕುಡಿತದ ಚಟಕ್ಕೆ ಬಿದ್ದು ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ. ಗ್ರಾಮದಲ್ಲಿ ಜನರ ಅಶಾಂತಿಗೆ ಕಾರಣವಾಗಿರುವ ಅಕ್ರಮ ಮದ್ಯದಂಗಡಿಯನ್ನು ಮುಚ್ಚಿಸಿ, ಗ್ರಾಮಸ್ಥರ ವಿರೋಧದ ನಡುವೆಯೂ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ಕಿಡಿಗೇಡಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲೂಕು ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಪ್ರಭಾವಿ ವ್ಯಕ್ತಿಯೊಬ್ಬರು ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದು, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮದಲ್ಲಿ ಹಲವು ಬಾರಿ ನ್ಯಾಯ ಮಾಡಿ, ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರೂ ಅಕ್ರಮ ಮಧ್ಯ ಮಾರಾಟ ನಿಂತಿಲ್ಲ. ಅಬಕಾರಿ ಅಧಿಕಾರಿಗಳು ಹಾಗೂ ಪೋಲೀಸರ ಕುಮ್ಮಕ್ಕಿನಿಂದಲೇ ಅಕ್ರಮವಾಗಿ ಮಧ್ಯ ಮಾರಾಟ ನಡೆಯುತ್ತಿದೆ ಎಂದು ಗ್ರಾಮಸ್ಥರು ಕಿಡಿ ಕಾರಿದರು.

ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದಿಂದ ಕುಡಿತದ ಚಟಕ್ಕೆ ಗ್ರಾಮದ ಕೆಲ ಜನರು ಹಾಗೂ ಯುವಕರು ದಾಸರಾಗಿ, ಪ್ರತಿನಿತ್ಯವೂ ಗ್ರಾಮದಲ್ಲಿ ಗಲಾಟೆ ಗದ್ದಲಗಳು ನಡೆಯುತ್ತಿವೆ. ಗ್ರಾಮದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರು ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಅಕ್ರಮ ಮದ್ಯ ಮಾರಾಟದ ಅಡ್ಡೆಯ ಮೇಲೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಮಧ್ಯದ ಮಾರಾಟವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕಂಡಕ್ಟರ್ ಶಿವಮೂರ್ತಿ, ರೇವಣ್ಣ, ಚಂದ್ರು, ಗೀತಾ, ಶಿವಪ್ಪ, ಗ್ರಾ.ಪಂ ಸದಸ್ಯ ಶಿವಕುಮಾರ್, ಬಿ.ಎಸ್. ಕುಮಾರಿ, BSNL ಶಿವಣ್ಣ, ಟೈಲರ್ ಲೋಕೇಶ್, ರಾಜಣ್ಣ, ಪುಟ್ಟರಾಜು, ರವಿ, ಅಣ್ಣಯ್ಯಣ್ಣ, ಮಹೇಶ್, ಮಂಜುನಾಥ್,ರತ್ನಮ್ಮ, ಅಕ್ಕಯಮ್ಮ, ಮಧು, ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Mandya

ಬಾಲಕಿ ಮೇಲೆ ̇ಲೈಂ*ಗಿಕ ದೌರ್ಜನ್ಯ : ಅಪರಾಧಿಗೆ ಜೀವಾವಧಿ ಶಿಕ್ಷೆ

Published

on

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಗ್ರಾಮವೊಂದರಲ್ಲಿ ಮೂರುವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಮಂಡ್ಯ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಣ್ಣ ಬಿನ್ ಲೇಟ್ ಚಿಕ್ಕಣ್ಣ (59 ವರ್ಷ) ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದು, ಆತ ಡಿ.11, 2023 ರಂದು ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಅಮ್ಮನಿಗೆ ಹೇಳಬಾರದು ಎಂದು ಬೆದರಿಕೆ ಹಾಕಿದ್ದ ಎನ್ನುವುದು ಸಾಬೀತಾಗಿದೆ.

ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೆ.ಆ‌ರ್.ಎಸ್ ಪೊಲೀಸ್‌ ಠಾಣೆಯಲ್ಲಿ ಪೋಕ್ಸ್‌ ಕಾಯಿದೆ ಅಡಿ ಅಂದಿನ ಪಿ.ಎಸ್.ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿದ್ದರು.

ಈ ಹಿಂದೆ ಕೆ.ಆರ್.ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೆ.ಆ‌ರ್.ಸಾಗರ ಠಾಣೆಯ ಪಿ.ಎಸ್.ಐ ರಮೇಶ್ ಕರಕೀಕಟ್ಟಿ ಹಾಗೂ ಸಿಬ್ಬಂದಿಯವರಾದ ಎ.ಎಸ್.ಐ ಸತೀಶ್, ಹೆಚ್.ಸಿ. ಯವರಾದ ಯಧುರಾಜ್‌, ಸಿ.ಪಿ.ಸಿಯವರಾದ ರೇಣುಕುಮಾ‌ರ್, ಅಶ್ವಿನಿ, ಪುಟ್ಟಲಕ್ಷ್ಮಿ ಅವರು ಈ ತನಿಖಾ ತಂಡದಲ್ಲಿದ್ದರು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಿಲೀಪ್ ಕುಮಾರ್ ಅವರು ಇಂದು (ಜೂ11) ಆರೋಪಿಗೆ ಜೀವಿತಾವಧಿ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಅವರು ಸಂತ್ರಸ್ಥರ ಪರ ವಾದ ಮಂಡಿಸಿದ್ದು, ಕೆ.ಆ‌ರ್.ಸಾಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಮಂಡ್ಯ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

Trending

error: Content is protected !!