Connect with us

Chamarajanagar

ಕರ್ನಾಟಕ, ತಮಿಳುನಾಡು ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್

Published

on

ಚಾಮರಾಜನಗರ: ಮಂಗಳವಾರ ಬೆಂಗಳೂರು ಬಂದ್ (Bengaluru Bandh) ಹಿನ್ನೆಲೆ ಕರ್ನಾಟಕ (Karnataka) ಹಾಗೂ ತಮಿಳುನಾಡಿನ (Tamil Nadu) ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು (KSRTC Bus) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ ಮೂಲಕ ಹೋಗುವ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸರ ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ  ಮಾಹಿತಿ ನೀಡಿರುವ ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್, ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಕರ್ನಾಟಕಕ್ಕೆ ಬರುವ ತಮಿಳುನಾಡಿನ ಸಾರಿಗೆ ಬಸ್‌ಗಳ ಸಂಚಾರವು ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಕರಾಟೆ ತರಬೇತಿ ಅತ್ಯಗತ್ಯ: ಶಾಸಕ ಮಂಜುನಾಥ್

Published

on

ಹನೂರು: ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಹಾಗೂ ಸದೃಢರಾಗಿರಲು ಕರಾಟೆ ತರಬೇತಿ ಪಡೆದುಕೊಂಡರೆ ಎಲ್ಲವನ್ನು ಜಯಿಸಬಹುದು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಗುರು ಪರಶುರಾಮ ಶಿತೋರ್ಯು ಕರಾಟೆ ಅಕಾಡೆಮಿ ವತಿಯಿಂದ ಕರಾಟೆ ತರಬೇತಿಯಲ್ಲಿ ಪ್ರಾವಿಣ್ಯತೆ ಮತ್ತು ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ವಿದ್ಯಾಭ್ಯಾಸ ಸೇರಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಗುರಿ ಇರಬೇಕು. ಆಗಿದ್ದರೆ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದರು.

ನಗರ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ತರಬೇತಿಗಳು ಅಕಾಡೆಮಿಗಳು ಇರುತ್ತದೆ. ಅದೇ ರೀತಿ ಹನೂರು ಪಟ್ಟಣ ವ್ಯಾಪ್ತಿಯಲ್ಲಿರುವ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಗುರು ಪರಶುರಾಮ ಕರಾಟೆ ಅಕಾಡೆಮಿ ವತಿಯಿಂದ ಕರಾಟೆ ತರಬೇತಿ ನೀಡುತ್ತಿರುವುದು ಸಂತಸದ ವಿಚಾರ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರತರುವ ನಿಟ್ಟಿನಲ್ಲಿ ತರಬೇತಿಗಳು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಕಳೆದ ಹಲವು ವರ್ಷಗಳಿಂದ ಗುರು ಪರಶುರಾಮ್ ಕರಾಟೆ ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.

ಇದೆ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ಪಟ್ಟಣ ಪಂಚಾಯಿತಿ ಸದಸ್ಯ ಪವಿತ್ರ, ಮುಖಂಡರುಗಳಾದ ಜಸ್ಸಿಂ ಪಾಷ, ಮಾದಪ್ಪ ಹಮೀದ್ ಸೇರಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Chamarajanagar

*ಪ್ರೀತಿ ನಿರಾಕರಣೆ: ಚಾಕುವಿನಿಂದ ಇರಿದುಕೊಂಡ ಯುವಕ*

Published

on

ಚಾಮರಾಜನಗರ: ಪ್ರೀತಿ ನಿರಾಕರಣೆಯಾದ ಕಾರಣ ಯುವಕನೊಬ್ಬ ಚಾಕುವಿನಿಂದ ತಾನೇ ಇರಿದುಕೊಂಡಿರುವ ಘಟನೆ ಚಾ.ನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ತಾಲೂಕಿನ ಸಾಣೇಗಾಲ ಗ್ರಾಮದ ಪ್ರದೀಪ್(20) ಗಾಯಗೊಂಡಿರುವ ಯುವಕ. ಎದೆಯ ಭಾಗದಲ್ಲಿ ಗಾಯವಾಗಿದ್ದು, ನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಪಿಯುಸಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪಟ್ಟಣ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಕೈಗೊಂಡಿದ್ದಾರೆ.

Continue Reading

Chamarajanagar

ಗೌರಿ-ಗಣೇಶ ಹಬ್ಬದ ಹಿನ್ನೆಲೆ : ಅಗತ್ಯ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

Published

on

ಚಾಮರಾಜನಗರ: ಜಿಲ್ಲೆಯಲ್ಲಿ ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ, ಉತ್ಸವದಂತಹ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಅನುಮತಿ ನೀಡುವ ಜೊತೆಗೆ ಹಬ್ಬದ ಸಂದರ್ಭದಲ್ಲಿ ಸುರಕ್ಷತೆ ಹಾಗೂ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶೋತ್ಸವ ಆಚರಣೆ ಸಂಬಂಧ ಅಧಿಕಾರಿಗಳು ಹಾಗೂ ನಗರದ ಶ್ರೀ ವಿದ್ಯಾಗಣಪತಿ ವಿದ್ಯಾಮಂಡಳಿ ಪದಾಧಿಕಾರಿಗಳು, ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೌರಿ ಗಣೇಶ ಪ್ರತಿಷ್ಠಾಪಿಸುವ ಆಯೋಜಕರಿಗೆ ಅನುಮತಿ ನೀಡುವ ಸಲುವಾಗಿ ಅಧಿಕಾರಿಗಳನ್ನೊಳಗೊಂಡ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮಗಳ ಆಯೋಜಕರು ಆಯಾ ತಾಲೂಕು ವ್ಯಾಪ್ತಿಯ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕಿದೆ. ಆಯೋಜಕರು ಅರ್ಜಿ ಸಲ್ಲಿಸಿದ ಕೂಡಲೇ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು. ಇ-ಮೇಲ್ ಮೂಲಕವು ಅರ್ಜಿ ಸಲ್ಲಿಸಿದ್ದಲ್ಲಿ ಪರಿಗಣಿಸಿ ಅನುಮತಿಸಬೇಕು ಎಂದರು.

ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಬೇಕು. ಗಣಪತಿ ವಿಸರ್ಜನೆಗಾಗಿ ನಿಗದಿ ಮಾಡಿರುವ ಸ್ಥಳಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಗಣಪತಿ ಮೆರವಣಿಗೆ ಮಾರ್ಗಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬದ ವೇಳೆ ಕುಡಿಯುವ ನೀರು, ವಿದ್ಯುತ್, ಸ್ವಚ್ಚತೆ, ಸುರಕ್ಷತೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ತಿಳಿಸಿದರು.

ಈ ಹಿಂದಿನ ವರ್ಷದಲ್ಲಿಯೂ ಚಾಮರಾಜನಗರ ಪಟ್ಟಣದಲ್ಲಿ ವಿದ್ಯಾಗಣಪತಿ ಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣಪತಿ ಕಾರ್ಯಕ್ರಮ ಹಾಗೂ ಉತ್ಸವ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಜಿಲ್ಲಾಡಳಿತ ಪೊಲೀಸ್ ಇಲಾಖೆ ಎಲ್ಲ ಸಹಕಾರ ನೀಡಲಿದೆ. ಗಣಪತಿ ವಿಸರ್ಜನೆಗೆ ದೊಡ್ಡರಸನಕೊಳದಲ್ಲಿ ಅಗತ್ಯ ಸಿದ್ದತೆಗೆ ನಗರಸಭೆ ಅಧಿಕಾರಿಗಳು ಎಲ್ಲ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ, ಕಳೆದ ವರ್ಷ ನಗರದ ವಿದ್ಯಾಗಣಪತಿ ಮಂಡಳಿಯವರು ಸಹಕಾರ ನೀಡಿ ಗಣಪತಿ ಉತ್ಸವವನ್ನು ಕೈಗೊಂಡಿದ್ದರು. ಈ ಬಾರಿಯೂ ಗಣಪತಿ ಪ್ರತಿಷ್ಠಾಪನೆ ಮೆರವಣಿಗೆ ಸೇರಿದಂತೆ ಉತ್ಸವಕ್ಕೆ ನಮ್ಮ ಕಡೆಯಿಂದ ಎಲ್ಲ ಸಹಕಾರ ನೀಡಲಿದ್ದೇವೆ. ಪೊಲೀಸ್ ಇಲಾಖೆ ವತಿಯಿಂದ ಕೈಗೊಳ್ಳಬೇಕಿರುವ ಸಿದ್ದತೆಗಳನ್ನು ಮಾಡಲಿದ್ದೇವೆ ಎಂದರು.

ಸಭೆಯಲ್ಲಿ ಹಾಜರಿದ್ದ ಮಂಡಳಿಯ ಪದಾಧಿಕಾರಿಗಳು, ಮುಖಂಡರು ಮಾತನಾಡಿ, ಕಳೆದ ಬಾರಿಯೂ ಶಾಂತಿಯುತವಾಗಿ ಗಣೇಶ ಉತ್ಸವ ನಗರದಲ್ಲಿ ಜರುಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಈ ಸಲವು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ನವರಾತ್ರಿಗೂ ಮೊದಲು ವಿಸರ್ಜನೆ ಕಾರ್ಯವನ್ನು ಹಮ್ಮಿಕೊಳ್ಳಲಿದ್ದೇವೆ. ರಸ್ತೆ ಸೌಕರ್ಯ, ಸ್ವಚ್ಚತೆ, ಬೀದಿ ದೀಪ, ವಿಸರ್ಜನಾ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಡಿವೈಎಸ್‍ಪಿ ಲಕ್ಷ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಜಿಲ್ಲಾ ನಗರಾಭಿವೃದ್ದಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಅಲ್ತಾಫ್, ತಹಶೀಲ್ದಾರ್ ಬಸವರಾಜು, ತನ್ಮಯ್, ನಗರಸಭಾ ಆಯುಕ್ತ ಎಸ್.ವಿ. ರಾಮದಾಸ್, ರಮೇಶ್, ಇನ್ನಿತರ ಅಧಿಕಾರಿಗಳು, ಗಣಪತಿ ಮಂಡಳಿಯ ಪದಾಧಿಕಾರಿಗಳಾದ ಬಾಲಸುಬ್ರಹ್ಮಣ್ಯ, ಮಹೇಶ್, ಶಿವಣ್ಣ, ಚಂದ್ರು, ಮನೋಜ್ ಪಟೇಲ್, ರಾಘವೇಂದ್ರ, ಬಂಗಾರು, ಶಿವು, ಕಿರಣ್, ಮಾದಣ್ಣ, ಪೃಥ್ವಿರಾಜ್, ನವೀನ್, ಅಶ್ವಿನ್, ಕೂಸಣ್ಣ, ಪ್ರವೀಣ್, ಇನ್ನಿತರರು  ಉಪಸ್ಥಿತರಿದ್ದರು.

Continue Reading

Trending

error: Content is protected !!