Mysore
ಮೊಬೈಲ್ ಬಳಕೆಯಿಂದ ಕ್ರೀಡಾ ಪಟುಗಳ ಸಂಖ್ಯೆ ಕ್ಷೀಣ: ಬಿಇಒ ಕೃಷ್ಣಪ್ಪ ವಿಷಾದ
ವರದಿ: ಎಸ್. ಬಿ.ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ಮೊಬೈಲ್ ಬಳಕೆಯ ವ್ಯಾಮೋಹದಿಂದ ಕ್ರೀಡೆಗಳ ಬಗ್ಗೆ ಸಾಕಷ್ಟು ಕ್ರೀಡಾಪಟುಗಳು ನಿರಾಶಕ್ತಿ ವಹಿಸುತ್ತಿರುವ ಪರಿಣಾಮವಾಗಿ ಪ್ರತಿಭಾವಂತ ಕ್ರೀಡಾಪಟುಗಳ ಸಂಖ್ಯೆ ಕ್ಷೀಣಗೊಳ್ಳುತ್ತಿದೆ ಎಂದು ಕೆ.ಅರ್.ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ವಿಷಾದ ವ್ಯಕ್ತಪಡಿಸಿದರು.
ಸಾಲಿಗ್ರಾಮ ತಾಲೂಕಿನ ಸಕ್ಕರೆ ಗ್ರಾಮದಲ್ಲಿ ನಡೆದ ಚುಂಚನಕಟ್ಟೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳ ಶಾಲಾ-ಕಾಲೇಜುಗಳಲ್ಲಿ ಪಠ್ಯ ಶಿಕ್ಷಣದ ಜತೆಯಲ್ಲೆ ಕ್ರೀಡೆ, ಸಾಹಿತ್ಯ ಮತ್ತು ಕಲೆ-ಸಾಂಸ್ಕೃತಿಕ ಇನ್ನಿತರ ಪಠ್ಯೇತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾಹಿಸುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದರು.
ವಿದ್ಯಾರ್ಥಿಗಳ ದೈನಂದಿನ ಓದಿನಲ್ಲಿ ಕ್ರೀಡೆಯೂ ಸಹ ಒಂದು ಅಂಗವಾಗಿದೆ, ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ತಿರುವು ಕೊಡುವ ಪ್ರಮುಖ ಕ್ಷೇತ್ರ ಕ್ರೀಡೆಯಾಗಿದೆ. ಕ್ರೀಡೆ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನ ಉತ್ತಮ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಗಿದ್ದು, ಒಂದಲ್ಲ ಒಂದು ಕ್ರೀಡೆಯಲ್ಲಿ ಸ್ಪರ್ಧೆ ಮಾಡಿ ದೈಹಿಕ, ಹಾಗೂ ಮಾನಸಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗಲಿದೆ ಎಂದು ಹೇಳಿದರು.

ಕ್ರೀಡಾಕೂಟದಲ್ಲಿ 27 ಶಾಲೆಯ ಕ್ರೀಡಾಪಟುಗಳು ಭಾಗವಹಿಸಿದ್ದರು.
ನಂತರ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಸುರೇಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸ್ವಾಮೀಗೌಡ, ದೈಹಿಕ ಪರಿವೀಕ್ಷಕ ಕುಮಾರಸ್ವಾಮಿ, ಮುಖ್ಯ ಶಿಕ್ಷಕ ಕರ್ತಾಲ್ ಕುಮಾರ್,.ಸಿ.ಓ ಪೂರ್ಣಿಮಾ, ಕುಸುಮ, ಸಿ.ಅರ್.ಪಿ.ಗಳಾದ, ನಂದಿನಿ, ನರ್ತನಾ, ಶಿಕ್ಷಕರಾದ ಸ್ವಾಮಿ, ಪ್ರಭು, ರವೀಂದ್ರ, ಲೋಕೇಶ್, ಶ್ರೀನಿವಾಸ್, ಸವಿತಾ, ದೀಪ,ಕೌಶಲ್ಯ, ಲಕ್ಷ್ಮಣೇಗೌಡ,ಪವಿತ್ರ, ಜಗದೀಶ್, ಮಂಜುಳಾ, , ದೈಹಿಕ ಶಿಕ್ಷಕರಾದ ಮಹೇಶ್ ಬಳಿಗಾರ್, ಬೈರನಾಯಕ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ .ಭರತ್, ಸದಸ್ಯ ಲೋಕೇಶ್, ಕುಮಾರಸ್ವಾಮಿ, ರಾಮಸ್ವಾಮಿ, ಸೇರಿದಂತೆ ಮತ್ತಿತರರು ಹಾಜರಿದ್ದರು.
Mysore
ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ
ಮೈಸೂರು: ಕಾಂಗ್ರೆಸ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮೈಸೂರಿನಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ನಾಯಕರು, ವಿದ್ಯಾರ್ಥಿಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು. ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ಬಿಜೆಪಿ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಟೀಕಿಸಿದರು. “ದೇಶದ ಜನರ ಗಮನವನ್ನು ಬೇರೆಡೆ ಸೆಳೆಯಲು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಳಂಕ ತರುವ ಉದ್ದೇಶದಿಂದ ಕಾಂಗ್ರೆಸ್ ಕುತಂತ್ರ ನಡೆಸುತ್ತಿದೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಗೂಂಡಾ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಬಿಜೆಪಿ ಮುಖಂಡ ಧೀರಜ್ ಮುನಿರಾಜು, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ನಾಗೇಂದ್ರ ಸೇರಿದಂತೆ ನಗರ ಮತ್ತು ಗ್ರಾಮಾಂತರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Mysore
“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ”: ಶಾಸಕ ಗಣಿಗ ರವಿಕುಮಾರ್ ಸ್ಪಷ್ಟನೆ
ಮೈಸೂರು: “ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಒಕ್ಕಲಿಗ ಸಮುದಾಯದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿದ್ದಾರೆ. ಅದೇ ಸಮುದಾಯಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೇಳುವುದು ಸರಿಯಲ್ಲ. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದೇ ನಾನೇ ಸಿಎಂ ಆದಷ್ಟು ಸಂತೋಷ ತಂದಿದೆ. ಸಮುದಾಯದ ಹಿತದೃಷ್ಟಿಯಿಂದ ಸಚಿವ ಸ್ಥಾನ ಕೇಳುವ ಪ್ರಶ್ನೆಯೇ ಇಲ್ಲ” ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಕುರಿತು ಮಾಡಿರುವ “ತಿಗಣೆಗಳು ಜಿರಲೆಗಳ ಜೊತೆ ಸೇರಿಕೊಂಡಿವೆ” ಎಂಬ ಟೀಕೆಗೆ ಪ್ರತಿಕ್ರಿಯಿಸಿ, “ಒಂದು ತಿಗಣೆ ಕಚ್ಚಿದರೂ ನಿದ್ದೆ ಮಾಡಲು ಆಗುವುದಿಲ್ಲ. ಬಿಜೆಪಿ ನಾಯಕರು ತಿಗಣೆ, ಜಿರಲೆ ಎನ್ನುವಂತಹ ಪದಗಳ ಬಳಕೆಯನ್ನು ಬಿಡಬೇಕು” ಎಂದು ತಿರುಗೇಟು ನೀಡಿದರು. ದೆಹಲಿಯಲ್ಲಿ ನಡೆದ ಪ್ರತಿಭಟನೆ ಕುರಿತು ಮಾತನಾಡಿದ ಅವರು, “ಯುವಕರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಯಾರೂ ಅವರಿಗೆ ಹಣ ನೀಡಿ ಕರೆಸಿರಲಿಲ್ಲ. ಕೇವಲ ಒಂದು ವಾಟ್ಸಪ್ ಸಂದೇಶಕ್ಕೆ ಅಷ್ಟೊಂದು ಸಂಖ್ಯೆಯಲ್ಲಿ ಜನರು ಸೇರಿದ್ದರು. ಅವರ ಭಾವನೆಗಳನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು” ಎಂದರು.

ನೀಟ್ ಪ್ರಶ್ನೆ ಪತ್ರಿಕೆ ಹಗರಣ ಹಾಗೂ ಕೆಪಿಎಸ್‌ಸಿ ಹಗರಣ ಕುರಿತು ಪ್ರತಿಕ್ರಿಯಿಸಿದ ಅವರು, “ಈ ಹಗರಣಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಬೇಕು” ಎಂದು ಆಗ್ರಹಿಸಿದರು.
Mysore
ತಲಕಾಡು ಪೊಲೀಸರ ಮಿಂಚಿನ ದಾಳಿ: 4.4 ಕೆಜಿ ಅಕ್ರಮ ಗಾಂಜಾ ವಶ, ಓರ್ವ ಬಂಧನ
ಟಿ.ನರಸೀಪುರ : ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ತಲಕಾಡು ಪೊಲೀಸರು 4 ಕೆಜಿ 400 ಗ್ರಾಂ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡು, ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಟಿ. ದೊಡ್ಡಪುರ ಗ್ರಾಮದ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಹುಣಸೂರು ಪಟ್ಟಣದ ನಿವಾಸಿ ಅಜರ್ ವಾಸಿಮ್ ಎಂಬಾತ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಂಧಿತ ಆರೋಪಿಯಿಂದ ಸುಮಾರು 4 ಕೆಜಿ 400 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ತಲಕಾಡು ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಸಾಗಣೆ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
-
State14 hours agoತೆಂಗು ಬೆಳೆಗಾರರಿಗೆ ಸಿಹಿಸುದ್ದಿ: ಹೊಸ ತೋಟ ಸ್ಥಾಪನೆಗೆ ₹56 ಸಾವಿರ ಸಹಾಯಧನ!!
-
Chikmagalur11 hours agoಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000 ನಕಲಿ ಹಣ ವಶ!
-
National12 hours agoನೀಟ್ ವಿವಾದ: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ, ನರೇಶ್ ಗಂಗ್ವಾರ್ ನೇಮಕ
-
National8 hours agoನೀಟ್ ಪ್ರಕರಣ: ಎರಡು ಬೇಡಿಕೆ ಒಪ್ಪಿದ ಕೇಂದ್ರ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿಜೆಪಿ ಪಟ್ಟು
-
Kodagu4 hours agoನಾಪೋಕ್ಲು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ನೂತನ ಪದಾಧಿಕಾರಿಗಳ ಆಯ್ಕೆ -ಅಧ್ಯಕ್ಷರಾಗಿ ಅನೀಫ್ ನೇಮಕ
-
Kodagu4 hours ago₹24 ಲಕ್ಷ ವೆಚ್ಚದ 3 ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆಗೊಳಿಸಿದ ಎ.ಎಸ್.ಪೊನ್ನಣ್ಣ
-
Chamarajanagar6 hours agoಹೊಂಗನೂರಿನಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳ ಪರದಾಟ: ಸಮಯಕ್ಕೆ ಬಸ್ ಇಲ್ಲದೆ ನಿತ್ಯ ಸಂಕಷ್ಟ
-
Mysore13 hours ago“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ”: ಶಾಸಕ ಗಣಿಗ ರವಿಕುಮಾರ್ ಸ್ಪಷ್ಟನೆ
