Connect with us

Mysore

ಬಿ ಜಿ ಎಸ್ ಬಿ ಇ ಡಿ ಕಾಲೇಜು ವಿದ್ಯಾರ್ಥಿಗಳಿಗೆ ಜೀವನ ಶಿಬಿರ ಕಾರ್ಯಕ್ರಮ

Published

on

ಪ್ರಸ್ತುತ   ಸಮಾಜವು ಸುಸಂಸ್ಕೃತ ವಾಗಿರ ಬೇಕಾದರೇ ಶಿಕ್ಷಕರು  ನೀಡುವ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು ಶಿಕ್ಷಕರು ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸ ಬೇಕಾಗಿದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಮಠದ ಶ್ರೀ ಸೋಮೇಶ್ವರನಾಥ ಸ್ವಾಮಿಜಿ ಹೇಳಿದರು.
ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಲ್ಲಿ  ಮೈಸೂರಿನ ಬಿಜಿಎಸ್ ಬಿಇಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಮುದಾಯ ಜೀವನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ  ಶಿಕ್ಷಕರ ತಯಾರು ಮಾಡಲು ಸರ್ಕಾರ ಮತ್ತು ಪೋಷಕ ವರ್ಗದವರು ಸಾಕಷ್ಟು ಹಣವನ್ನು ವ್ಯಯ ಮಾಡುತ್ತಿದ್ದು ಇದನ್ನು ಸದ್ಬಳಿಕೆ  ಮಾಡಿಕೊಂಡು ಉತ್ತಮ ಶಿಕ್ಷಕರಾಗಿ ಎಂದರು.
ಬಾವಿ ಶಿಕ್ಷಕರಾಗಿರುವ ನೀವುಗಳು ವೃತ್ತಿಯಲ್ಲಿನ ಗೌರವ,ಘನತೆ,ಶಿಸ್ತು, ಮಹತ್ವವನ್ನು ಮನ್ನಣೆ ನೀಡಿದಾಗ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯವಾಗುತ್ತದೆ ಅಲ್ಲದೇ ಸಮಾಜದ ವ್ಯವಸ್ಥೆ ಬದಲಾಯಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ನಗರ ಪ್ರದೇಶದಲ್ಲಿ ವ್ಯಾಸಂಗ ಮಾಡುವರಿಗೆ ಗ್ರಾಮಾಂತರ ಪ್ರದೇಶಲ್ಲಿನ ಸಮಸ್ಯೆಗಳ ಆರಿವು ತಿಳಿಯುವುದಿಲ್ಲ ಗ್ರಾಮಾಂತರ ಪ್ರದೇಶದಲ್ಲಿ ಆಯೋಜಿಸುವ ಈ ಶಿಬಿರಗಳಲ್ಲಿ ಭಾಗವಹಿಸಿ ಆ ಪ್ರದೇಶದ ಜನರ, ನೋವು ನಲಿವುಗಳ ಕುರಿತು ಚಿಂತನೆ ನಡೆಸಿದಾಗ ಏಕಾಗ್ರತೆ ಜತೆಗೆ ಜಾಗೃತಿ ಮೂಡಲಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಪಿರಿಯಾಪಟ್ಟಣ ತಾಲೂಕು ಪಿ.ಎಂ.ಪೋಷಣಾ ಅಭಿಯಾನದ ಸಹಾಯಕ ನಿರ್ದೇಶಕ ಎನ್.ಸಿ ಪ್ರಶಾಂತ್ ಮಾತನಾಡಿ ಸಮಾಜವನ್ನು ವ್ಯವಸ್ಥೆಯನ್ನು ನಿರ್ಧರಿಸುವ ಜವಬ್ದಾರಿ ಶಿಕ್ಷಕರ ಮೇಲಿದ್ದು ಇದಕ್ಕಾಗಿ ಶಿಕ್ಷಕರ  ವೃತ್ತಿಗೆ ಬರುವರು  ವೃತ್ತಿ ಗೌರವ ಮತ್ತು ಘನತೆಯನ್ನು ಉಳಿಸಿಕೊಂಡಾಗ ಮಾತ್ರ ಉತ್ತಮ ಶಿಕ್ಷಕನಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಶಿಬಿರದ ಅಂಗ ರೋಹಿತ್ ಮತ್ತು ಐಶ್ವರ್ಯ ತಂಡದವರು ಜನಪದ ಸಾಹಿತ್ಯದ ಹಾಡುಗಳಿಗೆ ನೃತ್ಯಮಾಡಿ ರಂಜಿಸಿದರು ಕಾರ್ಯಕ್ರಮದಲ್ಲಿ ಕೆ.ಆರ್.ನಗರ ಅಗ್ನಿಶಾಮಕ ದಳದ ಜಿ.ಲಕ್ಷ್ಮಿಕಾಂತಯಾದವ್ ಅವರ ನೇತೃತ್ವದಲ್ಲಿ ಅಗ್ನಿ ಸುರಕ್ಷತೆ ಕ್ರಮಗಳ ಕುರಿತು ಪ್ರಾತ್ಯಕ್ಷತೆಯನ್ನು ನೀಡಲಾಯಿತು.
ಮೈಸೂರು ಬಿಜಿಎಸ್ ಬಿಇಡಿ ಕಾಲೇಜಿನ ಆಡಳಿತಾಧಿಕಾರಿ ಯಶೋಧ, ಕಾಲೇಜಿನ ಪ್ರಾಂಶುಪಾಲ ನಾಗರಾಜು, ಶಿಬಿರದ ಸಂಚಾಲಕರಾದ ಸಿ.ಆರ್.ಶರತ್ ಕುಮಾರ್,ಡಾ.ಎಚ್.ಬಿ.ಬೆಟ್ಟಸ್ವಾಮಿ, ಪ್ರಾಧ್ಯಪಕರಾದ ಕೆ.ಟಿ. ಬಸವರಾಜು, ಡಿ.ಎನ್.ನಾಗರಾಜು,ಡಾ.ಶರ್ಮಿಷ್ಠ ಚಕ್ರವರ್ತಿ,ಡಾ.ಸುಮತಿ,ದಿನೇಶ್,ಶೋಭ,ರಾಧಿಕ,ನಂಜುಂಡಸ್ವಾಮಿ, ಶಿಬಿರದ ಲೀಡರ್ ಗಳಾದ ಪ್ರಶಾಂತ್, ಶ್ಯಾಮಲಾ ಚುಂಚನಕಟ್ಟೆ ಶಿಕ್ಷಣ ಟ್ರಸ್ಟ್ ನ ಮುಖ್ಯಶಿಕ್ಷಕಿ ಚಾಂದಿನಿ ಶಿಕ್ಷಕರಾದ ಮಹೇಶ್,ಗಿರೀಶ್,ಸತ್ಯನಾರಾಯಣ್, ಧರ್ಮರಾಜ್ ಮಠದ ವ್ಯವಸ್ಥಾಪಕ ರಾಮಲಿಂಗಪ್ಪ ಇದ್ದರು

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ*

Published

on

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ

Published

on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೋರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮುಡಾ ಅಕ್ರಮ ನಿವೇಶನ ಹಂಚಿಕೆ: ಏಕ ಸದಸ್ಯ ವಿಚಾರಣಾ ಆಯೋಗ ರಚನೆ

Published

on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ. ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ. ಪ್ರಕರಣದ ಕೂಲಂಕಷವಾದ ವಿಚಾರಣೆ ನಡೆದು, ಸತ್ಯಾಸತ್ಯತೆ ಹೊರಬರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Continue Reading

Trending

error: Content is protected !!