Chamarajanagar
ಭಾರೀ ಮಳೆಗೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ
Chamarajanagar
ಪ.ಜಾತಿ, ಪ.ಪಂಗಡದ ರೈತರಿಗೆ ಸೋಲಾರ್ ಪಂಪ್ ಸೆಟ್ ಗೆ ಸಹಾಯಧನ
ಚಾಮರಾಜನಗರ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2025-26ನೇ ಸಾಲಿಗೆ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ ನೀಡಲು ರೈತರಿಗೆ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುತ್ತದೆ.
ಕನಿಷ್ಠ 3 ಹೆಚ್.ಪಿಯ ಸೋಲಾರ್ ಪಂಪ್ ಸೆಟ್ ಸಾಮರ್ಥ್ಯದ ಘಟಕದ ವೆಚ್ಚ 2 ಲಕ್ಷ ರೂ.ಗೆ ಶೇ.50ರಂತೆ 1 ಲಕ್ಷ ರೂ., 5 ಹೆಚ್.ಪಿ ಹಾಗೂ ಮೇಲ್ಪಟ್ಟ ಸೋಲಾರ್ ಪಂಪ್ ಸೆಟ್ ಗಳಿಗೆ ಘಟಕದ ವೆಚ್ಚ 3 ಲಕ್ಷ ರೂ.ಗಳಿಗೆ ಶೇ.50 ರಂತೆ 1.50 ಲಕ್ಷ ರೂ.ಗಳ ಗರಿಷ್ಠ ಸಹಾಯಧನ ನೀಡಲಾಗುವುದು.

ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್ ಗಳನ್ನು ತೋಟಗಳಲ್ಲಿ ನಿರ್ಮಿಸಿರುವ ನೀರು ಸಂಗ್ರಹಣಾ ಘಟಕ ಅಥವಾ ಕೊಳವೆ ಬಾವಿಗಳಿಗೆ ಅಳವಡಿಸಬಹುದಾಗಿದ್ದು, ನೀರು ಸಂಗ್ರಹಣಾ ಘಟಕಕ್ಕೆ ಅಳವಡಿಸಿದ ರೈತರಿಗೆ ಆದ್ಯತೆ ನೀಡಲಾಗುವುದು. ರೈತರಿಗೆ ಸಹಾಯಧನ ಪಾವತಿಸುವ ಮುನ್ನ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಿ (ಕೆಆರ್‌ಇಡಿಎಲ್) ಇಲಾಖೆಯಿಂದ / ಇತರೆ ಇಲಾಖೆ /ಸಂಸ್ಥೆ ಗಳಿಂದ ಸೌರಶಕ್ತಿ, ಆಧಾರಿತ ಪಂಪ್ ಸೆಟ್ ಗಳಿಗೆ ಸಹಾಯಧನ ಪಡೆದಿರುವುದಿಲ್ಲ ಎಂಬ ಬಗ್ಗೆ ದೃಢೀಕರಣ ಸಲ್ಲಿಸಬೇಕು.
ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್‌ಗಳನ್ನು ಕೆಆರ್‌ಇಡಿಎಲ್, ಇಂಧನ ಇಲಾಖೆ, ಕರ್ನಾಟಕ ಸರ್ಕಾರ ಅಧಿಕೃತವಾಗಿ ನೋಂದಾಯಿಸಿದ (ಇಂಪನೆಲೆಡ್) ಕಂಪನಿಗಳಿಂದ ರೈತರೇ ನೇರವಾಗಿ ಖರೀದಿಸಬೇಕು. ಘಟಕ ಅನುಷ್ಠಾನ ಪೂರ್ವ ಕಾರ್ಯಾದೇಶ ಪಡೆಯುವುದು ಕಡ್ಡಾಯವಾಗಿರುತ್ತದೆ.

ರೈತರು ಅಗತ್ಯ ದಾಖಲಾತಿಗಳನ್ನು ನಿಗದಿತ ಅರ್ಜಿ ನಮೂನೆ, ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ತಾಕಿನ ಪೋಟೋ, ಚೆಕ್‌ಬಂಧಿ, ಕಂದಾಯ ಇಲಾಖೆಯಿಂದ ಗಣಕೀಕೃತ ಬೆಳೆ ದೃಢೀಕರಣ, ಆರ್.ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳೊಂದಿಗೆ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
SCP ಅನುದಾನ ದುರ್ಬಳಕೆ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಎಡಿಸಿಗೆ ದೂರು
ಚಾಮರಾಜನಗರ: ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಅವರು ಎಸ್ ಸಿಪಿ ಅನುದಾನ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ದೂರು ಸಲ್ಲಿಸಲಾಯಿತು.
ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಎಸ್.ಸಿ.ಪಿ. ಅನುದಾನವನ್ನು ಸಾಮಾನ್ಯ ವರ್ಗದ ಬೀದಿಗೆ ದುರ್ಬಳಕೆ ಮಾಡಿಕೊಂಡಿದ್ದು, ಕಾಮಗಾರಿಯ ಜವಾಬ್ದಾರಿಯನ್ನು ನಿರ್ಮಿತಿ ಕೇಂದ್ರ ನಿರ್ವಹಿಸಿರುತ್ತದೆ. ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಗಣೇಶ್ ಪ್ರಸಾದ್ ರವರ ಒತ್ತಡಕ್ಕೆ ಒಳಗಾಗಿ ದಲಿತರಿಗೆ ಅನುಕೂಲವಾಗಬೇಕಾಗಿದ್ದ ಅನುದಾನವನ್ನು ಸಾಮಾನ್ಯ ವರ್ಗದ ಬೀದಿಗೆ ಬಳಕೆ ಮಾಡಿಕೊಂಡು ಶ್ರೀಕಂಠಾಚಾರಿ ರವರ ಮನೆಯಿಂದ ದಾಸೇಗೌಡ ರವರ ಮನೆಯವರೆಗೆ ಕನಿಷ್ಠ 25 ಲಕ್ಷ ಅಂದಾಜು ಮೊತ್ತ ಎಸ್.ಸಿ.ಪಿ. ಅನುದಾನವನ್ನು ಬಳಕೆ ಮಾಡಿಕೊಂಡು ಕಾಮಗಾರಿ ನಡೆಸಿರುವುದು ಬೆಳಕಿಗೆ ಬಂದಿರುತ್ತದೆ.

ಹಾಗೆಯೇ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕರು ಎಸ್.ಸಿ.ಪಿ. ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಮಾಹಿತಿ ಇರುವುದರಿಂದ ಎಸ್.ಸಿ.ಪಿ. ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪರಿಶೀಲನೆಗೆ ಒಳಪಡಿಸಿ ಮತ್ತು ಪರಿಶಿಷ್ಟ ಜಾತಿ ವರ್ಗಕ್ಕೆ ಅನ್ಯಾಯವಾಗಿದ್ದು, ಅನುದಾನ ದುರ್ಬಳಕೆಗೆ ಕಾರಣರಾದ ಶಾಸಕ ಗಣೇಶ್ ಪ್ರಸಾದ್ ಕಾಮಗಾರಿಯ ಉಸ್ತುವಾರಿ ವಹಿಸಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳ ಮತ್ತು ಗುತ್ತಿಗೆದಾರರ ಮೇಲೆ ಎಸ್.ಸಿ./ ಎಸ್.ಟಿ. ಅನುದಾನ ದುರ್ಬಳಕೆ ಸಂಬಂಧಿಸಿದ ಖಾಯ್ದೆಯಡಿ ದೂರು ದಾಖಲಿಸಿ ತನಿಖೆ ನಡೆಸಿ ದುರ್ಬಳಕೆ ಆದ ಅನುದಾನವನ್ನು ಮರು ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ದೂರಿನಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಗರಪುರ ರೇವಣ್ಣ, ಕಾರ್ಯದರ್ಶಿ ಹೊಂಗನೂರು ಮಹದೇವಸ್ವಾಮಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಎಸ್. ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಿಗೆ ಮೂರ್ತಿ ಹಾಜರಿದ್ದರು.
Chamarajanagar
ಮದ್ಯ ಮಾರಾಟ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ
ಚಾಮರಾಜನಗರ: ಕೇರಳ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗಡಿ ಪ್ರದೇಶದ 3 ಕಿ.ಮೀ. ವ್ಯಾಪ್ತಿಯಲ್ಲಿ ಡಿ. 9ರ ಸಂಜೆ 6 ಗಂಟೆಯಿಂದ ಡಿ. 11ರ ಸಂಜೆ 6 ಗಂಟೆಯವರೆಗೆ ಹಾಗೂ ಡಿ.13ರ ಮತ ಎಣಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ 13ರ ಮಧ್ಯರಾತ್ರಿವರೆಗೆ ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ದಾಸ್ತಾನು ನಿಷೇಧಿಸಿ ಒಣದಿನ ಎಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.
-
Hassan11 hours agoಎಲೈಟ್ ಸಂಸ್ಥೆಯ ನಾಗರಾಜ್ಗೆ ’ಕರ್ನಾಟಕ ಗುರುರತ್ನ ಪ್ರಶಸ್ತಿ-2025’
-
Mysore18 hours agoಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಏಕವಚನ ಬಳಕೆ: ಸಿಎಂ ವಿರುದ್ಧ ಹೇಮಾ ನಂದೀಶ್ ಅಸಮಾಧಾನ
-
Mandya10 hours agoಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ
-
Manglore9 hours agoದ.ಕ.ಜಿಲ್ಲೆಯಲ್ಲಿ ಪ್ರತೀಕಾರದ ಕೊಲೆಗೆ ಕುಮ್ಮಕ್ಕು: 16 ಇನ್ಸ್ಟ್ಗ್ರಾಮ್ ಪೇಜ್ಗಳ ವಿರುದ್ಧ FIR ದಾಖಲು
-
Hassan13 hours agoಈ ಶಿಕ್ಷಕ ಎಣ್ಣೆದಾಸ, ಆತನ ಹೆಂಡತಿ ಮಕ್ಕಳ ಪಾಲಿಗೆ ರಾಕ್ಷಸಿ: ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮಸ್ಥರಿಂದ ಆಗ್ರಹ
-
Hassan13 hours agoNOC ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಿ: ಆರ್. ಮರಿಜೋಸೆಫ್ ಆಗ್ರಹ
-
Sports8 hours agoInd v/s SA 1st T-20: ಸೌತ್ ಆಫ್ರಿಕಾ ಆಲೌಟ್, ಟೀಂ ಇಂಡಿಯಾಗೆ 101 ರನ್ಗಳ ಭರ್ಜರಿ ಜಯ
-
Hassan14 hours agoಸೊಪ್ಪಿನಹಳ್ಳಿಯಲ್ಲಿ ಪ. ಜಾತಿ ಕುಟುಂಬಗಳಿಂದ ರಸ್ತೆ ತಡೆ: ರಸ್ತೆ ಬಿಡಿಸಿಕೊಡಲು ಆಗ್ರಹಿಸಿ ಭೀಮ್ ಆರ್ಮಿ ತಹಸೀಲ್ದಾರ್ ಗೆ ಮನವಿ


