National - International
ಭಾರತದಲ್ಲಿ ಪಂದ್ಯವಾಡಲು ಬಾಂಗ್ಲಾ ನಿರಾಕರಣೆ: ICCಯಿಂದ ಬಿಗ್‌ಶಾಕ್
ದುಬೈ: ಭಾರತದ ನೆಲದಲ್ಲಿ ಟಿ-20 ವಿಶ್ವಕಪ್ ಪಂದ್ಯ ಆಡಲು ಒಪ್ಪದ ಬಾಂಗ್ಲಾದೇಶಕ್ಕೆ ಐಸಿಸಿ ಬಿಗ್‌ಶಾಕ್ ನೀಡಿದ್ದು, ಬಾಂಗ್ಲಾ ಬದಲು ಮತ್ತೊಂದು ತಂಡಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಮತದಾನವಾಗಿದೆ.

ಐಸಿಸಿ ಬೋರ್ಡ್‌ನ ಒಟ್ಟು 16 ಸದಸ್ಯ ದೇಶಗಳ ಪೈಕಿ ಬಾಂಗ್ಲಾ ವಿರುದ್ಧ 14 ಮತ್ತು ಪರ 2 ಮತಗಳು ಬಿದ್ದಿವೆ. ಅದರಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮಾತ್ರ ಬಾಂಗ್ಲಾ ಪರವಾಗಿ ಮತವನ್ನು ಹಾಕಿದೆ. ಅಂತಿಮ ತೀರ್ಮಾನ ತಿಳಿಸಲು ಇಂದೇ ಬಾಂಗ್ಲಾಗೆ ಡೆಡ್‌ಲೈನ್ ವಿಧಿಸಲಾಗಿತ್ತು. ಆದರೆ ಈಗ 24 ಗಂಟೆಯ ಗಡುವು ನೀಡಲಾಗಿದೆ. ನಾಳೆಯೊಳಗೆ ತಮ್ಮ ನಿರ್ಧಾರ ತಿಳಿಸದೇ ಇದ್ದರೆ ಬಾಂಗ್ಲಾದ ಬದಲು ಸ್ಕಾಟ್ಲೆಂಡ್ ತಂಡ ಭಾರತಕ್ಕೆ ಬರಲಿದೆ.
ಬಾಂಗ್ಲಾದೇಶ ಸುರಕ್ಷತೆ ಹಾಗೂ ಭದ್ರತಾ ಕಾರಣದಿಂದಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದ್ದನ್ನು ಬೆಂಬಲಿಸಿ ಪಿಸಿಬಿ ಮಂಗಳವಾರ ತಡರಾತ್ರಿ ಐಸಿಸಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಶ್ರೀಲಂಕಾದಲ್ಲಿ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಬಾಂಗ್ಲಾದೇಶದ ಪಂದ್ಯಗಳನ್ನು ಪಾಕಿಸ್ಥಾನದಲ್ಲಿ ಆಡಿಸಲು ನಾವು ಸಿದ್ಧ ಇದ್ದೇವೆ ಎಂದು ಬರೆದಿದ್ದರು.

ಇನ್ನೂ ಭಾರತ ಮತ್ತು ಶ್ರೀಲಂಕಾ ಫೆ. 7 ರಿಂದ ಮಾ. 8 ರವರೆಗೆ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಕಳೆದ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಳಿಕ ಜಾರಿಯಲ್ಲಿರುವ ಬಿಸಿಸಿಐ ಹಾಗೂ ಪಿಸಿಬಿ ನಡುವಿನ ಹೈಬ್ರಿಡ್ ಮಾದರಿ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ.
National
ಆಫ್ರಿಕಾದಲ್ಲಿ ಎಬೋಲಾ ಆತಂಕ: ಭಾರತದಲ್ಲಿ ಹೈಅಲರ್ಟ್, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
National - International
ನವದೆಹಲಿಯಲ್ಲಿ BRICS ಶೃಂಗಸಭೆ: ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪುಟಿನ್ ಭೇಟಿ
ನವದೆಹಲಿ: BRICS ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೆಪ್ಟೆಂಬರ್ 12 ಮತ್ತು 13ರಂದು ಭಾರತಕ್ಕೆ ಆಗಮಿಸಲಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಈ ಮಹತ್ವದ ಶೃಂಗಸಭೆಗೆ ಭಾರತ ಆತಿಥ್ಯ ವಹಿಸುತ್ತಿದೆ.
ಇದು ಕಳೆದ ಒಂದು ವರ್ಷದೊಳಗೆ ಪುಟಿನ್ ಅವರ ಎರಡನೇ ಭಾರತ ಪ್ರವಾಸವಾಗಲಿದೆ. ಇದಕ್ಕೂ ಮೊದಲು ನಡೆದ ಭಾರತ–ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಶೃಂಗಸಭೆಗೆ ಮುನ್ನ ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಭಾರತಕ್ಕೆ ಭೇಟಿ ನೀಡಿ BRICS ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಪ್ರಧಾನಿ ಮೋದಿಯವರೊಂದಿಗೆ ಪ್ರತ್ಯೇಕ ಸಭೆಯನ್ನೂ ನಡೆಸಿದ್ದರು.
ಈ ಬಾರಿಯ BRICS ಶೃಂಗಸಭೆಯಲ್ಲಿ ಜಾಗತಿಕ ಭದ್ರತೆ, ಆರ್ಥಿಕ ಸಹಕಾರ, ಬಹುಧ್ರುವೀಯ ವಿಶ್ವ ವ್ಯವಸ್ಥೆ ನಿರ್ಮಾಣ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಬದಲಾಗುತ್ತಿರುವ ಜಾಗತಿಕ ರಾಜಕೀಯ ಹಾಗೂ ಆರ್ಥಿಕ ಪರಿಸ್ಥಿತಿಗಳ ನಡುವೆ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ.
ಬಹುಧ್ರುವೀಯ ವಿಶ್ವ ವ್ಯವಸ್ಥೆ ಎಂದರೇನು?
ಬಹುಧ್ರುವೀಯ ವಿಶ್ವ ವ್ಯವಸ್ಥೆ ಎಂದರೆ ಜಾಗತಿಕ ರಾಜಕೀಯ ಮತ್ತು ಆರ್ಥಿಕ ಶಕ್ತಿ ಕೇವಲ ಒಂದು ಅಥವಾ ಎರಡು ದೇಶಗಳ ಕೈಯಲ್ಲಿ ಇರದೆ, ಭಾರತ, ಚೀನಾ, ರಷ್ಯಾ ಮೊದಲಾದ ಅನೇಕ ರಾಷ್ಟ್ರಗಳ ನಡುವೆ ಹಂಚಿಕೆಯಾಗಿರುವ ವ್ಯವಸ್ಥೆ.
BRICS ಎಂದರೇನು?
BRICS ಎಂಬುದು ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟವಾಗಿದೆ. ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಬಲವಾದ ಧ್ವನಿ ಸಿಗಬೇಕು ಎಂಬ ಉದ್ದೇಶದಿಂದ ಈ ಸಂಘಟನೆ ಸ್ಥಾಪನೆಯಾಯಿತು.
2025ರ ಜುಲೈನಲ್ಲಿ ಬ್ರೆಜಿಲ್‌ನ ರಿಯೋ ಡಿ ಜನೈರೊದಲ್ಲಿ 17ನೇ BRICS ಶೃಂಗಸಭೆ ನಡೆದಿತ್ತು. ಇದೀಗ 2026ರ ಶೃಂಗಸಭೆಗೆ ಭಾರತ ಆತಿಥ್ಯ ವಹಿಸುತ್ತಿರುವುದು ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಹೆಚ್ಚುತ್ತಿರುವುದನ್ನು ತೋರಿಸುತ್ತದೆ.
National - International
ತಮಿಳುನಾಡಿನಲ್ಲಿ ‘ದಳಪತಿ’ ಯುಗಾರಂಭ – ಸಿಎಂ ಆಗಿ ವಿಜಯ್ ಪ್ರಮಾಣವಚನ
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದು , ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಸದ್ಯ ವಿಜಯ್ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಸಿಕೆ , ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ.ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಕೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗಿತ್ತು. ಆದರೆ ವಿಜಯ್ ಸರ್ಕಾರದಲ್ಲಿ ಸದ್ಯಕ್ಕೆ ಯಾರಿಗೂ ಡಿಸಿಎಂ ಸ್ಥಾನ ನೀಡಿಲ್ಲ.

ಪ್ರಮಾಣವಚನ ಸ್ವೀಕರಿಸಿದವರು ಯಾರು?
ಎನ್. ಆನಂದ್ – ಪಕ್ಷದ ಪ್ರಧಾನ ಕಾರ್ಯದರ್ಶಿ
ಆಧವ್ ಅರ್ಜುನ- ಚುನಾವಣಾ ಪ್ರಚಾರ ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ
ಕೆ.ಎ. ಸೆಂಗೊಟ್ಟೈಯನ್ – ಮಾಜಿ ಸಚಿವ ಮತ್ತು ಪಕ್ಷದ ಕಾರ್ಯಕಾರಿ ಸಮಿತಿಯ ಮುಖ್ಯ ಸಂಯೋಜಕ
ಡಾ. ಕೆ.ಜಿ. ಅರುಣ್‌ರಾಜ್- ನೀತಿ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ
ಪಿ. ವೆಂಕಟರಮಣನ್ – ಪಕ್ಷದ ಖಜಾಂಚಿ
ಸಿ.ಟಿ.ಆರ್. ನಿರ್ಮಲ್ ಕುಮಾರ್ – ಜಂಟಿ ಪ್ರಧಾನ ಕಾರ್ಯದರ್ಶಿ
ಎ. ರಾಜ್‌ಮೋಹನ್ – ಪ್ರಚಾರ ಕಾರ್ಯದರ್ಶಿ
ಡಾ. ಟಿ.ಕೆ. ಪ್ರಭು – ಮಂತ್ರಿ
ಸೆಲ್ವಿ ಎಸ್. ಕೀರ್ತನಾ – ಸಂಪುಟದ ಅತ್ಯಂತ ಕಿರಿಯ ಸಚಿವೆ
ಒಟ್ಟು ಸಂಖ್ಯಾಬಲ ಎಷ್ಟಿದೆ?
ಟಿವಿಕೆ (107), ಕಾಂಗ್ರೆಸ್ (5), ಸಿಪಿಐ (2), ಸಿಪಿಎಂ (2), ವಿಸಿಕೆ (2), ಮುಸ್ಲಿಂ ಲೀಗ್ (2).
ಸರ್ಕಾರ ರಚನೆಯ ಬೆನ್ನಲ್ಲೇ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಮೇ 13ರವರೆಗೆ (3 ದಿನಗಳು) ಗಡುವು ನೀಡಿದ್ದಾರೆ. 120 ಶಾಸಕರ ಬೆಂಬಲದೊಂದಿಗೆ ವಿಜಯ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ.
-
State23 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Mysore12 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
State5 hours agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Mysore7 hours agoದೈವ ನಿಂದನೆ ಪ್ರಕರಣ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್
-
Sports5 hours agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
-
Hassan7 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Hassan5 hours ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Manglore8 hours agoಪ್ರವಾಸಿಗರಿಗೆ ಜಲಪಾತ ವೀಕ್ಷಣೆ, ಪರ್ವತ ಏರಲು ಜೂ.1ರಿಂದ ಅವಕಾಶ

