Hassan
ಹಾಸನ ಯೋಧನ ಸಾವು, ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಸಂಸ್ಕಾರ

ಹಾಸನ: ಮಣಿಪುರದಲ್ಲಿ ಸಿ.ಆರ್.ಪಿ.ಎಫ್. ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನದ ಪದ್ಮರಾಜು ೫೨ ವರ್ಷ ಅವರು ಅನಾರೋಗ್ಯದಿಂದ ಸಾವನಪ್ಪಿದ್ದು, ಶನಿವಾರದಂದು ನಗರದ ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ಕಳೆದ ಎರಡು ದಿನಗಳ ಹಿಂದೆ ಮಣಿಪುರದಲ್ಲಿ ಸಾವನಪ್ಪಿದ ಪದ್ಮರಾಜು ಅವರ ಪಾರ್ಥಿವ ಶರೀರವನ್ನು ನಗರದ ಕೆ.ಆರ್.ಪುರಂನಲ್ಲಿ ವಾಸವಿರುವ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ಮಿಲ್ಟ್ರಿ ವಾಹನದಲ್ಲಿ ಸೈನಿಕರೊಂದಿಗೆ ತರಲಾಯಿತು.
ಯೋಧರಾಗಿ ೧೬ ವರ್ಷಗಳ ಕಾಲ ಸಿಆರ್‌ಪಿಎಫ್‌ನಲ್ಲಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ ಯೋಧ ಮತ್ತೆ ಸೇವೆಯಲ್ಲಿ ತೊಡಗಲು ನಿರ್ಧರಿಸಿ ಪ್ರಸ್ತೂತ ಮಣಿಪುರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ೩೧ ವರ್ಷದಲ್ಲಿ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಸಾವನಪ್ಪಿದ್ದಾರೆ. ಮನೆ ಮುಂದೆ ಪಾರ್ಥಿವ ಶರೀರ ಬರುತ್ತಿದ್ದಂತೆ ನೂರಾರು ಜನರು ಅಂತಿಮ ದರ್ಶನ ಪಡೆದರು. ನಂತರ ತೆರೆದ ವಾಹನದಲ್ಲಿ ಯೋಧನನ್ನು ಮೆರವಣಿಗೆ ಮೂಲಕ ನಗರದ ಹೊರವಲಯದಲ್ಲಿರುವ ಬಿಟ್ಟಗೌಡನಹಳ್ಳಿಗೆ ಕರೆದೊಯ್ದು ಅಂತಿಮ ನಮನ ಸಲ್ಲಿಸಿದರು. ಮೃತ ಯೋಧನಿಗೆ ಪತ್ನಿ, ಓರ್ವ ಪುತ್ರಿ ಇದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Hassan
ಏ.12, 13ರಂದು ಹಾಸನದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ 12 ಮತ್ತು 13 ರಂದು ನಗರದ ಸರಕಾರಿ ಕಲಾ ಕಾಲೇಜು ಮತ್ತು ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಭೆ ನಡೆಸಿ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಮಾತನಾಡಿ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಸನದಲ್ಲಿ ಆಯೋಜಿಸಲು ತೀರ್ಮಾನ ಮಾಡಲಾಗಿದ್ದು, ಕಳೆದ ವರ್ಷ ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬಹಳ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಅದಕ್ಕಿಂತ ಬಿನ್ನವಾಗಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲು ಆಲೂಚನೆ ಇಟ್ಟುಕೊಂಡು ನಿರ್ಧರಿಸಲಾಗಿದೆ. ಕೊಪ್ಪಳದಲ್ಲಿ ನಡೆದ ಸಮ್ಮೇಳನದಲ್ಲಿ ಮದನ್ ಗೌಡರು ತಿಳಿಸಿದ್ದರು. ಏಪ್ರಿಲ್ ೧೨ ಮತ್ತು ೧೩ನೇ ದಿನಾಂಕದಂದು ಹಾಸನದಲ್ಲಿ ಏರ್ಪಡು ಮಾಡಲು ಭಾನುವಾರದಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.
ಯಾರು ಪತ್ರಕರ್ತರ ಸಂಘದ ಸದಸ್ಯರಾಗಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ತಂಡ ಭಾಗವಹಿಸಲು ಅವಕಾಶ ಇರುತ್ತದೆ. ಪ್ರತಿಯೊಬ್ಬರ ಐಡಿ ಕಾರ್ಡ್ ಪರೀಕ್ಷೆ ಮಾಡಲಾಗುದು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಕ್ರೀಡಾಕೂಟ ಯಶಸ್ವಿಗೆ ಜಿಲ್ಲಾ ಸಮಿತಿ, ಉಪ ಸಮಿತಿ ಮಾಡಿಕೊಂಡು ಆವರವರ ಜವಬ್ಧಾರಿಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಹಿಸಿಕೊಡಲಿದೆ. ಪ್ರಾರಂಭದ ದಿನದಲ್ಲಿ ಮೊದಲ ಆಟ ಸೆಲೆಬ್ರೆಟಿ ಕ್ರಿಕೆಟ್ ನಡೆಯಲಿದೆ. ಮಂಗಳೂರಿನಲ್ಲಿಯೂ ಕೂಡ ಸೆಲಬ್ರಿಟಿ ಜನಪ್ರತಿನಿಧಿಗಳಿಂದ ಆಟೋಟ ನಡೆದಿತ್ತು. ಒಟ್ಟಾರೆ ರಾಜ್ಯ ಮಟ್ಟದ ಈ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿ ಮನವಿ ಮಾಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂರ್ಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕ್ರಿಕೆಟ್ ಕ್ರೀಡಾಪಟುಗಳಿಗೆ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ. ಕ್ರಿಕೆಟ್ ಪಂದ್ಯಾವಳಿಗೆ ವಿಶೇಷವಾಗಿ ರಾಜ್ಯ ಸಭಾಪತಿ ಯೂ.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಆಗಮಿಸಲಿದ್ದಾರೆ. .
ಸಭೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಹೆಚ್.ಬಿ. ಮದನ್ ಗೌಡ, ಮಾಜಿ ಅಧ್ಯಕ್ಷರಾದ ಮಂಜುನಾಥ್, ರವಿನಾಕಲಗೂಡು, ಬಿ.ಆರ್. ಉದಯಕುಮಾರ್, ಪ್ರಸನ್ನಕುಮಾರ್, ಕಾರ್ಯದರ್ಶಿ .ಪಿ.ಎ. ಶ್ರೀನಿವಾಸ್, ಕುಮಾರ್, ನಟರಾಜು, ಜಿ. ಪ್ರಕಾಶ್, ಹೆತ್ತೂರ್ ನಾಗರಾಜು, ಜ್ಞಾನೇಶ್, ಕುಶ್ವಂತ್, ಕೃಷ್ಣ, ನಾಗರಾಜು, ಮಂಜು, ಮೆಹಾಬೂಬ್, ದಯಾನಂದ್, ಶರತ್ ಇತರರು ಉಪಸ್ಥಿತರಿದ್ದರು.
Hassan
ಇನ್ನು 15 ದಿನದಲ್ಲಿ ಎಲ್ಲಾ ಶಾಸಕರ ಜೊತೆ ವಿವಿ ಉಳಿಸಿ ಹೋರಾಟ ಸಮಿತಿಯಿಂದ ಸಿಎಂ ಭೇಟಿ: ಸಂಸದ ಶ್ರೇಯಸ್ ಪಟೇಲ್

ಹಾಸನ: ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಎಲ್ಲಾ ಶಾಸಕರ ಒಟ್ಟುಗೂಡಿ, ನಮ್ಮ ಜೊತೆ ಸಮಿತಿಯಿಂದ 15 ಜನರ ತಂಡ ಈ ವಾರದಲ್ಲಿ ದಿನ ನಿಗಧಿ ಮಾಡಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಿ ಗಮನ ಸೆಳೆಯಲಾಗುವುದು ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಭರವಸೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಾಸನ ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಭಾನುವಾರ ಕರೆಯಲಾಗಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸದ ಶ್ರೇಯಸ್.ಎಂ. ಪಟೇಲ್ ಮಾತನಾಡಿ, ವಿಶ್ವ ವಿದ್ಯಾಲಯದ ಕುರಿತು ದುಂಡು ಮೇಜಿನ ಸಭೆಯಲ್ಲಿ ಮೌಲ್ಯಾಧರಿತ ಚರ್ಚೆಗಳು ನಡೆದಿದ್ದು, ಅಭಿವೃದ್ಧಿ ಮತ್ತು ಯೋಗಕ್ಷೇಮ ಬಂದಾಗ ಪಕ್ಷ ಮರೆತು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕಾಗುತ್ತದೆ. ಎಲ್ಲಾರ ಪರ ನಿಂತು ಕೊಳ್ಳುವ ಕೆಲಸ ಮಾಡಲಾಗುವುದು ಎಂದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಲಾಗುವುದು. ಸಮಿತಿ ವರದಿ ಕೂಡ ಇಲ್ಲಿವರೆಗೂ ಬಂದಿರುವುದಿಲ್ಲ. ವಿಶ್ವವಿದ್ಯಾಲಯವನ್ನು ಮುಚ್ಚುವ ನಿರ್ಧಾರವನ್ನು ಇಲ್ಲಿವರೆಗೂ ತೆಗೆದುಕೊಂಡಿರುವುದಿಲ್ಲ. ಯಾರು ಗಾಬರಿ ಪಡಬಾರದೆಂದು ಶಿಕ್ಷಣ ಸಚಿವರು ಹೇಳಿದ್ದು, ಈಗ ಅಧಿವೇಶನ ನಡೆಯುತ್ತಿರುವುದರಿಂದ ಎಲ್ಲಾ ಶಾಸಕರು ಒಳಗೊಂಡಂತೆ ಸಮಿತಿ ರಚಿಸಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡಿ ಆಗಬಹುದಾದಂತಹ ಬೇಡಿಕೆಯನ್ನು ಮುಂದಿಟ್ಟು ಮನವಿಯನ್ನು ಮಾಡೋಣ ಎಂದರು.
ಶಾಸಕ ಎ. ಮಂಜು ಮಾತನಾಡಿ, ವಿಶ್ವವಿದ್ಯಾಲಯ ಇಲ್ಲೆ ಉಳಿಸುವ ನಿಟ್ಟಿನಲ್ಲಿ ಆಗಬೇಕಾದ ಕೆಲಸ ತಡವಾಗಿದೆ ಎಂಬುದು ನನ್ನ ಭಾವನೆ. ಕಾಲೇಜುಗಳನ್ನು ಯಾವ ಸರಕಾರ ಬಂದರೂ ಮುಚ್ಚುವುದಕ್ಕೆ ಆಗುವುದಿಲ್ಲ. ಆದರೇ ವಿಲೀನಗೊಳಿಸಲಾಗುತ್ತದೆ. ಹಳ್ಳಿ ಸೇರಿದಂತೆ ಎಲ್ಲಾ ಮಕ್ಕಳಿಗೂ ವಿಧ್ಯೆ ಸಿಗಬೇಕಾದರೇ ವಿವಿಗಳು ಆಯಾ ಜಿಲ್ಲೆ ಇರಬೇಕು. ಆಗ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ಆಗಬೇಕು. ಹೆಚ್ಚಿನ ಹೋರಾಟಕ್ಕೆ ಮುಂದಾದ ಜಿಲ್ಲೆ ಇದ್ದರೇ ಹಾಸನ. ಈ ಹೋರಾಟದಲ್ಲಿ ಯಾವ ರಾಜಕಾರಣ ಆಗಬಾರದು. ವಿವಿ ರಾಜ್ಯ ಸರಕಾರದಿಂದ ಮಾತ್ರ ನಡೆಯುವುದಿಲ್ಲ. ಕೇಂದ್ರದ ಯುಜಿಸಿ ಸ್ಕೇಲ್ ಕೂಡ ಇದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ಮಾತನಾಡಿ, ವಿದ್ಯಾರ್ಥಿಗಳ ಮೊದಲ ಆಯ್ಕೆ ಸರಕಾರ ಶಿಕ್ಷಣ ಸಂಸ್ಥೆಗಳು. ಇಂಜಿನಿಯರ್, ವೈದ್ಯಕೀಯ ಯಾವುದೇ ಆಗಿರಲಿ ಸರಕಾರಿ ಸಂಸ್ಥೆಗಳಿಗೆ ಬರಲು ಮುಂದಾಗುತ್ತಾರೆ. ಸೀಟು ಇಲ್ಲದಾಗ ಅನಿವಾರ್ಯವಾಗಿ ಖಾಸಗೀ ಕಡೆ ಹೋಗುತ್ತಾರೆ. ಏನಾದರೂ ಈ ರೀತಿ ತಾತ್ಸರ ಮಾಡಿದರೇ ಮುಂದಿನ ದಿನಗಳಲ್ಲಿ ಖಾಸಗೀ ಶಿಕ್ಷಣ ಸಂಸ್ಥೆಯವರು ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಮುಂದಾದರೇ ಆ ಖಾಸಗೀಯವರು ಮಾಡಿದ ನಿರ್ಣಯದಂತೆ ಉನ್ನತ ಶಿಕ್ಷಣ ಸಾಗುತ್ತದೆ ಎಂದು ಎಚ್ಚರಿಸಿದರು.
ಇದರಿಂದ ಯಾವ ಯಾವ ಸಂಸ್ಥೆ ಯಾವ ಯಾವ ಮೌಲ್ಯವನ್ನು ಭಿತ್ತಬಹುದು. ಸರಕಾರದವರು ಹೀಗೆ ಮುಂದುವರೆದರೇ ಬಂಡವಾಳ ಶಾಹಿಗಳು ತಮಗೆ ಬೇಕಾದ ಮೌಲ್ಯಗಳನ್ನು ಯುವ ತಲೆಮಾರಿಗೆ ಬಿತ್ತುತ್ತಾರೆ. ಇದುಉನ್ನತ ಶಿಕ್ಷಣದ ದೊಡ್ಡ ದುರಂತದ ಸಂಗತಿ ಆಗಿತು ಎಂದು ಬೇಸರವ್ಯಕ್ತಪಡಿಸಿದರು.
ಹಸಿರುಭೂಮಿ ಪ್ರತಿಷ್ಠಾನದ ಬಿ.ಕೆ. ಮಂಜುನಾಥ್ ಮಾತನಾಡಿ, ಸರಕಾರದಲ್ಲಿ ಗೊಂದಲವಿದ್ದು, ಜನರಲ್ಲಿ ವಿಶ್ವವಿದ್ಯಾಲಯ ಉಳಿಯುತ್ತದೆಯೂ ಇಲ್ಲವೊ ಎಂಬುದು ಬೇರೂರಿದೆ. ಈ ಕಮಿಟಿ ಶಾಸಕರು. ಸಂಸದರು ಎಲ್ಲಾ ಸೇರಿ ಸಭೆ ಮಾಡಿ ದೃಢವಾದ ನಿಲುವು ತೆಗೆದುಕೊಂಡರೇ ಖಂಡಿತ ಸರಕಾರ ಒಪ್ಪಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಡಾ. ವೈ.ಎಸ್. ವೀರಭದ್ರಪ್ಪ, ಆರ್.ಪಿ. ವೆಂಕಟೇಶ್ ಮೂರ್ತಿ, ಧರ್ಮೇಶ್, ಹೆಚ್.ಕೆ. ಸಂದೇಶ್, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಹೆಚ್.ಪಿ. ಮೋಹನ್, ಹಿರಿಯ ಪತ್ರಕರ್ತ ವೆಂಕಟೇಶ್, ಹೆಚ್.ಆರ್. ನವೀನ್ ಕುಮಾರ್, ಎಂ.ಜಿ. ಪೃಥ್ವಿ, ಸಾಹಿತಿ ರೂಪ ಹಾಸನ್, ತಾರಾಚಂದನ್, ರಮೇಶ್, ಎಣ.ಬಿ. ಪುಷ್ಪ, ಸಮೀರ್ ಅಹಮದ್ ಇತರರು ಉಪಸ್ಥಿತರಿದ್ದರು.
Hassan
ಯಶಸ್ವಿಗೊಂಡ ಪತಂಜಲಿ ಯೋಗಾ ಪರಿವಾರದ ಮಹಿಳಾ ದಿನಾಚರಣೆ

ಹಾಸನ: ನಗರದ ಹಾಸನಾಂಬೆ ದೇವಾಲಯ ರಸ್ತೆ ಬಳಿ ಇರುವ ಶ್ರೀ ಕನ್ನಿಕಾಪರಮೇಶ್ವರಿ ಯೋಗಾ ಕೇಂದ್ರದಲ್ಲಿ ಭಾನುವಾರ (ಮಾ.16) ಹೋಳಿ ಹುಣ್ಣಿಮೆ ಹಾಗೂ ಮಹಿಳಾ ದಿನಚರಣೆಯೂ ಸಂಭ್ರಮದಿಂದ ಯಶಸ್ವಿಯಾಗಿ ಆಚರಿಸಲಾಯಿತು.
ಇದೆ ವೇಳೆ ಶ್ರೀ ಕನ್ನಿಕಾ ಪರಮೇಶ್ವರಿ ಯೋಗ ಕೇಂದ್ರದ ಸಾಧಕಿ ಹಾಗೂ ಪತಂಜಲಿ ಜಿಲ್ಲಾ ಪ್ರಭಾರಿ ಶಾರದ ಧರ್ಮಾನಂದ್ ಮತ್ತು ಜಿಲ್ಲಾ ಸಂರಕ್ಷಕರಾದ ಲೋಕನಾಥ್ ಮಾತನಾಡಿ, ನಾವುಗಳು ಪತಾಂಜಲಿ ಪರಿವಾರದಿಂದ ಮಹಿಳಾ ದಿನಾಚರಣೆ ಮತ್ತು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಪಾದರ್ಪಣೆ ಮಾಡಿದ್ದು, ಮಹಿಳೆಯರಿಗೆ ಗೌರವ ಕೊಡುವುದಕ್ಕಾಗಿ ಈ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕುಟುಂಬದಲ್ಲಿ ಎಲ್ಲಾವನ್ನು ನಿಬಾಯಿಸಿಕೊಂಡು ಬರುವವಳು ಮಹಿಳೆ. ತಾಯಿ ಶಕ್ತಿ ಆಕೆಯಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮವು ಹೋಳಿ ಹುಣ್ಣಿಮೆ ಹಾಗೂ ಮಹಿಳಾ ದಿನಚರಣೆಯ ಮೊದಲು ಅಗ್ನಿಹೋತ್ರದೊಂದಿಗೆ ಪ್ರಾರಂಭವಾಯಿತು. ಇದೆ ವೇಳೆ ಮಹಿಳಾ ಪೌರಕಾರ್ಮಿಕರಾದ ರಾಗಿಣಿ ಹಾಗೂ ನೇತ್ರಾವತಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಇದೆ ವೇಳೆ ಮಹಿಳೆಯರಿಂದಲೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಮಹಿಳೆಯರಿಗೆ ಆಟೋಟ ಸ್ಪರ್ದ ನಡೆಸಿ ಬಹಮಾನ ವಿತರಿಸಿದರು. ನಂತರ ಬಣ್ಣ ಬಣ್ಣದ ಹೂವಿನ ಎಸಳುಗಳಿಂದ ಮಹಿಳೆಯರು ಹೋಳಿ ಹುಣ್ಣಿಮೆ ಆಚರಿಸಿ ಸಂಭ್ರಮಿಸಿದರು.
ಇದೆ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಹಿಳಾ ಪತಂಜಲಿ ಯೋಗ ಸಮಿತಿಯ ನಿಕಟಪೂರ್ವ ಜಿಲ್ಲಾ ಪ್ರಭಾರಿಗಳಾದ ಹೇಮಲತಾ, ಪತಂಜಲಿ ಜಿಲ್ಲಾ ಪ್ರಭಾರಿ ಎಂ.ವಿ. ಗಿರೀಶ್, ಕಿಸಾನ್ ಸೇವಾ ಸಮಿತಿ ಜಿಲ್ಲಾ ಪ್ರಭಾರಿ ನಾಗೇಶ್, ಜಿಲ್ಲಾ ಸಹ ಪ್ರಭಾರಿ ಧರ್ಮಾನಂದ್, ಪತಂಜಲಿ ಜಿಲ್ಲಾ ಸಹ ಪ್ರಭಾರಿ ದೊರೆಸ್ವಾಮಿ, ತವರು ಚಾರಿಟಬಲ್ ಟ್ರಸ್ಟ್ ನ ಡಾ. ಪಾಲಾಕ್ಷ ಇತರರು ಉಪಸ್ಥಿತರಿದ್ದರು.
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu19 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
Chamarajanagar24 hours ago
ಸತತ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಎಂ.ಪಿ.ಸುನೀಲ್ ಆಯ್ಕೆ
-
National - International20 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu21 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State22 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Hassan24 hours ago
ಗಮನಸೆಳೆದ ತಿಂಗಳ ಮಾಮನ ತೇರು: ಚಂದ್ರನಿಗೆ ಮದುವೆ ಮಾಡಿದ ನಿವಾಸಿಗಳು
-
Mysore23 hours ago
ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ: ಶಾಸಕ ತನ್ವೀರ್ ಸೇಠ್