Connect with us

Mysore

ನಮ್ಮ ಪೂರ್ವಜರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ನಿಮ್ಮ ಮಗನಾಗಿ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ತಿಳಿಸಿದರು

Published

on

ಹುಣಸೂರು, ಅಂದಿನ ಕಾಲದಲ್ಲಿಯೇ ನಮ್ಮ ಪೂರ್ವಜರು ಮೈಸೂರು ಸಂಸ್ಥಾನದಲ್ಲಿ ಒಳ್ಳೆಯ ಕೆಲಸ ಮಾಡಿ ಮಾದರಿ ಮೈಸೂರು ಎಂಬ ಹೆಸರನ್ನು ವಿಶ್ವಕ್ಕೆ ಪರಿಚಯಿಸಿದ್ದರು ಎಂದು ಯದುವೀರ್ ತಿಳಿಸಿದರು.
ಅವರು ತಾಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ದೊಡ್ಡಹೆಜ್ಜೂರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಮಾತನಾಡಿದರು, ನಮ್ಮ ಪೂರ್ವಜರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ನಿಮ್ಮ ಮಗನಾಗಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ, ರಾಜಮನೆತನದವರು ಅರಮನೆ ಬಿಟ್ಟು ಹಳ್ಳಿಗೆ ಬರಲ್ಲ ಎಂಬ ತಪ್ಪು ಮಾಹಿತಿಯನ್ನು ವಿರೋಧ ಪಕ್ಷದವರು ಹೇಳುತ್ತಿದ್ದು ಎಲ್ಲವೂ ಸುಳ್ಳು ಹಳ್ಳಿಯ ವಾತಾವರಣದಲ್ಲಿಯೇ ಅರಮನೆಯು ಕೂಡ ಇದೆ ಊಹಾ ಪೂಹ ಗಳಿಗೆ ಕಿವಿ ಕೊಡದೆ ಮತದಾರರು ನಮ್ಮ ಭಾರತ ದೇಶ, ಕರ್ನಾಟಕ ರಾಜ್ಯ, ಮೈಸೂರು ಜಿಲ್ಲೆ, ಹುಣಸೂರು ಹಾಗೂ ಕೊಡಗು ಅಭಿವೃದ್ಧಿಗೆ ಮತ ಹಾಕಿ ಪ್ರಧಾನಿಯವರು ಹತ್ತು ವರ್ಷದಿಂದ ಉತ್ತಮ ಕೆಲಸ ಮಾಡಿದ್ದು ಮುಂದಿನ 2027ರ ವರೆಗೆ ಮುಂದಾಲೋಚನೆ ಚಮಾಡಿ ಕೆಲಸ ಮಾಡಿದ್ದಾರೆ ಬೇರೆ ಪಕ್ಷದವರು ನಾಳೆಗೆ ಮಾತ್ರ ಯೋಚನೆ ಮಾಡಿದ್ದಾರೆ ಆದ್ದರಿಂದ ಪ್ರಧಾನಿಯವರಿಗೆ ಶಕ್ತಿ ತುಂಬಲು ನೀವು ಕಮಲದ ಗುರುತಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಜಿಡಿ ಹರೀಶ್ ಗೌಡ, ಚಂದ್ರಪ್ರಭ ಅರಸು ರವರ ಮಗ ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ , ತಾಲೂಕು ಅಧ್ಯಕ್ಷ ದೇವರಾಜ್ ಒಡೆಯರ್ ಮುಂತಾದವರು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..! ತಬ್ಬಿಬ್ಬಾದ ಅಧಿಕಾರಿಗಳು..!*

Published

on

ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಕಂಡು ಬಂತು ಭೀಕರ ಕಾಲರಾ..! ಆರೋಗ್ಯ ಅಧಿಕಾರಿಗಳಿಂದ ಸ್ಫೋಟಕ ಮಾಹಿತಿ

 

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿರುವ ವರುಣ ವಿಧಾನಸಭಾ ಕ್ಷೇತ್ರದ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಭೀಕರ ಕಾಲರ ಕಾಯಿಲೆ ಕಂಡುಬಂದು ತಗಡೂರು ಗ್ರಾಮಸ್ಥರು ತತ್ತರಿಸಿದ್ದಾರೆ.

ಈಗಾಗಲೇ ತಗಡೂರು ಗ್ರಾಮದಲ್ಲಿ 25 ಪುಟ್ಟ ಮಕ್ಕಳು ಸೇರಿದಂತೆ ಒಟ್ಟು 114 ಕಾಲರ ರೋಗಿಗಳು ಕಂಡು ಬಂದಿದ್ದಾರೆ. ಇದರಲ್ಲಿ 5 ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ತಗಡೂರು ಗ್ರಾಮ ಪಂಚಾಯಿತಿಯ 1,2,3,ನೇಯ ವಾರ್ಡಿನಲ್ಲಿ ವಾಸಿಸುತ್ತಿರುವ ಜನರಿಗೆ ಕಾಲರ ಕಾಯಿಲೆ ವಾಂತಿ ಬೇದಿ ಕಂಡು ಬಂದಿದೆ. ಗ್ರಾಮದಲ್ಲಿ ಬರೋಬರಿ 12 ಕೈ ಪಂಪುಗಳಿದ್ದು ನಾಲ್ಕು ಕೈ ಪಂಪುಗಳ ನೀರನ್ನು ಕುಡಿಯಲು ಯೋಗ್ಯವಿಲ್ಲ ಎಂಬ ಆತಂಕಕಾರಿ ವರದಿ ಮಾಹಿತಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಂಡಿಲ್ಲ. ಗ್ರಾಮಕ್ಕೆ ಈಗಾಗಲೇ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹಾಗೂ ಜಿಲ್ಲಾ ಕಾಲಾರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ ತಾಲ್ಲೂಕು ವೈದ್ಯಾಧಿಕಾರಿ ಡಾ. ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೀಕರ ವಾಂತಿ ಭೇದಿ ಹಿಂದ 114 ರೋಗಿಗಳು ತಗಡೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿರುವ ಸಾರ್ವಜನಿಕರಿಗೆ ಕೂಡ ಪ್ರತಿರೋಧಕ ಚುಚ್ಚುಮದ್ದು ಪ್ರತಿ ಮನೆ ಮನೆಗೆ ಒರಸ್ ಪೌಡರ್ ಕಡ್ಡಾಯವಾಗಿ ಮನೆಯಲ್ಲಿ ಬಿಸಿ ನೀರು ಸೇವನೆ ಮಾಡಲು ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸಲಾಗಿದೆ. ತಗಡೂರು ಗ್ರಾಮದಲ್ಲಿ ಕಾಲರ ಕಾಯಿಲೆ ಕಂಡುಬಂದಿರುವುದು ಕೈ ಪಂಪಿನಲ್ಲಿರುವ ಕಲುಷಿತ ನೀರು ಸೇವನೆ ಎಂದು ಬೆಳಕಿಗೆ ಬಂದಿದೆ. ಹತ್ತಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಗ್ರಾಮದಲ್ಲಿ ಬಿಡು ಬಿಟ್ಟಿದ್ದಾರೆ. ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯ ಜೊತೆಗೂಡಿ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಕಾಲರ ಕಾಯಿಲೆ ತಡೆಗಟ್ಟಲು ಮುಂದಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿ

ಸಿದ್ದರಾಮಯ್ಯನವರ ತವರು ಕ್ಷೇತ್ರದ ತಗಡೂರು ಗ್ರಾಮದಲ್ಲಿ ಭೀಕರ ಕಾಲರ ಕಾಯಿಲೆ ಕಂಡು ಬಂದಿರುವುದು ಜಡ್ಡು ಗಟ್ಟಿದ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯವೈಕರಿ ಎಂದು ಸಾರ್ವಜನಿಕ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ.

ಪಿಡಿಒ ದಿವಾಕರ್ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ನಾಪತ್ತೆಯಾಗಿರುವ ದೆಸೆಯಿಂದ ಸಂಬಂಧಪಟ್ಟ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕಿದೆ.

Continue Reading

Mysore

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

Published

on

ನಂಜನಗೂಡು ಮೇ.19

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ ಮೂರ್ತಿಯ ಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಇಂದು ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ಮಹಾಗಣಪತಿ, ನವಗ್ರಹ,ನಾಗದೇವತೆ ಮತ್ತು ಶಿಖರ ಕಳಶ ಪ್ರತಿಷ್ಠಾಪನೆ ಮಾಡಲಾಯಿತು.


ಗೋ ದೇವತೆ ಗಂಗಾ ಪೂಜೆಯೊಂದಿಗೆ ಅಗ್ರೋದಕ ಸಹಿತ ಯಾಗ ಶಾಲೆ ಪ್ರವೇಶ ಮಾಡಿ ಗಣಪತಿ ಪೂಜೆ ಮಾಡಿ ಸ್ವಸ್ತಿ ಪುಣ್ಯಹ ವಾಹನ, ಪಂಚಗವ್ಯ ಸಾಧನ, ವಾಸ್ತು ಪೂಜೆ ಮತ್ತು ರಾಕ್ಸೊಘ್ನ ಹೋಮ, ಪರ್ಯಾಗ್ನಿ ಕರಣ ಶಿಖರ ಕಲಶ ಹಾಗೂ ನೂತನ ಶಿಲಾಮೂರ್ತಿಗೆ ಜಲಾದಿ ವಾಸ, ಧಾನ್ಯ ದಿವಾಸ, ಮೂರ್ತಿ ಸಂಸ್ಕಾರ ನ್ಯಾಸ ವಿಧಿ ಶಯನಾದಿ ವಾಸ ಮಾಡಲಾಯಿತು . ಬೆಳಿಗ್ಗೆ 4.50 ರಿಂದ 5.50ರ ವರೆಗೆ ಸಲ್ಲುವ ಬ್ರಾಹ್ಮೀ ಮುಹೂರ್ತ ಶುಭ ಲಗ್ನದಲ್ಲಿ ಅಷ್ಟ ಬಂದ ಪ್ರತಿಷ್ಠಾಪನೆ

ನೆರವೇರಿಸಿದರು. ಅಯೋಧ್ಯೆ ಶ್ರೀಬಾಲ ರಾಯನ ಖ್ಯಾತಿಯ ಶಿಲ್ಪಿ ಅರುಣ್ ಯೋಗಿರಾಜ್ ರವರ ಕೈಚಳಕದಲ್ಲಿ ಮೂಡಿ ಬಂದಿರುವ ಶ್ರೀ ಸಾಯಿಬಾಬಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಮಹಾ ಮಂಗಳಾರತಿ

ಮಾಡಲಾಯಿತು. ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

Published

on

ಪಿರಿಯಾಪಟ್ಟಣ: ದಂಪತಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ.

ಪಟ್ಟಣದ ಬಿ.ಎಂ ರಸ್ತೆಯ ಪ್ರವಾಸಿ ಮಂದಿರ ಬಳಿ ಕ್ಯಾಂಟೀನ್ ವ್ಯಾಪಾರ ನಡೆಸುತ್ತಿದ್ದ ಪ್ರಕಾಶ್ (51) ಹಾಗೂ ಚಿಲ್ಲರೆ ಅಂಗಡಿ ಮತ್ತು ಹಲ್ಲರ್ ಮಿಲ್ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಪ್ರಕಾಶ್ ಅವರ ಪತ್ನಿ ಯಶೋದ (48) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ದಂಪತಿಗಳು,

ಗುರುವಾರ ರಾತ್ರಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ಮನೆಗೆ ತೆರಳಿದ್ದ ದಂಪತಿಗಳು

ಶುಕ್ರವಾರ ಬೆಳಗ್ಗೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳು ತನುಶ್ರೀ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ ರಾತ್ರಿವರೆಗೂ ಹಲವಾರು ಬಾರಿ ಕರೆ ಮಾಡಿ ಕರೆ ಸ್ವೀಕರಿಸದ ಕಾರಣ ಸಂಬಂಧಿಕರಿಗೆ ಫೋನ್ ಮೂಲಕ ಮನೆಯ ಬಳಿ ತೆರಳಿ ನೋಡುವಂತೆ ಕೋರಿದಾಗ ಸಂಬಂಧಿಕರು ಮನೆಯ ಬಳಿ ತೆರಳಿ ಕಿಟಕಿ ತೆರೆದು ನೋಡಿದಾಗ  ಅನುಮಾನ ರೀತಿಯಲ್ಲಿ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ, ತಕ್ಷಣ ಪೊಲೀಸರಿಗೆ ಕರೆ ಮಾಡಿ ಪೊಲೀಸರು ಬಾಗಿಲು ಮುರಿದು ಮನೆ ಒಳಗಡೆ ಪ್ರವೇಶಿಸಿ ಶವಗಳನ್ನು ಪಟ್ಟಣದ  ಶವಗಾರಕ್ಕೆ ಸಾಗಿಸಿದ್ದಾರೆ.


ಘಟನೆ ಸಂಭಂದ ಅನುಮಾನ ವ್ಯಕ್ತಪಡಿಸಿ ಮೃತ ದಂಪತಿ ಪುತ್ರಿ ತನುಶ್ರೀ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

Trending

error: Content is protected !!