National
ಉಪ ರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ
ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.
ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಇದೇ ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿಂದೆ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನ್ಕರ್ ಅವರು ಜುಲೈ 21 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಗದೀಪ್ ಧನ್ಕರ್ ಅವರು ಅನಾರೋಗ್ಯದ ಕಾರಣ ಹೇಳಿ, ಜು. 21 ರಂದು ಪದತ್ಯಾಗ ಮಾಡಿದ್ದರು.
ಸಿ.ಪಿ.ರಾಧಾಕೃಷ್ಣನ್ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ (ಸಿ.ಪಿ.ರಾಧಾಕೃಷ್ಣನ್) ಅವರು ತಮಿಳುನಾಡಿನ ತಿರುಪ್ಪೂರಿನಲ್ಲಿ ಅಕ್ಟೋಬರ್ 20, 1957 ರಂದು ಜನಿಸಿದರು. ಸಿಪಿ ರಾಧಾಕೃಷ್ಣನ್ ಅವರು 16ನೇ ವಯಸ್ಸಿನಿಂದಲೇ ಆರ್‌ಎಸ್‌ಎಸ್ ಮತ್ತು ಜನಸಂಘದಂತಹ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಅಲ್ಲದೇ ರಾಧಾಕೃಷ್ಣನ್ ಅವರು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದರು.

1998 ಮತ್ತು 1999 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಬಿಜೆಪಿಯಿಂದ ಕಣಕ್ಕೆ ಇಳಿದರು. 1998 ರ ಚುನಾವಣೆಯಲ್ಲಿ 150,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮತ್ತು 1999 ರ ಚುನಾವಣೆಯಲ್ಲಿ 55,000 ಮತಗಳ ಅಂತರದಿಂದ ಗೆದ್ದರು. ಸಿಪಿ ರಾಧಾಕೃಷ್ಣನ್ ಅವರು 2024ರಿಂದ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿದ್ದಾರೆ. 2003 ರಿಂದ 2006ರವರೆಗೆ ತಮಿಳುನಾಡಿನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರು ಸಹ ಆಗಿದ್ದರು.
National
ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ?
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕರಿಸಿ ಹೊಸ ಆಡಳಿತಕ್ಕೆ ಮುನ್ನುಡಿ ಬರೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆಯ ಖ್ಯಾತೆ ಶುರುವಾಗಿದೆ. ಸಚಿವರುಗಳು ತಮಗೆ ಇದೇ ಖಾತೆ ಬೇಕೆಂಬ ಹಠ ಹಿಡಿದು ಕೂತಿದ್ದಾರೆ. ಈ ನಡುವೆ ತಾವು ಬಯಸಿದ ಖಾತೆ ಸಿಗದೇ ಇರುವ ಕಾರಣ ಸಂಪುಟದ ಹಿರಿಯ ಸಚಿವರಲ್ಲಿ ಒಬ್ಬರಾದ ರಾಮಲಿಂಗ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮಾರನೇ ದಿನವೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆಯೇ ಬೇಕೆಂದು ರಾಮಲಿಂಗ ರೆಡ್ಡಿ ಪಟ್ಟು ಹಿಡಿದು ಕೂತಿದ್ದಾರೆ. ಆದರೆ ಇದಕ್ಕೆ ಡಿಕೆ ಶಿವಕುಮಾರ್ ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ತಾವು ಬಯಸಿದ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ರಾಮಲಿಂಗಾರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಇಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೊಟ್ಟರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೇ ಸಚಿವ ಸ್ಥಾನವೇ ಬೇಡ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಅಲ್ಲದೆ ಪತ್ರಕರ್ತರೊಂದಿಗೆ ಮಾತನಾಡಿದ್ದ ಸಚಿವ ರಾಮಲಿಂಗಾ ರೆಡ್ಡಿ, “ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದರೆ ನನಗೆ ಸಚಿವ ಸ್ಥಾನವೇ ಬೇಡ” ಎಂದು ನೇರವಾಗಿ ಹೇಳಿದ್ದಾರೆ. ಮೂಲಗಳ ಪ್ರಕಾರ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರ ಪಾಲಾಗಲಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನ್ಮೂಲಯ ಜವಾಬ್ದಾರಿ ತೆಗೆದುಕೊಳ್ಳುವಂತೆ ಕೋರಲಾಗಿದೆ. ಆದರೆ ಬೆಂಗಳೂರು ನಗರಾಭಿವೃದ್ಧಿ ಖಾತೆಯೇ ಬೇಕು ಎಂದು ಪಟ್ಟು ಹಿಡಿದಿರುವ ರಾಮಲಿಂಗಾ ರೆಡ್ಡಿ, ಈ ಖಾತೆ ದೊರೆಯದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಹೈಕಮಾಂಡ್ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಿತ್ತು. ಆದರೆ ಆಗಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿ ಅವರ ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಾನು ಪಡೆಯುತ್ತೇನೆ. ನಾನು ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು. ಆದರೆ ಡಿಕೆಶಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ರಾಮಲಿಂಗ ರೆಡ್ಡಿ ತಮ್ಮ ಪಟ್ಟು ಬಿಡದೆ ರಾಜೀನಾಮೆ ಬೆದರಿಕೆ ಹಾಕಿದ್ದಾರೆ.
National
ಬಿಜೆಪಿ ತೊರೆಯುವ ಸಾಧ್ಯತೆ: ನಾಳೆ ಸುದ್ದಿಗೋಷ್ಠಿ ಕರೆದ ಅಣ್ಣಾಮಲೈ
National
ಅಫ್ಘಾನಿಸ್ತಾನ ODI ಸರಣಿಗೆ ಭಾರಿ ಹಿನ್ನಡೆ: ವಿರಾಟ್ ಕೊಹ್ಲಿ ಗಾಯದಿಂದ ಹೊರಗೆ
-
Kodagu23 hours agoಗೋಣಿಕೊಪ್ಪದಲ್ಲಿ ಜೂ.5 ರಿಂದ ಮಾವು ಮೇಳ
-
Mandya17 hours agoಮಂಡ್ಯ ಜಿಲ್ಲೆಯ ಮೊದಲ ಅಕ್ಕ ಕೆಫೆ ಉದ್ಗಾಟನೆಗೆ ಸಜ್ಜು: ಜಿ.ಪಂ. ಸಿಇಓ ಕೆ.ಆರ್. ನಂದಿನಿ
-
Kodagu23 hours agoವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಾಳಲೆಯಲ್ಲಿ ರಕ್ತದಾನ ಶಿಬಿರ
-
Politics15 hours agoಬೆಂಗಳೂರು ಅಭಿವೃದ್ಧಿ ಖಾತೆಗೆ ರಾಮಲಿಂಗಾ ರೆಡ್ಡಿ ಪಟ್ಟು; ಸಚಿವ ಸಂಪುಟದಲ್ಲಿ ಹೊಸ ಬಿಕ್ಕಟ್ಟು
-
Politics15 hours agoಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸರ್ಕಾರದ ಅಧಿಕೃತ ಆದೇಶ
-
Hassan21 hours agoಹೃದಯ ಆರೈಕೆಗೆ ಜನಪ್ರಿಯ ಆಸ್ಪತ್ರೆಯ ನೂತನ ಕಾರ್ಡಿಯಾಕ್ ಕೇರ್ ಘಟಕ ಉದ್ಘಾಟನೆ
-
Mandya20 hours agoಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮತ್ತು ಆಡಳಿತ ಮಂಡಳಿ ಜತೆ ಬಹಿರಂಗ ಚರ್ಚೆಗೆ ಸಿದ್ದ : ಶಿವಕುಮಾರ್
-
Hassan17 hours agoನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಸರ್ಕಾರದಿಂದಲೇ ಆಚರಿಸುವಂತಾಗಬೇಕು: ಸಿ.ಎನ್.ಬಾಲಕೃಷ್ಣ



