Connect with us

Location

ಬಿಜೆಪಿಯವರು ಕಾವೇರಿ ಪ್ರತಿಭಟನೆ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Published

on

ಮೈಸೂರು: ಕಾವೇರಿ ನೀರು ವಿವಾದದ (Cauvery Water Dispute) ಕುರಿತು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡಲು ನಮ್ಮದೇನು ತಕರಾರಿಲ್ಲ. ಆದರೆ ರಾಜಕೀಯ ಮಾಡಬಾರದು. ಕಾವೇರಿ ವಿವಾದವನ್ನು ರಾಜಕೀಯಕ್ಕೆ ಹೋಲಿಸುವುದು ರಾಜ್ಯದ ಹಿತದೃಷ್ಟಿಯಲ್ಲಿ ಒಳ್ಳೆಯದಲ್ಲ. ಬಿಜೆಪಿಯವರು (BJP) ಕಾವೇರಿ ಪ್ರತಿಭಟನೆ ರಾಜಕೀಯಕ್ಕಾಗಿ (Politics) ಮಾಡುತ್ತಿದ್ದಾರೆ ಹೊರತು ಜನರ ಹಿತದೃಷ್ಟಿಗಾಗಲಿ, ನಾಡಿನ ಹಿತದೃಷ್ಟಿಗಾಗಲಿ ಮಾಡುತ್ತಿಲ್ಲ ಎಂದರು.

 

ಕರ್ನಾಟಕ ಬಂದ್ (Karnataka Bandh) ಕುರಿತು ಮಾತನಾಡಿದ ಅವರು, ಯಾವುದೇ ಬಂದ್‌ಗಳನ್ನು ಮಾಡಬಾರದು, ಮೆರವಣಿಗೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಆದರೆ ಇದಕ್ಕೆ ನಾವೇನೂ ಅಡ್ಡಿಪಡಿಸಲು ಹೋಗುವುದಿಲ್ಲ ಎಂದು ತಿಳಿಸಿದರು.

ಕಾವೇರಿ ವಿವಾದದ ಕುರಿತು ದೇವೇಗೌಡರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಾನು ಅದನ್ನು ಸ್ವಾಗತಿಸುತ್ತೇನೆ. ರಾಜ್ಯಸರ್ಕಾರ ರಾಜ್ಯದ ಹಿತ್ತಾಸಕ್ತಿ ಕಾಪಾಡಲು ಬದ್ಧವಾಗಿದೆ. ನಮಗೆ ಅಧಿಕಾರ ಮುಖ್ಯ ಅಲ್ಲಾ. ರಾಜ್ಯದ ಜನರ ಹಿತ ಮುಖ್ಯ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ವಿರುದ್ಧವಾಗಿದ್ದ ಶಕ್ತಿಗಳು ಈ ಬಾರಿ ಒಂದುಗೂಡಿವೆ. ಬಿಜೆಪಿಯವರು ಕಳೆದ 9 ವರ್ಷಗಳಲ್ಲಿ ಭಾವನಾತ್ಮಕವಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಅದಕ್ಕೋಸ್ಕರ ಈ ಸತ್ಯ ತಿಳಿದ ಮೇಲೆ ಅನೇಕ ಶಕ್ತಿಗಳು ಇಂದು ಬಿಜೆಪಿಯೇತರ ಗುಂಪುಗಳಲ್ಲಿ ಗುರುತಿಸಿಕೊಳ್ಳುತ್ತಿವೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

Published

on

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.

ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.

ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು  ಹಾಜರಿದ್ದರು

Continue Reading

Chamarajanagar

ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ

Published

on

ಗುಂಡ್ಲುಪೇಟೆ: ಪಟ್ಟಣದ ಪೊಲೀಸ್ ಠಾಣೆಗೆ ನೂತನ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ ಈ ಹಿಂದೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಪರಶಿವಮೂರ್ತಿ ಅವರಿಗೆ ಡಿವೈಎಸ್ಪಿ ಆಗಿ ಮುಂಬಡ್ತಿ ಹೊಂದಿದ ಹಿನ್ನೆಲೆ ಅವರ ಜಾಗಕ್ಕೆ ಜಯಕುಮಾರ್ ಅವರನ್ನು ನೇಮಿಸಲಾಗಿದೆ.

ಅಧಿಕಾರವಹಿಸಿಕೊಂಡ ಜಯಕುಮಾರ್ ಅವರನ್ನು ಸ್ವಾಗತ ಕೋರಿದ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು

Continue Reading

Mysore

ಜಿಡಿ ಹರೀಶ್‌ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್‌.ಪಿ.ಮಂಜುನಾಥ್‌

Published

on

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಇವರು ಮಾಡಿರುವ ಭ್ರಷ್ಟಾಚಾರ ಮತ್ತು ಸಹಕಾರ ಪತ್ತಿನ ಸಂಘಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರ ಸಂಬಂಧಿಕರುಗಳು ಮಾಡಿರುವ ಹಗರಣಗಳನ್ನು ಮುಚ್ಚಿಕೊಳ್ಳಲು ಶಾಸಕ ಜಿ.ಡಿ.ಹರೀಶ್ ಗೌಡ ಸಾರ್ವಜನಿಕವಾಗಿ ಮೈಸೂರಿನ ಎಂಸಿಡಿಸಿಸಿ ಬ್ಯಾಂಕ್ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಆರೋಪಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಜಿ.ಡಿ.ಹರೀಶ್ ಗೌಡ ಅವರೇ ಕಳೆದ 20 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿದ್ದಾರೆ. ಇವರೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದವರು. ಧರ್ಮಾಪುರ ಮತ್ತು ಹನಗೋಡು ಸಹಕಾರ ಪತ್ತಿನ ಸಂಘದಲ್ಲಿ ರೈತರು ಸಾಲ ಮರುಪಾವತಿಸಿದ್ದರು ಸಾಲ ಕೊಡುತ್ತಿಲ್ಲ. ಇದಕ್ಕೆ ಮಾಜಿ ಶಾಸಕರ ಹಸ್ತಕ್ಷೇಪ ಇದೆ. ನಾನು ರೈತರ ವಿರೋಧಿ ಎನ್ನುವ ರೀತಿಯಲ್ಲಿ ಬಿಂಬಿಸಿ ಮಾತನಾಡಿದ್ದಾರೆ. ಇವರು ಪ್ರತಿಭಟನೆ ಮಾಡಿದರೆ ನನ್ನ ಅಭ್ಯಂತರವಿಲ್ಲ ಆದರೆ ಸುಖಾ ಸುಮ್ಮನೆ ನನ್ನನ್ನು ಎಳೆದು ತಂದಿರುವುದು ಸರಿಯಲ್ಲ ಎಂದು ಹೇಳಿದರು.

Continue Reading

Trending

error: Content is protected !!