Cinema
ಜ.24 ರಂದು ಬಾಲಿವುಡ್ ಸಿನಿಮಾ “ಸ್ಕೈ ಫೋರ್ಸ್” ಬಿಡುಗಡೆ

ಮಡಿಕೇರಿ: 1965ರಲ್ಲಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯ “ಸ್ಕೈ ಫೋರ್ಸ್” ಬಾಲಿವುಡ್ ಸಿನಿಮಾ ಜ.24 ರಂದು ಬಿಡುಗಡೆಯಾಗುತ್ತಿದೆ.
ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಹೊರತಂದಿರುವ ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ “1965ರ ಯುದ್ಧ ಹಾಗೂ ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್.ಲೀ ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕವನ್ನು ಆಧರಿಸಿ “ಸ್ಕೈ ಫೋರ್ಸ್” ಚಿತ್ರವನ್ನು ತಯಾರಿಸಲಾಗಿದೆ.
ಮ್ಯಾಡಾಕ್ ಫಿಲ್ಮ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
ಸಂದೀಪ್ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್ ಕೌರ್ ಮತ್ತು ಶರದ್ ಕೇಳ್ಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಚಿತ್ರ ಜ.24ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟ್ರೆöÊಲರ್ ಬಿಡುಗಡೆಯಾಗಿ ದೇಶಪ್ರೇಮದ ಕಿಚ್ಚನ್ನು ಹಚ್ಚಿದೆ, ಚಿತ್ರಾಭಿಮಾನಿಗಳು “ಸ್ಕೈ ಫೋರ್ಸ್” ಕ್ಕಾಗಿ ಎದುರು ನೋಡುತ್ತಿದ್ದಾರೆ.
1965ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ನೈಜ ಘಟನೆಯನ್ನು ಆಧರಿಸಿ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬAತೆ ಚಿತ್ರಿಸಲಾಗಿದೆ.
1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೆ, ಈ ಅವಕಾಶವನ್ನು ಕೈಬಿಟ್ಟು ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಕೆಚ್ಚೆದೆಯ ಸಾಹಸದ ಮೂಲಕ ಹೊಡೆದುರುಳಿಸಿ ಹುತಾತ್ಮರಾದರು. ಅವರ ಈ ಮಹಾನ್ ಬಲಿದಾನ ಹಲವಾರು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನು ಬಿಬಿಸಿಯವರು ಸಂದರ್ಶನ ಮಾಡಿದ ಸಂದರ್ಭ ಬೆಳಕಿಗೆ ಬಂದಿತು.
ಶೌರ್ಯ ಮೆರೆದು ಹುತಾತ್ಮರಾದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯನ್ನು ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ತಮ್ಮ ಪುಸ್ತಕದಲ್ಲಿ ಮನೋಜ್ಞವಾಗಿ ಚಿತ್ರಿಸಿದ್ದಾರೆ. ವೀರ ಸೇನಾನಿಯ ಪುಸ್ತಕ ರಚನೆಗೆ ಪ್ರೇರಣೆ ನೀಡಿದ ಮತ್ತು ಪುಸ್ತಕವನ್ನು ಹೊರತಂದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಸತತ ಪರಿಶ್ರಮದ ಮೂಲಕ ಮಡಿಕೇರಿಯ ಹೃದಯ ಭಾಗದಲ್ಲಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಅಲ್ಲದೆ ಪ್ರತಿವರ್ಷ ಗೌರವ ಅರ್ಪಿಸುವ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.
ಹೆಮ್ಮೆ ತಂದಿದೆ
1965ರ ಭಾರತ-ಪಾಕ್ ಯುದ್ಧದಲ್ಲಿ ಶೌರ್ಯ ಮೆರೆದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಚಲನಚಿತ್ರವಾಗಿ “ಸ್ಕೈ ಫೋರ್ಸ್” ಹೆಸರಿನಲ್ಲಿ ತೆರೆಗೆ ಬರುತ್ತಿರುವುದು ಹೆಮ್ಮೆ ಎನಿಸಿದೆ. ಸೈನಿಕರ ನಾಡು ಕೊಡಗಿನ ಸೇನಾಧಿಕಾರಿಯೊಬ್ಬರ ವೀರತ್ವದ ಕಥೆ ಬಾಲಿವುಡ್ ಚಿತ್ರವಾಗಿ ತೆರೆ ಕಾಣುತ್ತಿರುವುದು ಇದೇ ಮೊದಲಾಗಿದೆ. ಸಾಹಿತಿ ರಮೇಶ್ ಉತ್ತಪ್ಪ ಅವರು ಬರೆದ ದೇವಯ್ಯ ಅವರ ಸಾಹಸದ ಪುಸ್ತಕವನ್ನು ಕೊಡವ ಮಕ್ಕಡ ಕೂಟ ಬಿಡುಗಡೆ ಮಾಡಿತ್ತು. ಇದೇ ಪುಸ್ತಕವನ್ನು ಆಧರಿಸಿ ಹಿಂದಿ ಚಿತ್ರ ತಯಾರಿಸಲಾಗಿದೆ.
ಚಿತ್ರತಂಡ ಕಳೆದ 5 ವರ್ಷಗಳಿಂದ ನಮ್ಮೊಂದಿಗೆ ಹಾಗೂ ದೇವಯ್ಯ ಅವರ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದು, ಚಿತ್ರ ತಯಾರಿಕೆ ಮಾಡಿದ್ದಾರೆ. ದೇಶದ ವೀರ ಸೇನಾನಿಗೆ ಚಲನಚಿತ್ರದ ಮೂಲಕ ಗೌರವ ನೀಡುತ್ತಿರುವುದು ಕೊಡಗಿನ ಮಟ್ಟಿಗೆ ಹೆಗ್ಗಳಿಕೆಯಾಗಿದೆ. (ಬೊಳ್ಳಜಿರ ಬಿ.ಅಯ್ಯಪ್ಪ, ಅಧ್ಯಕ್ಷರು, ಕೊಡವ ಮಕ್ಕಡ ಕೂಟ)
ಅಪ್ರತಿಮ ಸೇನಾನಿಗೆ ಸಂದ ಗೌರವ
ತನ್ನ ಪ್ರಾಣವನ್ನೂ ಲೆಕ್ಕಿಸದೆ ತನ್ನೊಂದಿಗಿದ್ದ ಭಾರತೀಯ ಸೈನಿಕರ ವಿಮಾನಗಳನ್ನು ರಕ್ಷಣೆ ಮಾಡುತ್ತಲೇ ದೇಶಪ್ರೇಮವನ್ನು ಮೆರೆದು ಪ್ರಾಣತ್ಯಾಗ ಮಾಡಿದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಚಲನಚಿತ್ರವಾಗಿ ತೆರೆ ಕಾಣುತ್ತಿರುವುದು ಅಪ್ರತಿಮ ಸೇನಾನಿಗೆ ಸಂದ ಗೌರವವಾಗಿದೆ.
ದೇವಯ್ಯ ಅವರ ಕುರಿತು ಪುಸ್ತಕ ಬರೆದ ನನಗೆ ಇದು ಹೆಮ್ಮೆಯ ವಿಚಾರವಾಗಿದೆ, ಈ ಪುಸ್ತಕವನ್ನು ಆಧರಿಸಿ ಚಿತ್ರವಾಗಿರುವುದು ಕೊಡಗಿಗೂ ಹೆಮ್ಮೆ ಎನಿಸಿದೆ. ದೇಶಭಕ್ತ, ಅಪ್ರತಿಮ ವೀರ ದೇವಯ್ಯ ಅವರು ಕುರಿತು ಬಹಳ ಹಿಂದೆಯೇ ಸಿನಿಮಾ ಮೂಡಿ ಬರಬೇಕಾಗಿತ್ತು. ತಡವಾಗಿಯಾದರೂ “ಸ್ಕೈ ಫೋರ್ಸ್” ಹೆಸರಿನಲ್ಲಿ ಚಿತ್ರ ತೆರೆ ಕಾಣುತ್ತಿರುವುದು ಖುಷಿ ತಂದಿದೆ. ದೇವಯ್ಯ ಅವರ ಕುರಿತು ನಾನು ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕೊಡವ ಮಕ್ಕಡ ಕೂಟಕ್ಕೂ ನಾನು ಅಭಿನಂದನೆ ಸಲ್ಲಿಸುತ್ತೇನೆ.
ಪುಸ್ತಕ ರಚನೆಯ ಸಂದರ್ಭ ನಾನು ಭಾರತ- ಪಾಕ್ ಗಡಿಗೆ ಭೇಟಿ ನೀಡಿ 1965ರಲ್ಲಿ ನಡೆದ ಯುದ್ಧದ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಅಧಿಕಾರಿಗಳು ಹಾಗೂ ತಜ್ಞರಿಂದ ಮಾಹಿತಿ ಪಡೆದು ಅಧ್ಯಯನದ ರೂಪದಲ್ಲಿ ಶ್ರಮ ವಹಿಸಿ “1965ರ ಯುದ್ಧ ಹಾಗೂ ಕೊಡಗಿನ ಮಹಾವೀರ” ಪುಸ್ತಕವನ್ನು ರಚನೆ ಮಾಡಿದ್ದೇನೆ. ಈ ಪುಸ್ತಕ ರಾಜ್ಯ ಮಟ್ಟದಲ್ಲಿ ಪ್ರಚಾರ ಪಡೆದಿದ್ದರೆ ಪ್ರಶಸ್ತಿ ಲಭಿಸುತ್ತಿತ್ತು. ಆದರೆ ಇದೀಗ ಬಾಲಿವುಡ್ ಸಿನಿಮಾವಾಗಿ ತೆರೆಗೆ ಬರುತ್ತಿರುವುದೇ ದೊಡ್ಡ ಪ್ರಶಸ್ತಿಯಾಗಿದ್ದು, ಹೆಚ್ಚು ಸಂತೋಷವಾಗಿದೆ.
ಐತಿಚಂಡ ರಮೇಶ್ ಉತ್ತಪ್ಪ, ಸಾಹಿತಿ, “1965ರ ಯುದ್ಧ ಹಾಗೂ ಕೊಡಗಿನ ಮಹಾವೀರ” ಪುಸ್ತಕದ ರಚನೆಕಾರರು.
Cinema
ತಮಿಳು ಖ್ಯಾತ ನಟ ಅಜಿತ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ತಲಾ

ನವದೆಹಲಿ: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರಿಗೆ ಭಾರತ ಸರ್ಕಾರದಿಂದ 2025ರಲ್ಲಿ ಪದ್ಮ ಭೂಷಣ್ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಲು ಅವರು ತಮ್ಮ ಪತ್ನಿ ಶಾಲಿನಿ, ಮಗಳು ಅನೌಷ್ಕಾ ಹಾಗೂ ಮಗ ಆದ್ವಿಕ್‌ರೊಂದಿಗೆ ನವದೆಹಲಿಯ ರಾಷ್ಟ್ರಪತಿ ಭವನಕ್ಕೆ ಆಗಮಿಸಿದರು.
ಇಂದು ( ಏಪ್ರಿಲ್ 28) ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಜಿತ್ ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಅಜಿತ್ ಕುಮಾರ್ ಅವರು ತಮ್ಮ ಮೂರು ದಶಕಗಳ ಚಿತ್ರರಂಗದ ಸೇವೆಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಚಿತ್ರಗಳು ವಿಮರ್ಶಾತ್ಮಕ ಪ್ರಶಂಸೆಯ ಜೊತೆಗೆ ವಾಣಿಜ್ಯ ಯಶಸ್ಸನ್ನೂ ಕಂಡಿವೆ. ಇತ್ತೀಚಿನ ಚಿತ್ರ “ವಿದಾಮುಯಾರ್ಚಿ” ಯಶಸ್ಸು ಮತ್ತು ಕಾರ್ ರೇಸಿಂಗ್‌ನಲ್ಲಿ ಅವರ ಸಾಧನೆಗಳು 2025ನ್ನು ಅವರಿಗೆ ಸುವರ್ಣ ವರ್ಷವನ್ನಾಗಿಸಿವೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಅಜಿತ್ ನಾನು ಈ ಗೌರವಕ್ಕೆ ಅತೀವವಾಗಿ ಕೃತಜ್ಞನಾಗಿದ್ದೇನೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಧನ್ಯವಾದಗಳು. ನನ್ನ ಕುಟುಂಬ, ಅಭಿಮಾನಿಗಳು ಮತ್ತು ಬೆಂಬಲಿಗರ ಪ್ರೀತಿಯೇ ನನ್ನ ಯಶಸ್ಸಿನ ಬೆನ್ನೆಲುಬು ಎಂದು ಹೇಳುವ ಮೂಲಕ ಎಲ್ಲರಿಗೆ ಕೃತಜ್ಞತೆ ತಿಳಿಸಿದ್ದಾರೆ.
ಈ ಸಮಾರಂಭದಲ್ಲಿ ತೆಲುಗು ನಟ ನಂದಮೂರಿ ಬಾಲಕೃಷ್ಣ, ಸೇರಿದಂತೆ ಇತರ ಪ್ರಮುಖರಿಗೂ ಪದ್ಮ ಭೂಷಣ್ ಪ್ರಶಸ್ತಿ ನೀಡಲಾಯಿತು. ಜೊತೆಗೆ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು.
Cinema
ಪಹಲ್ಗಾಮ್ ದಾಳಿ: ಭಾರತದಲ್ಲಿ ಪಾಕ್ ನಟನ ಚಿತ್ರ ಬಿಡುಗಡೆಗೆ ನಿರಾಕರಣೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಿ ನಟ ಫವಾದ್ ಖಾನ್ ಅಭಿನಯದ ‘ಅಬೀರ್ ಗುಲಾಲ್’ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಹಿಂದಿ ಚಲನಚಿತ್ರಗಳಲ್ಲಿ ಫವಾದ್ ಖಾನ್‌ಗೆ ಮಹತ್ವದ್ದಾಗಿದ್ದ ಈ ಚಿತ್ರಕ್ಕೆ ಬಹಿಷ್ಕಾರದ ಕರೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಚಿತ್ರ ಮೇ 9 ರಂದು ಬಿಡುಗಡೆಯಾಗಬೇಕಿತ್ತು. “ಪಾಕಿಸ್ತಾನಿ ನಟ ಫವಾದ್ ಖಾನ್ ಅಭಿನಯದ ‘ಅಬೀರ್ ಗುಲಾಲ್’ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಲಾಗುವುದಿಲ್ಲ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Cinema
ಸುಮುಖ ಪ್ರೊಡಕ್ಷನ್ ಎರಡನೇ ಸಿನಿಮಾ “ಕಜ್ಜ” ಕ್ಕೆ ಮುಹೂರ್ತ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು.
ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ ಸುಮುಖ ಪ್ರೊಡಕ್ಷನ್ ಮೊದಲ ಸಿನಿಮಾಕ್ಕೆ ತುಳುನಾಡಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ತುಡರ್ ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದು ಮುಂದಿನ ಸಿನಿಮಾ ಕೂಡಾ ಜನರು ಮೆಚ್ಚಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಒಳ್ಳೆಯ ತಂಡ ಸಿನಿಮಾದಲ್ಲಿ ದುಡಿಯುತ್ತಿದ್ದು ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಈ ಬಾರಿ ಇನ್ನಷ್ಟು ಮನೋರಂಜನೆ ನೀಡಲು ಉತ್ಸಾಹಿ ಯುವಕರ ತಂಡ ಸಜ್ಜಾಗಿದೆ ಎಂದರು.
ಬಳಿಕ ಮಾತಾಡಿದ ಅರವಿಂದ ಬೋಳಾರ್ “ಕಜ್ಜ” ಅಂದರೆ ತುಳುವಿನಲ್ಲಿ ಕಾರ್ಯ ಎಂದರ್ಥ. ಒಂದೊಳ್ಳೆಯ ಕಾರ್ಯವನ್ನು ಮಾಡಲು ನಾವೆಲ್ಲ ಒಂದಾಗಿದ್ದೇವೆ. ಆದಷ್ಟು ಬೇಗನೆ ಜನರ ಮುಂದೆ ಸಿನಿಮಾ ಬರಲಿ. ಹಿಂದಿನ ಸಿನಿಮಾಕ್ಕೆ ಕೊಟ್ಟಷ್ಟೇ ಪ್ರೋತ್ಸಾಹ ಪ್ರೀತಿಯನ್ನು ಈ ಬಾರಿಯೂ ಕೊಡುವ ಮೂಲಕ ಹೊಸಬರ ತಂಡವನ್ನು ಪ್ರೋತ್ಸಾಹಿಸಿ ಎಂದರು.
ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಕಜ್ಜ ಸಿನಿಮಾದ ಕತೆ ಚೆನ್ನಾಗಿದೆ. ಉತ್ತಮ ಕಲಾವಿದ್ದಾರೆ. ಹೊಸಬರಿಗೂ ಅವಕಾಶ ನೀಡಿದ್ದಾರೆ. ತುಡರ್ ಸಿನಿಮಾದಂತೆ ಕಜ್ಜ ಸಿನಿಮಾ ಕೂಡಾ ಜಯಬೇರಿ ಬಾರಿಸಲಿ ಎಂದರು.
ಪ್ರದೀಪ್ ಕುಮಾರ್ ಕಲ್ಕೂರ, ಸಾಯಿರಾಂ, ರವಿಶಂಕರ್ ಮಿಜಾರ್, ರಮಾನಂದ ಪೂಜಾರಿ ಬೋಳಾರ್, ಉದಯ ಪೂಜಾರಿ ಬಲ್ಲಾಲ್ ಭಾಗ್, ಶಾಹಿನ್ ಶೇಖ್, ಪ್ರೇಮ್ ಶೆಟ್ಟಿ ಸುರತ್ಕಲ್, ಹರೀಶ್ ಶೆಟ್ಟಿ, ಸಿನಿಮಾದ ನಟ ನಿರ್ದೇಶಕ ಸಿದ್ಧಾರ್ಥ್ ಶೆಟ್ಟಿ, ಉಮೇಶ್ ಮಿಜಾರ್, ಸದಾಶಿವ ಅಮೀನ್, ವೆನ್ಸಿಟಾ ಡಯಾಸ್, ಲಂಚುಲಾಲ್, ಮೋಹನ್ ಕೊಪ್ಪಳ, ಬಾಲಕೃಷ್ಣ ಶೆಟ್ಟಿ, ರೂಪ ವರ್ಕಾಡಿ, ಮೋಹನ್ ರಾಜ್, ಅರತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಿನಿಮಾದಲ್ಲಿ ಸಿದ್ದಾಥ್೯ ಶೆಟ್ಟಿ, ಅರವಿಂದ ಬೋಳಾರ್, ಉಮೇಶ್ ಮಿಜಾರ್, ಜಯಶ್ರೀ, ಶ್ವೇತಾ ಕೋಟ್ಯಾನ್, ಸಹನಾ ಸುಧಾಕರ್, ವೆನ್ಸಿಟಾ ಡಯಾಸ್, ಮೋಹನ್ ರಾಜ್, ಗೌತಮ್ ಬಂಗೇರ, ಸುವರ್ಣ ಪೂಜಾರಿ, ಸವಿತಾ ಅಂಚನ್, ಶಾಹಿನ್ ಶೇಖ್, ಸನ್ನಿಧಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.
ನಿರ್ದೇಶನ : ಜಿಸ್ನು ಎಸ್ ಮೆನನ್ ಸಿದ್ದಾಥ್೯ ಶೆಟ್ಟಿ, ನಿರ್ಮಾಪಕರು: ವಿಶಾಂತ್ ಮಿನೆಜಸ್, ಛಾಯಾಗ್ರಾಹಣ: ಚಂದು ಮೆಪ್ಪಾಯೂರ್, ಸಂಕಲನ : ಶರತ್ ಹೆಗ್ಡೆ, ನೃತ್ಯ: ವಿಜೇತ್ ಆರ್ ನಾಯಕ್, ಸಾಹಸ: ಯೋಗಾನಂದ್, ಪ್ರೊಡಕ್ಷನ್ ಮ್ಯಾನೇಜರ್: ಕಾರ್ತಿಕ್ ರೈ ಅಡ್ಯನಡ್ಕ
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Mandya24 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya24 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ