Connect with us

Chikmagalur

ಸಿ.ಟಿ‌.ರವಿ ಪರ ಬಿ.ಎಸ್.ವೈ. ಭರ್ಜರಿ ಬ್ಯಾಟಿಂಗ್

Published

on

ಚಿಕ್ಕಮಗಳೂರು ; ಸಿ.ಟಿ.ರವಿ ಭವಿಷ್ಯದ ಬಗ್ಗೆ ಭವಿಷ್ಯ ನುಡಿದ ಮಾಜಿ ಸಿಎಂ ಬಿ.ಎಸ್.ವೈ

ಇವತ್ತು ನಮ್ಮ ಸಿ.ಟಿ. ರವಿಗೆ ಅನ್ಯಾಯವಾಗಿದೆ

ಯಾರು ವಿಧಾನಸಭೆಯಲ್ಲಿ ಗುಡುಗಬೇಕಿತ್ತೋ ಅವರು ಹೊರಗಿದ್ದಾರೆ

ಮುಂದಿನ ದಿನಗಳಲ್ಲಿ ರವಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ ನಲ್ಲಿ ಅವಕಾಶ ಸಿಗಲೇಬೇಕು

ಅದಕ್ಕೆ ನಾನು ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ನಾನು ಮಾಡುತ್ತೇನೆ

ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಸಖರಾಯಪಟ್ಟಣ

ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಮಾಜಿ ಸಿಎಂ ಬಿ.ಎಸ್.ವೈ. ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು

Continue Reading
Click to comment

Leave a Reply

Your email address will not be published. Required fields are marked *

Chikmagalur

ಭಾರೀ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ, ಕಿ.ಮೀ ಟ್ರಾಫಿಕ್ ಜಾಮ್

Published

on

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡಲ್ಲಿ ಬಿರುಗಾಳಿ ಮಳೆ ಅಬ್ಬರ‌ ಮುಂದುವರಿದಿದ್ದು. ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಬಾಳೆಹೊನ್ನೂರು ಸಂಪರ್ಕ‌ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ‌ ಹಸರವಳ್ಳಿ ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು. ವಾಹನಗಳು ನಿಂತಲ್ಲೇ ನಿಂತಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾಸರರು ಪರದಾಟ ಪಡುವಂತಾಗಿತ್ತು‌. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chikmagalur

ಧಾರಾಕಾರ ಮಳೆ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

Published

on

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಗುದ್ದಿ ಕಾಲುವೆಗೆ ನುಗ್ಗಿತುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದಲ್ಲಿ ನಡೆದಿದೆ. ಸಖರಾಯಪಟ್ಟಣ – ಬಾಣಾವರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು. ಕಾರು ಗುದ್ದಿದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಪುಡಿ ಪುಡಿಯಾಗಿದ್ದು. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.‌

 

Continue Reading

Chikmagalur

ಮರ ಬಿದ್ದು ಬೈಕ್ ಸವಾರ ದು*ರ್ಮರಣ

Published

on

ಚಿಕ್ಕಮಗಳೂರು : ಬೈಕ್‌ ಸವಾರನ ಮೇಲೆ ಮರದ ಕೊಂಬೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಎಲೆಕಲ್ ಎಲೆಕಲ್ಲು ಬಳಿ ನಡೆದಿದೆ. ಖಾoಡ್ಯಾ ಹೋಬಳಿಯ ಕಡಬಗೆರೆ ನಿವಾಸಿಯಾದ ಅನಿಲ್ ರುಜಾರಿಯೋ (55) ಮರದ ಕೊಂಬೆ ಬಿದ್ದು ಮೃತಪಟ್ಟ ಬೈಕ್‌ ಸವಾರ. ಬೈಕ್ ನಲ್ಲಿ ತೆರಳುತ್ತಿದ್ದಾಗ ಏಕಾಏಕಿಮರದ ಕೊಂಬೆ ಅನಿಲ್ ರುಜಾರಿಯೋ ಮೇಲೆ ಬಿದ್ದಿದೆ. ಆಂಬುಲೆನ್ಸ್ ಬರೋದು ತಡವಾಗುತ್ತೆಂದು ಅಗ್ನಿಶಾಮಕ ವಾಹನದಲ್ಲಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯಲ್ಲಿ ತೀವ್ರ ಗಾಯಗೊಂಡಿದ್ದ ಅನಿಲ್ ಸಾವನ್ನಪ್ಪಿದ್ದಾರೆ. ಇನ್ನು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಇದು 4ನೇ ಬಲಿಯಾಗಿದೆ.

 

Continue Reading

Trending

error: Content is protected !!