Mandya
ಮಾ.2, 3 ರಂದು ಬೂದನೂರು ಉತ್ಸವ: ಶಾಸಕ
ಸಾವಿರ ವರ್ಷ ಇತಿಹಾಸವಿರುವ ದೇವಸ್ಥಾನಗಳ ಪ್ರಸಿದ್ಧಿಗೊಳಿಸಲು ಸಹಕರಿಸಿ
ಮಂಡ್ಯ: ಇತಿಹಾಸ ಪ್ರಸಿದ್ಧ ಕಾಶಿ ವಿಶ್ವನಾಥ ಮತ್ತು ಅನಂತಪದ್ಮನಾಭಸ್ವಾಮಿ ದೇವಸ್ಥಾನಗಳ ‘ಬೂದನೂರು ಉತ್ಸವ’ವು ಮಾ.2 ಮತ್ತು 3 ರಂದು ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ಗಣಿಗೆ ಹೇಳಿದರು.
ಚೋಳ ಅರಸರ ವಾಸ್ತುಶಿಲ್ಪದ ಆಧಾರದ ಮೇಲೆ ಸುಮಾರು ಒಂದು ಸಾವಿರ ವರ್ಷಗಳ ಹಿಂದೆ ಹೊಸಬೂದನೂರಿನಲ್ಲಿ ನಿರ್ಮಾಣಗೊಂಡಿರುವ ಕಾಶಿ ವಿಶ್ವನಾಥ ಮತ್ತು ಅನಂತಪದ್ಮನಾಭಸ್ವಾಮಿ ದೇವಸ್ಥಾನಗಳ ಇತಿಹಾಸವನ್ನು ಬಿಂಬಿಸಲು ‘ಬೂದನೂರು ಉತ್ಸವ’ ಆಯೋಜಿಸಲಾಗಿದೆ ಎಂದು ಹೊಸಬೂದನೂರಿನ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಮ್ಮ ಪೂರ್ವಿಕರ ಧಾರ್ಮಿಕತೆಯ ಸೊಗಡನ್ನು ರಾಜ್ಯ ಹಾಗೂ ರಾಷ್ಟ್ರ ವ್ಯಾಪಿ ವಿಸ್ತರಿಸಲು ಪ್ರಥಮವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾಂಸ್ಕೃತಿಕ ಉತ್ಸವವನ್ನು ಆಚರಿಸಲಾಗುತ್ತಿದೆ. ಗ್ರಾಮದಲ್ಲಿ ನಿರ್ಮಾಣವಾಗಿರುವ ಎರಡು ಪುರಾತನ ದೇಗುಲಗಳ ನಿರ್ಮಾಣದ ಹಿಂದೆ ಐತಿಹಾಸಿಕ ಅಥವಾ ಪೌರಾಣಿಕ ಹಿನ್ನೆಲೆ ಇರುವ ಕುರಿತು ಸಂಶೋಧಕರಿಂದ ಸಂಶೋಧನೆ ನಡೆಸಿ ವಾಸ್ತವತೆಯನ್ನು ತಿಳಿಯಲಾಗುವುದು. ಕೇರಳ ರಾಜ್ಯ ತಿರುವನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನ ಹೊರತುಪಡಿಸಿದರೆ ದಕ್ಷಿಣ ಭಾರತದಲ್ಲಿ ಮಂಡ್ಯ ಜಿಲ್ಲೆಯ ಹೊಸಬೂದನೂರಿನಲ್ಲಿ ಮಾತ್ರ ಸದರಿ ದೇವಾಲಯ ನಿರ್ಮಾಣವಾಗಿದ್ದು, ಅನಂತ ಪದ್ಮನಾಭ ದೇಗುಲದಲ್ಲಿ ಇಂದಿಗೂ ಹತ್ತಾರು ಅಡಿ ಉದ್ದದ ನಾಗರಹಾವು ವಾಸ್ತವ್ಯವಿರುವುದು ದೇಗುಲದ ಧಾರ್ಮಿಕತೆ ಬಿಂಬಿಸುತ್ತದೆ ಎಂದು ವಿವರಿಸಿದರು.
ಗ್ರಾಮದ ಎರಡು ದೇಗುಲಗಳ ವಾಸ್ತುಶಿಲ್ಪದ ಶ್ರೀಮಂತಿಕೆ ಹಾಗೂ ಗ್ರಾಮದಲ್ಲಿರುವ ಕೆರೆಗೆ ಐತಿಹಾಸಿಕ ಹಿನ್ನೆಲೆ ಇದೆ, ಇವುಗಳ ಪ್ರಸಿದ್ಧತೆಯನ್ನು ಪಸರಿಸಲು ‘ಬೂದನೂರು ಉತ್ಸವ’ ಸಹಕಾರಿಯಾಗಲಿದೆ, ಮಾ.2 ರಂದು ನಾಡಿನ ಶ್ರೇಷ್ಠ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ತಂಡದಿಂದ ರಸ ಮಂಜರಿ ಕಾರ್ಯಕ್ರಮ ಹಾಗೂ ಸಾಮೂಹಿಕ ನೃತ್ಯ ಪ್ರದರ್ಶನಗಳು ನಡೆಯಲಿವೆ, ಕಿರುತೆರೆ ಹಾಗೂ ಹಿರಿತೆರೆಯ ನಟರು ಭಾಗಿಯಾಗುವರು, ಮಾ.3 ರಂದು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಅನೇಕ ಕಿರುತೆರೆ ನಟರು ಭಾಗವಹಿಸಲಿದ್ದಾರೆ. ಅಲ್ಲದೆ, ಸಂಜೆ 5.30 ರಿಂದ ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಎರಡು ದಿನಗಳ ಕಾಲ ಆಯೋಜನೆಗೊಳ್ಳುವ ಬೂದನೂರು ಉತ್ಸವಕ್ಕೆ ಮಾ.2ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡುವರು, ವಿವಿಧ ಕಲಾ ಪ್ರಕಾರಗಳ ಜಾನಪದ ಮೆರವಣಿಗೆಯನ್ನು ಗ್ರಾಮದ ಹೆಬ್ಬಾಗಿಲಿನಿಂದ ದೇಗುಲದವರೆಗೆ ಆಯೋಜಿಸಲಾಗಿದೆ, ವೇದಿಕೆ ಕಾರ್ಯಕ್ರಮದಲ್ಲಿ ವಾರಣಾಸಿಯ ಕಾಶೀ ವಿಶ್ವನಾಥ ದೇಗುಲದ 16 ಮಂದಿ ಅರ್ಚಕರ ನೇತೃತ್ವದಲ್ಲಿ ಗಂಗಾರತಿ ನಡೆಯಲಿದ್ದು, ಜಿಲ್ಲೆ ಹಾಗೂ ರಾಜ್ಯದಲ್ಲಿ ಆವರಿಸಿರುವ ಬರಗಾಲದ ಬೇಗುದಿಗೆ ಅಂತ್ಯವಾಡಿ ವರುಣನ ಕೃಪೆ ಕೇಳಲು ಪ್ರಾರ್ಥಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮ ಆಯೋಜನೆಗೆ 40*100 ಅಡಿ ಅಳತೆಯ ಬೃಹತ್ ವೇದಿಕೆ ನಿರ್ಮಾಣಗೊಳ್ಳುತ್ತಿದೆ, ವಾಹನ ನಿಲುಗಡೆ ಜೊತೆಗೆ 40 ಮಳಿಗೆಗಳಲ್ಲಿ ಆಹಾರ ಮೇಳ ಆಯೋಜಿಸಿ, ಪ್ರೇಕ್ಷಕರ ಮನ ತಣಿಸಲಾಗುವುದು, ಮಂಡ್ಯ ವಿಧಾನಸಭಾ ಕ್ಷೇತ್ರದ ಹೊಸ ಬೂದನೂರು ಗ್ರಾಮದಲ್ಲಿ ಪ್ರಥಮವಾಗಿ ಆಯೋಜಿಸುತ್ತಿರುವ ಬೂದನೂರು ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ₹50 ಲಕ್ಷ ಅನುದಾನ ಹಾಗೂ ಹಿರಿಯ ಸಚಿವ ಎಚ್.ಕೆ.ಪಾಟೀಲ್ ಪ್ರತಿನಿಧಿಸುವ ಪ್ರವಾಸೋದ್ಯಮ ಇಲಾಖೆಯಿಂದ ₹15 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದರು.
ಮಂಡ್ಯ ಜಿಲ್ಲಾಡಳಿತ ಹಾಗೂ ನನ್ನ ಸ್ವಂತ ಖರ್ಚಿನಿಂದ ಇತರೆ ಖರ್ಚು ವೆಚ್ಚಗಳನ್ನು ನಿಭಾಯಿಸಲಾಗುವುದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ ಹಾಗೂ ಎಚ್.ಟಿ.ಮಂಜು ಸೇರಿದಂತೆ ವಿಧಾನ ಪರಿಷತ್ ಸದಸ್ಯರು ಹಾಗೂ ಸ್ಥಳೀಯ ಗ್ರಾ.ಪಂ.ಚುನಾಯಿತ ಸದಸ್ಯರು ಭಾಗವಹಿಸುವರು.
ಮಾ.3 ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಸ್ಥಳೀಯ ಕಲಾವಿದರಿಂದ 1 ಗಂಟೆಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ತರುವಾಯ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌ಚಲುವರಾಯಸ್ವಾಮಿ ಆಗಮಿಸುವರು, ಎರಡು ದಿನಗಳ ಕಾಲ ನಡೆಯುವ ಉತ್ಸವಕ್ಕೆ 10 ರಿಂದ 15 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ, 8 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದ ವೇಳೆ ಐತಿಹಾಸಿಕ ದೇಗುಲಗಳನ್ನು ಸಂದರ್ಶಿಸುವ ಅವಕಾಶವಿದ್ದು, ಹೊಸಬೂದನೂರು ಗ್ರಾಮದ ಎರಡು ದೇಗುಲಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.
ಗ್ರಾ.ಪಂ.ಅಧ್ಯಕ್ಷೆ ಮಾನಸ, ಉಪಾಧ್ಯಕ್ಷ ಜಯಶಂಕರ್, ಸದಸ್ಯ ಕೆಂಪೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿ, ಮುಖಂಡರಾದ ಬಿ.ಟಿ.ಚಂದ್ರಶೇಖರ್, ಜಯರಾಮು, ಶೇಖರ್, ಶಿವಕುಮಾರ್ ಇದ್ದರು.
Mandya
ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಅಗತ್ಯ ಡಾ.ಡಿ.ಟಿ.ಮಂಜುನಾಥ
ಶ್ರೀರಂಗಪಟ್ಟಣ : ಮಳೆಗಾಲದ ಸಂದರ್ಭದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಡೆಂಗ್ಯೂ ರೋಗದ ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದು ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಟಿ.ಮಂಜುನಾಥ್ ತಿಳಿಸಿದರು.
ಅವರು ತಾಲೂಕಿನ ಚಂದಗಾಲು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಡೆಂಗ್ಯೂ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರು ತಮ್ಮ ಮನೆಯ ಸುತ್ತ ಮುತ್ತ ಬಿಸಾಡುವ ಘನ ತ್ಯಾಜ್ಯಗಳಲ್ಲಿ ನೀರು ನಿಂತಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ ಘನ ತ್ಯಾಜ್ಯಗಳನ್ನು ಸರಿಯಾಗಿ ವಿಲೇವಾರಿ ಮಾಡಿ. ಮನೆಯಲ್ಲಿಯ ನೀರು ಸಂಗ್ರಹಿಸುವ ಪರಿಕರಗಳನ್ನು ವಾರಕ್ಕೊಂದು ಸಾರಿ ಸ್ವಚ್ಛವಾಗಿ ಉಜ್ಜಿ ತೊಳೆದು ನೀರನ್ನು ಭರ್ತಿ ಮಾಡಿಕೊಳ್ಳುವುದು. ಹಾಗೆಯೆ ವಾರಕ್ಕೊಂದು ದಿನ ಒಣ ದಿನ ಆಚರಿಸಿ ಡೆಂಗ್ಯೂ ಜ್ವರದ ಲಕ್ಷಣ ಕಂಡ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಡೆಂಗ್ಯೂ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿ ಆಗಿದೆ ಎಂದು ಸಲಹೆ ನೀಡಿದರು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಜವರಪ್ಪ, ಸದಸ್ಯರಾದ ರಮೇಶ್, ಕುಮಾರ್, ಮುಖ್ಯ ಶಿಕ್ಷಕಿ ಭಾರತಿ, ಪಿಡಿಒ ಶಿಲ್ಪ , ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೇಗೌಡ, ಸಮುದಾಯ ಆರೋಗ್ಯ ಅಧಿಕಾರಿ ಸಹನಾ, ಮೌಲ್ಯ,ಪ್ರಾಥಮಿಕ ಆರೋಗ್ಯ
ಸುರಕ್ಷಾಧಿಕಾರಿ ವಿನಯಾ ಹಾಗೂ ಶಾಲಾ ಶಿಕ್ಷಕರು, ಮಕ್ಕಳು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮುಖ್ಯ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
Chamarajanagar
ನದಿ ಪಾತ್ರದಲ್ಲಿ ಬರುವ ಎಲ್ಲಾ ಗ್ರಾಮಗಳ ಜನತೆ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ
ಕೆ.ಆರ್.ಪೇಟೆ
ಹೇಮಾವತಿ ಡ್ಯಾಂನಿಂದ ನದಿಗೆ 30ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಮತ್ತು ಮಂದಗೆರೆ ಅಣೆಕಟ್ಟೆಗಳಲ್ಲಿ ನದಿಯು ಉಕ್ಕಿ ಹರಿಯುತ್ತಿದೆ.
ಹಾಗಾಗಿಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಹೇಮಾವತಿ ನದಿಯು 46ಕಿ.ಮೀ ದೂರ ಹರಿಯಲಿದ್ದು ನದಿ ಪಾತ್ರದಲ್ಲಿ ಬರುವ ಎಲ್ಲಾ ಗ್ರಾಮಗಳ ಜನತೆ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಜನಜಾನುವಾರುಗಳನ್ನು ನದಿಗೆ ಇಳಿಸಬಾರದು. ಬಟ್ಟೆ ಪಾತ್ರೆ, ತೊಳೆಯಲು ನದಿ ಬಳಿ ಹೋಗಬಾರದು. ನದಿಯಲ್ಲಿ ಸ್ನಾನಮಾಡುವುದಾಗಲಿ, ಈಜುವುದಾಗಲಿ ಮಾಡಬಾರದು. ಮೀನುಗಾರರು ನದಿಯಲ್ಲಿ
ಮೀನು ಹಿಡಿಯಲು ಹೋಗಬಾರದು ಎಂದು ಕೆ.ಆರ್.ಪೇಟೆ ಹೇಮಾವತಿ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಆನಂದ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಇಓ ಸತೀಶ್, ಕಿಕ್ಕೇರಿ ಪೊಲೀಸ್ ಇನ್ಸ್ ಪೆಕ್ಟರ್ ರೇವತಿ, ದಬ್ಬೇಘಟ್ಟ ಪಿಡಿಓ ಉಮಾಶಂಕರ್, ಮಂದಗೆರೆ ಪಿಡಿಓ ಸುವರ್ಣ, ಸಹಾಯಕ ಸಬ್ ಇನ್ಸ್ ಪೆಕ್ಟರ್
ಶಿವಲಿಂಗಯ್ಯ, ಹೇಮಾವತಿ ನಂ.20 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯವರಾದ ವಿಶ್ವನಾಥ್, ಸಹಾಯಕ ಇಂಜಿನಿಯರ್ ರವರಾದ ರಾಘವೇಂದ್ರ, ಮೋಹನ್ ಕುಮಾರ್, ಹೆಚ್.ಡಿ. ನಾಯಕ್ ಸೇರಿದಂತೆ ಹಲವು ನೀರಾವರಿ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬಾರದು
ಮಂಡ್ಯ : ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ತಾಕೀತು ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ತೀರ್ಮಾನದಿಂದ ಕನ್ನಡಿಗರಿಗೆ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡಿರುವ ನಿರ್ಣಯದಿಂದ ಹಿಂದೆ ಸರಿಯಬಾರದು ಎಂದು ಆಗ್ರಹ ಪಡಿಸಿದರು.
ದಶಕಗಳಿಂದ ಖಾಸಗಿ ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು . ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವಲಯಗಳಲ್ಲಿ ಶೇಕಡ 70ರಷ್ಟು ಹಾಗೂ ಎ ಮತ್ತು ಬಿ ಹುದ್ದೆಗಳಿಗೆ ಶೇಕಡ 50 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸಮಂಜಸವಾಗಿದೆ ಎಂದರು.
ಆದರೆ ಕಾರಣಾಂತರಗಳಿಂದ ಈ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದು ಕಂಡುಬಂದಿದ್ದು , ಹಾಗಾಗಿ ಯಾವುದೇ ಕಾರಣಕ್ಕೂ ಈ ದಿಟ್ಟ ಕ್ರಮದಿಂದ ಸರ್ಕಾರ ಹಿಂದೆ ಸರಿಯಬಾರದು ಎಂದು ಒತ್ತಾಯಿಸಿದರು.
ಅಪ್ರೆಂಟಿಸ್ ಮತ್ತು ಇಂಟರ್ಶಿಪ್ ತರಬೇತಿ ನೀಡಬೇಕು ಅನ್ನುತ್ತಿದ್ದಾರೆ ಆದರೆ ಕಂಪನಿಗಳೇ ನೀಡಬಹುದು ಎಂದು ತಿಳಿಸಿದರು.
ನಮ್ಮ ನೆಲ ನಮ್ಮ ಜಲ ಬಳಕೆ ಮಾಡಿಕೊಂಡು ಕೆಲಸ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸುತ್ತಿರುವುದು ಸರಿಯಲ್ಲ. ಕನ್ನಡಿಗರಿಗೆ ಸಿಗುವ ಸೌಲಭ್ಯವನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕಾರ್ಯರೂಪಕ್ಕೆ ತರಬೇಕು ಎಂದು ತಾಕೀತು ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್ ಕೃಷ್ಣ, ಶಿವಲಿಂಗಯ್ಯ , ಎಂ ಸಿ ರಮೇಶ್, ಮಂಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized1 month ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.