Mysore
ಎತ್ತಿನ ಗಾಡಿ ಸಗಣಿ ಗುಂಡಿಗೆ ಬಿದ್ದಿದ್ದರಿಂದ ಒಂದು ಎತ್ತು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ
ಪಿರಿಯಾಪಟ್ಟಣ: ಎತ್ತಿನ ಗಾಡಿ ಸಗಣಿ ಗುಂಡಿಗೆ ಬಿದ್ದಿದ್ದರಿಂದ ಒಂದು ಎತ್ತು ಸ್ಥಳದಲ್ಲಿ ಸಾವನ್ನಪ್ಪಿ ಮತ್ತೊಂದು ಎತ್ತಿಗೆ ಚಿಕಿತ್ಸೆ ನೀಡಿರುವ ಘಟನೆ ತಾಲೂಕಿನ ಬೂದಿತಿಟ್ಟು ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಕೃಷಿಕ ಮಹಿಳೆ ಸರೋಜಮ್ಮ ಎಂಬುವರಿಗೆ ಸೇರಿದ ಒಂದು ಎತ್ತು ಸಾವನಪ್ಪಿದ್ದು ಮತ್ತೊಂದು ಎತ್ತಿಗೆ ಚಿಕಿತ್ಸೆ ನೀಡಲಾಗಿದೆ, ಜಮೀನಿನಿಂದ ಜೋಳದ ಕಡ್ಡಿ ತುಂಬಿಕೊಂಡು ಮನೆಗೆ ಬರುವಾಗ ನಿಯಂತ್ರಣ ತಪ್ಪಿ ಮನೆ ಬಳಿಯ ಸಗಣಿ ಗುಂಡಿಗೆ ಬಿದ್ದು ಘಟನೆ ಜರುಗಿದೆ, ಎತ್ತು ಸಾವನ್ನಪ್ಪಿರುವುದರಿಂದ ನಷ್ಟ ಉಂಟಾಗಿದ್ದು ಪರಿಹಾರಕ್ಕೆ ರೈತ ಮಹಿಳೆ ಸರೊಜಮ್ಮ ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ.
ವಿಷಯ ತಿಳಿದು ಘಟನೆ ಸ್ಥಳಕ್ಕೆ ಕಂಪಲಾಪುರ ಪಶು ವೈದ್ಯಾಧಿಕಾರಿ ಡಾ. ಮಧುಸೂಧನ್ ಭೇಟಿ ನೀಡಿ ಸಾವನಪ್ಪಿದ ಎತ್ತಿನ ಮರಣೋತ್ತರ ಪರೀಕ್ಷೆ ನಡೆಸಿ ಮತ್ತೊಂದು ಎತ್ತಿಗೆ ಚಿಕಿತ್ಸೆ ನೀಡಿ ಪರಿಹಾರಕ್ಕೆ ಮುಂದಿನ ಕ್ರಮ ಕೈಗೊಂಡಿದ್ದಾರೆ.
– ಬೆಕ್ಕರೆ ಸತೀಶ್ ಆರಾಧ್ಯ
Mysore
ಜೂಜಾಡುತ್ತಿದ್ದ ನಾಲ್ವರ ಬಂಧನ
ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.
ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.
Mysore
ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.
ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.
ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
Mysore
ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ
ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.
ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International11 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan17 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ