National - International
ಚೀನಾ ವಿವಾದಿತ ಗಡಿಯಲ್ಲಿ 218 ಕೋಟಿ ರೂ. ವೆಚ್ಚದ ಏರ್‌ಫಿಲ್ಡ್ ನಿರ್ಮಾಣಕ್ಕೆ ಭಾರತ ಸಜ್ಜು
![](https://janamitra.co/wp-content/uploads/2023/09/Untitle112d.jpg)
ನವದೆಹಲಿ: ಚೀನಾ ಹಾಗೂ ಭಾರತದ (India) ಗಡಿ ಭಾಗದ ಪೂರ್ವ ಲಡಾಖ್‍ನ (Ladakh) ನ್ಯೋಮಾ ಬೆಲ್ಟ್‌ನಲ್ಲಿ 218 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಏರ್‌ಫಿಲ್ಡ್ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (Border Roads Organisation) ಸಜ್ಜಾಗಿದೆ. ಇದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೆಪ್ಟೆಂಬರ್ 12 ರಂದು ಶಂಕುಸ್ಥಾಪನೆ ಮಾಡಲಿದ್ದಾರೆ. ಅಲ್ಲದೇ ಇದೇ ವೇಳೆ 2,941 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳನ್ನು ಸಿಂಗ್ ಉದ್ಘಾಟಿಸಲಿದ್ದಾರೆ.
ಸೇನಾ ಚಾಪರ್‌ಗಳು ಮತ್ತು ವಿಶೇಷ ಕಾರ್ಯಾಚರಣೆಯ ವಿಮಾನಗಳನ್ನು ಲ್ಯಾಂಡ್ ಮಾಡಲು ಅನುಕೂಲವಾಗುವಂತೆ ಈ ಏರ್‌ಫಿಲ್ಡ್ ನಿರ್ಮಾಣ ಮಾಡಲಾಗುತ್ತದೆ. ಈ ಭಾಗದಲ್ಲಿ ಚೀನಾದೊಂದಿಗೆ ಇರುವ ಗಡಿ ವಿವಾದಗಳಿಂದ ಈ ಯೋಜನೆ ಮಹತ್ವ ಪಡೆದಿದೆ. ಅಲ್ಲದೇ ಭಾರತದ ವಾಯುಪಡೆಯ ಸಾಮರ್ಥ್ಯವನ್ನು ಇದು ಹೆಚ್ಚಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆಗಳಿಂದ ಉತ್ತರದ ಗಡಿಗಳಲ್ಲಿನ ಸಮಸ್ಯೆಗಳನ್ನು ಎದುರಿಸಲು ಸಹಕಾರಿಯಾಗಿದೆ. ಇದರೊಂದಿಗೆ ವಾಣಿಜ್ಯ ಉದ್ದೇಶಕ್ಕೂ ಬಳಸಬಹುದಾಗಿದೆ. ಈ ನಿಟ್ಟಿನಲ್ಲಿ ಭಾರತದ ಗಡಿ ಪ್ರದೇಶಗಳಲ್ಲಿನ ನೆರೆಯ ದೇಶಗಳೊಂದಿಗೆ ಸ್ನೇಹ ಸಂಬಂಧಕ್ಕಾಗಿ ರಸ್ತೆ ಜಾಲಗಳನ್ನು ಅಭಿವೃದ್ಧಿ ಪಡೆಸುವ ಉದ್ದೇಶ ಸಹ ಇದರಲ್ಲಿ ಕೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
National - International
ರಾಜ್ಯ ಕೈ ನಾಯಕರಿಗೆ ಬಾಯಿ ಮುಚ್ಚಿಕೊಂಡಿರಿ ಎಂದ ಖರ್ಗೆ: ಯಾವೆಲ್ಲಾ ನಾಯಕರು ಏನಂದ್ರು ಗೊತ್ತಾ?
![](https://janamitra.co/wp-content/uploads/2025/01/mallikarjun-kharge.jpg)
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಗಾದಿಗೆಗೆ ಕುಸ್ತಿ, ಸಚಿವ ಸಂಪುಟ ಬದಲಾವಣೆ ಕುರಿತಂತೆ ಒಲಬೇಗುಧಿ ಕಂಡಿರುವ ರಾಜ್ಯ ಕಾಂಗ್ರೆಸ್ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರಲ್ಲದೇ ರಾಜ್ಯದ ನಾಯಕರು ಬಾಯಿ ಮುಚ್ಚಿಕೊಂಡಿರಬೇಕು ಎಂದು ಖಡಕ್ ಸೂಚನೆಯನ್ನು ಸಹಾ ನೀಡಿದ್ದಾರೆ.
ಈ ಸಂಬಂಧ ರಾಜ್ಯದ ಹಲವು ಪ್ರಮುಖ ಕೈ ನಾಯಕರು ಮಾತನಾಡಿದ್ದು, ತಾವು ಖರ್ಗೆ ಅವರ ನಿಲುವಿಗೆ ಬದ್ಧ ಎಂದು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ಡಿಕೆ ಶಿವಕುಮಾರ್, ನಾನು ಖರ್ಗೆ ಅವರ ಬುದ್ದಿವಾದವನ್ನು ಪಾಲಿಸುತ್ತೇನೆ. ಉಳಿದವರು ಪಾಲಿಸಲಿ ಎಂದು ಹೇಳಿದ್ದಾರೆ.
ಎಚ್.ಸಿ ಮಹದೇವಪ್ಪ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವುದು ನೂರಕ್ಕೆ ನೂರು ಸರಿಯಿದೆ. ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಮಾತನಾಡಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ಹೇಳಿದ್ದನ್ನು ಎಐಸಿಸಿ ಅಧ್ಯಕ್ಷರು ಪುನರುಚ್ಚರಿಸಿದ್ದಾರೆ. ಇಲ್ಲಿ ಯಾರ ಬಾಯಿಗೂ ಬೀಗ ಹಾಕಲು ಆಗಲ್ಲ. ನಮ್ಮ ವಿವೇಚನೆಯಿಂದ ಮಾತನಾಡಬೇಕು. ಮಾತಿನಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ಮಾತನಾಡಬೇಕು ಎಂದರು.
National - International
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
![](https://janamitra.co/wp-content/uploads/2025/01/protest-1.jpg)
ಕೊಲ್ಕತ್ತಾ: ಕೊಲ್ಕತ್ತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 57 ದಿನಗಳಲ್ಲಿ ಪ್ರಕರಣ ಭೇದಿಸಿರುವ ಪೊಲೀಸರು, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ 31 ವರ್ಷದ ವೈದ್ಯೆಯ ರಕ್ತಸಿಕ್ಕ ಮೃತದೇಹ ಪತ್ತೆಯಾಗಿತ್ತು. ಈ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶದಲ್ಲಿಯೇ ದೊಡ್ಡಮಟ್ಟದ ಸಂಚಲನ ಮೂಡಿಸಿತ್ತು. ದೇಶಾದ್ಯಂತ ಹಲವಾರು ಹೋರಾಟ ಪ್ರತಿಭಟನೆಗಳು ನಡೆದಿದ್ದವು.
ಈ ಸಂಬಂಧ ಸಂಜಯ್ ರಾಯ್ ಎಂಬುವವನನ್ನು ಬಂಧಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಕೊಲ್ಕತ್ತಾ ಸಿಬಿಐನ ವಿಶೇಷಾ ನ್ಯಾಯಾಲಯದ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಅವರು ಕೇವಲ 57 ದಿನಗಳಲ್ಲಿ ತೀರ್ಪು ಪ್ರಕಟಿಸಿದ್ದು, ಸಂಜಯ್ ರಾಯ್ ದೋಷಿ ಎಂದು ಹೇಳಿದೆ. ಜೊತೆಗೆ ಶಿಕ್ಷೆಯ ಪ್ರಮಾಣವನ್ನು ಜನವರಿ 20 ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.
National - International
ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ: ಮಹಾರಾಷ್ಟ್ರ ಸಿಎಂ ಫಡ್ನವೀಸ್ ಹೇಳಿದ್ದೇನು?
![](https://janamitra.co/wp-content/uploads/2025/01/GhVDZOWW0AAeU7M.jpg)
ಮುಂಬೈ: ಮುಂಬೈನಲ್ಲಿ ಗುರುವಾರ (ಜ.16) ಬೆಳಗಿನ ಜಾವ 2.30 ರ ವೇಳೆ ಬಾಲಿವುಡ್ ಖ್ಯಾತನಟ ಸೈಫ್ ಅಲಿ ಖಾನ್ ಅವರಿಗೆ ಮುಸುಕುದಾರಿಯೊಬ್ಬ ಆರು ಬಾರಿ ಚಾಕುವಿನಿಂದ ಇರಿದ ಪ್ರರಣಕ್ಕೆ ಸಂಬಂಧಿಸಿದಂತೆ ಮುಂಬೈ ನಗರದ ಬಗ್ಗೆ ಎಲ್ಲೆಡೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದವು.
ಸಾಮಾಜಿಕ ಜಾಲತಾಣ, ವಿರೋಧ ಪಕ್ಷಗಳ ನಾಯಕರು ಮುಂಬೈ ನಗರದ ಇನ್ಮುಂದೆ ವಾಸಿಸಲು ಯೋಗ್ಯವಾಗಿರದ ನಗರವಾಗಿದೆ. ಇದೊಂದು ಸುರಕ್ಷಿತ ನಗರವಲ್ಲ ಎಂದು ಟೀಕೆಗಳು ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರತಿಕ್ರಿಯೆ ನೀಡಿದ್ದು, ಎಲ್ಲರ ಟೀಕೆಗೆಳನ್ನು ಅಲ್ಲೆಗೆಳೆದಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಮುಂಬೈ ಸುರಕ್ಷಿತ ಸ್ಥಳವಲ್ಲ ಎನ್ನುವುದನ್ನು ನಾನು ನಂಬುವುದಿಲ್ಲ. ದೇಶದ ಎಲ್ಲಾ ಮಹಾನಗರಗಳ ಪೈಕಿ ಮುಂಬೈ ಅತ್ಯಂತ ಸುರಕ್ಷಿತ ನಗರ ಎಂದು ನಾನು ಭಾವಿಸುತ್ತೇನೆ.
ಮುಂಬೈ ಪ್ರತಿಷ್ಠೆಯನ್ನು ಹಾಳುಮಾಡಲು ಈ ಘಟನೆಯನ್ನು ಬಳಸಿಕೊಂಡು ಅಸುರಕ್ಷಿತ ಎಂದು ಹೇಳುವುದು ಅನ್ಯಾಯವಾಗುತ್ತದೆ. ಮುಂಬೈ ನಗರವನ್ನು ಇನ್ನಷ್ಟು ಸುರಕ್ಷಿತವಾಗಿರಿಸಲು ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ನಾವು ಕೂಡಾ ಪ್ರಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಫಡ್ನವೀಸ್ ಹೇಳಿದ್ದಾರೆ.
-
Kodagu22 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu21 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech18 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports23 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
Mysore22 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore21 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು
-
Hassan24 hours ago
ನ್ಯಾಯಾಲಯದ ತಡೆ ಆಜ್ಞೆ ಇದ್ರೂ ವಿಮಾನ ನಿಲ್ದಾಣದ ಸುತ್ತ ಕಾಂಪೌಂಡ್ ನಿರ್ಮಾಣ
-
Mysore19 hours ago
ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ